ಚಿಕ್ಕಬಳ್ಳಾಪುರ: ಬಿಎಸ್ಸಿ ಅನಸ್ತೇಶಿಯಾದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿಲ್ಲೆಯ ತೇಜಸ್ ರೆಡ್ಡಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮರಳೂರು ಗ್ರಾಮದ ಶ್ರೀನಿವಾಸ ರೆಡ್ಡಿ-ಗಂಗಮ್ಮ ದಂಪತಿಯ ದ್ವಿತೀಯ ಪುತ್ರ ತೇಜಸ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ತೇಜಸ್ ರೆಡ್ಡಿ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಎಸ್ಸಿ ಅನಸ್ತೇಶಿಯಾ ಕೋರ್ಸ್ ಪೂರೈಸಿದ್ದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣವನ್ನು ಆಂಧ್ರ ಪ್ರದೇಶದ ಹಿಂದೂಪುರದಲ್ಲಿ ಪೂರ್ಣಗೊಳಿಸಿದ್ದರು.
ಇದೀಗ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ವಾಜು ಬಾಯಿವಾಲ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತೇಜಸ್ ರೆಡ್ಡಿಗೆ ಚಿನ್ನದ ಪದಕದೊಂದಿಗೆ ಪದವಿ ಪ್ರದಾನ ಮಾಡಿ ಗೌರವಿಸಿದರು.
ತೇಜಸ್ ರೆಡ್ಡಿ ಅವರು ಚಿಕ್ಕಬಳ್ಳಾಪುರ ನಗರದ ಅನು ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದು, ಅವರಿಗೆ ಅನು ಕೋಚಿಂಗ್ ವ್ಯವಸ್ಥಾಪಕ ನಿರ್ದೇಶಕ ಹೆಚ್.ಎಂ.ಚನ್ನಕೃಷ್ಣಪ್ಪ ಅಭಿನಂದನೆ ಸಲ್ಲಿಸಿದ್ದಾರೆ.