• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ ಅಥವಾ ಮಿಂಡೇನಹಳ್ಳಿ ಗ್ರಾಮದಲ್ಲಿ ಡಿಕ್ಸನ್‌ ಘಟಕ; ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಕೆಯಲ್ಲಿ ಮುಂಚೂಣಿ ಕಂಪನಿ; ಡಿಸಿಎಂ ಜತೆ ಮಾತುಕತೆ

cknewsnow desk by cknewsnow desk
February 26, 2021
in KOLAR, STATE
Reading Time: 1 min read
0
ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ ಅಥವಾ ಮಿಂಡೇನಹಳ್ಳಿ ಗ್ರಾಮದಲ್ಲಿ ಡಿಕ್ಸನ್‌ ಘಟಕ;   ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಕೆಯಲ್ಲಿ ಮುಂಚೂಣಿ ಕಂಪನಿ; ಡಿಸಿಎಂ ಜತೆ ಮಾತುಕತೆ
918
VIEWS
FacebookTwitterWhatsuplinkedinEmail

ಬೆಂಗಳೂರು: ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು ಈ ಬಗ್ಗೆ ಐಟಿ- ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಕಂಪನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿಂದು ಡಿಸಿಎಂ ಅವರ ಮುಂದೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ, ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟರು. ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಡಿಸಿಎಂ ಅವರು ಜಮೀನು ಕೊಡುವ ಭರವಸೆ ನೀಡಿದರು.

ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ (ಇಎಸ್‌ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿ; ಇವಿಷ್ಟೂ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್‌ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.

ಕಂಪನಿಯು 10ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‌ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಗೆ ಮೇಲೆ ತಿಳಿಸಿದ ಯಾವುದೇ ಜಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಸುಮಾರು 30 ಸಾವಿರ ಕೋಟಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್‌ ಕಂಪನಿಯು; ಲ್ಯಾಪ್‌ಟಾಪ್‌, ಟ್ಯಾಬ್‌, ಡೆಸ್ಟಾಪ್‌, ಸಿಎಫ್‌ಎಲ್ ಬಲ್ಬ್‌ಗಳು, ಎಲ್‌ಇಡಿ ಟೀವಿಗಳು, ಸಿಸಿಟಿವಿ, ವಾಷಿಂಗ್‌ ಮಷಿನ್‌ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್‌ ಲಾಲ್‌, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರಕಾರದ ಹಿರಿಯ ಅಧಿಕಾರಿಗಳು ಇದ್ದರು.

ಕೋಲಾರದತ್ತ ಒಲವು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಹಾಗೂ ಈಗಾಗಲೇ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಕೋಲಾರದಲ್ಲಿ ಘಟಕವನ್ನು ಸ್ಥಾಪನೆ ಮಾಡಲು ಡಿಕ್ಸನ್‌ ಅಧಿಕಾರಿಗಳು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ, ಚೆನ್ನೈ ಬಂದರು ಹೊಂದಿರುವ ಕಾರಣಕ್ಕೆ ಆ ನಗರಕ್ಕೆ ಹತ್ತಿರದಲ್ಲಿರುವ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಕಂಪನಿ ಉದ್ದೇಶಿಸಿದೆ. ಹೀಗಾಗಿ ಡಿಕ್ಸನ್‌ ಕಂಪನಿ ಕೋಲಾರಕ್ಕೆ ಬರುವುದು ಬಹುತೇಕ ಖಚಿತ ಎಂದು ಉನ್ನತ ಮೂಲಗಳು ತಿಳಿಸಿವೆ.

Tags: dixondr cn ashwath narayanInvestmentkarnatakakolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

ರಾಜಕಾರಣ ಮಾಡುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಎಂದ ಶಾಸಕರು; ಕತ್ತಲಲ್ಲೇ ನಡೆದ ಕೆಡಿಪಿ ಸಭೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವರಿಗೆ ಸಿಗದ ನಿವೇಶನ

Leave a Reply Cancel reply

Your email address will not be published. Required fields are marked *

Recommended

ಹೃದಯಕ್ಕೆ ಒಳ್ಳೆಯದು ಮಾಡುವ ಸೂರ್ಯ ನಮಸ್ಕಾರಕ್ಕೂ ರಥಸಪ್ತಮಿಗೂ ಸಂಬಂಧ ಏನು? ಮಾಘ ಮಾಸದಲ್ಲಿ ಭಾಸ್ಕರನಿಗೆ ನಮಸ್ಕರಿಸಿ ನೋಡಿ..

ಹೃದಯಕ್ಕೆ ಒಳ್ಳೆಯದು ಮಾಡುವ ಸೂರ್ಯ ನಮಸ್ಕಾರಕ್ಕೂ ರಥಸಪ್ತಮಿಗೂ ಸಂಬಂಧ ಏನು? ಮಾಘ ಮಾಸದಲ್ಲಿ ಭಾಸ್ಕರನಿಗೆ ನಮಸ್ಕರಿಸಿ ನೋಡಿ..

5 years ago
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಆಮ್ಲಜನಕದ ಕೊರತೆಯಿಂದ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ಭೀತಿ; ವಸ್ತುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಯಡಿಯೂರಪ್ಪ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ