• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

1999ರಲ್ಲಿ ಎಸ್.ಎಂ.ಕೃಷ್ಣ ಪಾಂಚಜನ್ಯ ಮೊಳಗಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು, ಈಗ ನಾನು ಮೊಳಗಿಸುತ್ತೇನೆ ಎಂದ ಡಿ.ಕೆ.ಶಿವಕುಮಾರ್‌

cknewsnow desk by cknewsnow desk
March 1, 2021
in KOLAR, STATE
Reading Time: 1 min read
0
1999ರಲ್ಲಿ ಎಸ್.ಎಂ.ಕೃಷ್ಣ ಪಾಂಚಜನ್ಯ ಮೊಳಗಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು, ಈಗ ನಾನು ಮೊಳಗಿಸುತ್ತೇನೆ ಎಂದ ಡಿ.ಕೆ.ಶಿವಕುಮಾರ್‌
926
VIEWS
FacebookTwitterWhatsuplinkedinEmail

ನಮ್ಮಲ್ಲಿ ಸಿಎಂ ಪದವಿಗೆ ಪೈಪೋಟಿ ಇಲ್ಲ; ಮೈಸೂರು ಬಿಕ್ಕಟ್ಟು ಸಣ್ಣ ಸಮಸ್ಯೆ

ಮುಳಬಾಗಿಲು: ರಾಜ್ಯ ಕಾಂಗ್ರೆಸ್‌ಗೆ ಚೈತನ್ಯ ನೀಡಲು ನಾಡಿನ ದೇವಮೂಲೆಯಿಂದಲೇ ಕೆಲಸ ಆರಂಭ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸೋಮವಾರ ಬೆಳಗ್ಗೆ ಕುರುಡುಮಲೆಯ ಐತಿಹಾಸಿಕ ಮಹಾ ಗಣಪತಿಗೆ ವಿಶೇಷ ಪೂಜೆ ಸಲ್ಲಿದರು.

ಬೆಂಗಳೂರಿಗೆ ಹತ್ತಿರವೂ, ಒಂದ ಕಾಲದಲ್ಲಿ ಕಾಂಗ್ರೆಸ್‌ ಅಬೇಧ್ಯ ಕೋಟೆಯಾಗಿದ್ದ ಕೋಲಾರದಿಂದಲೇ ತಮ್ಮ ಕೆಲಸವನ್ನು ಶುರು ಮಾಡಿರುವ ಡಿಕೆಶಿ, ಕುರುಡುಮಲೆಯಲ್ಲಿ ಪೂಜೆ ಸಲ್ಲಿಸಿದ ನಂತರ ಮುಳಬಾಗಿಲಿನ ಖಾದರ್ ಆಲಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಜಿಲ್ಲೆಗೆ ಬರುವ ಮುನ್ನ ಕರಾರುವಕ್ಕಾದ ಪ್ಲ್ಯಾನ್‌ ಮೂಲಕವೇ ಬಂದ ಡಿಕೆಶಿ, ಯಾರಿಗೆ ಯಾವ ಸಂದೇಶ ಮುಟ್ಟಿಸಬೇಕೋ ಅದನ್ನು ಮಾಡಿದರು. ತಮ್ಮ ಭೇಟಿಯ ಕಾಲಕ್ಕೆ ಜಿಲ್ಲೆಯ ಎಲ್ಲ ಮುಖಂಡರು ಜತೆಯಲ್ಲಿ ಇರುವಂತೆ ನೋಡಿಕೊಂಡರಲ್ಲದೆ, ಪಕ್ಷ ಬಲಪಡಿಸಬೇಕಾದರೆ ಒಗ್ಗಟ್ಟು ಬಹಳ ಮುಖ್ಯ ಎಂಬುದನ್ನು ನಾಯಕರಿಗೆ ಮನದಟ್ಟು ಮಾಡಿಕೊಟ್ಟರು.

ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಸೇರಿದಂತೆ ಜಿಲ್ಲೆಯ ಬಹುತೇಕ ಎಲ್ಲ ಮುಖಂಡರು ಡಿಕೆಶಿ ಜತೆಯಲ್ಲಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರೂ ಈ ಸಂದರ್ಭದಲ್ಲಿದ್ದರು.

ಇದಾದ ಮೇಲೆ ಡಿಕೆಶಿ ಅವರು ಮುಳಬಾಗಿಲಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಹೀಗೆ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಪಕ್ಷದಲ್ಲಿ ಗೊಂದಲ ಇಲ್ಲ

ಮುಳಬಾಗಿಲಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಕೆಶಿ; “ಪಕ್ಷದಲ್ಲಿ ಯಾವುದೇ ಗೊಂದಲ, ಭಿನ್ನಮತ ಇಲ್ಲ. ಮನೆ ಎಂದ ಮೇಲೆ ಸಣ್ಣಪುಟ್ಟ ಅಸಮಾಧಾನ ಇರುತ್ತದೆ. ನಮ್ಮಲ್ಲೂ ಅಷ್ಟೇ” ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿಗೇರಲು ಕಾಂಗ್ರೆಸ್‌ನಲ್ಲಿ ಪೈಪೋಟಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಅದೆಲ್ಲವೂ ಸುಳ್ಳು. ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನಮ್ಮ ಗುರಿ. ಇನ್ನು, ರಾಜ್ಯದಲ್ಲಿ ಮುಂದೆ ಬಿಜೆಪಿ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ. ಬಿಜೆಪಿಯ ದುರಾಡಳಿತಕ್ಕೆ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಖಂಡಿತವಾಗಿಯೂ ಅಧಿಕಾರಕ್ಕೆ ಬರುತ್ತದೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವನ್ನು ಡಿ.ಕೆ.ಶಿವಕುಮಾರ್‌ ವ್ಯಕ್ತಪಡಿಸಿದರು.

ಎಲ್ಲೆಲ್ಲಿ ಪಕ್ಷ ದುರ್ಬಲವಾಗಿದೆಯೋ ಅಲ್ಲೆಲ್ಲ ಪಕ್ಷವವನ್ನು ಬಲಪಡಿಸಲಾಗುವುದು. ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೂ ನಾನು ಹೋಗುತ್ತೇನೆ. 1999ರಲ್ಲಿ ಎಸ್.ಎಂ.ಕೃಷ್ಣ ಅವರು ಪಾಂಚಜನ್ಯ ಮೊಳಗಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರು. ನಾನು ಕೂಡ ಪಾಂಚಜನ್ಯ ಮೊಳಗಿಸಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಸಹಕಾರದೊಂದಿಗೆ ಕೆಲಸ ಮಾಡುತ್ತೇನೆ ಎಂದು ಡಿಕೆಶಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮೈಸೂರು ಸಮಸ್ಯೆ ಚಿಕ್ಕದು

ಮೈಸೂರು ಪಾಲಿಕೆಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆ ತೀರಾ ಚಿಕ್ಕದು. ಅದನ್ನು ಸರಿ ಮಾಡಲಾಗುವುದು ಎಂದು ಡಿಕೆಶಿ, ಸ್ಥಳೀಯ ಮಟ್ಟದಲ್ಲಿ ಈ ರೀತಿಯ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಅವೆಲ್ಲವನ್ನೂ ಪಕ್ಷದ ಒಳಗೆ ಸರಿ ಮಾಡಿಕೊಳ್ಳುತ್ತೇವೆ ಎಂದರು.

ಕೆಲ ವಿಚಾರಗಳನ್ನು ಮುಕ್ತವಾಗಿ ಹೇಳಲಾಗದು. ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರು ಮೈಸೂರು ಪಾಲಿಕೆ ಮೈತ್ರಿ ವಿಚಾರವಾಗಿ ನನಗೆ ಮೊಬೈಲ್‌ ಕರೆ ಮಾಡಿದ್ದರು. ಅದು ನಿಜ. ಹಿಂದೆ ಅವರು ಮಾತು ಕೊಟ್ಟಿದ್ದ ಹಾಗೆ ಈ ಬಾರಿಯೂ ಮೈತ್ರಿಯನ್ನು ಮುಂದುವರಿಸಿ ಮೇಯರ್‌ ಪಟ್ಟವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕಿತ್ತು. ಆ ವಚನವನ್ನು ಅವರು ಪಾಲಿಸಬೇಕಿತ್ತು, ಉಳಿದಂತೆ ಈ ಬಗ್ಗೆ ಮೈಸೂರಿನ ತನ್ವೀರ್‌ ಸೇಠ್‌ ಅವರ ಜತೆ ಮಾತುಕತೆ ನಡೆಸುತ್ತೇನೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

Tags: CongressDK Shivakumarkarnatakakolarkpccmulbagal
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಜೂನ್‌ 21ರಿಂದ ಜುಲೈ 5ರವರೆಗೆ ಪರೀಕ್ಷೆ; ಸಮಯವಿದೆ, ಚೆನ್ನಾಗಿ ಓದಿ ಎಂದು ಮಕ್ಕಳಿಗೆ ಧೈರ್ಯ ತುಂಬಿದ ಸಚಿವ ಸುರೇಶ್‌ ಕುಮಾರ್‌

Leave a Reply Cancel reply

Your email address will not be published. Required fields are marked *

Recommended

11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

11 ಸಲ ಕಾಲ್‌ ಮಾಡಿದ ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

4 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ