• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕಲ್ಲುಕ್ವಾರಿ ಸ್ಫೋಟ: ದುರಂತದ ಸ್ಥಳದಲ್ಲೇ ಕಣ್ಸನ್ನೆ ಕರಾಮತ್ತು & ಚಿಕ್ಕಬಳ್ಳಾಪುರದಲ್ಲಿ ಸ್ಥಗಿತವಾಗಿತ್ತಾ ಕೇಬಲ್‌ ನೆಟ್‌ವರ್ಕ್‌; ಡಿಜಿಟಲ್‌‌‌ ಮೀಡಿಯಾಗಳಿಂದ ಸುದ್ದಿ ತಿಳಿದ ಜನ

cknewsnow desk by cknewsnow desk
February 23, 2021
in CHIKKABALLAPUR, STATE
Reading Time: 1 min read
0
ಕಲ್ಲುಕ್ವಾರಿ ಸ್ಫೋಟ: ದುರಂತದ ಸ್ಥಳದಲ್ಲೇ ಕಣ್ಸನ್ನೆ ಕರಾಮತ್ತು & ಚಿಕ್ಕಬಳ್ಳಾಪುರದಲ್ಲಿ ಸ್ಥಗಿತವಾಗಿತ್ತಾ ಕೇಬಲ್‌ ನೆಟ್‌ವರ್ಕ್‌; ಡಿಜಿಟಲ್‌‌‌ ಮೀಡಿಯಾಗಳಿಂದ ಸುದ್ದಿ ತಿಳಿದ ಜನ

ಸ್ಫೋಟದ ಸ್ಥಳದಲ್ಲಿ ಮಂಗಳವಾರ ಸಚಿವರು ಸುದ್ದಿಗಾರರ ಜತೆ ಮಾತನಾಡಿದ್ದು. / ಸಂಗ್ರಹ ಚಿತ್ರ

918
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಾಗವೇಲಿ ಬಳಿಯ ಕ್ರಷರ್‌ನ ಅಕ್ರಮ ಸ್ಫೋಟಕಗಳ ಸ್ಫೋಟದ ಸ್ಥಳದಲ್ಲಿ ಕೆಲ ನಾಟಕೀಯ ಬೆಳವಣಿಗೆಗಳು ನಡೆದಿವೆ.

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಸ್ಥಳೀಯರ ತೀವ್ರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಸ್ಥಳೀಯನೂ ಆದ ಹಿರೇನಾಗವೇಲಿ ಗ್ರಾಮದ ರಾಘವೇಂದ್ರ ಎಂಬ ಯುವಕ ಸಚಿವರ ವಿರುದ್ಧ ಕೂಗಾಟ, ಚೀರಾಟ ನಡೆಸಿದನಲ್ಲದೆ, ಸಚಿವರು ಮತ್ತು ಅವರ ಬೆಂಬಲಿಗರ ಕುಮ್ಮಕ್ಕಿನಿಂದ ಆತನನ್ನು ರೌಂಡಪ್‌ ಮಾಡಿದ ಪೊಲೀಸರು ತರಾತುರಿಯಲ್ಲಿ ಪಕ್ಕಕ್ಕೆ ಕರೆದೊಯ್ದದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಒಬ್ಬ ಅಧಿಕಾರಿ ಆತನನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆಯೇ ಎಳೆದುಕೊಂಡು ಹೋದರು.

ಏನಾಯಿತು?

ಸಚಿವರು ಸ್ಥಳಕ್ಕೆ ಬರುತ್ತಿದ್ದಂತೆಯೇ ಅವರ ವಿರುದ್ಧ ರೊಚ್ಚಿಗೆದ್ದು ಕೂಗಾಡಿದ ರಾಘವೇಂದ್ರ, “ಈ ಕ್ರಷರ್‌ಗಳ ಕರ್ಮಕಾಂಡಕ್ಕೆ ನೇರ ಕಾರಣ ನೀವೆ. ಹೀರೇನಾಗವೇಲಿ ಮತ್ತು ಸುತ್ತಮುತ್ತಲಿನ ಕಲ್ಲು ಕ್ವಾರಿಗಳ ಕರ್ಮಕಾಂಡಕ್ಕೆ ನೀವೇ ಕಾರಣ. ನಿಮಗೂ ಸೇರಿದಂತೆ ಪೊಲೀಸರು, ಗಣಿ ಇಲಾಖೆ ಅಧಿಕಾರಿಗಳಿಗೆ ಕ್ವಾರಿಗಳಿಂದ ಮಾಮೂಲಿ ಬರ್ತಾ ಇದೆ. ಇದೆಲ್ಲ ನನಗೆ ಗೊತ್ತಿದೆ. ಜತೆಗೆ; ದಬ್ಬಾಳಿಕೆ ನಡೆಸಿ ನಮ್ಮ ಜಮೀನುಗಳನ್ನು ಖರೀದಿ ಮಾಡಿದ್ದಾರೆ” ಎಂದು ಕಿರುಚಿದ.

ದಿಢೀರನೇ ಎದುರಾದ ಈ ಸನ್ನಿವೇಶದಿಂದ ಮುಜುಗರಕ್ಕೀಡಾದರು ಸುಧಾಕರ್‌ಗೆ ಕಸಿವಿಸಿಯಾಯಿತು. ಅವರ ಬೆಂಬಲಿಗರಿಗೂ ಮುಜುಗರ ಊಂಟಾಯಿತು. ಈ ಸಂದರ್ಭದಲ್ಲಿ ಪೊಲೀಸರಿಗೆ ಕಣ್ಸನ್ನೆ ಮಾಡಿದ ಕೆಲ ಬೆಂಬಲಿಗರು, ರಾಘವೇಂದ್ರನತ್ತ ಗಮನ ಹರಿಸಿ ಎಂದು ಪೊಲೀಸರಿಗೆ ಸಂಜ್ಞೆ ಮಾಡಿದರು. ಕೂಡಲೇ ಪೊಲೀಸರು ರಾಘವೇಂದ್ರ ಅವರನ್ನು ಸುತ್ತುವರಿದು ಪಕ್ಕಕ್ಕೆ ಎಳೆದುಕೊಂಡು ಹೋಗಿದ್ದಾರೆ.

ಅಷ್ಟೇ ಅಲ್ಲ, ಸಚಿವರು ಬೆಂಬಲಿಗರು ರಾಘವೇಂದ್ರ ಮೇಲೆ ಹಲ್ಲೆಗೆ ಯತ್ನಿಸಿದ್ದೂ ನಡೆದಿದೆ. ಇದೆಲ್ಲವನ್ನು ನೋಡುತ್ತಲೇ ಇದ್ದ ಪೊಲೀಸರು ರಾಘವೇಂದ್ರನನ್ನು ಎಳೆದುಕೊಂಡು ಹೋದರೆ ವಿನಾ ಸುಧಾಕರ್‌ ಬೆಂಬಲಿಗರನ್ನು ತಡೆಯುವ ಪ್ರಯತ್ನ ಮಾಡಲಿಲ್ಲ. ಒಂದು ಮಾಧ್ಯಮ ಪ್ರತಿನಿಧಿಗಳು ಸ್ಥಳದಲ್ಲಿ ಇಲ್ಲದೇ ಹೋಗಿದ್ದಿದ್ದರೆ ಆತನ ಮೇಲೆ ತೀವ್ರ ಹಲ್ಲೆಯಂತೂ ನಡೆಯುತ್ತಿತ್ತು. ಇದೆಲ್ಲವನ್ನೂ ಸ್ಥಳೀಯರು ಗಮನಿಸಿದ್ದಾರೆ ಹಾಗೂ ಅನೇಕರು ಮೊಬೈಲ್‌ಗಳಲ್ಲಿ ಈ ಚಿತ್ರಗಳನ್ನು ಸೆರೆಹಿಡಿದು ಜಾಲತಾಣಗಳಲ್ಲಿ ಹರಿದುಬಿಟ್ಟಿದ್ದಾರೆ.

ಇದನ್ನೆಲ್ಲ ಸ್ಥಳದಲ್ಲೇ ಇದ್ದು ನೋಡಿದ ಸ್ಥಳೀಯರು ಸಚಿವರು, ಸಚಿವರ ಬೆಂಬಲಿಗರು ಹಾಗೂ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಇಲ್ಲಿನ ಎಲ್ಲ ಕಲ್ಲುಕ್ವಾರಿಗಳನ್ನು ಬಂದ್‌ ಮಾಡಬೇಕು. ಪರಿಸರಕ್ಕೆ ಹಾಗೂ ಜನರಿಗೆ ಮಾರಕವಾಗಿರುವ ಈ ಕಲು ಕ್ವಾರಿಗಳನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ.

ಸಚಿವರನ್ನು ತಡೆದ ಮಾಧ್ಯಮ ಅಧಿಕಾರಿ

ದುರಂತ ನಡೆದ ಸಂಭವಿಸಿದ ಸ್ಥಳವನ್ನು ವೀಕ್ಷಣೆ ಮಾಡಿದ ನಂತರ ಸುದ್ದಿಗಾರರ ಜತೆ ಸುಧಾಕರ್‌ ಮಾತನಾಡುವ ಸಂದರ್ಭದಲ್ಲೂ ಕೆಲ ನಾಟಕೀಯ ಸನ್ನಿವೇಶಗಳು ನಡೆದವು. ಘಟನೆ ಬಗ್ಗೆ ಸುದ್ದಿಗಾರರಿಗೆ ವಿವರ ನೀಡುವ ಭರದಲ್ಲಿ ಸಚಿವರು; “ಘಟನೆಗೆ ಕಾರಣವಾದ ಕ್ವಾರಿ ಅಧಿಕೃತವಾದದ್ದು. ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರ ಪೊಲೀಸರು ಹಾಗೂ ಗಣಿ ಅಧಿಕಾರಿಗಳು ಈ ಕ್ವಾರಿ ಮೇಲೆ ದಾಳಿ ನಡೆಸಿದ್ದರು..” ಎಂದು ಹೇಳುತ್ತಿದ್ದಂತೆಯೇ ಅವರ ಮಾಧ್ಯಮ ಅಧಿಕಾರಿ ಎನ್ನಲಾದ ವ್ಯಕ್ತಿಯೊಬ್ಬರು ಸಚಿವರಿಗೆ ಕಣ್ಸನ್ನೆ ಮಾಡಿ, ಮಾತನಾಡದಂತೆ ಸೂಚಿಸಿದರು.

ಕೂಡಲೇ ಮಾತು ನಿಲ್ಲಿಸಿದ ಸಚಿವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಮುಂದೆ ಬಿಟ್ಟು ಹಿಂದೆ ಸರಿದು ನಿಂತರು.

ಚಿಕ್ಕಬಳ್ಳಾಪುರದಲ್ಲಿ ಕೇಬಲ್‌ ಕಟ್‌ ಆಗಿತ್ತಾ?

ಸ್ಫೋಟದ ಸುದ್ದಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಭಿತ್ತರವಾಗುವುದು ಆರಂಭವಾಗುತ್ತಿದ್ದಂತೆ ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆ ಕೆಲವೊತ್ತು ಕೇಬಲ್‌ ಕಟ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಬಲ್‌ ಆಪರೇಟರ್‌ಗಳು ಯಾವುದೋ ಯಾರದ್ದೋ ಒತ್ತಡಕ್ಕೆ ಮಣಿದು ಕೇಬಲ್‌ ನೆಟ್‌ವರ್ಕ್‌ ಸ್ಥಗಿತ ಮಾಡಿರಬಹುದು ಎಂದು ಹೇಳಲಾಗಿದೆ.

ಟೀವಿಗಳು ಸ್ಥಗಿತವಾಗುತ್ತಿದ್ದಂತೆಯೇ ಅನೇಕರು ಮನೆಗಳಿಗೆ ಸಂಪರ್ಕ ಕಲ್ಪಿಸಿರುವ ಕೇಬಲ್‌ ಆಪರೇಟರ್‌ಗಳಿಗೆ ಕಾಲ್‌ ಮಾಡಿದ್ದಾರೆ. ಆದರೆ, ಯಾರಿಂದಲೂ ಅವರಿಗೆ ಉತ್ತರ ಸಿಕ್ಕಿಲ್ಲ. ಕೆಲ ಸಮಯದ ನಂತರ ಕೇಬಲ್‌ ಸಂಪರ್ಕ ಬಂದಿತಾದರೂ ಅಷ್ಟೊತ್ತಿಗೆ ಜನರು ತಮ್ಮ ಖಾಸಗಿ ಕೇಬಲ್‌ ನೆಟ್‌ವರ್ಕ್‌ಗಳ ಮೂಲಕ ಹಾಗೂ ಯೂಟ್ಯೂಬ್‌ ಮೂಲಕ ಸುದ್ದಿ ವಾಹಿನಿಗಳನ್ನು ವೀಕ್ಷಿಸಿದ್ದಾರೆ.

Tags: cable cutchikkaballapur blastdr k sudhakarkarnatakaperesandrastone crushers
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಹುಣಸೋಡು ರೀತಿಯಲ್ಲೇ ಚಿಕ್ಕಬಳ್ಳಾಪುರ ಸ್ಫೋಟಕ್ಕೂ ಟ್ವಿಟರಿನಲ್ಲೇ ಕಣ್ಣೀರು ಹಾಕಿದ ಮೋದಿ! ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ಕಣ್ಣೀರ ಕೋಡಿ!!

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ