• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ರಾಜ್ಯದ ಮೂಲಭೂತ ಸೌಕರ್ಯ ಸ್ಥಿತಿಗತಿ ಬಗ್ಗೆ ಶ್ವೇತಪತ್ರ; ಪ್ರತಿಹಳ್ಳಿಗೂ ಹೈಸ್ಪೀಡ್‌ ಇಂಟರ್‌ನೆಟ್‌, 24×7 ವಿದ್ಯುತ್‌ ಗುಣಮಟ್ಟದ ಪೂರೈಕೆ, ಬೆಂಗಳೂರು ನಗರದ ಹೊರಗೂ ಐಟಿ ಕ್ಷೇತ್ರ ಬೆಳವಣಿಗೆಗೆ ಸ್ಪಷ್ಟ ಮುನ್ನುಡಿ

cknewsnow desk by cknewsnow desk
February 10, 2021
in EDITORS'S PICKS, NEWS & VIEWS
Reading Time: 1 min read
0
ರಾಜ್ಯದ ಮೂಲಭೂತ ಸೌಕರ್ಯ ಸ್ಥಿತಿಗತಿ ಬಗ್ಗೆ  ಶ್ವೇತಪತ್ರ; ಪ್ರತಿಹಳ್ಳಿಗೂ ಹೈಸ್ಪೀಡ್‌ ಇಂಟರ್‌ನೆಟ್‌, 24×7 ವಿದ್ಯುತ್‌ ಗುಣಮಟ್ಟದ ಪೂರೈಕೆ, ಬೆಂಗಳೂರು ನಗರದ ಹೊರಗೂ ಐಟಿ ಕ್ಷೇತ್ರ ಬೆಳವಣಿಗೆಗೆ ಸ್ಪಷ್ಟ ಮುನ್ನುಡಿ
920
VIEWS
FacebookTwitterWhatsuplinkedinEmail

ಡಿಜಿಟಲ್‌ ಎಕಾನಮಿ ಮಿಷನ್‌ ಕಚೇರಿ ಉದ್ಘಾಟನೆ, ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಡಿಜಿಟಲ್‌ ಎಕಾನಮಿ ಮಿಷನ್‌ ಹಾಗೂ ಬಿಯಾಂಡ್‌ ಬೆಂಗಳೂರು (ಬೆಂಗಳೂರು ವ್ಯಾಪ್ತಿಯಾಚೆ) ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ನಿಟ್ಟಿನಲ್ಲಿ ರಾಜ್ಯದ ಮೂಲಸೌಕರ್ಯಗಳ ವಸ್ತುಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (ಕೆಡಿಇಎಂ) ಕಚೇರಿಯನ್ನು ಉದ್ಘಾಟಿಸಿ ಅದಕ್ಕೆ ಪೂರಕವಾದ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು; ಬೆಂಗಳೂರಿನಿಂದ ಹೊರಗೆ ಐಟಿ, ಎಲೆಕ್ಟ್ರಾನಿಕ್ಸ್‌, ಸಂಶೋಧನೆ, ಆವಿಷ್ಕಾರ ಮತ್ತಿತರೆ ಉದ್ಯಮಗಳು ನೆಲೆಯೂರುವಂತೆ ಮಾಡಲು ನಗರ-ಗ್ರಾಮೀಣ ಪ್ರದೇಶಗಳೆಂಬ ಬೇಧವಿಲ್ಲದೆ ಸಮಾನಾಂತರವಾಗಿ ಮೂಲಸೌಕರ್ಯಗಳನ್ನು ಒದಗಿಸುವ ಸದುದ್ದೇಶದಿಂದ ಈ ಶ್ವೇತಪತ್ರ ಹೊರಡಿಸಲು ನಿರ್ಧರಿಸಲಾಗಿದೆ. ಬಳಿಕ ಉದ್ಯಮಿಗಳು, ತಜ್ಞರ ಜತೆ ಸಮಾಲೋಚಿಸಿ ಅತ್ಯಗತ್ಯ ಮೂಲಸೌಕರ್ಯ ಒದಗಿಸಲು ನೀಲನಕ್ಷೆ ರೂಪಿಸಿ ಕ್ಷಿಪ್ರಗತಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದರು.

ರಸ್ತೆಯಂಥ ಮೂಲಸೌಕರ್ಯಗಳ ಜತೆಗೆ ವಿದ್ಯುತ್‌, ಸಂಪರ್ಕ ಒದಗಿಸುವುದು ಸರಕಾರದ ಅಗ್ರ ಆದ್ಯತೆ. ರಾಜ್ಯವು ಸದ್ಯಕ್ಕೆ ವಿದ್ಯುತ್‌ ಕೊರತೆ ಎದುರಿಸುತ್ತಿದ್ದು, ಅದನ್ನು ನೀಗಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಅದೇ ರೀತಿ ಕುಗ್ರಾಮಕ್ಕೂ ಹೈಸ್ಪೀಡ್‌ ಇಂಟರ್‌ನೆಟ್‌ ತಲುಪಿಸುವ ನಿಟ್ಟಿನಲ್ಲಿ ಈಗಾಗಲೇ ಮಹತ್ವದ ಹೆಜ್ಜೆ ಇರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಒಟ್ಟಾರೆ ಉತ್ಪಾದನೆಯಲ್ಲಿ (ಎಸ್.ಡಿ.ಜಿ.ಪಿ.) ಡಿಜಿಟಲ್ ಆರ್ಥಿಕತೆಯ ಕೊಡುಗೆಯನ್ನು ಮುಂದಿನ ಐದು ವರ್ಷಗಳಲ್ಲಿ ಶೇ.30 ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಿರುವ ‘ಕರ್ನಾಟಕ ಡಿಜಿಟಿಲ್ ಆರ್ಥಿಕತೆ ಮಿಷನ್’ನ (ಕೆಡಿಇಎಂ) ಹಾಗೂ ಬಿಯಾಂಡ್ ಬೆಂಗಳೂರು ವರದಿ ಮಹತ್ವಪೂರ್ಣವಾದದ್ದು ಎಂದರು ಅವರು.

ಕೆಡಿಇಎಂ ಹೆಚ್ಚು ಉದ್ಯಮಸ್ನೇಹಿ ಆಗಿರಬೇಕೆಂಬ ಸರಕಾರ ಇದರಲ್ಲಿ ಹೆಚ್ಚಿನ ಪಾಲುದಾರಿಕೆಯನ್ನು (ಶೇ.51ರಷ್ಟು) ಉದ್ಯಮ ಸಂಘಟನೆಗಳಿಗೇ ಬಿಟ್ಟುಕೊಟ್ಟಿದೆ. ಸೌಕರ್ಯ ಒದಗಿಸುವ ಪಾತ್ರ ನಿರ್ವಹಿಸಲು ಒತ್ತು ಕೊಡಲಿರುವ ಸರಕಾರವು ಇದರಲ್ಲಿ ಶೇ.49ರಷ್ಟು ಪಾಲನ್ನು ಮಾತ್ರ ತಾನು ಇರಿಸಿಕೊಂಡಿದೆ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು.

ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಉದ್ಯಮಗಳು ವಿದ್ಯಾರ್ಥಿ ಅವಧಿಯ ಇಂಟರ್ನ್ʼಷಿಪ್ ಗೆ ಉತ್ತೇಜನ ನೀಡುವ ಪ್ರವೃತ್ತಿ ಬೆಳೆಸುವ ಅಗತ್ಯವಿದೆ. ಪ್ರಸ್ತುತ ಇದಕ್ಕೆ ಸಂಬಂಧಿಸಿದಂತೆ ಉದ್ಯಮಗಳು ನಿರಾಸಕ್ತಿ ತಾಳಿವೆ. ಆದರೆ ಯುವಪೀಳಿಗೆಯೇ ಮುಂದಿನ ಭವಿಷ್ಯವಾದ್ದರಿಂದ ಅವರಿಗೆ ಅವಕಾಶ ನೀಡಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಗೆ ಚಾಲನೆ ನೀಡಲಾಯಿತು. ಇದರೊಂದಿಗೆ, #BeyondBengaluru ಉಪಕ್ರಮದ ವರದಿಯನ್ನು ಬಿಡುಗಡೆಗೊಳಿಸಲಾಯಿತು.

ನಮ್ಮ @ITBTGoK ಇಲಾಖೆಯ ಈ ಯೋಜನೆಗಳ ಮೂಲಕ ರಾಜ್ಯದ ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲಿದೆ ಹಾಗೂ ಈ ಮೂಲಕ ಕರ್ನಾಟಕದ ಡಿಜಿಟಲ್ ಆರ್ಥಿಕತೆಯ ವೇಗದ ಬೆಳವಣಿಗೆಗೆ ನೆರವಾಗಲಿದೆ. pic.twitter.com/0mm3H5BvzT

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) February 9, 2021

10 ಲಕ್ಷ ಉದ್ಯೋಗ ಸೃಷ್ಟಿ

ಡಿಜಿಟಲ್ ಆರ್ಥಿಕತೆಗೆ ಪೂರಕವಾಗಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳಿಗೆ ಹೂಡಿಕೆಗಳನ್ನು ಆಕರ್ಷಿಸಿ 2025ರ ವೇಳೆಗೆ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಕೆಡಿಇಎಂ ಹೊಂದಿದೆ. ಮಾಹಿತಿ ತಂತ್ರಜ್ಞಾನ ಉತ್ಪನ್ನಗಳ ಅಭಿವೃದ್ಧಿ ಮತ್ತು ಸೇವೆಗಳನ್ನು ಒದಗಿಸುವುದು, ಆವಿಷ್ಕಾರಗಳು ಮತ್ತು ನವೋದ್ಯಮಗಳು, ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ತಯಾರಿಕೆ (ಇ.ಎಸ್.ಡಿ.ಎಂ.), ‘ಬೆಂಗಳೂರು ವ್ಯಾಪ್ತಿಯಾಚೆ’ (ಬಿಯಾಂಡ್ ಬೆಂಗಳೂರು) ಮತ್ತು ಪ್ರತಿಭಾ ಸಂವರ್ಧನೆ (ಟ್ಯಾಲೆಂಟ್ ಆಕ್ಸಲರೇಟರ್) ಈ ಐದು ವಲಯಗಳನ್ನು ಗಮನದಲ್ಲಿರಿಸಿಕೊಂಡು ಕೆಲಸ ಮಾಡಲಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

ಕರ್ನಾಟಕದ ಮಾಹಿತಿ ತಂತ್ರಜ್ಞಾನ ರಫ್ತು ಮೊತ್ತವು 2025ರ ವೇಳೆಗೆ 150 ಶತಕೋಟಿ ಯು.ಎಸ್.ಡಾಲರ್ ಗಳ ಗುರಿ ಮುಟ್ಟಲು ಹಾಗೂ ರಾಜ್ಯದ ಆರ್ಥಿಕತೆಯು 300 ಶತಕೋಟಿ ಡಾಲರ್ ಗಳ ಗುರಿ ಸಾಧಿಸಲು ಕೆಡಿಇಎಂ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೇ.10ರಷ್ಟು ರಾಜ್ಯ ಜಿಡಿಪಿ ಗುರಿ

ಡಾ.ಇ.ವಿ.ರಮಣರೆಡ್ಡಿ ಅವರು ಮಾತನಾಡಿ, ಸದ್ಯ ರಾಜ್ಯದ ಒಟ್ಟಾರೆ ಜಿಡಿಪಿಗೆ ಮಾಹಿತಿ ತಂತ್ರಜ್ಞಾನ ವಲಯದ ಕೊಡುಗೆ ಶೇ.25ರಷ್ಟು ಇದ್ದು, ಇದರಲ್ಲಿ ಬೆಂಗಳೂರಿನ ಕೊಡುಗೆಯೇ ಶೇ.98ರಷ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವ್ಯಾಪ್ತಿಯಾಚೆಗಿನ ಪಾಲು ಹೆಚ್ಚಿಸುವ ಸಲುವಾಗಿ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಲಾಗಿದೆ. ದೇಶವು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ (ಒಂದು ಲಕ್ಷ ಕೋಟಿ) ಡಾಲರ್ ಆರ್ಥಿಕತೆಯಾಗುವ ವೇಳೆಗೆ ‘ಬೆಂಗಳೂರು ವ್ಯಾಪ್ತಿಯಾಚೆ’ಗಿನ ಐಟಿ ವಲಯದ ಪಾಲು ರಾಜ್ಯ ಜಿಡಿಪಿಗೆ ಶೇ.10ರಷ್ಟು ಇರಬೇಕು ಎಂಬ ಗುರಿ ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.

ನವೋದ್ಯಮ ದೂರದರ್ಶಿತ್ವ ಸಮಿತಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮಾತನಾಡಿ, ಉದ್ಯಮ-ಶೈಕ್ಷಣಿಕ ವಲಯ- ಸರ್ಕಾರ, ಇವುಗಳ ನಡುವೆ ಸಂಪರ್ಕ ಸೇತುವೆಯಾಗಿ ಕೆಡಿಇಎಂ ಕೆಲಸ ಮಾಡಲಿದೆ. ಸೂಕ್ತ ಕಾರ್ಯನೀತಿ ರೂಪಿಸಲು, ಕಾರ್ಯತಂತ್ರ ಅಳವಡಿಸಿಕೊಳ್ಳಲು, ರಾಜ್ಯವನ್ನು ಡಿಜಿಟಲ್ ಸಂಶೋಧನಾ ನೆಲೆಯನ್ನಾಗಿಸಲು ಕೆಡಿಇಎಂ ಪ್ರಯತ್ನ ನಿರತವಾಗಲಿದೆ ಎಂದರು.

ಬೆಂಗಳೂರು ಹೊರಗೂ ಐಟಿ ಕ್ಷೇತ್ರ

ಡಿಜಿಟಲ್‌ ಎಕಾನಮಿ ಮಿಷನ್‌ ಅಧ್ಯಕ್ಷ ಬಿ.ವಿ.ನಾಯ್ಡು ಮಾತನಾಡಿ; ಬೆಂಗಳೂರಿನ ನಂತರ ಎರಡನೇ, ಮೂರನೇ ನಗರಗಳಿಗೂ ಐಟಿ ಕ್ಷೇತ್ರ ವಿಸ್ತರಣೆಯಾಗಬೇಕು. ಡಿಜಿಟಲ್‌ ಎಕಾನಮಿ ಮಿಷನ್‌ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಆಶಯ ಇದೇ ಆಗಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ/ಧಾರವಾಡ, ಕಲಬುರ್ಗಿ, ಶಿವಮೊಗ್ಗ, ತುಮಕೂರು ಈ ಆರು ಕ್ಲಸ್ಟರ್ ಗಳಲ್ಲಿ ಡಿಟಿಜಲ್ ಆರ್ಥಿಕತೆ ಕೊಡುಗೆ ಹೆಚ್ಚಿಸಲು ಅವಕಾಶಗಳಿವೆ. ಈಗಾಗಲೇ ಬೆಂಗಳೂರು ದೇಶದ ಒಟ್ಟಾರೆ ಪ್ರಮಾಣದಲ್ಲಿ ಶೇ.35ರಷ್ಟು; ಅಂದರೆ, 245ರಿಂದ 300 ಶತಕೋಟಿ ಡಾಲರ್‌ ಮೊತ್ತದ ಐಟಿ ರಫ್ತು ವಹಿವಾಟು ನಡೆಸುತ್ತಿದೆ. ಇದರ ಪ್ರಮಾಣವನ್ನು ವೃದ್ಧಿಸಬೇಕಾದರೆ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮವನ್ನು ರಚನಾತ್ಮಕವಾಗಿ ಕಾರ್ಯರೂಪಕ್ಕೆ ತರಬೇಕು ಎಂದರು.

ಕೋವಿಡ್‌ ಕಾಲದಲ್ಲಿ ಬೆಂಗಳೂರಿನಿಂದ ಶೇ.30ರಷ್ಟು ಉದ್ಯೋಗಿಗಳು ತಮ್ಮ ಸ್ವಸ್ಥಳಗಳಿಗೆ ವಾಪಸ್‌ ಹೋಗಿ ಅಲ್ಲಿಂದಲೇ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರ ಒದಗಿಸಬೇಕು ಎಂದು ನಾಯ್ಡು ಮನವಿ ಮಾಡಿದರು.

ನ್ಯಾಸ್ ಕಾಂ, ಅಸೋಚಾಮ್, ಭಾರತೀಯ ವಿದ್ಯುನ್ಮಾನ ಮತ್ತು ಅರೆವಾಹಕ ಉದ್ಯಮಗಳ ಸಂಘಟನೆ (ಐಇಎಸ್ಎ) ಮತ್ತು ನವೋದ್ಯಮಗಳ ದೂರದರ್ಶಿತ್ವ ಸಮಿತಿಗಳು ಕೆಡಿಇಎಂ ನಲ್ಲಿ ಶೇ.51ರಷ್ಟು ಪಾಲುದಾರಿಕೆ ಹೊಂದಿವೆ.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ನ್ಯಾಸ್ ಕಾಂ ಉಪಾಧ್ಯಕ್ಷ ವಿಶ್ವನಾಥ್, ಕೆಡಿಇಎಂ ಸದಸ್ಯ ನಾಗೇಶ್, ಎಲೆಕ್ಟ್ರಾನಿಕ್ಸ್ ಮತ್ತು ಐಟಿ/ಬಿಟಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಡಾ.ಮೀನಾ ನಾಗರಾಜ್ ಮತ್ತಿತರರು ಇದ್ದರು.

Tags: Bengalurubeyond bengalurudr cn ashwath narayanit-btkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

Leave a Reply Cancel reply

Your email address will not be published. Required fields are marked *

Recommended

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ವ್ಯಾಕ್ಸಿನ್‌ ವಿಚಾರದಲ್ಲಿ ಕೇಂದ್ರ-ರಾಜ್ಯ ಸರಕಾರಗಳು ಜನರಿಗೆ ಸುಳ್ಳು ಹೇಳುತ್ತಿವೆ ಎಂದು ಆರೋಪ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

5 years ago
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಪ್ರಥಮ ಪಿಯುಸಿ ಮೌಲ್ಯಾಂಕನ ಅವಧಿ ವಿಸ್ತರಣೆ; ಶಿಕ್ಷಕರ‌ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ: ಸಚಿವ ಎಸ್. ಸುರೇಶ್ ಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ