• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಫೆಬ್ರವರಿ 20ರಂದು ಹಳ್ಳಿಗಳತ್ತ ನಡೆಯಲಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ; ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಗ್ರಾಮ ವಾಸ್ತವ್ಯ

cknewsnow desk by cknewsnow desk
February 16, 2021
in CHIKKABALLAPUR
Reading Time: 1 min read
0
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಜಿಲ್ಲಾಧಿಕಾರಿ ಆರ್‌.ಲತಾ

1.4k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಗ್ರಾಮಗಳ ಸಮಸ್ಯೆಗಳನ್ನು ಅರಿಯಲು ಜಿಲ್ಲಾಧಿಕಾರಿಗಳು ಹಾಗೂ ಇಡೀ ಜಿಲ್ಲಾಡಳಿತ ಗ್ರಾಮ ವಾಸ್ತವ್ಯ ಹೂಡಬೇಕು ಎಂದು ಸರಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 20ರಂದು ಇಡೀ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಗ್ರಾಮ ವಾಸ್ತವ್ಯಕ್ಕೆ ಅಣಿಯಾಗುತ್ತಿದೆ.

ಗ್ರಾಮಗಳಿಗೆ ತೆರಳಿ ಅಲ್ಲಿಯೇ ವ್ಯಾಸ್ತವ್ಯ ಹೂಡುವ ಮೂಲಕ ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್‌ಗಳು ಫೆಬ್ರವರಿ 20ರಂದು ಶನಿವಾರ ಆಯ್ದ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ಅದೇ ದಿನ ಅತಿ ಹಿಂದುಳಿದ ಪ್ರದೇಶ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸ ಇರುವಂತಹ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಆ ಮೂಲಕ ನೇರವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಅವರು ಮುಂದಾಗಿದ್ದಾರೆ.

ತಹಸೀಲ್ದಾರ್‌ಗಳ ಗ್ರಾಮ ವಾಸ್ತವ್ಯ ಎಲ್ಲೆಲ್ಲಿ?

ಚಿಕ್ಕಬಳ್ಳಾಪುರದ ತಹಸೀಲ್ದಾರ್ ಅವರು ತಿಪ್ಪೇನಹಳ್ಳಿಯಲ್ಲಿ, ಗೌರಿಬಿದನೂರಿನ ತಹಸೀಲ್ದಾರ್ ಮಂಚೇನಹಳ್ಳಿ ಹೋಬಳಿಯ ಹಳೇಹಳ್ಳಿಯಲ್ಲಿ, ಗುಡಿಬಂಡೆ ತಹಸೀಲ್ದಾರ್‌ ಕಸಬಾ ಹೋಬಳಿಯ ದಪ್ಪರ್ತಿ ಗ್ರಾಮದಲ್ಲಿ, ಬಾಗೇಪಲ್ಲಿ ತಹಸೀಲ್ದಾರ್ ಚೇಳೂರು ಹೋಬಳಿಯ ಪುಲಿಗಲ್ ಗ್ರಾಮ ಹಾಗೂ ಚಿಂತಾಮಣಿ ತಹಸೀಲ್ದಾರ್‌ರವರು ಕಸಬಾ ಹೋಬಳಿಯ ಅನೂರು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸರಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸುವುದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳ ಆದ್ಯ ಕರ್ತವ್ಯ. ವಿನಾಕಾರಣ ಸಾರ್ವಜನಿಕರು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಮೇಲಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಗ್ರಾಮವಾಸ್ತವ್ಯ ಒಂದು ವೇದಿಕೆಯಾಗಿದೆ. ಜನರಿಗಾಗಿ, ಜನರಿಗೋಸ್ಕರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ವಾಸ್ತವ್ಯದ ಮೂಲಕ ಜನರೊಂದಿಗೆ ಬೆರೆತು ಪರಿಸ್ಥಿತಿ ಅವಲೋಕನ ಮಾಡಲಾಗುವುದು.

-ಆರ್.ಲತಾ, ಜಿಲ್ಲಾಧಿಕಾರಿ

ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ. ಈಗಾಗಲೇ ಎಲ್ಲಾ ತಹಸೀಲ್ದಾರ್‌ಗಳು ಆಯಾ ವ್ಯಾಪ್ತಿಯ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಯ್ದ ಗ್ರಾಮಗಳಿಗೆ ಭೇಟಿ ನೀಡಿ ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ವಾಸ್ತವ್ಯ ಹೂಡುವರು. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಎಲ್ಲಾ ಪಿಡಿಓಗಳು ಮತ್ತು ಪಂಚಾಯತಿ ಆಡಳಿತಾಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿರಬೇಕು ಎಂದು ಸೂಚಿಸಲಾಗಿದೆ.

ಗ್ರಾಮ ಸ್ವರಾಜ್ಯದ ಪರಿಕಲ್ಪನೆ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಹೊತ್ತಿನಲ್ಲಿ ಜನರಿಗೆ ಭರವಸೆ ನೀಡಿದ್ದ ಆಡಳಿತ ಪಕ್ಷ ಬಿಜೆಪಿ, ಸರಕಾರವನ್ನು ಜನರಿಗೆ ಇನ್ನಷ್ಟು ಹತ್ತಿರಗೊಳಿಸಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಅದರ ಮೊದಲ ಹೆಜ್ಜೆಯಾಗಿ ಜಿಲ್ಲಾಡಳಿತ ಗ್ರಾಮಗಳತ್ತ ನಡಿಗೆ ಆರಂಭಿಸಿದೆ.

Tags: chikkaballapurgrama vastavaiya programr latha ias
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಬೇಸಿಗೆ ಆರಂಭಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಿನ ಅಭಾವ ಸಂಭವ; ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಜಿಪಂ ಅಧ್ಯಕ್ಷರ ನಿರ್ದೇಶನ

ಬೇಸಿಗೆ ಆರಂಭಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಿನ ಅಭಾವ ಸಂಭವ; ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಜಿಪಂ ಅಧ್ಯಕ್ಷರ ನಿರ್ದೇಶನ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ