• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪದ ಜಂಗಮಕೋಟೆಯಲ್ಲಿ ನಾಲೆಜ್‌ ಸಿಟಿ ಸ್ಥಾಪನೆ; ಬೆಂಗಳೂರು ಉತ್ತರ (ಕೋಲಾರ) ವಿವಿಗೆ 170 ಎಕರೆ ಭೂಮಿ, ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ

cknewsnow desk by cknewsnow desk
February 16, 2021
in CHIKKABALLAPUR, KOLAR, STATE
Reading Time: 2 mins read
0
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಮೀಪದ ಜಂಗಮಕೋಟೆಯಲ್ಲಿ ನಾಲೆಜ್‌ ಸಿಟಿ ಸ್ಥಾಪನೆ; ಬೆಂಗಳೂರು ಉತ್ತರ (ಕೋಲಾರ) ವಿವಿಗೆ 170 ಎಕರೆ ಭೂಮಿ, ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ
919
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಡಿಸಿಎಂ ಸಮಾಲೋಚನೆ; ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಕ್ಕೊಂದು ಜಾಗತಿಕ ಗುಣಮಟ್ಟದ ಪದವಿ ಕಾಲೇಜು

ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರಕಾರವು ಸೋಮವಾರ ಎರಡು ಮಹತ್ತ್ವದ ಹೆಜ್ಜೆಗಳನ್ನಿರಿಸಿದೆ.

ಒಂದು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ಎಲ್ಲ ಸಿದ್ಧತೆಗಳು ಅಂತಿಮ ಹಂತದಲ್ಲಿರುವಾಗಲೇ ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಗುಣಮಟ್ಟದ ತಲಾ ಒಂದು ಪದವಿ ಕಾಲೇಜು ಸ್ಥಾಪನೆ ಮಾಡುವುದು.

ಎರಡು: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮಕೋಟೆ ಸಮೀಪ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಿರುವ 170 ಎಕರೆ ಭೂಮಿ ಒದಗಿಸುವ ಪ್ರಕ್ರಿಯೆಗಳನ್ನು ಇನ್ನೊಂದು ತಿಂಗಳಲ್ಲಿ; ಅಂದರೆ ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣಗೊಳಿಸಿವುದು.

ಬೆಂಗಳೂರಿನಲ್ಲಿ ಸೋಮವಾರ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ; ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಜಂಗಮಕೋಟೆ ಬಳಿ ಈಗಾಗಲೇ 172 ಎಕರೆ ಜಾಗ ಗುರುತಿಸಿದ್ದು, ಆ ಪೈಕಿ 57 ಎಕರೆಯನ್ನು ಹಸ್ತಾಂತರ ಮಾಡಲಾಗಿದೆ. ಇನ್ನೊಂದು ತಿಂಗಳಲ್ಲಿ 53 ಎಕರೆ ಹಸ್ತಾಂತರ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದಲ್ಲದೆ 61 ಎಕರೆಯಲ್ಲಿ 51 ಎಕರೆ ಸರ್ಕಾರದ್ದೇ ಇದೆ ಎನ್ನುವುದು ಪರಿಶೀಲನೆ ವೇಳೆ ಗೊತ್ತಾಗಿದೆ. ಅದನ್ನೂ ವಶಕ್ಕೆ ಪಡೆಯಲಾಗುವುದು. ಇನ್ನೊಂದು ತಿಂಗಳ ಒಳಗಾಗಿ ಈ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಲಾಗುವುದು ಎಂದು ಅವರು ಪ್ರಕಟಿಸಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮಕೋಟೆ ಸಮೀಪದ 172 ಎಕರೆ ಜಾಗ ನೀಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಯಿತು.

57 ಎಕರೆ ಈಗಾಗಲೇ ವಿವಿಗೆ ಹಸ್ತಾಂತರವಾಗಿದೆ. ಇನ್ನೊಂದು ತಿಂಗಳಿನಲ್ಲಿ ಇನ್ನೂ 53 ಎಕರೆಯನ್ನು ಹಸ್ತಾಂತರಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. pic.twitter.com/KfWfs1MQ9g

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) February 15, 2021

ಜಂಗಮಕೋಟೆಯಲ್ಲಿ ನಾಲೆಜ್‌ ಸಿಟಿ

ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಗುಣಮಟ್ಟದ ಪದವಿ ಕಾಲೇಜುಗಳನ್ನು ಸ್ಥಾಪನೆ ಮಾಡುವುದಾಗಿ ಹೇಳಿದ ಉಪ ಮುಖ್ಯಮಂತ್ರಿ; ಗುಣಮಟ್ಟದ ಕಲಿಕೆ, ಬೋಧನೆ ಮತ್ತು ಸಂಶೋಧನೆ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಅದರಂತೆ ಬೆಂಗಳೂರು ಕೇಂದ್ರ (ಸೆಂಟ್ರಲ್‌ ಕಾಲೇಜ್)‌, ಬೆಂಗಳೂರು (ಜ್ಞಾನಭಾರತಿ) ಹಾಗೂ ಬೆಂಗಳೂರು ಉತ್ತರ (ಕೋಲಾರ) ವಿಶ್ವವಿದ್ಯಾಲಯಗಳ ಮೂಲಕವೇ ಇಷ್ಟೂ ಬೆಂಗಳೂರಿನ ವಿಧಾನಸಭೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಗುಣಮಟ್ಟದ ಪದವಿ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.

2015ರಲ್ಲಿ ಈ ಬೆಂಗಳೂರು ಉತ್ತರ ವಿವಿ ಸ್ಥಾಪನೆ ಬಗ್ಗೆ ಸರಕಾರ ನಿರ್ಧಾರ ಕೈಗೊಂಡಿತಾದರೂ ಅದು ಅಸ್ತಿತ್ವಕ್ಕೆ ಬಂದಿದ್ದು 2018ರಲ್ಲಿ. ಜಂಗಮಕೋಟೆ ಬಳಿ ಸುಸಜ್ಜಿತ ಕ್ಯಾಂಪಸ್‌ ನಿರ್ಮಾಣವಾಗಲಿದೆ. ಈ ಜಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಇಲ್ಲಿ ಒಂದು ಜ್ಞಾನ ನಗರ (ನಾಲೆಜ್‌ ‌ ಸಿಟಿ) ವನ್ನು ಸ್ಥಾಪನೆ ಮಾಡಲಾಗುವುದು ಎಂದರು.

ಗುಣಮಟ್ಟದ ಕಲಿಕೆ, ಬೋಧನೆ ಮತ್ತು ಸಂಶೋಧನೆ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಅದರಂತೆ ಬೆಂಗಳೂರು ಕೇಂದ್ರ (ಸೆಂಟ್ರಲ್‌ ಕಾಲೇಜ್)‌, ಬೆಂಗಳೂರು (ಜ್ಞಾನಭಾರತಿ) ಹಾಗೂ ಬೆಂಗಳೂರು ಉತ್ತರ (ಕೋಲಾರ) ವಿಶ್ವವಿದ್ಯಾಲಯಗಳ ಮೂಲಕವೇ ಇಷ್ಟೂ ವಿಧಾನಸಭೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಗುಣಮಟ್ಟದ ಪದವಿ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.

ಈ ವಿವಿ ಜಾಗದ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ಕೆಂಪರಾಜು ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಮಾಹಿತಿ ನೀಡಿದರು.

  • ಈ ಸಭೆಯ ವಿಡಿಯೋ ನೋಡಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
https://www.youtube.com/watch?v=_K_9YFoXYqE

ಬೆಂಗಳೂರಿನಲ್ಲಿ ಕ್ಷೇತ್ರಕ್ಕೊಂದು ಡಿಗ್ರಿ ಕಾಲೇಜು

ಬೆಂಗಳೂರು ಅಗಾಧವಾಗಿ ಬೆಳೆಯುತ್ತಿದ್ದು, ಜನಸಂಖ್ಯೆ 1.50 ಕೋಟಿಯನ್ನೂ ಮೀರಿದೆ. ಈ ಹಿನ್ನೆಲೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಬೇಕಾದರೆ ಇಷ್ಟು ಕಾಲೇಜುಗಳ ನಿರ್ಮಾಣ ಅಗತ್ಯ. ಒಂದು ವೇಳೆ ಇಲ್ಲದಿದ್ದರೆ ಹೊಸ ಕಾಲೇಜನ್ನು ನಿರ್ಮಾಣ ಮಾಡಲಾಗುವುದು. ಖಾಸಗಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯಲಾಗದೆ ಆರ್ಥಿಕ- ಸಾಮಾಜಿಕವಾಗಿ ಹಿಂದುಳಿದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಈ ಮೂಲಕ ಗುಣಮಟ್ಟದ ಶಿಕ್ಷಣ ಸಿಗಲಿದೆ ಎಂದು ಡಿಸಿಎಂ ಹೇಳಿದರು.

ಇಷ್ಟು ಕಾಲೇಜುಗಳನ್ನು ನಿರ್ಮಾಣ ಮಾಡುವುದು ದೊಡ್ಡ ಕನಸು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇದಕ್ಕೆ ಅಗತ್ಯವಾದ ಭೂಮಿಯನ್ನು ಸರಕಾರವೇ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಇಲಾಖೆಯ ಇವತ್ತಿನ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್‌ ಅವರ ಜತೆ ಮಾತುಕತೆ ನಡೆಸಿದ್ದೇನೆ. ನಗರದ ವ್ಯಾಪ್ತಿಯಲ್ಲಿ ಕಾಲೇಜುಗಳ ನಿರ್ಮಾಣಕ್ಕೆ ಬೇಕಾಗುವ ಭೂಮಿ ಎಲ್ಲೆಲ್ಲಿ ಲಭ್ಯವಿದೆ ಎಂಬ ಬಗ್ಗೆ ಅವರಿಂದ ಮಾಹಿತಿ ಕೇಳಿದ್ದೇನೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಇನ್ನು ಕೆಲ ದಿನಗಳಲ್ಲಿಯೇ ನಗರದ ಎಲ್ಲ ಶಾಸಕರ ಸಭೆಯನ್ನು ಕರೆಯಲಿದ್ದೇನೆ. ಭೂಮಿ ಪಡೆಯುವ ಸಂಬಂಧ ಅವರೆಲ್ಲರ ವಿಶ್ವಾಸವನ್ನು ಪಡೆದು ಮುಂದಿನ ಹೆಜ್ಜೆ ಇಡಲಾಗುವುದು. ಎಲ್ಲ ಕ್ಷೇತ್ರಗಳೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನಾಂತರವಾಗಿ ಬೆಳೆಯಬೇಕು ಎಂಬುದು ನನ್ನ ಅಭಿಲಾಶೆಯಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ ಈ ಯೋಜನೆಯನ್ನು ಕಾರ್ಯಗತ ಮಾಡಿ ನಂತರ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಬೇಡಿಕೆ ಇರುವ ಕೋರ್ಸುಗಳು ಮಾತ್ರ

ಶಿಕ್ಷಣ ನೀತಿಯಲ್ಲಿ ಉಲ್ಲೇಖ ಮಾಡಿರುವ ಅಂಶಗಳ ಆಧಾರದ ಮೇಲೆ ಉದ್ಯೋಗಾಧಾರಿತ, ವೃತ್ತಿಪರ ಮತ್ತು ಜಾಗತಿಕವಾಗಿ ಬೇಡಿಕೆ ಹೊಂದಿರುವ ಕೋರ್ಸುಗಳನ್ನೂ ಆರಂಭಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳ ಕನಸುಗಳು ಈಡೇರಿ ಅವರ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳು ಸುಧಾರಿಸುತ್ತವೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

8,000 ಬೋಧಕರ ಮಂಜೂರು

ಪ್ರಸ್ತುತ ರಾಜ್ಯದ ಪದವಿ ಕಾಲೇಜುಗಳಲ್ಲಿ ಬೋಧಕರ ಕೊರತೆ ಇದೆ. ಇದಲ್ಲದೆ ಇನ್ನೂ 8,000 ಬೋಧಕ ಹುದ್ದೆಗಳನ್ನು ಮಂಜೂರು ಮಾಡುವಂತೆ ಕೋರಲಾಗಿದೆ. ಈಗ ಖಾಲಿ ಇರುವ ಹುದ್ದೆಗಳ ಜತೆಗೆ ಈ ಹುದ್ದೆಗಳ ಮಂಜೂರು ಮಾಡಬೇಕಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಬೇಡಿಕೆ ಸಲ್ಲಿಸಲಾಗಿದೆ. ಹಾಗೇಯೇ, ಇಲಾಖೆಗೆ ಸಿಗುತ್ತಿರುವ ಒಟ್ಟಾರೆ ಅನುದಾನ ಕಡಿಮೆ ಇದ್ದು, ರಾಜ್ಯದ ಒಟ್ಟು ಬಜೆಟ್‌ ಗಾತ್ರದಲ್ಲಿ ಶೇ.3.5ರಷ್ಟು ಮೊತ್ತವನ್ನು ಉನ್ನತ ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಮನವಿ ಮಾಡಲಾಗಿದೆ. ಈಗ, ಅಂದರೆ; 2020-21ರ ಮುಂಗಪತ್ರದಲ್ಲಿ ಮಂಜೂರಾದ ಒಟ್ಟು 4687 ಕೋಟಿ ರೂ. ಅನುದಾನದಲ್ಲಿ ಶೇ.88ರಷ್ಟು ಅಂದರೆ; 3998 ಕೋಟಿ ರೂ. ವೇತನಕ್ಕೇ ಹೋಗಿದೆ. ಉಳಿದ ಶೇ.12ರಷ್ಟು ಅಂದರೆ 595 ಕೋಟಿ ರೂ. ಮೊತ್ತದಲ್ಲಿ ಮಾತ್ರ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಅನುದಾನವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ಮಾಹಿತಿ ನೀಡಿದರು ಉಪ ಮುಖ್ಯಮಂತ್ರಿ.

****

  • Lead photo: ಬೆಂಗಳೂರು ಉತ್ತರ ವಿವಿ ಭೂಮಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಚರ್ಚೆ ನಡೆಸಿದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ.

Tags: bangalore north universitychikkaballapurkolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಫೆಬ್ರವರಿ 20ರಂದು ಹಳ್ಳಿಗಳತ್ತ ನಡೆಯಲಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ; ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಗ್ರಾಮ ವಾಸ್ತವ್ಯ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಇನ್ನು ವರ್ಕ್‌ಪ್ಲೇಸ್‌ನಲ್ಲೂ ವ್ಯಾಕ್ಸಿನ್; ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಲ್ಲಿ ಕೈಮೀರುತ್ತಿದೆ ಕೋವಿಡ್‌, ಜಿಲ್ಲಾಡಳಿತಗಳ ಜತೆ ತುರ್ತು ಸಭೆ ನಡೆಸಿದ ಸಚಿವ ಡಾ.ಕೆ.ಸುಧಾಕರ್

5 years ago
ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ರೆ ಕ್ರಿಮಿನಲ್ ಕೇಸ್: ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಟ್ಟ ಗುಡಿಬಂಡೆ ತಹಶೀಲ್ದಾರ್ ಸಿಬ್ಗತ್ ವುಲ್ಲಾ

ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ರೆ ಕ್ರಿಮಿನಲ್ ಕೇಸ್: ಕಿಡಿಗೇಡಿಗಳಿಗೆ ಎಚ್ಚರಿಕೆ ಕೊಟ್ಟ ಗುಡಿಬಂಡೆ ತಹಶೀಲ್ದಾರ್ ಸಿಬ್ಗತ್ ವುಲ್ಲಾ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ