• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ, ಕೈಗಾರಿಕೆ-ಉದ್ಯೋಗ ಪೂರಕ ಶಿಕ್ಷಣ; ರಾಜ್ಯದ 150 ಐಟಿಐಗಳ ಆಮೂಲಾಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚ

cknewsnow desk by cknewsnow desk
March 2, 2021
in STATE, TECH
Reading Time: 1 min read
0
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು
950
VIEWS
FacebookTwitterWhatsuplinkedinEmail

ಬೆಂಗಳೂರು: ಕೈಗಾರಿಕೆ ತರಬೇತಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ರಾಜ್ಯದಲ್ಲಿನ  150 ಐಟಿಐ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು 5,000 ಕೋಟಿ ರೂ.ಗಳನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ʼ ಯನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು; “ಕೇವಲ ಅಕೆಡಿಮಿಕ್‌ ಶಿಕ್ಷಣಕ್ಕೆ ಒತ್ತು ಕೊಡುವುದಲ್ಲ, ಕೈಗಾರಿಕೆ ಹಾಗೂ ಪ್ರಗತಿಗೆ ಪೂರಕವಾದ ಕೈಗಾರಿಕಾ ತರಬೇತಿ ಶಿಕ್ಷಣಕ್ಕೆ ಸರಕಾರ ಮಹತ್ವ ಕೊಡುತ್ತಿದೆ. ಆ ಮೂಲಕ ಕೈಗಾರಿಕೆಗಳಿಗೆ ಕುಶಲತೆಯುಳ್ಳ ಮಾನವ ಸಂಪನ್ಮೂಲವನ್ನು ಸ್ಥಳೀಯವಾಗಿಯೇ ಒದಗಿಸುವುದು ಗುರಿಯಾಗಿದೆ. ಜ್ಞಾನ ಮತ್ತು ಕುಶಲತೆಯಷ್ಟೇ ನಮ್ಮ ಭವಿಷ್ಯವಾಗಿದೆ. ಈ ಅಂಶವನ್ನು ದೃಷ್ಟಿಯಲ್ಲಿಟ್ಟುಕೊಂಡು ಇಷ್ಟು ಮೊತ್ತದಷ್ಟು ಹಣವನ್ನು ಐಟಿಐ ಸಂಸ್ಥೆಗಳಿಗಾಗಿ ವೆಚ್ಚ ಮಾಡಲಾಗುತ್ತಿದೆ” ಎಂದರು.

ಒಂದೆಡೆ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ನ್ನು ರೂಪಿಸಿರುವ ಬೆನ್ನಲ್ಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತಿದೆ. ಈ ಮೂಲಕ ಇಡೀ ಶಿಕ್ಷಣ ವ್ವವಸ್ಥೆಯೇ ಆಮೂಲಾಗ್ರವಾಗಿ ಬದಲಾವಣೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ

ಹೊಸ ಐಟಿಐ ಸಂಸ್ಥೆಗಳ ಸ್ಥಾಪನೆಯೂ ಸೇರಿದಂತೆ ಈಗಾಗಲೇ ಇರುವ ಎಲ್ಲ ಐಟಿಐಗಳನ್ನು ಜಾಗತಿಕ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಗುಣಮಟ್ಟದ ಬೋಧನೆ-ಕಲಿಕೆಯ ಉದ್ದೇಶವಿಟ್ಟುಕೊಂಡು ಈ ಪ್ರಯತ್ನ ಕೈಗೊಳ್ಳಲಾಗಿದೆ. ಭಾರತೀಯ ಕುಶಲತೆ ಮಾನದಂಡಕ್ಕೆ ತಕ್ಕಂತೆ ಇವೆಲ್ಲ ಮರುರೂಪ ಪಡೆಯಲಿವೆ. ಕೇವಲ ಶೈಕ್ಷಣಿಕ ಸಂಸ್ಥೆಗಳಾಗಿಯೇ ಇವು ಉಳಿದರೆ ಉದ್ಯಮ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದರು ಉಪ ಮುಖ್ಯಮಂತ್ರಿ.

ಎಂಜಿನಿಯರಿಂಗ್‌ ಇಂಟರ್ನ್‌ನ್‌ಶಿಪ್‌ ಅವಧಿ ಹೆಚ್ಚಳ

ಉಳಿದಂತೆ ದಿಪ್ಲೊಮೋ ತರಗತಿಗಳ ಪಠ್ಯವನ್ನು ಆಮೂಲಾಗ್ರವಾಗಿ ಪರಿಷ್ಕರಣೆ ಮಾಡಲಾಗಿದೆ. ಈಗಾಗಲೇ ಮೊದಲ ವರ್ಷದ ವಿದ್ಯಾರ್ಥಿಗಳು ಪರಿಷ್ಕೃತ ಪಠ್ಯದಲ್ಲೇ ಕಲಿಯುತ್ತಿದ್ದಾರೆ. ಇನ್ನು ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಇಂಟರ್ನ್‌ನ್‌ಶಿಪ್‌ ಅವಧಿ 9 ತಿಂಗಳಿನಿಂದ 1 ವರ್ಷಕ್ಕೆ ವಿಸ್ತರಿಸಿ, ಅದನ್ನು ಕೈಗಾರಿಕೆಗಳಲ್ಲಿಯೇ ಮುಗಿಸುವ ಯೋಜನೆ ರೂಪಿಸಲಾಗಿದೆ. ಇದು ಕಡ್ಡಾಯವೂ ಹೌದು.  ವಿದ್ಯಾರ್ಥಿಗಳ ಇಂಟ್ರನ್‌ಶಿಪ್‌ಗೆ ಉದ್ಯಮಿಗಳು ಮುಕ್ತವಾಗಿ ಅವಕಾಶ ನೀಡಬೇಕು ಎಂದು ಡಿಸಿಎಂ ಕೋರಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಡಾ.ಅಶ್ವತ್ಥನಾರಾಯಣ; ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮೊದಲ ಸ್ಥಾನದಲ್ಲೂ ಇದೆ. ಈ ಹಿನ್ನೆಲೆಯಲ್ಲಿ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ʼ ಯನ್ನು ರೂಪಿಸಿ ಲೋಕಾರ್ಪಣೆ ಮಾಡಲಾಗಿದೆ ಎಂದರು.

ರಾಜ್ಯದ್ದು ಶೇ.40ರಷ್ಟು ಪಾಲು

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ರಾಜ್ಯದ ಪಾಲು ಶೇ.40ರಷ್ಟು, ಅಂದರೆ; ದೇಶದಲ್ಲಿ ವಾರ್ಷಿಕ 30 ಶತಕೋಟಿ ಡಾಲರ್‌ ವಹಿವಾಟು ನಡೆಯುತ್ತಿದೆ. ಅದನ್ನು 100 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಹೆಗ್ಗುರಿಯೂ ಸರಕಾರಕ್ಕಿದೆ ಎಂದ ಡಿಸಿಎಂ, ವೈಮಾಂತರಿಕ್ಷ ಮತ್ತು ರಕ್ಷಣೆ, ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನ, ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣ-ಸಾಧನಗಳು, ಅರೆ ವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.) ಹಾಗೂ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಇದಕ್ಕೆ ಪೂರಕವಾಗಿ ಹೊಸ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಕಲ್ಪನೆಯಂತೆ ಈ ನೀತಿ ರೂಪುಗೊಂಡಿದೆ. ನಮಗೆ ಅಗತ್ಯವಾದ ಎಲ್ಲ ವಸ್ತುಗಳನ್ನು ನಮ್ಮಲ್ಲಿಯೇ ಉತ್ಪಾದನೆ ಮಾಡಿಕೊಳ್ಳುವ ಕಾರ್ಯಕ್ರಮ ಇದು. ಎಲ್ಲ ಕ್ಷೇತ್ರದಲ್ಲಿ ಸ್ವಾವಲಂಭನೆ ಸಾಧಿಸಬೇಕು ಎಂಬುದು ಗುರಿಯಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: educationitiiti diploma institutions developmentkarnatakatechnical
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ದೇವಾಲಯಕ್ಕೆ ಢಿಕ್ಕಿ ಹೊಡೆದ ಕ್ಯಾಂಟರ್‌ ಗಾಡಿ, ಸ್ಥಳದಲ್ಲೇ ಕ್ಲೀನರ್‌ ಸಾವು, ಪ್ರಾಣಾಪಾಯದಿಂದ ಚಾಲಕ ಪಾರು

ದೇವಾಲಯಕ್ಕೆ ಢಿಕ್ಕಿ ಹೊಡೆದ ಕ್ಯಾಂಟರ್‌ ಗಾಡಿ, ಸ್ಥಳದಲ್ಲೇ ಕ್ಲೀನರ್‌ ಸಾವು, ಪ್ರಾಣಾಪಾಯದಿಂದ ಚಾಲಕ ಪಾರು

Leave a Reply Cancel reply

Your email address will not be published. Required fields are marked *

Recommended

ಮಳೆಗಾಲದಲ್ಲಿ ಬಾಯಲ್ಲಿ ನೀರೂರಿಸುವ ನೈಸರ್ಗಿಕ ಅಣಬೆ

ಮಳೆಗಾಲದಲ್ಲಿ ಬಾಯಲ್ಲಿ ನೀರೂರಿಸುವ ನೈಸರ್ಗಿಕ ಅಣಬೆ

5 years ago
ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ ಎಂದು ಕೈಜೋಡಿಸಿ ಮನವಿ ಮಾಡಿದ ಮಾಜಿ ಪ್ರಧಾನಿಗಳು

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ