• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಾವು ಶೇಖರಣೆ-ಸಂಸ್ಕರಣೆಗೆ ಸಹಕಾರ ಸಂಘ ರಚಿಸಿ; ಕಬ್ಬು ಬೆಳೆಗಾರರ ಮಾದರಿ ಅನುಸರಿಸುವಂತೆ ಮಾವು ಬೆಳೆಗಾರರಿಗೆ ಸಲಹೆ ನೀಡಿದ ಡಾ.ಸುಧಾಕರ್‌

cknewsnow desk by cknewsnow desk
February 17, 2021
in CHIKKABALLAPUR, KOLAR, STATE
Reading Time: 1 min read
0
ಮಾವು ಶೇಖರಣೆ-ಸಂಸ್ಕರಣೆಗೆ ಸಹಕಾರ ಸಂಘ ರಚಿಸಿ; ಕಬ್ಬು ಬೆಳೆಗಾರರ ಮಾದರಿ ಅನುಸರಿಸುವಂತೆ ಮಾವು ಬೆಳೆಗಾರರಿಗೆ ಸಲಹೆ ನೀಡಿದ ಡಾ.ಸುಧಾಕರ್‌
917
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಕಬ್ಬು ಬೆಳೆಗಾರರ ಮಾದರಿಯಲ್ಲಿ ಮಾವು ಬೆಳೆಗಾರರು ಸಹಕಾರಿ ಸಂಘ ರಚಿಸಿಕೊಂಡು ಮಾವು ಸಂಸ್ಕರಣೆ, ಶೇಖರಣೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ.

ಮಾವು ಬೆಳೆಗಾರರು, ಖರೀದಿದಾರರು ಹಾಗೂ ರಫ್ತುದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಮಾವನ್ನು ಹೆಚ್ಚು ದಿನಗಳ ಕಾಲ ಶೇಖರಿಸಿ ಇಡಲಾಗದು. ಇದಕ್ಕಾಗಿ ಸೂಕ್ತ ಮಾರುಕಟ್ಟೆ ಸೃಷ್ಟಿಸಬೇಕಾಗುತ್ತದೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಸಮರ್ಪಕ ಸಂಸ್ಕರಣಾ ಘಟಕವಿಲ್ಲ. ಈ ಭಾಗದಲ್ಲಿ ಕೋಲ್ಡ್ ಸ್ಟೋರೇಜ್ ಕೂಡ ಇಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಯುವವರು ಸಹಕಾರ ಸಂಘ ಮಾಡಿಕೊಂಡು ಕಬ್ಬು ಸಂಸ್ಕರಣೆ, ಬಳಕೆ ಮಾಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಮಾವು ಬೆಳೆಗಾರರು ಕೂಡ ಸಹಕಾರ ಕ್ಷೇತ್ರದ ಮೂಲಕ ಸಂಸ್ಕರಣಾ ಘಟಕ, ಕೋಲ್ಡ್ ಸ್ಟೋರೇಜ್ ಮಾಡಬೇಕು. ಇದು ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಪರಿಕಲ್ಪನೆಗೆ ಪೂರಕ ಎಂದರು.

ರಾಜ್ಯದಲ್ಲಿ 1.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಹೆಚ್ಚು ಮಾವು ಬೆಳೆಯುತ್ತಿದ್ದು, ವರ್ಷಕ್ಕೆ 12 ಲಕ್ಷದಿಂದ 14 ಲಕ್ಷ ಟನ್ ಮಾವು ಉತ್ಪಾದನೆಯಾಗುತ್ತಿದೆ. ಈ ಬಾರಿ ಮಾವು ಉತ್ಪಾದನೆ ಹೆಚ್ಚಲಿದ್ದು, ಸುಮಾರು 14 ಲಕ್ಷ ಟನ್ ಫಸಲು ಬರುವ ನಿರೀಕ್ಷೆ ಇದೆ ಎಂದರು.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ವತಿಯಿಂದ ಆಯೋಜಿಸಲಾಗಿರುವ 2020-21ನೇ ಸಾಲಿನ ಖರೀದಿಗಾರರು ಮತ್ತು ಮಾರಾಟಗಾರರ ಸಮಾವೇಶವನ್ನು ಉದ್ಘಾಟಿಸಲಾಯಿತು. ತೋಟಗಾರಿಕಾ ಸಚಿವ ಶ್ರೀ @RShankar_RNR, ನಿಗಮದ ಅಧ್ಯಕ್ಷರಾದ ಶ್ರೀ ಕೆ.ವಿ.ನಾಗರಾಜ್,@HorticultureGoK ನಿರ್ದೇಶಕಿ ಫೌಝಿಯಾ ತರನ್ನಮ್ ಉಪಸ್ಥಿತರಿದ್ದರು. pic.twitter.com/M8j4vJE27z

— Dr Sudhakar K (Modi ka Parivar) (@DrSudhakar_) February 17, 2021

ಕಿಸಾನ್ ರೈಲಿನಿಂದ ಅನುಕೂಲ

ಕೇಂದ್ರ ಸರಕಾರ ಕಿಸಾನ್ ರೈಲು ಆರಂಭಿಸಿದ್ದು, ಇದು ಬೆಳೆಗಳನ್ನು ಒಯ್ಯಲು ಅನುಕೂಲವಾಗಿದೆ. ಆಹಾರದಲ್ಲಿ ರಾಸಾಯನಿಕ ಬಳಕೆ ಹೆಚ್ಚಿರುವುದರಿಂದ ರೋಗಗಳು ಬರುತ್ತಿವೆ. ಕೃಷಿಕರು ಒಂದೇ ಬಾರಿಗೆ ಇಳುವರಿ ಪಡೆಯುವ ಕಡೆ ಗಮನಹರಿಸಬಾರದು. ದೂರದೃಷ್ಟಿ ಇಟ್ಟುಕೊಂಡು ಸಾವಯವ ಕೃಷಿ ಅನುಸರಿಸಬೇಕು ಎಂದು ಸಲಹೆ ನೀಡಿದರು ಸಚಿವರು.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಸಚಿವ ಆರ್.ಶಂಕರ್‌, ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ತೋಟಗಾರಿಕೆ ಇಲಾಖೆಯ ನಿರ್ದೇಶಕಿ ಫೌಝಿಯಾ ತರನ್ನಮ್ ಮುಂತಾದವರು ಉಪಸ್ಥಿತರಿದ್ದರು.

ಕೇರಳದಲ್ಲಿ ಸೋಂಕು; ಗಡಿಯಲ್ಲಿ ಎಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಿದ್ದು, ರಾಜ್ಯದ ಗಡಿಭಾಗದಲ್ಲಿ ಹೆಚ್ಚು ಎಚ್ಚರ ವಹಿಸಲಾಗಿದೆ. ರಾಜ್ಯದೊಳಗೆ ಬರುವವರು ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಸೂಚಿಸಲಾಗಿದ್ದು,
ಗಡಿಭಾಗದಲ್ಲಿ ಮಾರ್ಗಸೂಚಿ ಅನುಷ್ಠಾನಗೊಳಿಸಲು ಗೃಹ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಇದೇ ವೇಳೆ ಡಾ.ಸುಧಾಕರ್‌ ಹೇಳಿದರು

ಮಾರ್ಚ್ ತಿಂಗಳಿನಿಂದ ಸಾಮಾನ್ಯ ಜನರಿಗೆ ಲಸಿಕೆ ಸಿಗುವ ಸಾಧ್ಯತೆ ಇದೆ. ಎಲ್ಲರೂ ಲಸಿಕೆಯನ್ನಯ ಪಡೆಯಬೇಕು. ಯಾವುದೇ ಆತಂಕ ಬೇಡ ಎಂದು ಅವರು ಧೈರ್ಯ ತುಂಬಿದರು.

Tags: chikkaballapurkolarmangomango storage
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

ಒಕ್ಕಲಿಗರಿಗೆ ಹೆಚ್ಚಬೇಕು ಮೀಸಲು; ಅಭಿವೃದ್ದಿ ಪ್ರಾಧಿಕಾರ ರಚನೆ ತ್ವರಿತವಾಗಿ ಆಗಬೇಕು ಎಂದು ಪ್ರತಿಪಾದಿಸಿದರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ