• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

cknewsnow desk by cknewsnow desk
February 6, 2021
in NATION, STATE
Reading Time: 1 min read
0
ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ
918
VIEWS
FacebookTwitterWhatsuplinkedinEmail

ಮಡಿಕೇರಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು.

ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ ʼಸನ್ನಿಸೈಡ್ʼ ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದೆ. ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿದರು.

Glad to inaugurate the General Thimayya Museum at Madikeri in Kodagu, Karnataka. It has preserved special aspects of the extraordinary character and contribution of one of the finest soldiers in the history of our army. pic.twitter.com/OWqWs3Ihh4

— President of India (@rashtrapatibhvn) February 6, 2021

ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಮವಸ್ತ್ರ, ತಿಮ್ಮಯ್ಯ ಅವರು ತಮ್ಮ ತಾತನೊಂದಿಗೆ ಸನ್ನಿಸೈಡ್‍ನಲ್ಲಿ ಮಲಗುತ್ತಿದ್ದ ಗತಕಾಲದ ನೆನಪು ತರುವ ಹಾಸಿಗೆ, ಮಿನಿ ರಾಕೆಟ್ ಲಾಂಚರ್, ಯುದ್ಧದಲ್ಲಿ ಬಳಸಲಾಗುತ್ತಿದ್ದ ಬಂದೂಕುಗಳು ಮುಂತಾದವನ್ನು ರಾಷ್ಟ್ರಪತಿಗಳು ವೀಕ್ಷಣೆ ಮಾಡಿದರು.

ವಸ್ತು ಸಂಗ್ರಹಾಲಯದ ಆವರಣದಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಆಕರ್ಷಕವಾಗಿ ನಿರ್ಮಿಸಿರುವ ಯುದ್ಧ ಟ್ಯಾಂಕರ್, ಯುದ್ಧ ವಿಮಾನ ಮುಂತಾದ ರಕ್ಷಣಾ ಪಡೆಯ ಸ್ಮಾರಕಗಳನ್ನು ಅವಲೋಕಿಸಿದರು.

ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ರಾಜ್ಯದ ಕನ್ನಡ ಮತ್ತು ಸಂಸ್ಕೖತಿ ಇಲಾಖೆ ನೀಡಿದ 5.50 ಕೋಟಿ ರೂಪಾಯಿ ಅನುದಾನದಲ್ಲಿ ಸಿದ್ಧವಾಗಿದೆ.

The memorabilia at 'Sunny Side', once the residence of General Thimayya, highlights the sterling features of our brave forces. pic.twitter.com/sJCCymDcAz

— President of India (@rashtrapatibhvn) February 6, 2021

ಪ್ರಥಮ ಮಹಿಳೆ ಸವಿತಾ ಕೋವಿಂದ್, ಭಾರತ ರಕ್ಷಣಾ ಪಡೆಗಳ ಮುಖ್ಯಸ್ಥ ಮುಖ್ಯಸ್ಥ ಬಿಪಿನ್ ರಾವತ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಹ್ಮಣಿ, ವೀಣಾ ಅಚ್ಚಯ್ಯ, ಎಫ್.ಎಂ.ಸಿ.ಜಿ.ಟಿ. ವೇದಿಕೆ ಅಧ್ಯಕ್ಷರಾದ ನಿವೃತ್ತ ಕೊಲೊನಿಯಲ್ ಕೆ.ಸಿ. ಸುಬ್ಬಯ್ಯ, ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿಲ್ಲಾ ಪಂಚಾಯತಿ ಸಿಇಒ ಭನ್ವರ್ ಸಿಂಗ್ ಮೀನಾ‌ ಮತ್ತಿತರರು ಉಪಸ್ಥಿತರಿದ್ದರು.

District Kodagu has the honour of having enriched our Armed Forces with stalwarts like General Thimayya and Field Marshal Cariappa. I am sure that this museum will inspire our youth to carry forward the legacy of General Thimayya. pic.twitter.com/yUJCQ2T1SB

— President of India (@rashtrapatibhvn) February 6, 2021

ಹುತಾತ್ಮರಿಗೆ ನಮನ, ತಲಕಾವೇರಿಯಲ್ಲಿ ಪೂಜೆ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜನರಲ್‌ ತಿಮ್ಮಯ್ಯ ವಸ್ತುಸಂಗ್ರಹಾಲಯವನ್ನು ಲೋಕಾರ್ಪಣೆ ಮಾಡುವುದಕ್ಕೂ ಮುನ್ನ ಹುತಾತ್ಮರ ಸ್ಮಾರಕದ ಬಳಿಗೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ಕಾರ್ಯಕ್ರಮದ ನಂತರ ತಲಕಾವೇರಿಗೆ ತೆರಳಿ ಕಾವೇರಿ ಉಗಮಸ್ಥಾನದಲ್ಲಿ ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದರು

ಜನರಲ್‌ ತಿಮ್ಮಯ್ಯ ಅವರ ಬಗ್ಗೆ

ಜನರಲ್ ಕೆ.ಎಸ್.ತಿಮ್ಮಯ್ಯ 1957ರಿಂದ 1961ರವರೆಗೆ ಭಾರತದ ಭೂಸೇನೆಯ ದಂಡನಾಯಕರಾಗಿದ್ದರು. ಕೊರಿಯಾ ದೇಶಗಳ ಯುಧ್ಧದ ನಂತರ ಸಂಯುಕ್ತ ರಾಷ್ಟ್ರಗಳ ಒಂದು ದಳಕ್ಕೆ ಅಧಿಪತಿಯಾಗಿದ್ದರಲ್ಲದೆ, ಯುದ್ಧ ಕೈದಿಗಳಿಗೆ ಮರು ವಸತಿ ವ್ಯವಸ್ಥೆ ಸ್ಥಾಪಿಸುವ ಹೊಣೆ ಹೊತ್ತಿದ್ದರು. ಭಾರತೀಯ ಸೇನೆಯಿಂದ ನಿವೃತ್ತರಾದ ಬಳಿಕ ಸಂಯುಕ್ತ ರಾಷ್ಟ್ರಗಳ ಶಾಂತಿ-ಸ್ಥಾಪಕ ಸೈನ್ಯದ ಮುಖ್ಯಸ್ಥರಾಗಿ ಸೈಪ್ರಸ್‌ನಲ್ಲಿ ಸೇವೆ ಮಾಡಿದ್ದರು. ಅಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಘಾತದಿಂದ 1965ರಲ್ಲಿ ನಿಧನರಾದರು.

Tags: general ks thimayyageneral thimayya museumkodagumadikeri
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮುಂದುವರಿದ ನಿಧಿ ಸಮರ್ಪಣಾ ಅಭಿಯಾನ;  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ, 1 ಕೋಟಿಗೂ ಹೆಚ್ಚು ದೇಣಿಗೆ

ಮುಂದುವರಿದ ನಿಧಿ ಸಮರ್ಪಣಾ ಅಭಿಯಾನ; ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ, 1 ಕೋಟಿಗೂ ಹೆಚ್ಚು ದೇಣಿಗೆ

Leave a Reply Cancel reply

Your email address will not be published. Required fields are marked *

Recommended

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಕೋವಿಡ್ ಸಂಕಷ್ಟದ ನಡುವೆಯೂ ದೊಡ್ಡ ಟಾರ್ಗೆಟ್ ಹಾಕಿಕೊಂಡ ಕೃಷಿ ಇಲಾಖೆ; ರಾಜ್ಯದಲ್ಲಿ ಶೇ.107ಕ್ಕೂ ಹೆಚ್ಚು ಬಿತ್ತನೆ, ರಸಗೊಬ್ಬರ, ಬೀಜಕ್ಕೆ ಕೊರತೆ ಇಲ್ಲವೆಂದ ಸಚಿವ ಬಿ.ಸಿ.ಪಾಟೀಲ್‌

4 years ago
ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!

ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ