• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

cknewsnow desk by cknewsnow desk
February 23, 2021
in CHIKKABALLAPUR, NATION, STATE
Reading Time: 2 mins read
0
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ
940
VIEWS
FacebookTwitterWhatsuplinkedinEmail

M krishnappa Chikkaballapur

ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಮಾರಕ ಜಿಲೆಟಿನ್ ಸ್ಫೋಟದ ಧಾರುಣ ಪ್ರಕರಣ ಮಾಸುವ ಮೊದಲೇ ಅಷ್ಟೇ ಭೀಕರವಾದ ಇನ್ನೊಂದು ಸ್ಫೋಟ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ತವರೂರು ಪೆರೇಸಂದ್ರಕ್ಕೆ ಕೂಗಳತೆ ದೂರದಲ್ಲಿ ಈ ದುರಂತ ನಡೆದುಬಿಟ್ಟಿದೆ.

ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸತ್ತಿದ್ದು, ಮೃತರ ದೇಹವೆಲ್ಲವೂ ಛಿದ್ರಛಿದ್ರವಾಗಿದ್ದು, ಆ ಚಿತ್ರಗಳನ್ನು ಪ್ರಕಟಿಸಲು ಸಾಧ್ಯವಾಗದಷ್ಟು ಭೀಕರವಾಗಿವೆ. ಇನ್ನೊಂದೆಡೆ ಈ ಘಟನೆಗೆ ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ನಿಯಮಬಾಹಿರ ಕಲ್ಲು ಕ್ರಷರ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ನೇರ ಕಾರಣ ಎಂದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸ್ಫೋಟಕ್ಕೆ ಕಾರಣಾದ ಕ್ರಷರ್.

ಯಾರದ್ದು ಈ ಕ್ರಷರ್?

‌ದುರಂತಕ್ಕೆ ಕಾರಣವಾದ ಈ ಕ್ರಷರ್ ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ಹಾಗೂ ಆಂಧ್ರ ಪ್ರದೇಶದ ಶಿವಾರೆಡ್ಡಿ, ರಾಘವೇಂದ್ರ ರೆಡ್ಡಿ ಸಂಯುಕ್ತ ಮಾಲೀಕತ್ವದ್ದು ಎಂದು ತಿಳಿದುಬಂದಿದೆ. ಇವರ ಮಾಲೀಕತ್ವದ ಭ್ರಮರವಾಸಿನಿ ಎಂಬ ಕಲ್ಲು ಕ್ವಾರಿಯಲ್ಲಿ ಅನಧಿಕೃತವಾಗಿ ಶೇಖರಿಸಿಟ್ಟಿದ್ದ ಸ್ಪೋಟಕ ಜಿಲೆಟಿನ್ ವಸ್ತುಗಳನ್ನು ಪೊಲೀಸರ ಕಣ್ತಪ್ಪಿಸಿ ನಾಶಪಡಿಸಲು ನಡುರಾತ್ರಿ ಅರಣ್ಯ ಪ್ರದೇಶದತ್ತ ಕೊಂಡೊಯ್ಯುವ ವೇಳೆ ಈ ಸ್ಫೋಟ ಸಂಭವಿಸಿದೆ. ಈ ಕ್ವಾರಿಯಲ್ಲಿ ಕಾರ್ಯನಿರ್ವಹಿಸುತಿದ್ದ ಎಂಜಿನಿಯರ್, ಕಂಪ್ಯೂಟರ್ ಆಪರೇಟರ್ ಸಮೇತವಾಗಿ ಆರು ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾರೆ.

  • ಗುಡಿಬಂಡೆ ನಾಗರಾಜ್

ಇನ್ನೊಂದೆಡೆ ಕ್ವಾರಿ ಮಾಲೀಕ ನಾಗರಾಜ್‌ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್‌ ಪರಮಾಪ್ತ ಎಂದು ಗೊತ್ತಾಗಿದ್ದು, ಆ ವ್ಯಕ್ತಿ ನಾಪತ್ತೆಯಾಗಿದ್ದಾನೆ.

ಹಿರೇನಾಗವಲ್ಲಿ ಗ್ರಾಮದ ರಾಮು, ಕಂಪ್ಯೂಟರ್ ಆಪರೇಟರ್, ಗಂಗಾಧರ, ನೇಪಾಳ ಮೂಲದ ಮಹೇಶ, ಎಂಜಿನಿಯರ್ ಉಮಾ ಕಾಂತ್, ಚೇಳೂರಿನ ಅಭಿ ಸಾವನ್ನಪ್ಪಿದ ನತದೃಷ್ಟರು. ಜಿಲೆಟೆನ್ ಸ್ಪೋಟಕಕ್ಕೆ ಆರೂ ದೇಹಗಳು ಛಿದ್ರಛಿದ್ರಗೊಂಡಿದ್ದು, ಮೃತದೇಹಗಳನ್ನು ನೋಡಲಾರದಷ್ಟು ಛಿದ್ರವಾಗಿದ್ದು, ಮೃತರ ಸಂಬಂಧಿಕರ ರೋಧನ ಮುಗಿಲುಮುಟ್ಟಿದೆ.

ಪಾರಾದ ವಾಹನ ಚಾಲಕ

ನಡುರಾತ್ರಿ ಟಾಟಾ ಎಸ್ ವಾಹನದಲ್ಲಿ ಸ್ಫೋಟಕಗಳನ್ನು ಸಾಗಿಸುತಿದ್ದ ಚಾಲಕ ರಿಯಾಜ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು ಸದ್ಯ ಪೊಲೀಸ್ ವಶದಲ್ಲಿದ್ದಾನೆ. ಈತನಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಸಚಿವ ಸುಧಾಕರ್

ಪ್ರಕರಣಕ್ಕೆ ಸಂಭಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಘಟನಾ ಸ್ಥಳಕ್ಕೆ ಭೇಟಿ ನೀಟಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.‌

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು; ಈ ಕ್ವಾರಿ ಅಧಿಕೃತವಾಗಿದೆ. ಕಳೆದ ತಿಂಗಳಲ್ಲಿ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಪೋಟಕ ಪ್ರಕರಣದ ನಂತರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸತತವಾಗಿ ಕ್ವಾರಿಗಳ ಮೇಲೆ ದಾಳಿ ಮಾಡಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದರು ಅದರ ನಂತರ ಇದೀಗ ಈ ದುರ್ಘಟನೆ ನಡೆದಿದೆ ಎಂದರು.

ಈ ಕ್ವಾರಿಯ ಮೇಲೆ ಫೆಬ್ರವರಿ 7ರಂದು ದಾಳಿ ನಡೆಸಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಪೊಟಕ ವಸ್ತುಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಈ ಕ್ವಾರಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಕ್ವಾರಿ ಮಾಲೀಕರು ನಾಪತ್ತೆಯಾಗಿದ್ದಾರೆ. ಇಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಸ್ಪೊಟಕ ವಸ್ತುಗಳನ್ನು ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳ ಭಯದಿಂದಾಗಿ ನಾಶಪಡಿಸಲು ಸಾಗಿಸುವ ವೇಳೆ ಈ ದುರಂತ ನಡೆದಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಎಂದರು ಸುಧಾಕರ್.

ಕ್ವಾರಿ ಮಾಲೀಕರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ದ ಕ್ರಮ ಜರುಗಿಸಲಾಗುವುದು. ಇವನ್ನು ‌ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಸಚಿವರು, ಇನ್ನು ಸ್ಪೋಟದಿಂದ ಮೃತರಾದ ಕಾರ್ಮಿಕರ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು ಅವರು.

ಈ ಸಂದರ್ಭದಲ್ಲಿ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ), ಕೇಂದ್ರ ವಲಯದ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಜಿಲ್ಲೆಯ ಇನ್ನಿತರೆ ಅಧಿಕಾರಿಗಳು ಸ್ಥಳದಲ್ಲಿದ್ದರು.

ಬಂಧನಕ್ಕೆ ಆದೇಶ

ಈ ನಡುವೆ ಭ್ರಮರವಾಸಿನಿ ಕ್ರಷರ್‌ ಮಾಲೀಕರ ಬಂಧನಕ್ಕೆ ಸರಕಾರ ಆದೇಶ ನೀಡಿದ್ದು, ರಾತ್ರಿ ಸ್ಫೋಟದ ವಿಷಯ ತಿಳಿಯುತ್ತಿದ್ದಂತೆ ಮೂವರು ಮಾಲೀಕರು ನಾಪತ್ತೆಯಾಗಿದ್ದಾರೆ. ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ಹಾಗೂ ಆಂಧ್ರ ಪ್ರದೇಶದ ಶಿವಾರೆಡ್ಡಿ, ರಾಘವೇಂದ್ರ ರೆಡ್ಡಿ ಸಂಯುಕ್ತ ಮಾಲೀಕತ್ವದ್ದು ಎಂದು ತಿಳಿದುಬಂದಿದೆ. ಪೊಲೀಸರು ಇವರ ಬಂಧನಕ್ಕೆ ಬಲೆ ಬೀಸಿದ್ದು, ವಿವಿಧ ತಂಡಗಳನ್ನು ರಚಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ ಪೊಲೀಸರು.

***

ಹಿರೇನಾಗವೇಲಿ ಬಳಿ ಕ್ರಷರ್‌ಗಳು ಅಕ್ರಮವಾಗಿ ಸ್ಫೋಟಗಳನ್ನು ನಡೆಸುತ್ತಿವೆ ಹಾಗೂ ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿಟ್ಟಿವೆ ಎಂದು ಸಿಕೆನ್ಯೂಸ್‌ ನೌ ಜನವರಿ 28ರಂದೇ ವರದಿ ಮಾಡಿತ್ತು.
ಕಾನೂನಿಗೆ ಕಿಮ್ಮತ್ತಿಲ್ಲ, ಜನರ ಬಗ್ಗೆ ಕಾಳಜಿ ಇಲ್ಲ; ರಾತ್ರಿ ಎಲ್ಲರೂ ಮಲಗಿದ ಮೇಲೆ ಕಲ್ಲು ಕ್ವಾರಿಗಳಲ್ಲಿ ಸ್ಫೋಟ, ಆರೋಗ್ಯ ಸಚಿವರ ಹುಟ್ಟೂರಿಗೆ ಕೂಗಳತೆ ದೂರದಲ್ಲೇ ಕ್ರಷರ್‌ಗಳ ಕರಾಳಲೋಕ‌

Tags: chikkaballapur blastdr k sudhakarhirenagavalliillegal crusherkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ;  ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಸ್ಫೋಟ; ಸರಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

5 years ago
ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಬಿಜೆಪಿ ಜತೆ ಮೈತ್ರಿಗೆ ನಾನೇ ಅನುಮತಿ ಕೊಟ್ಟಿದ್ದು; ಮೈತ್ರಿಗೆ ನನ್ನ ಒಪ್ಪಿಗೆ ಇದೆ ಎಂದ ಹೆಚ್.ಡಿ.ದೇವೇಗೌಡರು

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ