• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

cknewsnow desk by cknewsnow desk
February 28, 2021
in POLITICS, STATE
Reading Time: 1 min read
0
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ
919
VIEWS
FacebookTwitterWhatsuplinkedinEmail

ಬೆಂಗಳೂರು: ಕೇರಳದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ನೇತೃತ್ವದ ಎಲ್‌ಡಿಎಫ್‌ ಹಾಗೂ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಭಾರತೀಯ ರಾಜಕಾರಣದಲ್ಲಿ ಅಪ್ರಸ್ತುತವಾಗಿವೆ. ಆ ರಾಜ್ಯದ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆಂದು ಕೇರಳ ರಾಜ್ಯದ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು; ಕೇರಳದಲ್ಲಿ ಇವೆರಡೂ ರಾಜಕೀಯ ಒಕ್ಕೂಟಗಳು ಸಂಪೂರ್ಣ ವಿಫಲವಾಗಿವೆ. ಕೇವಲ ವೋಟ್‌ಬ್ಯಾಂಕ್‌ ಪಾಲಿಟಿಕ್ಸ್‌ ಮಾಡಿಕೊಂಡು ಕಳೆದ ಎಪ್ಪತ್ತು ವರ್ಷಗಳಿಂದ ಆ ರಾಜ್ಯವನ್ನು ಕತ್ತಲೆಯಲ್ಲೇ ಇಟ್ಟಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ ಎಂದರು.

ಈಗಿನ ಎಲ್‌ಡಿಎಫ್‌ ಸರಕಾರವಂತೂ ರಾಜಕೀಯ ಕಿರುಕುಳ ನೀಡುವುದು, ರಾಜಕೀಯ ಕೊಲೆಗಳು ಹಾಗೂ ಸೇಡಿನ ರಾಜಕೀಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದ ಡಿಸಿಎಂ; ಈ ಎರಡೂ ರಾಜಕೀಯ ಒಕ್ಕೂಟಗಳು ಎಲ್ಲ ಜನರಿಗೂ ಸಲ್ಲುವ ಪಕ್ಷಗಳಲ್ಲ. ಕೇವಲ ಜಾತಿ-ಜಾತಿಗಳ ನಡುವೆ ವೈಷಮ್ಯ ಭಿತ್ತಿ ಆ ಮೂಲಕ ರಾಜಕೀಯ ಲಾಭ ಪಡೆಯುತ್ತಿವೆ ಎಂದು ಟೀಕಿಸಿದರು.

ನಮ್ಮ ಭಾರತೀಯ ಸಂಸ್ಕೃತಿ, ಆಚಾರ ವಿಚಾರಕ್ಕೆ ವಿರುದ್ಧವಾಗಿರುವ ಎಲ್‌ಡಿಎಫ್‌ನಿಂದ ಕೇರಳಕ್ಕೆ ತುಂಬಾ ಹಾನಿಯಾಗಿದೆ. ಕಮ್ಯುನಿಸ್ಟ್‌ ಪಕ್ಷಗಳು ನಮ್ಮ ದೇಶದಲ್ಲಿ ಅಪ್ರಸ್ತುತವಾಗಿವೆ. ಎಲ್ಲ ಕಡೆ ಅಧಿಕಾರ ಕಳೆದುಕೊಂಡು ಈ ಕೇರಳದಲ್ಲೂ ನಿರ್ನಾಮದ ಹಂತದಲ್ಲಿದೆ. ಅದೇ ರೀತಿ ಕಾಂಗ್ರೆಸ್‌ ಪಕ್ಷವೂ ದೇಶಾದ್ಯಂತ ಹೇಳ ಹೆಸರಿಲ್ಲದೆ ಹೋಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಬಿಜೆಪಿ ಬಗ್ಗೆ ಕೇರಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅನೇಕ ಪಕ್ಷಗಳಿಗೆ ಅಲ್ಲಿ ನಾಯಕತ್ವವೇ ಇಲ್ಲ. ಆ ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಇದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Interacted with Malayali residents of Bengaluru regarding upcoming Kerala Assembly elections.

People are eager for change in Kerala. The state's contribution is crucial in strengthening the country to build an #AatmaNirbharBharat as envisioned by PM @narendramodi. pic.twitter.com/Ylsqo8A9rU

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) February 28, 2021

ಸಮಾನಮನಸ್ಕ ಕೇರಳಿಗರ ಜತೆ ಡಿಸಿಎಂ ಸಂವಾದ

ಉದ್ಯಮಶೀಲತೆ ಹಾಗೂ ಸೃಜನಶೀಲತೆಗೆ ಹೆಸರಾದ ಕೇರಳವು ಇತರೆ ರಾಜ್ಯಗಳಿಗೆ ಹೋಲಿಸಿದರೆ ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಹಿಂದೆಬಿದ್ದಿದೆ. ಇದಕ್ಕೆ ಕಾರಣ ಈವರೆಗೂ ಆಡಳಿತ ನಡೆಸಿದ ಎಲ್‌ಡಿಎಫ್‌-ಯುಡಿಎಫ್‌ ಒಕ್ಕೂಟಗಳ ದುರಾಡಳಿತವೇ ಕಾರಣ ಎಂದು ಡಾ.ಸಿ.ಎನ್.‌ಅಶ್ವತ್ಥನಾರಾಯಣ ಟೀಕಿಸಿದರು.

ಭಾನುವಾರ ಸಂಜೆ ಬೆಂಗಳೂರಿನಲ್ಲಿ ನೆಲೆಸಿರುವ ಕೇರಳದ ಸಮಾನ ಮನಸ್ಕರ ಜತೆ ಸಂವಾದ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು; ಸುಂದರ ಕರಾವಳಿ ಹಾಗೂ ಸಮೃದ್ಧ ಪ್ರಾಕೃತಿಕ ಸಂಪತ್ತು ಇದ್ದರೂ ರಾಜ್ಯವನ್ನು ಅಭಿವೃದ್ಧಿಯಲ್ಲಿ ಹಿಂದೆ ಬೀಳುವಂತೆ ಮಾಡಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಕೂಟಗಳು ವಿಫಲವಾಗಿವೆ ಎಂದರು.

ರಾಜಕೀಯಕ್ಕೆ ಮಾತ್ರ ಸೀಮಿತ

ರಾಜ್ಯದ ಜನತೆಯ ನಿರೀಕ್ಷೆಗಳೇನು? ಇತರೆ ರಾಜ್ಯಗಳು ಯಾವ ರೀತಿಯಲ್ಲಿ ಮುನ್ನಡೆ ಸಾಧಿಸುತ್ತಿವೆ, ಅಕ್ಕಪಕ್ಕದ ರಾಜ್ಯಗಳಲ್ಲಿ ಪ್ರಗತಿ ಯಾವ ವೇಗದಲ್ಲಿ ಸಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಎಲ್‌ಡಿಎಫ್‌ ಸರಕಾರಕ್ಕೆ ಸಾಧ್ಯವಾಗಿಲ್ಲ. ಯಾಕೆಂದರೆ, ಎಡಪಕ್ಷಗಳಿಗೆ ಯಾವುದೇ ಅಭಿವೃದ್ಧಿಯ ದೂರದೃಷ್ಟಿ ಇಲ್ಲ. ಕೇವಲ ರಾಜಕೀಯಕ್ಕೆ ಮಾತ್ರ ಸೀಮಿತವಾಗಿ ರಾಜ್ಯವನ್ನು ಮತ್ತಷ್ಟು ಹಿಂದಕ್ಕೆ ತಳ್ಳುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ದೂರಿದರು.

ಕಳೆದ ೭೩ ವರ್ಷಗಳಿಂದ ಕೇರಳದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಅಭಿವೃದ್ಧಿಯನ್ನು ಕಡೆಗಣಿಸಿವೆ. ಒಂದಾದ ಮೇಲೆ ಒಂದರಂತೆ ರಾಜ್ಯವನ್ನು ಇಷ್ಟ ಬಂದಂತೆ ಆಳಿದ ಈ ಪಕ್ಷಗಳು ಜನರ ನಂಬಿಕೆ, ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲಸ ಮಾಡಿದವು ಎಂದು ಡಿಸಿಎಂ ದೂರಿದರು.

ಉದ್ಯೋಗ ಸೃಷ್ಟಿಯಲ್ಲಿ ಹಿಂದೆ

ರಾಜ್ಯದ ಜಿಡಿಪಿ ಎಷ್ಟು? ಕೈಗಾರಿಕೆಗಳು ಎಷ್ಟು ಬಂದಿವೆ? ಉತ್ಪಾದನೆ- ಉದ್ಯೋಗವೆಷ್ಟು? ಎಂಬ ವಿಷಯಗಳ ಬಗ್ಗೆ ಎಲ್‌ಡಿಎಫ್‌ ಸರಕಾರ ಮಾತನಾಡುತ್ತಿಲ್ಲ. ತ್ರಿಪುರಾ, ಪಶ್ಚಿಮ ಬಂಗಾಳ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಎಡಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ. ಕೇರಳದಲ್ಲೂ ಈ ಚುನಾವಣೆಯಲ್ಲಿ ಜನರು ಅದೇ ಕೆಲಸ ಮಾಡಲಿದ್ದಾರೆ. ದೇವರನಾಡಿನಲ್ಲಿ ಈ ಸಲ ಹೊಸಗಾಳಿ ಬೀಸುತ್ತಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು.

ಕೇರಳದಲ್ಲಿರುವ ಹೊಸ ತಲೆಮಾರಿನ ಯುವಜನರು ಈಗ ಬದಲಾವಣೆ ಬಯಸುತ್ತಿದ್ದಾರೆ. ಅವರಿಗೆ ಗೊತ್ತಿದೆ, ಕಳೆದ ಏಳು ದಶಕಗಳಲ್ಲಿ ಕೇರಳದಲ್ಲಿ ಪ್ರಗತಿ ಆಗಿಲ್ಲ ಎಂದು. ಉದ್ಯೋಗ ಸೃಷ್ಟಿಯಲ್ಲಿ ಇಡೀ ದೇಶದಲ್ಲಿಯೇ ಕೇರಳ ಹಿಂದೆ ಬಿದ್ದಿದೆ. ಇನ್ನು ರಾಜಕೀಯವಾಗಿಯೂ ಎಡಪಕ್ಷಗಳಿಗೆ ಹಾಗೂ ಕಾಂಗ್ರೆಸ್‌ಗೆ ಉತ್ತಮ ನಾಯಕತ್ವ ಇಲ್ಲ. ಬಿಜೆಪಿ ಬಲಿಷ್ಠ ನಾಯಕತ್ವ ಹೊಂದಿರುವ ಸಶಕ್ತ ಪಕ್ಷ. ದೇಶವನ್ನು ಸಮರ್ಥವಾಗಿ ಮುನ್ನಡೆಸಬಲ್ಲ ಶಕ್ತಿ ಬಿಜೆಪಿಗೆ ಮಾತ್ರ ಇದೆ. ಇಂಥ ಸಂದರ್ಭದಲ್ಲಿ ಹೊಸ ಆಲೋಚನೆಗಳುಳ್ಳ ಬಿಜೆಪಿಗೆ ಅವಕಾಶ ಕೊಟ್ಟು ಎಲ್‌ಡಿಎಫ್‌-ಯುಡಿಎಫ್‌ ಕೂಟಗಳನ್ನು ತಿರಸ್ಕರಿಸಬೇಕು ಎಂದು ಡಿಸಿಎಂ ಮನವಿ ಮಾಡಿದರು.

ಪ್ರಗತಿಗೆ ಬಿಜೆಪಿ ಮಾತ್ರ ಆಯ್ಕೆ ಮತ್ತು ಪರಿಹಾರ

ಕೇರಳದಲ್ಲಿ ರಾಜಕಾರಣ ನಿಂತ ನೀರಾಗಿದೆ. ಹೊಸತನ, ದೂರದೃಷ್ಟಿ ಇಲ್ಲದ ರಾಜಕೀಯ ವ್ಯವಸ್ಥೆ ಅಲ್ಲಿದೆ. ಅಲ್ಲೊಂದು ಹೊಸ ಪಕ್ಷ ಆಡಳಿತಕ್ಕೆ ಬರದೇ ಹೋದರೆ ಕೇರಳ ಮತ್ತೆ ಹಿಂದಕ್ಕೆ ಹೋಗುತ್ತದೆ ಎಂದು ಎಚ್ಚರಿಸಿದ ಅವರು; ಗೆದ್ದೆವು, ಸರಕಾರ ಮಾಡಿದೆವು ಎಂದಷ್ಟೇ ಸಾಲದು. ಗುಣಾತ್ಮಕವಾದ ಬದಲಾವಣೆ ತರಬೇಕು. ಅಪಾಯದ ವಿರುದ್ಧ ಈಜಿ ಸುಧಾರಣೆಗಳನ್ನು ಕೈಗೊಳ್ಳಬೇಕು. ಸವಾಲುಗಳನ್ನು ಗೆಲ್ಲಬೇಕು. ಕೇರಳದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಅದೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಬಿಜೆಪಿಗೆ ಅವಕಾಶ ಕೊಡಬೇಕು. ಪ್ರಗತಿ ಎಂದರೆ ಬಿಜೆಪಿ ಮಾತ್ರ ಆಯ್ಕೆ, ಪರಿಹಾರವೂ ಹೌದು. ಕೌಟುಂಬಿಕ, ಅನುವಂಶೀಯ ಆಡಳಿತಕ್ಕೆ ನಮ್ಮ ಪಕ್ಷದಲ್ಲಿ ಅವಕಾಶವೇ ಇಲ್ಲದ ಏಕೈಕ ಪಕ್ಷ ಬಿಜೆಪಿ ಎಂದು ಉಪ ಮುಖ್ಯಮಂತ್ರಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಬೆಂಗಳೂರು ನಗರವನ್ನು ಗಮನಿಸಿ

ಬಿಜೆಪಿ ಸರಕಾರ ಬಂದ ಮೇಲೆ ಬೆಂಗಳೂರು ಯಾವ ದಿಕ್ಕಿನಲ್ಲಿ ಪ್ರಗತಿ ಹೊಂದುತ್ತಿದೆ ಎಂಬುದನ್ನು ತಾವು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಸರಕಾರ ಬರುವ ತನಕ ಮಹಾರಾಜರ ರೀತಿಯ ಆಳ್ವಿಕೆ ಇತ್ತು. ಆದರೆ ನಮ್ಮ ಪಕ್ಷ ಬಂದ ಮೇಲೆ ಅದೆಲ್ಲವನ್ನೂ ತೊಡೆದು ಹಾಕಲಾಯಿತು. ಸಕಾರಾತ್ಮಕ ಚಿಂತನೆ, ಗುಣಾತ್ಮಕ ಬದಲಾವಣೆ ಮಾತ್ರ ನಮ್ಮ ಅಜೆಂಡಾ ಆಗಿತ್ತು. ಹೀಗಾಗಿ ಬೆಂಗಳೂರು ಮತ್ತಷ್ಟು ಹುರುಪಿನಿಂದ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

Tags: assembly electionbjpdr cn ashwath narayanelection 2021keralaldfudf
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

Leave a Reply Cancel reply

Your email address will not be published. Required fields are marked *

Recommended

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ಆಸ್ಪತ್ರೆಗಳು ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ I ಶೀಘ್ರದಲ್ಲಿಯೇ 1 ಕೋಟಿ RAT & RTPCR ಕಿಟ್ ಖರೀದಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ಆಸ್ಪತ್ರೆಗಳು ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ I ಶೀಘ್ರದಲ್ಲಿಯೇ 1 ಕೋಟಿ RAT & RTPCR ಕಿಟ್ ಖರೀದಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

5 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ರಾಷ್ಟ್ರಪತಿಗಳ ಬಗ್ಗೆ ಏಕವಚನಕ್ಕೆ ಸಿಎಂ ವಿಷಾದ; ಇಷ್ಟು ಸಾಲದು ಎಂದ ಹೆಚ್.ಡಿ.ಕುಮಾರಸ್ವಾಮಿ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ