• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

cknewsnow desk by cknewsnow desk
March 1, 2021
in COVID-19, NATION, STATE
Reading Time: 1 min read
0
ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ
916
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ಬಂದಿದ್ದು, ಇಂದಿನಿಂದ (ಮಾರ್ಚ್ 1) ದೇಶದ ಉದ್ದಗಲಕ್ಕೂ 2ನೇ ಸುತ್ತಿನ ಲಸಿಕಾ ಅಭಿಯಾನ ಆರಂಭವಾಯಿತು.

ಬೆಳಗ್ಗೆ 9 ಗಂಟೆ ಹೊತ್ತಿಗೆ ದೇಶಾದ್ಯಂತ ಈ ಅಭಿಯಾನ ಆರಂಭವಾಗಿದ್ದು, ಅದಕ್ಕೆ ಕೆಲ ಹೊತ್ತಿನ ಮೊದಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡನೇ ಸುತ್ತಿನ ಲಸಿಕೆ ಅಭಿಯಾನದಲ್ಲಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು. ಇದರೊಂದಿಗೆ ಎರಡನೇ ಸುತ್ತಿನ ಲಸಿಕೆ ಅಭಿಯಾನ ವಿಧ್ಯುಕ್ತವಾಗಿ ಆರಂಭವಾಯಿತು.

ಬೆಳಗ್ಗೆಯೇ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿಗೆ ಪುದುಚೆರಿ ಮೂಲದ ಸಿಸ್ಟರ್ ಪಿ.ನಿವೇದಿತಾ ಅವರು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು ಹಾಕಿದರು. ಈ ಸಂದರ್ಭದಲ್ಲಿ ಲಸಿಕೆ ನೀಡುವ ವಿಧಾನ, ಏಮ್ಸ್‌ನಲ್ಲಿ ಮಾಡಿರುವ ವ್ಯವಸ್ಥೆಗಳನ್ನು ಕ್ಲುಪ್ತವಾಗಿ ಪಿಎಂ ಪರಿಶೀಲನೆ ಮಾಡಿದರು. ಲಸಿಕೆ ಪಡೆದ ನಂತರ, ತಮಗೆ ಲಸಿಕೆ ಹಾಕಿದ ಸಿಸ್ಟರ್‌ಗೆ ಹಾಗೂ ಅಲ್ಲಿನ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

ಇದಾದ ಮೇಲೆ ಟ್ವೀಟ್‌ ಮಾಡಿದ ಪ್ರಧಾನಿ, “ಕೋವಿಡ್-19 ವಿರುದ್ಧ ಜಗತ್ತಿನೆಲ್ಲಡೆ ಹೋರಾಡಲು ಸೂಕ್ತ ಸಮಯದಲ್ಲಿ ಹಾಗೂ ಕ್ಷಿಪ್ರವಾಗಿ ನಮ್ಮ ವಿಜ್ಞಾನಿಗಳು ಮತ್ತು ವೈದ್ಯರು ಕೆಲಸ ಮಾಡಿದ್ದಾರೆ. 2ನೇ ಸುತ್ತಿನಲ್ಲಿ ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಿ. ನಾವೆಲ್ಲರೂ ಒಟ್ಟು ಸೇರಿ ಕೋವಿಡ್ ಮುಕ್ತ ಭಾರತ ನಿರ್ಮಿಸೋಣ” ಎಂದು ಬರೆದಿದ್ದಾರೆ. ಕೆಲ ಹೊತ್ತಿನಲ್ಲಿಯೇ ಸಾವಿರಾರು ಟ್ವಿಟ್ಟಿಗರು ಮೋದಿ ಟ್ವೀಟ್‌ ಅನ್ನು ಲೈಕ್‌ ಮಾಡಿ ರೀ ಟ್ವೀಟ್‌ ಮಾಡಿದರು.

Took my first dose of the COVID-19 vaccine at AIIMS.

Remarkable how our doctors and scientists have worked in quick time to strengthen the global fight against COVID-19.

I appeal to all those who are eligible to take the vaccine. Together, let us make India COVID-19 free! pic.twitter.com/5z5cvAoMrv

— Narendra Modi (@narendramodi) March 1, 2021

60 ವರ್ಷಕ್ಕಿಂತಲೂ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಆನಾರೋಗ್ಯ ಸಮಸ್ಯೆಗಳನ್ನು ಹೊಂದಿರುವವರಿಗೆ ಇಂದಿನಿಂದ ಲಸಿಕೆ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಬೆಳಗ್ಗೆ 9 ಗಂಟೆಯಿಂದಲೇ https://www.cowin.gov.in/ ಪೋರ್ಟಲ್‌ನಲ್ಲಿ ನೋಂದಣಿ ಆರಂಭವಾಗಲಿದೆ. ಕೋ–ವಿನ್ ಆ್ಯಪ್‌ ಅಥವಾ ಆರೋಗ್ಯ ಸೇತು ಆ್ಯಪ್‌ ಮೂಲಕವೂ ಲಸಿಕೆ ಪಡೆಯುವ ಸಮಯವನ್ನು ಯಾವುದೇ ಸಮಯದಲ್ಲೂ, ಯಾವುದೇ ಸ್ಥಳದಿಂದಲೂ ಕಾದಿರಿಸಬಹುದು. ಕೇಂದ್ರ ಆರೋಗ್ಯ ಸಚಿವಾಲಯ ನೀಡುರವ ಮಾಹಿತಿಯಂತೆ, 60 ವರ್ಷ ಮೇಲ್ಪಟ್ಟವರು ಹಾಗೂ 2022 ಜನವರಿ 1ಕ್ಕೆ 60 ವರ್ಷ ತುಂಬುವವರು ಲಸಿಕೆ ನೋಂದಣಿಗೆ ಅರ್ಹರಾಗಿದ್ದಾರೆ.

ಇನ್ನು; ಇತರೆ ಯಾವುದೇ ಕಾಯಿಲೆಗಳನ್ನು ಹೊಂದಿರುವ, 2022 ಜನವರಿ 1ಕ್ಕೆ 45 ವರ್ಷ ತುಂಬುವವರು ಇಲ್ಲವೇ ಈಗಾಗಲೇ 45 ದಾಟಿದವರು ಕೂಡ ನೋಂದಣಿಗೆ ಅರ್ಹರಾಗಿರುತ್ತಾರೆ. ಈ ಎಲ್ಲ ಮಾಹಿತಿಯನ್ನು ಈಗಾಗಲೇ ಕೇಂದ್ರ ಸರಕಾರ ಎಲ್ಲ ರಾಜ್ಯಗಳ ಜತೆ ಹಂಚಿಕೊಂಡಿದೆ.

ನೋಂದಣಿ ಮಾಡಿಕೊಳ್ಳುವುದು ಹೇಗೆ?

ಒಂದು ಮೊಬೈಲ್‌ ಸಂಖ್ಯೆ ನೀಡಿ ಗರಿಷ್ಠ ನಾಲ್ವರು ನೋಂದಣಿ ಮಾಡಿಕೊಳ್ಳಬಹುದು. ಆಧಾರ್‌, ವೋಟರ್‌ ಐಡಿ, ಪಾಸ್‌ಪೋರ್ಟ್‌, ಪ್ಯಾನ್‌ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್, ಎನ್‌ಪಿಆರ್‌ ಸ್ಮಾರ್ಟ್‌ಕಾರ್ಡ್‌ ಹಾಗೂ ಫೋಟೋವುಳ್ಳ ನಿವೃತ್ತಿ ವೇತನದ ಪತ್ರವಿದ್ದರೂ ಸಾಕು, ನೋಂದಣಿ ಮಾಡಬಹುದು. ದೇಶಾದ್ಯಂತ ಕೇಂದ್ರ ಸರಕಾರವು 8,600ಕ್ಕೂ ಹೆಚ್ಚು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದೆ.

Tags: covid vaccine registrationCOVID-19 vaccinekarnatakanarendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

Leave a Reply Cancel reply

Your email address will not be published. Required fields are marked *

Recommended

ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

ನೀಟ್: ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

4 years ago
ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಬಾಗೇಪಲ್ಲಿಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತ ಶಾಲಾ ಬಾಲಕಿ!!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ