• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಮುಂದುವರಿದ ನಿಧಿ ಸಮರ್ಪಣಾ ಅಭಿಯಾನ; ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ, 1 ಕೋಟಿಗೂ ಹೆಚ್ಚು ದೇಣಿಗೆ

cknewsnow desk by cknewsnow desk
February 7, 2021
in EDITORS'S PICKS, STATE
Reading Time: 1 min read
0
ಮುಂದುವರಿದ ನಿಧಿ ಸಮರ್ಪಣಾ ಅಭಿಯಾನ;  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿದ ಕ್ರೈಸ್ತ ಸಮುದಾಯ, 1 ಕೋಟಿಗೂ ಹೆಚ್ಚು ದೇಣಿಗೆ
915
VIEWS
FacebookTwitterWhatsuplinkedinEmail

ಬೆಂಗಳೂರಿನಲ್ಲಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಸಭೆ

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದರು.

ಬಿಜೆಪಿ ಎಲ್ಲರ ಪಕ್ಷ

ಭಾರತೀಯ ಜನತಾ ಪಕ್ಷವು ಅಲ್ಪಸಂಖ್ಯಾತರ ವಿರುದ್ಧವಿರುವ ಪಕ್ಷ ಎಂಬುದು ಅಕ್ಷರಶಃ ಸುಳ್ಳು. ಅನೇಕ ವರ್ಷಗಳಿಂದ ಇಂಥ ಅಪಪ್ರಚಾರವನ್ನು ನಡೆಸಿಕೊಂಡು ಬರಲಾಗಿದೆ. ಬಿಜೆಪಿಯು ದೇಶದ ಸರ್ವರನ್ನೂ ಒಳಗೊಂಡಿರುವ ಪಕ್ಷ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವಂತೆ; ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಮತ್ತು ಸಬ್‌ ಕಾ ವಿಶ್ವಾಸ್‌” ಎಂಬುದು ಬಿಜೆಪಿಯ ಮಂತ್ರವಾಗಿದೆ. ಎಲ್ಲರನ್ನೂ ಒಳಗೊಂಡು ದೇಶವನ್ನು ಮುನ್ನಡೆಸುವುದು ಪಕ್ಷದ ಗುರಿಯಾಗಿದೆ. ಕೇಂದ್ರದಲ್ಲಿರಬಹುದು ಅಥವಾ ರಾಜ್ಯದಲ್ಲಿರಬಹುದು ಈ ತತ್ವದಡಿಯಲ್ಲೇ ಆಡಳಿತ ನಡೆಯುತ್ತಿದೆ ಎಂದು ಡಿಸಿಎಂ ನುಡಿದರು.

ನಾವೆಲ್ಲರೂ ಒಂದೇ ಎಂದ ಕೊಲಾಸೋ

ಕ್ರೈಸ್ತ ಸಮುದಾಯದ ಎಲ್ಲ ಗಣ್ಯರ ಪರವಾಗಿ ಸಭೆಯಲ್ಲಿ ಮಾತನಾಡಿದ ಉದ್ಯಮಿ ರೊನಾಲ್ಡ್‌ ಕೊಲಾಸೋ ಅವರು; “ಕ್ರೈಸ್ತ ಸಮುದಾಯ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. ಹಿಂದಿನಿಂದಲೂ ರಾಜ್ಯ-ದೇಶದ ಪ್ರತಿ ಆಗುಹೋಗುಗಳಿಗೆ ಈ ಸಮುದಾಯ ಸ್ಪಂದಿಸುತ್ತಲೇ ಬಂದಿದೆ. ಶಿಕ್ಷಣ, ಧಾರ್ಮಿಕ, ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತ ಸೇವೆಯಲ್ಲಿ ನಿರತವಾಗಿದೆ” ಎಂದರು.

ವೈಯಕ್ತಿಕವಾಗಿ ನನ್ನ ಮಟ್ಟಿಗೆ ಹೇಳುವುದಾದರೆ; 36 ದೇವಾಲಯಗಳಿಗೆ ಆರ್ಥಿಕ ನೆರವು ನೀಡಿದ್ದೇನೆ. ಶಾಲೆ, ಆಸ್ಪತ್ರೆ ನಿರ್ಮಾಣಕ್ಕೆ ಕೈಜೋಡಿಸಿದ್ದೇನೆ. ದೇಗುಲ ಮಾತ್ರವಲ್ಲದೆ ಚರ್ಚು, ಮಸೀದಿ ನಿರ್ಮಾಣಕ್ಕೂ ಕೈಲಾದ ನೆರವು ನೀಡಿದ್ದೇನೆ. ಇದೆಲ್ಲವನ್ನು ಮಾಡಿದ್ದು ಪರಸ್ಪರ ಸೌಹಾರ್ದತೆಗಾಗಿ ಮತ್ತೂ ನಾವೆಲ್ಲೂ ಒಂದು ಎಂಬ ಕಾರಣಕ್ಕಾಗಿ. ರಾಜ್ಯದಲ್ಲಿ ಕ್ರೈಸ್ತ ಅಭಿವೃದಿ ನಿಗಮ ಸ್ಥಾಪನೆಯಾಗಿದ್ದು, ಅದಕ್ಕೆ 200 ಕೋಟಿ ರೂ. ಅನುದಾನ ನೀಡಲಾಗಿದೆ. ಇದು ನಿಜಕ್ಕೂ ಸಂತಸದ ವಿಷಯ.

-ರೊನಾಲ್ಡ್‌ ಕೊಲಾಸೋ

ಇದೇ ವೇಳೆ; ಸಂತ ಜೋಸೇಫ್‌ ವಿಶ್ವವಿದ್ಯಾಲಯ ಸ್ಥಾಪನೆಯ ನಿಟ್ಟಿನಲ್ಲಿ ವಿಧಾನಮಂಡಲದಲ್ಲಿ ವಿಧೇಯಕ ಅಂಗೀಕಾರವಾಗಲು ಶ್ರಮಿಸಿದ ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಕ್ರೈಸ್ತ ಮುಖಂಡರು ಅಭಿನಂದಿಸಿ ಗೌರವಿಸಿದರು.

ಬೆಂಗಳೂರಿನಲ್ಲಿರುವ ಮಾಲ್ಡೀವ್ಸ್‌ ರಾಯಭಾರ ಕಚೇರಿಯ ಕಾನ್ಸುಲ್‌ ಜನರಲ್‌ ಡಾ.ಜೋಸೆಫ್‌ ವಿ.ಜಿ., ಉದ್ಯಮಿಗಳಾದ ಜೋಸೆಫ್‌ ಫ್ರಾನ್ಸಿಸ್‌, ಸಿ.ಜೆ.ಬಾಬು, ಸಿಲ್ವಿಯಾನ್‌ ನರೋನ, ಕ್ಲ್ಯಾಡ್ಯುಯಸ್‌ ಪೆರಾರಿಯ, ಡಾ.ಥಾಮಸ್‌ ಟಿ. ಜಾನ್‌, ಚಾರ್ಲ್ಸ್‌ ಗೋಮೆಸ್‌, ರೋಶನ್‌ ಡಿಸಿಲ್ವ, ನಿಗೆಲ್‌ ಫರ್ನಾಂಡೀಸ್‌, ಸಂತೋಷ್‌ ಸೀಕ್ವೆರಿಯಾ, ಕ್ಲಾರೆನ್ಸ್‌ ಪೆರಾರಿಯಾ, ಪ್ರಮೋದ್‌ ಡಿಸೋಜ, ಎಂ.ಎಕ್ಸ್‌,ರಾಜು, ಡಾ.ಕೆ.ಸಿ.ಸ್ಯಾಮ್ಯುಯಲ್‌, ಅರುಣ್‌ ಫರ್ನಾಂಡೀಸ್‌, ಡಾ.ಸಂತೋಷ್‌ ಕೋಶಿ, ಸಮುದಾಯದ ಹಿರಿಯ ಮುಖಂಡ ಪಿ.ಕೆ. ಚೆರಿಯನ್‌, ಸಿ.ಜಿ.ವರ್ಗೀಸ್‌, ಮನೋಜ್‌ ರಾಜ್‌, ಐವಾನ್‌ ಡಿʼಕೋಸ್ಟಾ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಜೆ ಜೋ ಜೋಸೆಫ್ ಅವರೂ ಇದ್ದರು.
***

  • ಮೇಲಿನ ಚಿತ್ರ: ರೊನಾಲ್ಡ್‌ ಕೊಲಾಸೋ ಅವರನ್ನು ಅಭಿನಂದಿಸಿದ ಡಿಸಿಎಂ ಡಾ.ಅಶ್ವತ್ಥನಾರಾಯಣ.

Tags: ayodhya lord RamaChristian communityfund rising for rama mandir
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನನ್ನು ಹಿಂಬಾಲಿಸಿ ಬಂದು ತಲೆ ಕತ್ತರಿಸಿ ಕೊಲೆ ಮಾಡಿದ ಹಂತಕರು; ಬೆಚ್ಚಿಬಿದ್ದ ಗುಡಿಬಂಡೆ ತಾಲ್ಲೂಕು

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡನನ್ನು ಹಿಂಬಾಲಿಸಿ ಬಂದು ತಲೆ ಕತ್ತರಿಸಿ ಕೊಲೆ ಮಾಡಿದ ಹಂತಕರು; ಬೆಚ್ಚಿಬಿದ್ದ ಗುಡಿಬಂಡೆ ತಾಲ್ಲೂಕು

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಕೋವಿಡ್‌ ಎರಡನೇ ಅಲೆ ನಿರ್ಬಂಧಗಳ ಬಗ್ಗೆ ಶುಕ್ರವಾರ ಚರ್ಚೆ; ಹೊಸ ವರ್ಷ ಸಂಭ್ರಾಚರಣೆ ಅಗತ್ಯವಿಲ್ಲ ಎಂದ ಡಾಕ್ಟರ್

6 years ago
ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

2 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ