• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು

cknewsnow desk by cknewsnow desk
February 18, 2021
in CHIKKABALLAPUR, NEWS & VIEWS
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಶನಿವಾರ ಗ್ರಾಮ ವಾಸ್ತವ್ಯ; ಸಿದ್ಧತೆ ಕುರಿತು ತಹಸೀಲ್ದಾರ್‌ಗಳ ಜತೆ ವಿಡಿಯೋ ಸಂವಾದ, ಜಿಲ್ಲಾಧಿಕಾರಿ ಆಗಮನಕ್ಕಾಗಿ ಎದುರು ನೋಡುತ್ತಿದೆ ಬೋದಗೂರು
923
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಸರಕಾರದ ಮಹತ್ತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಧಿಕಾರಿ ಆರ್.ಲತಾ ಅವರು ಗ್ರಾಮ ವಾಸ್ತವ್ಯಕ್ಕೆ ಸಿದ್ಧರಾಗಿದ್ದು, ಸ್ವತಃ ಅವರು ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋದಗೂರು ಗ್ರಾಮದಲ್ಲಿ ಶನಿವಾರ (ಫೆ.20) ವಾಸ್ತವ್ಯ ಹೂಡಲಿದ್ದಾರೆ. ಅವರ ಜತೆ ಇಡೀ ಜಿಲ್ಲಾಡಳಿತವೇ ಆ ಗ್ರಾಮದಲ್ಲಿರಲಿದೆ.

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳೊಂದಿಗೆ ನಡೆಸಿದ ವಿಡಿಯೋ ಸಂವಾದ (ಪೂರ್ವಭಾವಿ) ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು; ಸರಕಾರದ ನಿರ್ದೇಶನದಂತೆ ಶನಿವಾರ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ʼಜಿಲ್ಲಾಧಿಕಾರಿಗಳ ನಡೆ, ಗ್ರಾಮಗಳ ಕಡೆʼ ಕಾರ್ಯಕ್ರಮವು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಇದು ಕೇವಲ ಕಾಟಾಚಾರಕ್ಕೆ ಆಗಬಾರದು. ಗ್ರಾಮದ ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಅತ್ಯಂತ ಯಶಸ್ವಿಯಾಗಿ ಮಾಡಬೇಕು ಎಂದು ಅವರು ಹೇಳಿದರು.

ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅತ್ಯಂತ ಮಹತ್ತ್ವದ ಕಾರ್ಯಕ್ರಮ. ಇದನ್ನು ಆಡಂಬರವಾಗಿ ಮಾಡದೇ, ಪ್ರಯೋಜನಕಾರಿಯಾಗುವಂತೆ ಮಾಡಬೇಕು. ಗ್ರಾಮೀಣ ಭಾಗದ ಜನರ ಅಭಿವೃದ್ಧಿಗಾಗಿ ಹಾಗೂ ಸರಕಾರದ ಸೌಲಭ್ಯಗಳು ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಾಗಾಗಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪೂಜೆ, ಅಹವಾಲು ಸ್ವೀಕಾರ, ನಂತರ ವಾಸ್ತವ್ಯ

ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಮಾತನಾಡಿ, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಆಯ್ಕೆಯಾಗಿರುವ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಾದ ಆರ್.ಲತಾ ಅವರು ಮೊದಲಿಗೆ ಗ್ರಾಮದಲ್ಲಿನ ದೇವಾಲಯಕ್ಕೆ ಭೇಟಿ, ಪೂಜೆ ಮಾಡಿಸಲಿದ್ದಾರೆ. ನಂತರ ಎಸ್‌ಸಿ, ಎಸ್‌ಟಿ ಕಾಲೋನಿಗಳಿಗೆ ಭೇಟಿ ನೀಡಿ, ಅಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಗ್ರಾಮದ ನಿವಾಸಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ. ಅಹವಾಲು ಕೇವಲ ಆ ಗ್ರಾಮಕ್ಕೆ ಸಂಬಂಧಿಸಿದ ಅಹವಾಲು ಮಾತ್ರ ಸ್ವೀಕರಿಸಲಾಗುತ್ತದೆ. ಮಧ್ಯಾಹ್ನ ಗ್ರಾಮದ ಅಂಗನವಾಡಿ, ಇಲ್ಲವೇ ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಲಿದ್ದಾರೆ. ನಂತರ ಆರೋಗ್ಯ ಇಲಾಖೆ, ರೇಷ್ಮೆ ಇಲಾಖೆ, ತಾಲ್ಲೂಕು ಪಂಚಾಯ್ತಿ ಕೃಷಿ ಇಲಾಖೆ, ತೋಟಗಾರಿಕೆ ಪಶುಸಂಗೋಪನೆ ಇಲಾಖೆ, ಸಾಮಾಜಿಕ ಮತ್ತು ವಲಯ ಅರಣ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಿಂದ ಗ್ರಾಮಸ್ಥರಿಗೆ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯ ಕೈಗೊಂಡಿರುವ ಗ್ರಾಮಗಳಲ್ಲಿ ಆ ದಿನದಂದು ವಿವಿಧ ಆಸ್ಪತ್ರೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಕಾರ್ಯಕ್ರಮದ ಭಾಗವಾಗಿ ಆ ದಿನ ಗ್ರಾಮದ ಸರಕಾರಿ ಶಾಲೆ, ಅಂಗನವಾಡಿ ಅಥವಾ ಇತರೆ ಸರಕಾರಿ ಜಾಗಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಕಡ್ಡಾಯವಾಗಿ ಮಾಡಬೇಕು. ವಿಕಲಚೇತನ ಇಲಾಖೆಯಿಂದ ವಿವಿಧ ಯೋಜನೆಗಳಡಿ ಆ ಗ್ರಾಮದ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಬೇಕು. ಕೃಷಿ, ರೇಷ್ಮೆ, ತೋಟಗಾರಿಕೆ, ಪಶು ಸಂಗೋಪನೆ ಸೇರಿ ಇತರೆ ಇಲಾಖೆಗಳ ಯೋಜನೆಗಳ ಬಗ್ಗೆ ಮಳಿಗೆಗಳನ್ನು ತೆರೆದು ಜಾಗೃತಿ ಮೂಡಿಸಬೇಕು. ಅಂದು ಬೆಳಗ್ಗೆ ೧೦ ಗಂಟೆಗೆ ಸರಿಯಾಗಿ ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಜರಿರಬೇಕು ಎಂದು ಅವರು ಸೂಚಿಸಿದರು.

ಸಂಜೆ ನಡೆಯುವ ಕಂದಾಯ ಇಲಾಖೆಯ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಸಂಸದರು, ಆಯಾ ಸ್ಥಳೀಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇತರೆ ಸ್ಥಳೀಯಜನ ಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದು, ಗ್ರಾಮದ ಫಲಾನುಭವಿಗಳಿಗೆ ಪಿಂಚಣಿ, ಪಡಿತರ ಚೀಟಿ ಸೇರಿದಂತೆ ಇತರೆಸೌಲಭ್ಯ, ಸವಲತ್ತುಗಳನ್ನು ವಿತರಣೆ ಮಾಡಿಸಬೇಕು ಎಂದು ತಿಳಿಸಿದರು.

ಹೇಗಿದೆ ಬೋದಗೂರು?

ಬೋದಗೂರು ಗ್ರಾಮ ಒಟ್ಟು 634-25 ವಿಸ್ತೀರ್ಣ ಹೊಂದಿದ್ದು, 250-01 ಖರಾಬು ಹಾಗೂ 384-20 ಸಾಗುವಳಿ ವಿಸ್ತೀರ್ಣ ಹೊಂದಿದ್ದು, 211 ಖಾತೆದಾರರಿರುತ್ತಾರೆ. ಪರಿಶಿಷ್ಟ ಜಾತಿಯ ಪುರುಷರು 75, ಮಹಿಳೆಯರು 68 ಹಾಗೂ ಪರಿಶಿಷ್ಟ ಪಂಗಡದ ಪುರುಷರು 142, ಮಹಿಳೆಯರು 142 ಸೇರಿ ಒಟ್ಟು 834 ಜನಸಂಖ್ಯೆಯನ್ನು ಈ ಗ್ರಾಮ ಹೊಂದಿದೆ. ಇನ್ನು 30 ಕಚ್ಚಾ ಮನೆಗಳು, 130 ಪಕ್ಕ ಮನೆಗಳು ಹಾಗೂ 20 ಆಶ್ರಯ ಮನೆಗಳು ಸೇರಿ ಒಟ್ಟು 180 ಮನೆಗಳಿವೆ. ಈ ಗ್ರಾಮದಲ್ಲಿ 693 ಮತದಾರರಿದ್ದು, ಎಪಿಎಲ್ 02, ಬಿಪಿಎಲ್ 203, ಅಂತ್ಯೋದಯ 12 ಸೇರಿ ಒಟ್ಟು 217 ಪಡಿತರ ಚೀಟಿಯನ್ನು ಹೊಂದಿರುತ್ತಾರೆ. 136 ಅತಿ ಸಣ್ಣ ರೈತರು, 50 ಸಣ್ಣ ರೈತರು ಹಾಗೂ 25 ದೊಡ್ಡ ರೈತರಿರುತ್ತಾರೆ.

ಸಚಿವ ಡಾ.ಸುಧಾಕರ್ ಕೂಡ ಭಾಗಿ

ಬೋದಗೂರಿನಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯದ ಸಂಜೆಯ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ ಸುಧಾಕರ್ ಅವರು, ಸಂಸದರು ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. 

ಶನಿವಾರ ರಾತ್ರಿ ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಗ್ರಾಮದ ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ ಅಥವಾ ಇತರ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ವಾಸ್ತವ್ಯ ಹೂಡಲಿದ್ದು, ಮರುದಿನ ಬೆಳಗ್ಗೆ ಗ್ರಾಮದಿಂದ ತೆರಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಡಿಎಚ್‌ಒ ಡಾ.ಇಂದಿರಾ ಆರ್.ಕಬಾಡೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎಲ್.ರೂಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: chikkaballapurgrama vastavyakarnatakar latha ias
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

Leave a Reply Cancel reply

Your email address will not be published. Required fields are marked *

Recommended

ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ  ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌  ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

ರಂಗಸ್ಥಳದ ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಚೋಳರು ಕಟ್ಟಿಸಿದ ಪವಿತ್ರ ರಂಗಧಾಮ ಕೆರೆಗೆ ಬೆಂಗಳೂರು ತ್ಯಾಜ್ಯ ತುಂಬಿಸುತ್ತಿದೆ ಸರಕಾರ! ಜಿಲ್ಲಾಡಳಿತ ಸೈಲಂಟ್!!‌ ಧರ್ಮದ ಜತೆಗೆ ಪರಿಸರಕ್ಕೂ ಎಫೆಕ್ಟ್!!!

5 years ago
45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ