• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ

cknewsnow desk by cknewsnow desk
February 12, 2021
in COVID-19, NEWS IN USE, STATE
Reading Time: 2 mins read
0
ಎಲ್ಲಿಗೆ ಬೇಕಾದರೂ ಸುಲಭವಾಗಿ ಶಿಫ್ಟ್‌ ಮಾಡಬಹುದಾದ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಜನರಿಗೆ ಮುಕ್ತಗೊಳಿಸಿದ ಸಿಎಂ; ದೇಶದಲ್ಲೇ ಮೊದಲು, ಹೆಲ್ತ್‌ ಎಮರ್ಜೆನ್ಸಿ ಸಮಯದಲ್ಲಿ ಪರಿಣಾಮಕಾರಿ
913
VIEWS
FacebookTwitterWhatsuplinkedinEmail

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಐಸಿಯು ಘಟಕ ಸ್ಥಾಪನೆ

ಬೆಂಗಳೂರು: ಕೋವಿಡ್‌ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು.

ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೇವಲ ಮೂರು ತಿಂಗಳ ಕಾಲದಲ್ಲಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಈ ಐಸಿಯು, ಈ ಮೂಲಕ ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು, ದಾನಿಗಳ ನೆರವಿನಿಂದ ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್‌ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಯದೇವ ಹೃದ್ರೋಗ ಆಸ್ಪತ್ರೆ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್‌ ಸ್ಥಾಪನೆ ಹಾಗೂ 50 ಹಾಸಿಗೆಯ ಟ್ರಾಮಾ ಕೇರ್ ಸೆಂಟರ್ ಹಾಗೂ 150 ಹಾಸಿಗೆಯ ತಾಯಿ- ಮಗು ಚಿಕಿತ್ಸಾ ಕೇಂದ್ರವನ್ನು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 100 ಹಾಸಿಗೆಗಳ ಮಾಡ್ಯುಲಾರ್ ಐಸಿಯು ಮತ್ತು RT-PCR ಪರೀಕ್ಷಾ ಕೇಂದ್ರ ಮತ್ತು ಆಮ್ಲಜನಕ ಘಟಕವನ್ನು ಮುಖ್ಯಮಂತ್ರಿ @BSYBJP ರವರು ಇಂದು ಲೋಕಾರ್ಪಣೆ ಮಾಡಿದರು. (1/2) pic.twitter.com/eCPBk0v8j0

— CM of Karnataka (@CMofKarnataka) February 8, 2021

ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಎಲ್ಲ ಸೌಲಭ್ಯಗಳನ್ನು ‌ಒದಗಿಸುವ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಮುಖ್ಯಮಂತ್ರಿ ಒಪ್ಪಿದರು.

2,100ಕ್ಕೂ ಅಧಿಕ ಕೋವಿಡ್ ರೋಗಿಗಳಿಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದ ಸಿಎಂ ಅವರು, ಕೋವಿಡ್ ಲಸಿಕೆ ಅಭಿಯಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಈಚೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿಗಳು ಕೂಡ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯವು ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೊಗಳಿದ್ದರು. ಈ ನಿಟ್ಟಿನಲ್ಲಿ ಇಲಾಖೆಗೆ ಹೆಚ್ಚೆಚ್ಚು ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧವಿದೆ ಎಂದರು ಸಿಎಂ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಆಸ್ಪತ್ರೆಯ ಐ.ಸಿ.ಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ @BSYBJP ರವರ ಭಾಷಣದ ಪ್ರಮುಖಾಂಶಗಳು;#KarnatakaFightsCorona @drashwathcn @BSBommai @mla_sudhakar pic.twitter.com/c3vljmK0fX

— CM of Karnataka (@CMofKarnataka) February 8, 2021

ದಾನಿಗಳ ನೆರವು

ಪ್ರಾಸ್ತಾವಿಕ ಭಾಷಣ ಮಾಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು; ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡ್ಯೂಲರ್‌ ಐಸಿಯುಗಳ ಅತ್ಯಂತ ಸಹಕಾರಿ. 100 ಹಾಸಿಗೆಗಳು ಇಲ್ಲಿ ಲಭ್ಯವಿದ್ದು, ದಾನಿಗಳ ನೆರವಿನಿಂದ ನಿರ್ಮಾಣ ಮಾಡಲಾಗಿದೆ. ಎಂಥಹುದೇ ಪರಿಸ್ಥಿತಿಯಲ್ಲೂ ಇವುಗಳನ್ನು ಬಳಸಬಹುದಾಗಿದ್ದು, ರಾಜ್ಯದ ಆವಿಷ್ಕಾರ ಕುಶಲತೆಗೆ ಕನ್ನಡಿಯಾಗಿದೆ ಎಂದರು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿನ ಟ್ರಾಮಾ ಕೇರ್ ಸೆಂಟರನ್ನೇ ಅಕಾಡೆಮಿಕ್ ಕ್ರಿಟಿಕಲ್ ಕೇರ್ ಸೆಂಟರ್ ಆಗಿ ಮಾಡುವುದರಿಂದ ತಜ್ಞ ಸಿಬ್ಬಂದಿಯ ಕೊರತೆ ನೀಗಿಸಬಹುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ದಿನೇಶ್‌ ಗುಂಡೂರಾವ್‌ ಮೆಚ್ಚುಗೆ

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ; ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಕೇವಲ ಮೂರೇ ತಿಂಗಳಲ್ಲಿ ಇಂಥಹ ಸುಸಜ್ಜಿತ ಹಾಗೂ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯು ಸ್ಥಾಪನೆಯಾಗಿದೆ ಎಂದರೆ ಅಚ್ಚರಿಯ ಸಂಗತಿಯೇ ಸರಿ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ವೇಳೆ ಎಲ್ಲ ದಾನಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹಾಜರಿದ್ದರು.

ಮಾಡ್ಯೂಲರ್‌ ಐಸಿಯು ಹೀಗಿರುತ್ತದೆ

ಈ ಐಸಿಯುಗಳ ಬಗ್ಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಅವರು ಮಾಹಿತಿ ನೀಡಿದ್ದು ಹೀಗೆ. ಆ ವಿವರ ಇಲ್ಲಿದೆ.

ಸರಕು ಸಾಗಣೆ ಮಾಡುವ ಕಂಟೇನರ್ʼಗಳ ಮಾದರಿ ಇಟ್ಟುಕೊಂಡು ಈ ಐಸಿಯುಗಳನ್ನು ಸಿದ್ಧಪಡಿಸಲಾಗಿದ್ದು, ಒಟ್ಟು 100 ಹಾಸಿಗೆಗಳು ಲಭ್ಯ ಇರುತ್ತವೆ. ಪ್ರತೀ ಒಂದು ಕಂಟೇನರ್‌ʼನಲ್ಲಿ (ಐಸಿಯುನಲ್ಲಿ) ಐದು ಐಸಿಯು ಹಾಸಿಗೆಗಳು ಇವೆ. ಎಲ್ಲ ಮಾಡ್ಯೂಲರ್‌ ಐಸಿಯುಗಳ ನಿರ್ವಹಣೆಗೆ ತಜ್ಞ ವೈದ್ಯರು, ಅರೆವೈದ್ಯ ಸಿಬ್ಬಂದಿ, ನರ್ಸುಗಳು ಸೇರಿ ಒಟ್ಟು 150 ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಕೋವಿಡ್‌ ಮಾತ್ರವಲ್ಲದೆ ಯಾವುದೇ ರೀತಿಯ ಹೆಲ್ತ್‌ ಎಮರ್ಜೆನ್ಸಿಯಂಥ ಸಂದರ್ಭಗಳಲ್ಲಿ ಇಂಥ ಮಾಡ್ಯೂಲರ್‌ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಇವುಗಳನ್ನು ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಿ ಇಡಬಹುದು. ಪ್ರತಿ ಐಸಿಯು ಒಂದರ ಗಾತ್ರ 12.135 X 3.3 X 2.62 ಮೀಟರ್ ಇದ್ದು, ಯಾವುದೇ ವಾತಾವರಣಕ್ಕೂ ಸರಿಹೊಂದುವ ತಾಂತ್ರಿಕ ಸೌಲಭ್ಯ, ಕುಶಲತೆಯನ್ನು ಇವು ಹೊಂದಿರುತ್ತವೆ.

ಹೈ ಸ್ಪೀಡ್‌ ವೈಫೈ, ಪ್ರತ್ಯೇಕ ಲ್ಯಾನ್‌ ಕೇಬಲ್‌, ಎಚ್‌ಡಿ ಕ್ಯಾಮೆರಾಗಳು, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಂ, ಪ್ರತ್ಯೇಕ ನೀರು ಮತ್ತು ಒಳಚರಂಡಿ ವ್ಯವಸ್ಥೆ ಪ್ರತಿ ಮಾಡ್ಯೂಲರ್‌ ಐಸಿಯುಗೂ ಇರುತ್ತದೆ. ಜತೆಗೆ, ಸೆಂಟ್ರಲ್‌ ಮಾನಿಟರಿಂಗ್‌ ಸಿಸ್ಟಮ್‌ ಮೂಲಕ ವೈದ್ಯರು ಎಲ್ಲೇ ಇದ್ದರೂ ಸುಲಭವಾಗಿ ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಬಹುದು.

ಲಿಕ್ವಿಡ್‌ ಆಕ್ಸಿಜನ್‌ (ದ್ರವರೂಪದ ಆಮ್ಲಜನಕ) ವ್ಯವಸ್ಥೆ ಇರುತ್ತದೆ. ಇದರ ಪ್ರಮಾಣವನ್ನು 2,000 ಲೀಟರುಗಳಿಂದ 8,000 ಲೀಟರಿಗೆ ಹೆಚ್ಚಿಸಲಾಗಿದೆ. ಹವಾನಿಯಂತ್ರಿತ ವ್ಯವಸ್ಥೆ ಜತೆಗೆ, ಶುದ್ಧ ಗಾಳಿ ತುಂಬಿಸಿ ಕಂಪ್ಲೀಟ್ ಏರ್ʼಟೈಟ್ ಮಾಡಲಾಗಿರುತ್ತದೆ. ನಮ್ಮ ದೇಶದಲ್ಲೇ ಇದೇ ಮೊದಲ ಪ್ರಯೋಗ. ತುರ್ತು ಸಂದರ್ಭಗಳು, ಅದರಲ್ಲೂ ನೈಸರ್ಗಿಕ ವಿಕೋಪದಂಥ ದುರಂತಗಳು ಎದುರಾದಾಗ ಇಂಥ ಐಸಿಯುಗಳು ಹೆಚ್ಚು ಪರಿಣಾಮಕಾರಿ. ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.

ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ʼರಿನ್ಯಾಕ್’ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದೆ. ಈ ಕಂಪನಿಗೆ ನಾನು ಭೇಟಿ ನೀಡಿ; ಎಲ್ಲ ರೀತಿಯ ಪರಿಶೀಲನೆ ಮಾಡಿದ್ದೇನೆ. ಕಡಿಮೆ ದರದಲ್ಲಿ ತಯಾರಾಗುವಂತೆ ಆ ಸಂಸ್ಥೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೆ. ಇವುಗಳನ್ನು ಜಾಗತಿಕ ಗುಣಮಟ್ಟ ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ.

50 ಮಾಡ್ಯೂಲರ್‌ ಐಸಿಯುಗಳ ದಾನಿಗಳ ವಿವರ
1.ಪ್ರಿಸ್ಟೇಜ್‌ ಸಮೂಹದ ಪ್ರಿಸ್ಟೇಜ್‌ ಪೌಂಡೇಶನ್-1
2.ಸಲಾಪುರಿಯಾ ಗ್ರೂಪ್-‌1
3.ಬ್ರಿಗೇಡ್‌ ಗ್ರೂಪ್-‌1
4.ಬಾಗಮಾನೆ ಗ್ರೂಪ್‌-1
5.ಸೋಹಮ್‌ ವಿದ್ಯುತ್‌ ಉತ್ಪಾದನಾ ಸಂಸ್ಥೆ-1
6.ಸಾಮಿ ಲ್ಯಾಬ್ಸ್‌ ಲಿಮಿಟೆಡ್‌-2
7.ACT ಪೈಬರ್‌ ನೆಟ್‌ ಕಂಪನಿ-2
8.ತ್ರಿವೇಣಿ ಟರ್ಬೈನ್ಸ್‌-1
9.ವೈಷ್ಣವಿ ಗ್ರೂಪ್-‌1
10.ಎಂಬೆಸಿ ಗ್ರೂಪ್-‌10 ಲಕ್ಷ ರೂ. ದೇಣಿಗೆ ನೀಡಿದೆ.

Tags: Bengalurucovid19karnatakakc general hospitalmadular icu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಚಿಕ್ಕಬಳ್ಳಾಪುರ ತಾಲ್ಲೂಕಿನ ಬಹತೇಕ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ; ಮುದ್ದೇನಹಳ್ಳಿಯಲ್ಲಿ ಮಾತ್ರ ಚುನಾವಣೆ, ಉಳಿದೆಡೆ ಅವಿರೋಧ ಆಯ್ಕೆ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ