• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು

cknewsnow desk by cknewsnow desk
March 2, 2021
in STATE, TECH
Reading Time: 2 mins read
0
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು
911
VIEWS
FacebookTwitterWhatsuplinkedinEmail

ಬೆಂಗಳೂರು: ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಅನಾವರಣಗೊಳಿಸಿದರು.

ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರುವ ಈ ನೀತಿಯನ್ನು ಇಡೀ ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಮೊತ್ತ ಮೊದಲ ಬಾರಿಗೆ ರೂಪಿಸಿ ಅಳವಡಿಸಿಕೊಳ್ಳುತ್ತಿದೆ ಎಂದು ನೀತಿಯನ್ನು ಅನಾವರಣಗೊಳಿಸಿದ ನಂತರ ಉಪ ಮುಖ್ಯಮಂತ್ರಿಗಳು ಹೇಳಿದರು.

ನಮ್ಮ ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು 2018ರಿಂದ ವಾರ್ಷಿಕವಾಗಿ ಸರಾಸರಿ 12.8% ಬೆಳವಣಿಗೆ ಸಾಧಿಸುತ್ತಿದೆ. ಇದೇ ವೇಳೆ ಈ ವಲಯದ ಮೇಲಿನ ಜಾಗತಿಕ ವೆಚ್ಚವು 2025ರ ಹೊತ್ತಿಗೆ 2 ಟ್ರಿಲಿಯನ್ ಡಾಲರ್‌ಗಳಷ್ಟಾಗುವ ಅಂದಾಜಿದ್ದು, ಈ ವಹಿವಾಟು ಅವಕಾಶಗಳಿಗೆ ಅನುಗುಣವಾಗಿ ರಾಜ್ಯವನ್ನು ಸಜ್ಜುಗೊಳಿಸುವ ಉದ್ದೇಶವನ್ನು ಈ ಕಾರ್ಯನೀತಿ ಹೊಂದಿದೆ ಎಂದು ಅವರು ಹೇಳಿದರು.

ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಂಸ್ಥೆ (ಕಿಟ್ಸ್), ನ್ಯಾಸ್‌ಕಾಂನ ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ರೂಪಿಸಿರುವ ಕಾರ್ಯನೀತಿ ಇದಾಗಿದೆ‌ ಎಂದ ಡಿಸಿಎಂ; ಇದರ ವ್ಯಾಪ್ತಿಯಲ್ಲಿ ಅನೇಕ ವಲಯಗಳನ್ನು ಸೇರಿಸಿಕೊಂಡು ಮುನ್ನಡೆಯಲಾಗುವುದು ಎಂದರು.

A new chapter in the enhancement of R&D in Karnataka!

Delighted that Engineering R&D Policy 2021 has been launched in partnership with @nasscom in the presence of @kris_sg, Chairman, IT Vision Group, T.M.Vijay Bhaskar, Chairman, KAR, and officials from @ITBTGoK.

1/11 pic.twitter.com/vgQlBBsVEl

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) March 2, 2021

ಕ್ಷೇತ್ರಗಳು ಯಾವುವು?

  • ವೈಮಾಂತರಿಕ್ಷ ಮತ್ತು ರಕ್ಷಣೆ
  • ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನಗಳು
  • ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣಗಳು/ಸಾಧನಗಳು
  • ಅರೆವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.)
  • ಸಾಫ್ಟ್‌ವೇರ್ ಉತ್ಪನಗಳು

ಇವು ಈ ಕಾರ್ಯನೀತಿಯ ಐದು ಆದ್ಯತಾ ವಲಯಗಳಾಗಿವೆ. ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಅನುಷ್ಟಾನದ ನಂತರ ಮೇಲಿನ ಎಲ್ಲ ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶಗಳನ್ನು ಹಾಗೂ ಮುನ್ನಡೆಯನ್ನು ಕಾಣಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಜ್ಞಾನಕಾಶಿಯಾಗಿಸಲು ಸಹಕಾರಿ

400ಕ್ಕೂ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳು/ಜಿಸಿಸಿಗಳು ರಾಜ್ಯದಲ್ಲಿದ್ದು ದೇಶದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಉದ್ಯಮದಲ್ಲಿ ಅತ್ಯಂತ ಹೆಚ್ಚಿನ ಕೊಡುಗೆ ನೀಡುತ್ತಿದೆ.  ಈ ಅಗ್ರ ಶ್ರೇಯಾಂಕವನ್ನು ಕಾಯ್ದುಕೊಳ್ಳುವ ಗುರಿ ನಮಗಿದ್ದು, ಬೌದ್ಧಿಕ ಸ್ವತ್ತುಗಳ ಸೃಷ್ಟಿ ಹಾಗೂ ರಾಜ್ಯವನ್ನು ಕೌಶಲಯುಕ್ತ ಜ್ಞಾನಕಾಶಿಯಾಗಿಸಲು ಇದು ಸಹಕಾರಿ ಆಗುತ್ತದೆ ಎಂದು ಡಿಸಿಎಂ ವಿವರಿಸಿದರು.
.
ಅತ್ಯಂತ ಪರಿಣಾಮಕಾರಿ ಒಳನೋಟದಿಂದ ಕೂಡಿದ ನೀತಿ ಇದಾಗಿದೆ. ಉದ್ಯಮ ಪ್ರಚಲಿತ ಸ್ಥಿತಿಗತಿಗಳನ್ನು ಅವಲೋಕನ ಮಾಡಿ, ಅದಕ್ಕೆ ತಕ್ಕಂತೆ ಇದನ್ನು ರೂಪಿಸಲಾಗಿದೆ. ರಾಜ್ಯವು ಬಹುರಾಷ್ಟ್ರೀಯ ಕಂಪನಿಗಳ ಪ್ರಶಸ್ತ ಆದ್ಯತೆಯ ತಾಣವನ್ನಾಗಿಸಲು ಈ ನೀತಿ ಅನುವು ಮಾಡಿಕೊಡಲಿದೆ. ಜಾಗತಿಕ ಮುಂಚೂಣಿ ಇ.ಆರ್.&ಡಿ ಕಂಪನಿಗಳು, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಎಂಜಿನಿಯರಿಂಗ್ ಸೇವಾದಾತರು ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೂಡಿಕೆ ಮಾಡುವಂತೆ ಮಾಡುವುದು ಹಾಗೂ ಹಾಗೆ ಬರುವ ಘಟಕಗಳಿಗೆ ರಾಜ್ಯದಲ್ಲಿ ಸೂಕ್ತ ವಾತಾವರಣ ನಿರ್ಮಿಸಬೇಕು ಎಂಬುದು ಈ ನೀತಿ ಗುರಿ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.


ಎಂಜಿನಿಯರಿಂಗ್ ಸಂಶೋಧನೆ – ಅಭಿವೃದ್ಧಿ ನೀತಿ-2021; ಏನು? ಎತ್ತ?

ಈಗ ಅನಾವರಣಗೊಂಡಿರುವ ಈ ನೀತಿಯ ಕಾರ್ಯಸೂಚಿ, ಉದ್ದೇಶಗಳು, ಉಪಯೋಗ, ಇನ್ನಿತರೆ ಅಂಶಗಳ ಬಗ್ಗೆ ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದು ಹೀಗೆ;

  • ನೀತಿಯ ಉದ್ದೇಶ
  • ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವೆ ಸಂಪರ್ಕಗಳನ್ನು ಸೃಷ್ಟಿಸುವುದು.
  • ಕೌಶಲಯುಕ್ತ ಎಂಜಿನಿಯರಿಂಗ್ ಮಾನವ ಸಂಪನ್ಮೂಲ ಸೃಷ್ಟಿಸುವುದು.
  • ಪರೀಕ್ಷೆ, ಪ್ರಾಯೋಗಿಕ ಮಾದರಿ ಹಾಗೂ ಇತರ ನಾವೀನ್ಯತಾ ಮೂಲಸೌಕರ್ಯಗಳ ಸೃಷ್ಟಿ.
  • ಬೆಂಗಳೂರು ವ್ಯಾಪ್ತಿಯಾಚೆ ಎಂಜಿನಿಯರಿಂಗ್ ಆರ್&ಡಿ ಉದ್ಯಮ ಬೆಳೆಸುವುದು
  • ನೀತಿಯ ಉಪಯೋಗ
  • ದೇಶದ ಎಂಜಿನಿಯರಿಂಗ್ ಮತ್ತು ಅಭಿವೃದ್ಧಿ ವಹಿವಾಟನಲ್ಲಿ ಕರ್ನಾಟಕದ ಶೇ.45ರಷ್ಟು ಕೊಡುಗೆಗೆ ಅನುವು ಮಾಡಿಕೊಡುವುದು.
  • 50,000 ಕೌಶಲಯುಕ್ತ ಉದ್ಯೋಗಗಳನ್ನು (ಪ್ರತ್ಯಕ್ ಹಾಗೂ ಪರೋಕ್ಷ) ಸೃಷ್ಟಿಸುವುದು.
  • ಎಂಜಿನಿಯರಿಂಗ್ ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಆಕರ್ಷಿಸುವುದು.
  • ಎಂಜಿನಿಯರಿಂಗ್/ಸಂಶೋಧನಾ ಪ್ರತಿಭಾ ಸಂಪನ್ಮೂಲ ಹಾಗೂ ಉದ್ಯಮದ ಅಗತ್ಯಗಳ ಅಂತರ ತುಂಬುವುದು.
  • ಪ್ರೋತ್ಸಾಹಕ ಕ್ರಮ
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಬಾಡಿಗೆ ಮರುಪಾವತಿ.
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ನೇಮಕಾತಿಗೆ ನೆರವು.
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಹೂಡಿಕೆಗೆ ಸಬ್ಸಿಡಿ.
  • ನಾವೀನ್ಯತಾ ಪ್ರಯೋಗಾಲಯಗಳ ಸ್ಥಾಪನೆಗೆ ಹಣಕಾಸು ನೆರವು.
  • ಡಿಜಿಟಲ್ ನಾವೀನ್ಯತಾ ಕಾರ್ಯಯೋಜನೆಗಳಿಗೆ ರೂ.3 ಕೋಟಿಯವರೆಗೆ ನೆರವು.
  • ಶೈಕ್ಷಣಿಕ ವಲಯದ ಸಂಶೋಧನೆಗಳನ್ನು ಔದ್ಯಮಿಕ ಆನ್ವಯಿಕತೆಯಾಗಿ ಪರಿವರ್ತಿಸಲು ಅನುದಾನ.
  • ಭವಿಷ್ಯದ ಇ.ಆರ್. ಮತ್ತು ಡಿ ಕೋರ್ಸುಗಳನ್ನು ರೂಪಿಸಲು ನೆರವು.
  • ಶೈಕ್ಷಣಿಕ ಕೌಶಲಗಳು ಹಾಗೂ ಉದ್ಯಮಗಳ ನಡುವಿನ ಅಂತರ ತುಂಬಲು ಇಂಟರ್ನಶಿಪ್ ಉತ್ತೇಜಿಸಲು ಸ್ಟೈಪೆಂಡ್ ನೀಡುವುದು ಇತ್ಯಾದಿ.
  • ಇ.ಆರ್.ಅಂಡ್ ಡಿ ವಲಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಉತ್ತೇಜನ.
  • ಪಿಎಚ್.ಡಿ. ಮಾಡುವವರಿಗೆ ಮುಖ್ಯಮಂತ್ರಿಯವರ ಸಂಶೋಧನಾ ಅನುದಾನ.

ರಾಜ್ಯದ ಮಾಜಿ ಮುಖ್ಯಕಾರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್, ಐಟಿ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನ್ಯಾಸ್‌ಕಾಂ ಅಧ್ಯಕ್ಷೆ ದೇಬ್‌ಜಾನಿ ಘೋಷ್ ಅವರುಗಳ ನೀತಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಪ್ರಸಕ್ತ ನೀತಿಯಿಂದ ರಾಜ್ಯಕ್ಕೆ-ದೇಶಕ್ಕೆ ಆಗಲಿರುವ ಪ್ರಯೋಜನಗಳ ಬಗ್ಗೆ ಬೆಳಕು ಚೆಲ್ಲಿದರು,

ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು ನೀತಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯದ ನ್ಯಾಸ್‌ಕಾಂ ಮುಖ್ಯಸ್ಥ ವಿಶ್ವನಾಥನ್‌, ಕ್ವೆಸ್ಟ್ ಗ್ಲೋಬಲ್ ಅಧ್ಯಕ್ಷ ಡಾ.ಅಜಯ್ ಪ್ರಭು, ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

Tags: dr cn ashwath narayanengineering r and d policy programer & d-policykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು

ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ, ಕೈಗಾರಿಕೆ-ಉದ್ಯೋಗ ಪೂರಕ ಶಿಕ್ಷಣ; ರಾಜ್ಯದ 150 ಐಟಿಐಗಳ ಆಮೂಲಾಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚ

Leave a Reply Cancel reply

Your email address will not be published. Required fields are marked *

Recommended

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

3 ವರ್ಷದಿಂದ ಒಂದೇ ಜಾಗದಲ್ಲಿ ಝಾಂಡ ಹೂಡಿರುವ ಅಧಿಕಾರಿ, ನೌಕರರ ವರ್ಗಾವಣೆ

1 year ago
ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌

ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ; ಆರ್ಥಿಕ ಸಂಕಷ್ಟವಿದ್ದರೂ ಆರೋಗ್ಯ ಕ್ಷೇತ್ರಕ್ಕೆ ಕಾಯಕಲ್ಪ ಎಂದ ಸಚಿವ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ