ಚಿಕ್ಕಬಳ್ಳಾಪುರ: ಜಿಲ್ಲಾ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿಯಾಗಿರುವ ಮೇರೆಗೆ ನೇಮಕಾತಿಗಾಗಿ ಹೊಸ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲು ಗೃಹರಕ್ಷಕ ದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತ ನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ ವ್ಯಕ್ತಿಗಳನ್ನು ಸರಕಾರವು ಗೃಹರಕ್ಷಕ ದಳದ ಸಮಾದೇಷ್ಟರುಗಳನ್ನಾಗಿ ನಿಯಮಾನುಸಾರ ನೇಮಕ ಮಾಡುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಯು ಖಾಲಿ ಇದ್ದು, ತುರ್ತಾಗಿ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆ ಮಾಡಿ ಅರ್ಹತೆ ಆಧಾರದ ಮೇಲೆ ತುಂಬ ಬೇಕಾಗಿರುತ್ತದೆ. ಇಚ್ಛೆಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ದಿನಾಂಕ:10-03-2021ರ ಒಳಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರಾದ ರೇಣುಕಾ ಕೆ.ಸುಕುಮಾರ್ ತಿಳಿಸಿರುತ್ತಾರೆ.