• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ಮಾದರಿಯಲ್ಲೇ ಕೃಷಿ ವಿವಿ ಪರಿವರ್ತನೆ; ಸರ್ವ ಸ್ವಾಯತ್ತತೆ ಮೂಲಕ ಬೋರ್ಡ್‌ ಆಫ್‌ ಗವರ್ನೆನ್ಸ್‌ ವ್ಯವಸ್ಥೆಯೇ ಬರಲಿದೆ ಎಂದ ಉಪ ಮುಖ್ಯಮಂತ್ರಿ

cknewsnow desk by cknewsnow desk
February 27, 2021
in NEWS IN USE, STATE
Reading Time: 1 min read
0
ಕೋವಿಡ್ ಕೇಂದ್ರದಲ್ಲಿ ಬರೀ ತೋರಿಕೆ: ಸೋಂಕಿತರತ್ತ ಸುಳಿಯದ ವೈದ್ಯರು
919
VIEWS
FacebookTwitterWhatsuplinkedinEmail

ಬೆಂಗಳೂರು: ಪ್ರತಿಷ್ಠಿತ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು (UVCE) ಮಾದರಿಯಲ್ಲಿಯೇ ಕೃಷಿ ವಿಶ್ವವಿದ್ಯಾಲಯದ ಆಡಳಿತ, ಶೈಕ್ಷಣಿಕ, ಆರ್ಥಿಕ ಸ್ವರೂಪವನ್ನು ಆಮಲಾಗ್ರವಾಗಿ ಬದಲಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿಂದು ಹೆಬ್ಬಾಳದ ಪಶುವೈದ್ಯ ಕಾಲೇಜು ಕ್ಯಾಂಪಸ್ಸಿನಲ್ಲಿ ಕೃಷಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; “ಶತಮಾನದ ಇತಿಹಾಸವುಳ್ಳ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜನ್ನು (ಯುವಿಸಿ) ಅಭಿವೃದ್ಧಿಪಡಿಸುವ ಕೆಲಸವನ್ನು ಸರಕಾರ ಈಗಾಗಲೇ ಕೈಗೆತ್ತಿಕೊಂಡಿದೆ. ಆರ್ಥಿಕ, ಆಡಳಿತ ಮತ್ತು ಶೈಕ್ಷಣಿಕವಾಗಿ ಸ್ವಾಯತ್ತತೆ ನೀಡುವ ಮೂಲಕ ಅದನ್ನು ಜಾಗತಿಕ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲಾಗುತ್ತಿದೆ. ಕೃಷಿ ವಿವಿಯನ್ನೂ ಅದೇ ಮಾದರಿಯಲ್ಲಿ ಪರಿವರ್ತನೆ ಮಾಡಲಾಗುವುದು. ಇಲ್ಲಿ ಬೋರ್ಡ್‌ ಆಫ್‌ ಗವರ್ನೆನ್ಸ್‌ ವ್ಯವಸ್ಥೆಯೇ ಬರಲಿದೆ” ಎಂದರು.

ಕೃಷಿ ವಿವಿಯಲ್ಲೂ ಬೋರ್ಡ್‌ ಆಫ್‌ ಗವರ್ನೆನ್ಸ್‌ ವ್ಯವಸ್ಥೆಯೇ ಬರಲಿದೆ. ಆಡಳಿತಾತ್ಮಕವಾಗಿ ಸಂಪೂರ್ಣ ಬದಲಾವಣೆ ಇರುತ್ತದೆ. ವಿವಿಗಳಿಗೆ ರಾಜಕೀಯ ನೇಮಕಾತಿಗಳು, ಶಿಷ್ಯಂದಿರನ್ನು ತಂದು ಕೂರಿಸುವುದು, ಸ್ವಹಿತಾಸಕ್ತಿಗಳು ಮುಂತಾದವುಗಳಿಂದ ನಾವು ಹೊರಬರಲೇಬೇಕಿದೆ. ಅತ್ಯುತ್ತಮ ಯಾರಿದ್ದಾರೋ ಅವರಷ್ಟೇ ಇಲ್ಲಿನ ಉನ್ನತ ಸ್ಥಾನಗಳಲ್ಲಿ ಇರಬೇಕು. ಇದೇ ಮಾರ್ಗಸೂಚಿಯನ್ನು ಪ್ರತೀ ಕಾಲೇಜಿಗೂ ಅನ್ವಯ ಮಾಡುತ್ತಿದ್ದೇವೆ ಎಂದು ಡಿಸಿಎಂ ಪ್ರಕಟಿಸಿದರು.

ಸದ್ಯ ಒಂದು ಎಂಜಿನಿಯರಿಂಗ್‌ ಕಾಲೇಜ್‌ ನಡೆಸಲು ವರ್ಷಕ್ಕೆ 30 ಕೋಟಿ ರೂ, ವೆಚ್ಚ ಮಾಡಲಾಗುತ್ತಿದೆ. ಒಂದು ಐಐಟಿಗೆ 1,200 ಕೋಟಿ ಖರ್ಚು ಮಾಡಲಾಗುತ್ತಿದೆ. ಗುಣಮಟ್ಟದ ಬೋಧನೆ, ಕಲಿಕೆ ಜತೆಗೆ ಜಾಗತಿಕ ಮಟ್ಟದ ಸೌಲಭ್ಯಗಳು ಇರಬೇಕು ಎನ್ನುವ ಕಾರಣಕ್ಕೆ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜನ್ನು ಅಭಿವೃದ್ಧಿ ಮಾಡಿ ವಾರ್ಷಿಕ 150 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ. ಸರಕಾರ ಅನುದಾನ ನೀಡುವುದರ ಜತೆಗೆ, ದಾನಿಗಳು, ವಿದ್ಯಾರ್ಥಿಗಳ ಶುಲ್ಕ  ಮತ್ತು ಹಳೆಯ ವಿದಾರ್ಥಿಗಳಿಂದ ನೆರವು ಪಡೆಯಲು ಅವಕಾಶ ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ಕಾಲೇಜಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಸ್ವಾಯತ್ತತೆ ನೀಡಲಾಗುತ್ತಿದೆ. ಅಲ್ಲಿ ಪ್ರತ್ಯೇಕ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಪ್ರಕಟಿಸಿದರು.

ಲೈಸೆನ್ಸ್‌ ರಾಜ್‌ ವ್ಯವಸ್ಥೆ ನಿರ್ಮೂಲನೆ

ರಾಜ್ಯ ಕೃಷಿ ವ್ಯವಸ್ಥೆಯಲ್ಲಿ ತುಂಬಿಹೋಗಿದ್ದ ಲೈಸೆನ್ಸ್‌ ರಾಜ್‌ ವ್ಯವಸ್ಥೆಯನ್ನು ನಿರ್ಮೂಲನ ಮಾಡುವುದು ಹಾಗೂ ಕೃಷಿಯಲ್ಲಿ ನವೋದ್ಯಮ ಹಾಗೂ ಆವಿಷ್ಕಾರಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರಕಾರ ಅನೇಕ ಸುಧಾರಕಣೆಗಳನ್ನು ಜಾರಿಗೆ ತಂದಿದೆ ಎಂದು ಉಪ ಮಖ್ಯಮಂತ್ರಿ ಹೇಳಿದರು.

ನಮ್ಮ ದೇಶದಲ್ಲಿ ಶೇ.60ರಷ್ಟು ಜನರು ಕೃಷಿಯಲ್ಲಿ ನಿರತರಾಗಿದ್ದಾರೆ. ಇಷ್ಟು ಅಗಾಧ ಪ್ರಮಾಣದ ಜನರು ಅವಲಂಭಿಸಿರುವ ಕ್ಷೇತ್ರದ ಉದ್ಯಮ ಸ್ವರೂಪ ನೀಡದಿದ್ದರೆ ಮುಂದಿನ ದಿನಗಳು ಕಷ್ಟವಾಗುತ್ತವೆ. ಹೀಗಾಗಿ ಅನಗತ್ಯ ರಾಜಕೀಯ ಮಾಡುವುದು ಯಾರಿಗೂ ಶೋಭೆಯಲ್ಲ ಎಂದರು ಅವರು.

ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಕೃಷಿ ಮಸೂದೆಗಳು ನೂರಕ್ಕೆ ನೂರರಷ್ಟು ರೈತರಿಗೆ ಅನುಕೂಲವಾಗಿವೆ. ಹಳೆಯ ಕಾಯ್ದೆಗಳ ಉತ್ತಮ ಅಂಶಗಳನ್ನು ಇಟ್ಟುಕೊಂಡು ಹೊಸ ಅಂಶಗಳನ್ನು ಸೇರಿಸಲಾಗಿದೆ. ಗುತ್ತಿಗೆ ಆಧಾರಿತ ಕೃಷಿ ಇರಬಹುದು ಅಥವಾ ಕೃಷಿ ಉತ್ಪಾದಕರಿಗೆ ಉತ್ಪಾದನಾ ಶಕ್ತಿಯನ್ನು ಹೆಚ್ಚಿಸುವುದು, ಉತ್ಪಾದಕನಿಂದ ಗ್ರಾಹಕನಿಗೆ ನೇರ ಮಾರಾಟ ವ್ಯವಸ್ಥೆಯನ್ನು ರೂಪಿಸುವ ಮಹತ್ವದ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಎಂ ಹೇಳಿದರು.

ಇನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯನ್ನೂ ಮಾಡಿಲ್ಲ. ಮೊದಲು ರೈತರು ನಡೆಸುತ್ತಿದ್ದ ಒಟ್ಟು ವಹಿವಾಟಿನ ಮೇಲೆ ಶೇ.1.5ರಷ್ಟು ಸೆಸ್‌ ಹಾಕಲಾಗುತ್ತಿತ್ತು. ಈಗ ಕೇವಲ 60 ಪೈಸೆಗೆ ಇಳಿಸಿದ್ದೇವೆ. ಹಾಗೆ ನೋಡಿದರೆ ಸರಕಾರದ ಆದಾಯನ್ನೇ ಕಡಿಮೆ ಮಾಡಿಕೊಂಡು ರೈತರು ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಬಲಪಡಿಸುವ ದಿಕ್ಕಿನಲ್ಲಿ ಸುಧಾರಣೆಗಳನ್ನು ತರಲಾಗಿದೆ ಎಂದರು ಉಪ ಮುಖ್ಯಮಂತ್ರಿ.

ಕಳೆದ ಎಪ್ಪತ್ತು ವರ್ಷಗಳಿಂದ ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳೇ ಆಗಿರಲಿಲ್ಲ. ಎಲ್ಲವೂ ನಿಂತ ನೀರಿನಂತೆ ಆಗಿಬಿಟ್ಟಿತ್ತು. ತಾಂತ್ರಿಕವಾಗಿ ಕೃಷಿಯನ್ನು ಮೇಲೆತ್ತು ಕೆಲಸವನ್ನು ಮಾಡಿರಲಿಲ್ಲ ಎಂದು ಅವರು ದೂರಿದರು.

ಮುಂಚೂಣಿಯಲ್ಲಿ ಕರ್ನಾಟಕ

ಪ್ರಸ್ತುತ ಕರ್ನಾಟಕವು ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ದೇಶದ ಒಟ್ಟಾರೆ ಶೇ.50ರಷ್ಟು ಕೃಷಿ ತಂತ್ರಜ್ಞಾನ ಸಂಸ್ಥೆಗಳು ನಮ್ಮ ರಾಜ್ಯದಲ್ಲೇ ಇವೆ. ಜೈವಿಕ ತಂತ್ರಜ್ಞಾನದಲ್ಲೂ ನಾವು ಮೊದಲನೇ ಸ್ಥಾನದಲ್ಲೇ ಇದ್ದೇವೆ. ಕೃಷಿಗೆ ಬಯೋ ಟೆಕ್ನಾಲಜಿಯನ್ನು ಅಳವಡಿಸಿಕೊಳ್ಳುವ ದಿಸೆಯಲ್ಲಿ ನಾವು ಎಲ್ಲರಿಗಿಂತಲೂ ಮುಂದೆ ಇದ್ದೇವೆ. ಪ್ರಸ್ತುತ ಬಿಟಿ ಕ್ಷೇತ್ರದ ವಹಿವಾಟು 26 ಶತಕೋಟಿ ಡಾಲರ್‌ ಇದ್ದು, ಅದನ್ನು 50 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಡಿಸಿಎಂ ಹೇಳಿದರು.

ಇನ್ನು ನಾವು ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ಡಿಜಿಟಲ್‌ ಕೃಷಿಯತ್ತ ಹೊರಳುತ್ತಿದ್ದೇವೆ. ವಾತಾವರಣ, ಭೂಮಿ, ಮಳೆ ಇತ್ಯಾದಿ ಅಂಶಗಳನ್ನು ನಾವು ಸುಲಭವಾಗಿ ತಿಳಿದುಕೊಡು ಬೇಸಾಯ ಮಾಡುತ್ತಿದ್ದೇವೆ ಎಂದರು ಅವರು. 

ತಂದೆಯ ಉದಾಹರಣೆ ಕೊಟ್ಟ ಡಿಸಿಎಂ

ಕೃಷಿ ನಮ್ಮಲ್ಲಿ ಹಾಸುಹೊಕ್ಕಾಗಿದೆ. ಮಣ್ಣಿನ ಸಂಬಂಧವನ್ನು ಕಡಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ. ನಾನು ಕೂಡ ಕೃಷಿ ಕುಟುಂಬದಿಂದ ಬಂದವನೇ. ನಮ್ಮ ತಂದೆಯವರೂ ಬೇಸಾಯಗಾರರೇ. ಸರಕಾರಿ ಕೆಲಸ ಸಿಕ್ಕಿದರೂ ಅದನ್ನು ಮತ್ತೆ ಮತ್ತೆ ಊರಿಗೆ ಹೋಗಿ ವ್ಯವಸಾಯದಲ್ಲಿ ನಿರತರಾಗುತ್ತಿದ್ದರು. ಕೊನೆಗೆ ಕಷ್ಟಪಟ್ಟು ನಮ್ಮ ಸಂಬಂಧಿಕರು ತಂದೆಯನ್ನು ಕರೆತಂದು ಸರಕಾರಿ ಕೆಲಸದಲ್ಲಿ ಕೆಲ ವರ್ಷ ತೊಡಗುವಂತೆ ಮಾಡಿದರು. ಆದರೆ, ನಿವೃತ್ತರಾದ ನಂತರ ಅವರು ತೆರಳಿದ್ದು ನಮ್ಮ ಹಳ್ಳಿಗೆ, ಮಾಡಿದ್ದು ಕೃಷಿಯನ್ನೇ. ಹೀಗಾಗಿ ಕೃಷಿ ಜತೆಗಿನ ಬಾಂಧವ್ಯವನ್ನು ಯಾರಿಂದಲೂ ಕಡಿದುಕೊಳ್ಳಲು ಸಾಧ್ಯವಿಲ್ಲ ಎಂದು ವಿವರಿಸಿದರು ಉಪ ಮುಖ್ಯಮಂತ್ರಿ.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್‌, ವಿವಿಯ ಡೀನ್‌ ಡಾ.ಡಿ.ಎಲ್.ಸಾವಿತ್ರಮ್ಮ, ಹಳೆಯ ವಿದಾರ್ಥಿಗಳ ಸಂಘದ ಅಧ್ಯಕ್ಷ ಡಾ.ಕೆ.ನಾರಾಯಣ ಗೌಡ, ಕಾರ್ಯದರ್ಶಿ ಡಾ. ಹರಿಣಿಕುಮಾರ್‌ ಮುಂತಾದವರು ಪಾಲ್ಗೊಂಡಿದ್ದರು.

Tags: agriculture university bangalore gkvkboard of governancedr cn ashwath narayanUVCE
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕನ್ನಡದ ಮೇಲೆ ಕಾಳಜಿ, ಜಿಲ್ಲೆಯ ಮೇಲೆ ಮಮತೆ, ನೆಲ-ಜಲ, ಭಾಷೆ ಬಗ್ಗೆ ಕಳಕಳಿ; ಸಪ್ತನದಿಗಳ ಪುನರುಜ್ಜೀವನದ ಕನಸು ಭಿತ್ತಿದ ಚಿಕ್ಕಬಳ್ಳಾಪುರ ಜಿಲ್ಲೆಯ ೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು

ಕನ್ನಡದ ಮೇಲೆ ಕಾಳಜಿ, ಜಿಲ್ಲೆಯ ಮೇಲೆ ಮಮತೆ, ನೆಲ-ಜಲ, ಭಾಷೆ ಬಗ್ಗೆ ಕಳಕಳಿ; ಸಪ್ತನದಿಗಳ ಪುನರುಜ್ಜೀವನದ ಕನಸು ಭಿತ್ತಿದ ಚಿಕ್ಕಬಳ್ಳಾಪುರ ಜಿಲ್ಲೆಯ ೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು

Leave a Reply Cancel reply

Your email address will not be published. Required fields are marked *

Recommended

ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

2 years ago
ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಸಿಎಂ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ