• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬೇಸಿಗೆ ಆರಂಭಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಿನ ಅಭಾವ ಸಂಭವ; ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಜಿಪಂ ಅಧ್ಯಕ್ಷರ ನಿರ್ದೇಶನ

cknewsnow desk by cknewsnow desk
February 15, 2021
in CHIKKABALLAPUR
Reading Time: 1 min read
0
ಬೇಸಿಗೆ ಆರಂಭಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಿನ ಅಭಾವ ಸಂಭವ; ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಜಿಪಂ ಅಧ್ಯಕ್ಷರ ನಿರ್ದೇಶನ
923
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಕಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ. ಈ ದಿಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲ್ಲೂ ಕುಡಿಯುವ ನೀರು ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು; ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆ ಹೆಚ್ಚಾಗಲಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ತಾತ್ಕಾಲಿಕವಾಗಿ ನೀರಿನ ಸೌಲಭ್ಯ ಕಲ್ಪಿಸಿ ನಂತರ ಶಾಶ್ವತವಾಗಿ ನೀರು ಕಲ್ಪಿಸಿಕೊಡುವತ್ತ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ನಿರ್ದೇಶನ ನೀಡಿದರು.

40 ಗ್ರಾಮಗಳಲ್ಲಿ ಸಮಸ್ಯೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಶಿವಕುಮಾರ್ ಲೋಕೂರ್ ಅವರು ಮಾತನಾಡಿ; ಜಿಲ್ಲೆಯಲ್ಲಿ ಪ್ರಸ್ತುತ 40 ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರ್ತಿಸಲಾಗಿದೆ. ಈ ಪೈಕಿ 3 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 37 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಚಿಂತಾಮಣಿಯಲ್ಲಿ 15, ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ 11 ಹಾಗೂ ಬಾಗೇಪಲ್ಲಿಯಲ್ಲಿ 3 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರ್ತಿಸಲಾಗಿದ್ದು, ಈ ಎಲ್ಲಾ ಗ್ರಾಮಗಳಿಗೂ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಮಿನಿ ಟ್ರಾಕ್ಟರ್‌ಗಳಿಗೆ ಬೇಡಿಕೆ

ಕೃಷಿ ಇಲಾಖೆ ಸಹಾಯಧನದಡಿ ರೈತರಿಗೆ ವಿತರಣೆ ಮಾಡುವ ಮಿನಿ ಟ್ರಾಕ್ಟರ್‌ಗಳನ್ನು ಇನ್ನೂ ರೈತರಿಗೆ ನೀಡಿಲ್ಲ ಎಂಬ ದೂರು ಬಂದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಅಧ್ಯಕ್ಷರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್.ರೂಪಾ ಅವರು; ಜಿಲ್ಲೆಯಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಮಿನಿ ಟ್ರಾಕ್ಟರ್‌ಗೆ ಹೆಚ್ಚಿನ ಬೇಡಿಕೆ ಇದೆ. ಈ ಯೋಜನೆಯಡಿ ಫಲಾನುಭವಿಗಳಿಗೆ 3 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತಿದೆ. ಹಾಗಾಗಿ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಕಡಿಮೆ ಸಹಾಯಧನ ಇರುವುದರಿಂದ ಇದಕ್ಕೆ ಬೇಡಿಕೆ ಕಡಿಮೆ ಇದೆ. ಇನ್ನು ವಿತರಣೆಗೆ ಬಾಕಿ ಇರುವ ಫಲಾನುಭವಿಗಳಿಗೆ ಟ್ರಾಕ್ಟರ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಅನುದಾನ ವಾಪಸ್‌ ಹೋಗದಿರಲಿ

ಆರೋಗ್ಯ ಇಲಾಖೆಯಲ್ಲಿ ಕಳೆದ ವರ್ಷದಲ್ಲಿ ಅನುದಾನ ವಾಪಸ್ ಹೋಗಿದೆ. ಆದರೆ ಈ ವರ್ಷ ಹಾಗೆ ಆಗಬಾರದು. 1 ರೂಪಾಯಿ ಕೂಡ ವಾಪಸ್ ಹೋಗಬಾರದು. ಸರಕಾರದಿಂದ ಬಿಡುಗಡೆಯಾದ ಸಂಪೂರ್ಣ ಅನುದಾನವನ್ನು ಖರ್ಚು ಮಾಡಲೇಬೇಕು. ಇದರ ಜತೆಗೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರೇ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರೂ ಆಗಿದ್ದಾರೆ. ಹಾಗಾಗಿ ನಮ್ಮ ಜಿಲ್ಲೆಯಲ್ಲಿ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಜಿಲ್ಲೆಯ ಆಸ್ಪತ್ರೆಗಳಿಗೆ ಏನೇನು ಅಗತ್ಯವಿದೆ ಎಂಬುದನ್ನು ಪಟ್ಟಿ ಮಾಡಿ, ಅದನ್ನು ಸಚಿವರ ಗಮನಕ್ಕೆ ತಂದು ಆದ್ಯತೆ ಮೆರೆಗೆ ಮಾಡುವಂತೆ ಮನವಿ ಮಾಡಬೇಕು. ವಿವಿಧ ದೊಡ್ಡ ದೊಡ್ಡ ಆಸ್ಪತ್ರೆಗಳ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಪ್ರತಿ ತಿಂಗಳು ಒಂದೆರಡು ಆರೋಗ್ಯ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು ಜಿಪಂ ಅಧ್ಯಕ್ಷರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಇಂದಿರಾ ಕಬಾಡೆ ಮಾತನಾಡಿ, ಜಿಲ್ಲೆಯ ವಿವಿಧ ಕಡೆ ಈಗಾಗಲೇ ಪ್ರತಿಷ್ಠಿತ ಆಸ್ಪತ್ರೆಗಳ ಮೂಲಕ ಆರೋಗ್ಯ ಶಿಬಿರಗಳನ್ನು ಅಯೋಜಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಪೆರೇಸಂದ್ರ ಹಾಗೂ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಆಯ್ಕೆಯಾಗಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದಿಂದ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬೀಡಿ, ಸಿಗರೇಟ್ ಮತ್ತು ತಂಬಾಕು ಸೇವನೆ ಹಾಗೂ ಮಾರಾಟವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸರಕಾರದಿಂದ ಪರಿಷೃತ ಸುತ್ತೋಲೆ ಬಂದಿದ್ದು, ಅದರಂತೆ ಆರೋಗ್ಯ ಇಲಾಖೆ ಜತೆಗೆ ಇತರೆ ಇಲಾಖೆಗಳಿಗೂ ಕೂಡ ತಂಬಾಕು ಸೇವನೆ, ಮಾರಾಟ ಮಾಡುವವರ ವಿರುದ್ಧ ದಾಳಿ ಮಾಡಿ ಕ್ರಮ ಹಾಗೂ ದಂಡ ವಿಧಿಸಲು ಅನುಮತಿ ನೀಡಲಾಗಿದೆ ಎಂದು ಡಾ.ಇಂದಿರಾ ಅವರು ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ಅವರು ಮಾತನಾಡಿ, ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಮುಗಿಯಲು ಇನ್ನು ಒಂದು ತಿಂಗಳಷ್ಟೆ ಬಾಕಿ ಉಳಿದಿದೆ. ಕೆಲ ಇಲಾಖೆಗಳಲ್ಲಿ ಫೆಬ್ರುವರಿ 15ಕ್ಕೆ ಅನುದಾನ ಸ್ಥಗಿತಗೊಂಡಿದ್ದು, ಉಳಿದ ಇಲಾಖೆಗಳ ಅನುದಾನ ಯಾವಾಗ ಬೇಕಾದರೂ ಕಡಿತವಾಗಬಹುದು. ಹಾಗಾಗಿ ಎಲ್ಲಾ ಇಲಾಖೆಗಳು ಈ ತಿಂಗಳ ಅಂತ್ಯದೊಳಗೆ ಸಂಪೂರ್ಣವಾಗಿ ಅನುದಾನ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಮ್ಮ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಧನುರೇಣುಕಾ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಅಧ್ಯಕ್ಷ ಕೆ.ಸಿ.ರಾಜಾಕಾಂತ್ ಮತ್ತು ಮುನಿಯಪ್ಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

****

  • lead photo: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ.
Tags: chikkaballapurchikkaballapur zilla panchayathdrinking water problemsummer
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

Next Post
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಬೆಳೆದ ರಾಗಿಗೆ ಬೆಂಬಲ ಬೆಲೆ; ಖರೀದಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ಕ್ವಿಂಟಾಲ್‌ಗೆ 3,250 ರೂಪಾಯಿ ಬೆಲೆ; ಅನ್ನದಾತನ ಮುಖದಲ್ಲಿ ಮಂದಹಾಸ

ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಬೆಳೆದ ರಾಗಿಗೆ ಬೆಂಬಲ ಬೆಲೆ; ಖರೀದಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ, ಕ್ವಿಂಟಾಲ್‌ಗೆ 3,250 ರೂಪಾಯಿ ಬೆಲೆ; ಅನ್ನದಾತನ ಮುಖದಲ್ಲಿ ಮಂದಹಾಸ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ

ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ

6 years ago
ನಂದಿಬೆಟ್ಟಕ್ಕೆ ರೋಪ್‌ ವೇ; ಒಂದು ತಿಂಗಳಲ್ಲೇ ಟೆಂಡರ್‌

ನಂದಿಬೆಟ್ಟಕ್ಕೆ ರೋಪ್‌ ವೇ; ಒಂದು ತಿಂಗಳಲ್ಲೇ ಟೆಂಡರ್‌

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ