• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಒಕ್ಕಲಿಗರಿಗೆ ಹೆಚ್ಚಬೇಕು ಮೀಸಲು; ಅಭಿವೃದ್ದಿ ಪ್ರಾಧಿಕಾರ ರಚನೆ ತ್ವರಿತವಾಗಿ ಆಗಬೇಕು ಎಂದು ಪ್ರತಿಪಾದಿಸಿದರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು

cknewsnow desk by cknewsnow desk
February 17, 2021
in EDITORS'S PICKS, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ
920
VIEWS
FacebookTwitterWhatsuplinkedinEmail

ಬೆಂಗಳೂರು: ಒಕ್ಕಲಿಗ ಸಮುದಾಯದ ಹಿತರಕ್ಷಣೆಗೆ ಮೀಸಲಾತಿಯ ಹೆಚ್ಚಳ ಅನಿವಾರ್ಯವಾಗಿದೆ. ಜತೆಗೆ; ಒಕ್ಕಲಿಗರ ಅಭಿವೃದ್ದಿ ಪ್ರಾಧಿಕಾರ ರಚನೆ ತ್ವರಿತವಾಗಿ ಆಗಬೇಕು. ಈ ಸಂಬಂಧ ಅಧ್ಯಯನ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಹೇಳಿದ್ದಾರೆ.

ವಿಜಯನಗರದ ಆದಿಚುಂಚನಗಿರಿ ಶಾಖಾಮಠದಲ್ಲಿ ಇಂದು ಒಕ್ಕಲಿಗ ಸಮುದಾಯಕ್ಕೆ ಸಂಬಂಧಿಸಿದ
ಮೀಸಲಾತಿ ಹೆಚ್ಚಳ, ಒಕ್ಕಲಿಗರ ಪ್ರಾಧಿಕಾರ ರಚನೆ ಮತ್ತು ನಗರ ಪ್ರದೇಶದ ಬಡ ಒಕ್ಕಲಿಗರಿಗೆ ಒಬಿಸಿ
ಅವಕಾಶಗಳ ಬಗ್ಗೆ ಚರ್ಚಿಸಲು ಏರ್ಪಡಿಸಿದ್ದ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಸ್ವಾಮಿಗಳವರು, ಒಕ್ಕಲಿಗ ಸಮುದಾಯದ ಎಲ್ಲ 115 ಉಪ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಲ್ಲ. ಇದರಿಂದ ಅನೇಕ ಉಪ ಜಾತಿಗಳು ಸರಕಾರದ ಸವಲತ್ತುಗಳಿಂದ ವಂಚಿತವಾಗಿವೆ. ಆದ್ದರಿಂದ ಈ ಎಲ್ಲ ಉಪ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು. ಇದಕ್ಕಾಗಿಯೂ ಹೋರಾಟ ಮಾಡುವ ಅವಶ್ಯಕತೆಯಿದೆ ಎಂದರು.

ನಗರ ಪ್ರದೇಶದ ಒಕ್ಕಲಿಗ ಸಮುದಾಯವೂ ಸಂಕಷ್ಟದಲ್ಲಿದ್ದು, ಅವರಿಗೆ ಮೀಸಲಾತಿ ಸೌಲಭ್ಯ ಸಿಗಬೇಕು. ಹಾಗಾಗಿ ಗ್ರಾಮೀಣ ಒಕ್ಕಲಿಗ ಮತ್ತು ನಗರ ಪ್ರದೇಶದ ಒಕ್ಕಲಿಗ ಎಂಬ ತಾರತಮ್ಯ ಇಲ್ಲದೆ ಎಲ್ಲ ಒಕ್ಕಲಿಗರಿಗೆ ಮೀಸಲಾತಿ ಸೌಲಭ್ಯ ದೊರಕಬೇಕಿದೆ.

-ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು

ಸಮುದಾಯವನ್ನು ಒಡೆಯುವ ಪ್ರಯತ್ನ

ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದ ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿಗಳು, ಒಕ್ಕಲಿಗ ಸಮುದಾಯವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಒಕ್ಕಲಿಗ ಜಾತಿಯಿಂದ ಉಪ ಜಾತಿಗಳು ಹೊರ ನಡೆದರೆ ಅಲ್ಪ ಸಂಖ್ಯಾತರಾಗುವ ಭೀತಿ ಎದುರಾಗಿದೆ. ಇಂತಹ ತಪ್ಪುಗಳನ್ನು ಸರಿಪಡಿಸಲು ಸಮುದಾಯದ ಮುಖಂಡರು ಕ್ರಮ ಕೈಗೊಳ್ಳಬೇಕು ಎಂದರು.

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ ಮತ್ತು ಪ್ರಾಧಿಕಾರ ರಚನೆ ಆಗುವವರೆಗೆ ಹೋರಾಟ ನಡೆಸೋಣ ಎಂದು ಶ್ರೀಗಳು ಕರೆ ನೀಡಿದರು.

ಸಮುದಾಯದ ರಕ್ಷಣೆಯ ವಿಷಯದಲ್ಲಿ ಹಿಂದೆ ನಡೆದಿರುವ ಹೋರಾಟಗಳನ್ನು ಕುರಿತು ಸಭೆಗೆ ತಿಳಿಸಿದ ಗಣ್ಯರು, ಮುಂದಿನ ಹೋರಾಟದ ಬಗೆಗಿನ ರೂಪರೇಷೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಮೀಸಲಾತಿ ಹೆಚ್ಚಳ ಮಾಡಲು ಅವಕಾಶಗಳಿದ್ದು, ತಮಿಳುನಾಡು ರಾಜ್ಯದಲ್ಲಿ ಶೇಕಡ 69ರಷ್ಟು
ಮೀಸಲಾತಿ ನೀಡಿರುವ ಉದಾಹರಣೆ ಮತ್ತು ಸಾಂವಿಧಾನಿಕ ಆಯಾಮಗಳನ್ನು ಕುರಿತೂ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

  • ಒಕ್ಕಲಿಗ ಸಮುದಾಯಕ್ಕೆ ಸಂಬಂಧಿಸಿದ ಮೀಸಲಾತಿ ಹೆಚ್ಚಳ, ಒಕ್ಕಲಿಗರ ಪ್ರಾಧಿಕಾರ ರಚನೆ ಮತ್ತು ನಗರದ ಬಡ ಒಕ್ಕಲಿಗರಿಗೆ ಒಬಿಸಿ ಅವಕಾಶಗಳ ಬಗ್ಗೆ ಚರ್ಚಿಸಲು ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಸಭೆ ನೆರವೇರಿತು. ಸಭೆಯಲ್ಲಿ ಸ್ಫಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ವಿವಿಧ ಮಠಗಳ ಸ್ವಾಮಿಗಳವರು, ಸಂವಿಧಾನ ತಜ್ಞರು, ಆಡಳಿತ ಕ್ಷೇತ್ರದ ನಿಪುಣರು, ಸಾಹಿತಿಗಳು, ಚಿಂತಕರು ಭಾಗವಹಿಸಿದ್ದರು.

ಸಮಿತಿಗಳ ರಚನೆ

ಮೀಸಲಾತಿ ಹೆಚ್ಚಳ ವಿಷಯದಲ್ಲಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಸಭೆ ನಿರ್ಧರಿಸಿತು. ಈ ಬಗ್ಗೆ ಸಸರಕಾರದ ಗಮನ ಸೆಳೆಯಲು ಸಮಿತಿಗಳನ್ನು ರಚಿಸಲಾಯಿತು.
ಸಭೆಯ ಒಮ್ಮತದ ತೀರ್ಮಾನದಂತೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಮತ್ತು ರಾಜ್ಯ
ಒಕ್ಕಲಿಗರ ಅಭಿವೃದ್ದಿ ಪ್ರಾಧಿಕಾರ ಹೋರಾಟ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು. ವೈ.ಕೆ.
ಪುಟ್ಟಸ್ವಾಮಿಗೌಡ, ಸಿ.ಚಿಕ್ಕಣ್ಣ, ಟಿ.ತಿಮ್ಮೇಗೌಡ, ಡಾ.ಎಚ್.ಎನ್.ಕೃಷ್ಣ, ಕೆ.ವಿ.ಆರ್.ಟ್ಯಾಗೋರ್ ಅವರನ್ನು ಈ ಎರಡೂ ಸಮಿತಿಗಳ ಸದಸ್ಯರಾಗಿ ನೇಮಿಸಲಾಯಿತು. ಹೋರಾಟದ ರೂಪುರೇಷೆ ಮತ್ತು ಪ್ರಾಧಿಕಾರದ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ಶಂಕರಲಿಂಗೇಗೌಡ, ಡಾ.ಎಚ್.ಎನ್.ಕೃಷ್ಣ, ಹಿ.ಚಿ.ಬೋರಲಿಂಗಯ್ಯ ಮತ್ತು ಪುಟ್ಟೇಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿಗಳಾದ ವೈ.ಕೆ.ಪುಟ್ಟಸ್ವಾಮಿಗೌಡ, ಶಂಕರಲಿಂಗೇಗೌಡ, ಟಿ.ತಿಮ್ಮೇಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಟ್ಯಾಗೋರ್, ನಿವೃತ್ತ ಐಎಫ್ʼಎಸ್ ಅಧಿಕಾರಿ
ಶ್ರೀಕಂಠಯ್ಯ, ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ಡಾ.ಎಚ್.ಎನ್.ಕೃಷ್ಣ, ಪತ್ರಿಕೋದ್ಯಮಿ ಟಿ.ವೆಂಕಟೇಶ್, ಸಾಹಿತಿಗಳಾದ ಎಲ್.ಎನ್.ಮುಕುಂದರಾಜ್, ಹಿ.ಚಿ.ಬೋರಲಿಂಗಯ್ಯ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ವಕೀಲ ಪುಟ್ಟೇಗೌಡ, ಆಡಿಟರ್ ನಾಗರಾಜ್ ಯಲಚವಾಡಿ, ತಲಕಾಡು ಚಿಕ್ಕರಂಗೆಗೌಡ ಮುಂತಾದ ಗಣ್ಯರು ಭಾಗವಹಿಸಿದ್ದರು.

Tags: vokkaliga categoryvokkaliga development authority
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ  ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

Leave a Reply Cancel reply

Your email address will not be published. Required fields are marked *

Recommended

ವಿಧುರಾಶ್ವತ್ಥದಲ್ಲಿ ಗಂಗಾ ಪೂಜೆ ನೆರೆವೇರಿಸಿದ ನಿಖಿಲ್

ಲೋಕಸಭೆ ಚುನಾವಣೆ ನಂತರ 5 ಗ್ಯಾರಂಟಿ ರದ್ದು; ಶಾಸಕರ ಮೂಲಕವೇ ಕಾಂಗ್ರೆಸ್ ಈ ಮಾತು ಹೇಳಿಸಿದೆ!!

2 years ago
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಕಲಾಪದ ಕಡೆ ತಲೆ ಹಾಕದ ಬಿಜೆಪಿ ಸಚಿವಾಕಾಂಕ್ಷಿಗಳು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ