• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹುಣಸೋಡು ರೀತಿಯಲ್ಲೇ ಚಿಕ್ಕಬಳ್ಳಾಪುರ ಸ್ಫೋಟಕ್ಕೂ ಟ್ವಿಟರಿನಲ್ಲೇ ಕಣ್ಣೀರು ಹಾಕಿದ ಮೋದಿ! ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ಕಣ್ಣೀರ ಕೋಡಿ!!

cknewsnow desk by cknewsnow desk
February 23, 2021
in NATION, STATE
Reading Time: 1 min read
0
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
916
VIEWS
FacebookTwitterWhatsuplinkedinEmail

ಬೆಂಗಳೂರು/ಚಿಕ್ಕಬಳ್ಳಾಪುರ: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ್ದ ಸ್ಫೋಟಕ್ಕೆ ಟ್ವಿಟರಿನಲ್ಲಿ ಸಂತಾಪ ಸೂಚಿಸಿ ಸುಮ್ಮನಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗಯೂ ಅದೇ ರೀತಿ ಟ್ವೀಟರ್‌ನಲ್ಲಿ ಶೋಕದ ಸ್ಟೇಟಸ್‌ ಹಾಕಿ ಸುಮ್ಮನಾಗಿದ್ದಾರೆ.

ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ದೊಡ್ಡ ಕ್ವಾರಿ ದುರಂತಗಳೇ ಘಟಿಸಿದರೂ ಪ್ರಧಾನಿ ಕಲ್ಲು ಕ್ವಾರಿಗಳನ್ನು ಮಟ್ಟ ಹಾಕುವ ಒಂದೇ ಒಂದು ಮಾತನ್ನೂ ಆಡಿಲ್ಲ ಹಾಗೂ ರಾಜ್ಯ ಸರಕಾರದ ಕಿವಿಯನ್ನೂ ಹಿಂಡಿಲ್ಲ. ಸಾರ್ವಜನಿಕರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗ್ಗೆ 9 ಗಂಟೆ 23 ನಿಮಿಷಕ್ಕೆ ಟ್ವೀಟ್‌ ಮಾಡಿರುವ ಪ್ರಧಾನಿ; ಚಿಕ್ಕಬಳ್ಳಾಪುರ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

Pained by the loss of lives due to a mishap at Chikkaballapur in Karnataka. Condolences to the bereaved families. Praying that the injured recover quickly: PM @narendramodi

— PMO India (@PMOIndia) February 23, 2021

ಹುಣಸೋಡು ಘಟನೆ ನಡೆದಾಗಲೂ ಪ್ರಧಾನಿ ಇದೇ ರೀತಿ ಟ್ವೀಟ್‌ ಸಂತಾಪ ವ್ಯಕ್ತಪಡಿಸಿದ್ದರೆ ವಿನಾ, ಮತ್ತೇನನ್ನೂ ಮಾಡಿರಲಿಲ್ಲ. ಆ ಘಟನೆ ನಡೆದ ಮೇಲೆ ರಾಜ್ಯದಲ್ಲಿ ಅಕ್ರಮ ಕಲ್ಲು ಕ್ವಾರಿಗಳನ್ನು ನಿರ್ಬಂಧಿಸುವ ಅಥವಾ ಅಕ್ರಮ ಸ್ಫೋಟಗಳನ್ನು ನಡೆಸುವವರ ವಿರುದ್ಧ ಯಾವ ಕ್ರಮವೂ ಆಗಿರಲಿಲ್ಲ. ಮೇಲಾಗಿ; ಪೊಲೀಸರು ಮತ್ತು ಗಣಿ ಇಲಾಖೆ ಅಧಿಕಾರಿಗಳು ಕಾಟಾಚಾರಕ್ಕೆ ರೈಡ್‌ ಮಾಡಿದ್ದಾರೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಘಟನೆಯೇ ಸಾಕ್ಷಿಯಾಗಿದೆ.

ಇನ್ನೊಂದೆಡೆ, ಕಲ್ಲು ಕ್ರಷರ್‌ಗಳ ಮಾಲೀಕರಿಗೆ ಅನುಕೂಲ ಆಗುವಂಥ ಮಸೂದೆಯನ್ನು ರೂಪಿಸಿ ಕೋವಿಡ್‌ ಸಂಕಷ್ಟದ ನಡುವೆಯೇ ಸುಗ್ರೀವಾಜ್ಞೆ ಹೊರಡಿಸಿತ್ತು ಸರಕಾರ. ಬಳಿಕ ಅದನ್ನು ವಿಧಾನಮಂಡಲದಲ್ಲಿ ಪಾಸು ಮಾಡಿಕೊಂಡು ಕಾಯ್ದೆಯನ್ನಾಗಿ ಜಾರಿ ಮಾಡಿತ್ತು.

ಹುಣಸೋಡು ಘಟನೆಯ ನಂತರವೂ ಎಚ್ಚೆತ್ತುಕೊಳ್ಳದ ಸರಕಾರ ಕ್ರಷರ್‌ಗಳಿಗೆ ಬೆಂಬಲ ನೀಡುತ್ತಲೇ ಇತ್ತು. ಸ್ವತಃ ಮುಖ್ಯಮಂತ್ರಿಯೇ, ಅಕ್ರಮ ಕ್ರಷರ್‌ಗಳಿದ್ದರೆ ಸಕ್ರಮ ಮಾಡಿಕೊಳ್ಳಲು ಸರಕಾರಕ್ಕೆ ಅರ್ಜಿ ಹಾಕಿ ಎಂದು ಮುಕ್ತವಾಗಿ ಆಫರ್‌ ನೀಡಿದ್ದರು.

ಸಿಎಂ ಕೂಡ ಟ್ವಿಟರ್‌ನಲ್ಲೇ ಸಂತಾಪ

ಪ್ರಧಾನಿಯಂತೆ ಮುಖ್ಯಮಂತ್ರಿ ಕೂಡ ಟ್ವಿಟರ್‌ನಲ್ಲಿಯೇ ಸಂತಾಪ ಸೂಚಿಸಿದ್ದಾರೆ. “ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಅವರು ಟ್ವಿಟರಿನಲ್ಲಿ ಬರೆದಿದ್ದಾರೆ.

ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. (1/2)

— CM of Karnataka (@CMofKarnataka) February 23, 2021

ಆದರೆ, ಸಿಎಂ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜನರು, ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆ ಪಡೆಯುವಂತೆ ಒತ್ತಾಯ ಮಾಡಿದ್ದಾರೆ.

ಇನ್ನು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್‌ ನಿರಾಣಿ ಸಾಹೇಬರು ಕೂಡ ಟ್ವಿಟರಿನಲ್ಲಿ ಮೊದಲು ಪ್ರತಿಕ್ರಿಯೆ ನೀಡಿದ್ದಾರೆ.

ಈ ದುರಂತ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜೆಲಾಟಿನ್ ಸ್ಟಿಕ್ ಗಳು, ಆಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ.

— Dr. Murugesh R Nirani (@NiraniMurugesh) February 23, 2021

ಕೇಂದ್ರ ಗಣಿ ಸಚಿವರು ಎಲ್ಲಿ?

ಇನ್ನು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರು ಕರ್ನಾಟಕದವರೇ ಆದ ಪ್ರಹ್ಲಾದ್‌ ಜೋಶಿ ಮಧ್ಯಾಹ್ನ ಗಂಟೆ 1 ಆದರೂ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿದ ವರದಿ ಬರಲಿಲ್ಲ. ಹುಣಸೋಡು ಘಟನೆ ನಡೆದ ಅಕ್ರಮ ಗಣಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ಹಾಕಬೇಕು ಎಂದು ಗುಡುಗಿದ್ದ ಕೇಂದ್ರ ಸಚಿವರು, ಘಟನೆ ನಡೆದ 12-13 ಗಂಟೆಗಳಾದರೂ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಜ್ಯದ ಆರೋಗ್ಯ ಸಚಿವರ ಊರಿನ ಸುತ್ತಮುತ್ತಲಿನಲ್ಲಿ ಹಾಗೂ ಇಡೀ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಸ್ಫೋಟಗಳು ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳು, ಪರಿಸರ ಹೋರಾಟಗಾರರು ದನಿ ಎತ್ತಿದ್ದರೂ ಸರಕಾರ ಕಿವಿಗೊಡುತ್ತಿಲ್ಲ. ಕಲ್ಲು ಕ್ವಾರಿಗಳು ರಾಜಕಾರಣಿಗಳ ಬೇನಾಮಿ ಹೆಸರುಗಳಲ್ಲಿ ನಡೆಯುತ್ತಿರುವುದು ಗುಟ್ಟಾಗೇನೂ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕಣ್ಣಳತೆಯಲ್ಲಿ ಎಲ್ಲವೂ ನಡೆಯುತ್ತಿದೆ ಎಂಬುದು ಬಹಿರಂಗ ಗುಟ್ಟು. ಹೀಗಿದ್ದರೂ ಜಿಲ್ಲಾಡಳಿತ, ಜಿಲ್ಲಾ ಗಣಿ ಇಲಾಖೆ, ಪೊಲೀಸ್‌ ಇಲಾಖೆ ಕೈಕಟ್ಟಿ ಕೂತಿದೆ. ಸರಕಾರ ಜಾಣ ಕಿವುಡು ತೋರುತ್ತಿದೆ. ಹೀಗಾಗಿ ಮೋದಿ ಅವರ ಟ್ವಿಟ್ಟರ್‌ ಸಂತಾಪದ ಬಗ್ಗೆ ಜನರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ.

  • ಸ್ಫೋಟ ದುರಂತದ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ
Tags: chikkaballapur blastillegal stone crusherkarnatakanarendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿಐಡಿ ತನಿಖೆಗೆ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಹಿರೇನಾಗವೇಲಿಗೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಛಿಧ್ರವಾದ ದೇಹಗಳನ್ನು ನೋಡಿ ಕಣ್ಣೀರಿಟ್ಟ ಗೃಹ ಸಚಿವ

ಸಿಐಡಿ ತನಿಖೆಗೆ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಹಿರೇನಾಗವೇಲಿಗೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಛಿಧ್ರವಾದ ದೇಹಗಳನ್ನು ನೋಡಿ ಕಣ್ಣೀರಿಟ್ಟ ಗೃಹ ಸಚಿವ

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ