• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

cknewsnow desk by cknewsnow desk
February 10, 2021
in STATE
Reading Time: 1 min read
0
ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು
916
VIEWS
FacebookTwitterWhatsuplinkedinEmail

ದಾವಣಗೆರೆ: ವಾಲ್ಮೀಕಿ ಪೀಠ ಪ್ರಸನ್ನಾನಂದ ಪುರಿ ಶ್ರೀಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಡುವೆ ಮಾತಿನ ಚಕಮಕಿ ನಡೆದ ಘಟನೆ ದಾವಣಗೆರೆ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ಮಂಗಳವಾರ ನಡೆಯಿತು. ಈ ಘಟನೆಗೆ ಅಪಾರ ಜನರಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಮುಂತಾದವರು ಸಾಕ್ಷಿಯಾದರು.

ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಮಠದಲ್ಲಿ ಮಂಗಳವಾರ ನಡೆದ 3ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಶ್ರೀಗಳು ಮಾತನಾಡಿ, “ಯಡಿಯೂರಪ್ಪ ಮಾತು ಕೊಟ್ರೆ ತಪ್ಪಲ್ಲ ಎಂಬ ನಂಬಿಕೆ ಹೆಚ್ಚಾಗಿತ್ತು. ಯಾಕೆ ವಿಳಂಬ ಮಾಡ್ತಿದ್ದಾರೋ ಗೊತ್ತಿಲ್ಲ, ಮೀಸಲಾತಿ ಹೆಚ್ಚಳವಾದರೆ ಸಿಎಂಗೆ ಕೃತಜ್ಞತೆ. ಇಲ್ಲವಾದರೆ ಆಮರಣಾಂತ ಉಪವಾಸ ಮಾಡುತ್ತೇನೆ” ಎಂದರು.

“ಮಾರ್ಚ್ 9ನೇ ತಾರೀಖಿನ ಒಳಗಾಗಿ ಮೀಸಲಾತಿ ಬೇಡಿಕೆಯನ್ನು ಸರಕಾರ ಈಡೇರಿಸಬೇಕು. ಒಂದು ವೇಳೆ ಆ ಬೇಡಿಕೆ ಈಡೇರದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವೆ” ಎಂಬುದಾಗಿ ಶ್ರೀಗಳು ವೇದಿಕೆಯಲ್ಲಿ ತಮ್ಮ ಪಕ್ಕದಲ್ಲೇ ಆಸೀನರಾಗಿದ್ದ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುವಾಗ ಸ್ವಾಮೀಜಿ ಅವರು, “ಈ ಮೀಸಲಾತಿಯನ್ನು ಸರಕಾರ ಘೋಷಣೆ ಮಾಡದೇ ಹೋದರೆ, ಒಂದು ವೇಳೆ ನಾನೇನಾದರೂ ಸತ್ತರೆ..” ಎನ್ನುತ್ತಿದ್ದಂತೆ, ಅಂಥ ಮಾತೇಕೆ ಸ್ವಾಮೀಜಿ ಎಂದರು ಮುಖ್ಯಮಂತ್ರಿಗಳು. ಜತೆಗೆ, ಅವರ ಮಾತುಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.

ಬಳಿಕ “ತಮ್ಮ ಬಗ್ಗೆ ವಿಶ್ವಾಸ ಇದೆ ಸಾಹೇಬ್ರೆ” ಎಂದರು ಸ್ವಾಮೀಜಿಗಳು. ಆಗ ಮಧ್ಯಪ್ರವೇಶ ಮಾಡಿದ ಶಾಸಕ ರಾಜೂಗೌಡ ಕಾಗೆ ಕೂಡ ಶ್ರೀಗಳಿಗೆ ಸಮಾಧಾನ ಮಾಡಿದರಲ್ಲದೆ, ಕೊಂಚ ಆಕ್ಷೇಪವನ್ನೂ ವ್ಯಕ್ತಪಡಿಸಿದರು. ಬಳಿಕ ಮುಂದುವರಿದು ಮಾತನಾಡಿದ ಶ್ರೀಗಳು, “ಸಾಹೇಬ್ರೆ, ಇದು ಸಮುದಾಯದ ಬೇಡಿಕೆ. ಸಾಹೇಬ್ರೆ.. ನಾಳೆ ನಮ್ಮ ಮೇಲೆ ಸಮುದಾಯ ಆಪಾದನೆ ಬರಬಾರದು. ಅದಕ್ಕಾಗಿ ನಾವು ಉಪವಾಸ ಕೂರುವ ತೀರ್ಮಾನ ತೆಗೆದುಕೊಳ್ಳುತ್ತಿದೆವೆಯೇ ವಿನಾ ಇದರಲ್ಲಿ ನಮ್ಮ ಸ್ವಾರ್ಥವೇನೂ ಇಲ್ಲ” ಎಂದಾಗ, ಮುಖ್ಯಮಂತ್ರಿಗಳು ಶ್ರೀಗಳಿಗೆ ಏನನ್ನೋ ಹೇಳಿದರು. ಮಾತು ಮುಂದುವರಿಸಿದ ಶ್ರೀಗಳು, “ನಮ್ಮ ಬೇಡಿಕೆಯನ್ನು ಈಡೇರಿಸುವುದಾಗಿ ಸಾಹೇಬ್ರು ಭರವಸೆ ನೀಡಿದ್ದಾರೆ. ನೀವು ಉಪವಾಸ ಕೂರುವುದು ಬೇಡ ಎಂದು ಹೇಳಿದ್ದಾರೆ. ಹೀಗಾಗಿ ನಮ್ಮ ಹೇಳಿಕೆಯನ್ನು ವಾಪಸ್‌ ಪಡೆಯುತ್ತಿದ್ದೇವೆ” ಎಂದರು ಶ್ರೀಗಳು. ಅಲ್ಲಿಗೆ ವೇದಿಕೆಯ ಮೇಲೆ ಉಂಟಾಗಿದ್ದ ಬಿಗಿ ವಾತಾವರಣ ತಿಳಿಯಾಯಿತು.

  • ವಾಲ್ಮೀಕಿ ಪೀಠ ಪ್ರಸನ್ನಾನಂದ ಪುರಿ ಶ್ರೀಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ‌ ನಡುವೆ ನಡೆದ ಮಾತಿನ ಚಕಮಕಿ ಕುರಿತ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
https://www.youtube.com/watch?v=v1AMgUgOjBs

ಮುಖ್ಯಮಂತ್ರಿ @BSYBJP ರವರು ಇಂದು ದಾವಣಗೆರೆಯಲ್ಲಿ 'ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ – 2021' ಅನ್ನು ಉದ್ಘಾಟಿಸಿದರು. ನಂತರ, ಬುಡಕಟ್ಟು ಸಂಶೋಧನಾ ಕೇಂದ್ರ ಮತ್ತು ಗ್ರಂಥಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. (1/2) pic.twitter.com/Bd0eXJPtIf

— CM of Karnataka (@CMofKarnataka) February 9, 2021

ಸಂಪುಟದಲ್ಲಿ ಚರ್ಚಿಸುವೆ ಎಂದ ಸಿಎಂ

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ; ಎಸ್‌ಟಿ ಮೀಸಲು ಹೆಚ್ಚಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುವುದು. ನ್ಯಾಯಮೂರ್ತಿ ಎಚ್.ಎಸ್.ನಾಗಮೋಹನ ದಾಸ್‌ ಸಮಿತಿ ವರದಿ ಪರಶೀಲನೆ ಹಂತದಲ್ಲಿದೆ. ಜತೆಗೆ, ಸಂಪುಟದಲ್ಲಿ ಈ ಸಮುದಾಯದ ಸಚಿವರ ಜತೆಯಲ್ಲೂ ಚರ್ಚೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ಸ್ವಾಮಿಗಳು ಸಾವಿನ ಮಾತನ್ನಾಡುವುದು ಬೇಡ ಎಂದರು.

News inputs & video: www.gnews5.com

Tags: bs yediyurappaprasannananda puri swamijist reservationValmiki Gurupeeta Rajanahalli
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಣಮಟ್ಟ-ಜಾಗತಿಕ ಸ್ಪರ್ಧಾತ್ಮಕತೆ; ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ಸರಕಾರ ಸಿದ್ಧ ಎಂದ ಡಿಸಿಎಂ

ಸರಕಾರಿ ಕಾಲೇಜು ಪ್ರಾಧ್ಯಾಪಕರಿಗೆ ಒಳ್ಳೆಯ ಸುದ್ದಿ; ಯುಜಿಸಿ ಹಿಂಬಾಕಿ ಪಾವತಿ, ಪ್ರಾಂಶುಪಾಲರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಅಧಿಕಾರಿಗಳ ಜತೆ ಡಿಸಿಎಂ ಸಮಾಲೋಚನೆ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ