• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಷ್ಟ್ರೀಯ ಶಿಕ್ಷಣ ನೀತಿ; ಕರ್ನಾಟಕದ ವೇಗಕ್ಕೆ ಬೆರಗಾದ ಡಾ.ಕಸ್ತೂರಿ ರಂಗನ್‌, ದೆಹಲಿಯಲ್ಲಿ ನೀತಿ ಪ್ರಕಟಕ್ಕೆ ಮುನ್ನವೇ ರಾಜ್ಯದಲ್ಲಿ ಟಾಸ್ಕ್‌ಪೋರ್ಸ್‌ ರಚನೆಯಾಗಿತ್ತು!

cknewsnow desk by cknewsnow desk
March 2, 2021
in STATE
Reading Time: 2 mins read
0
ರಾಷ್ಟ್ರೀಯ ಶಿಕ್ಷಣ ನೀತಿ; ಕರ್ನಾಟಕದ ವೇಗಕ್ಕೆ ಬೆರಗಾದ ಡಾ.ಕಸ್ತೂರಿ ರಂಗನ್‌, ದೆಹಲಿಯಲ್ಲಿ ನೀತಿ ಪ್ರಕಟಕ್ಕೆ ಮುನ್ನವೇ ರಾಜ್ಯದಲ್ಲಿ ಟಾಸ್ಕ್‌ಪೋರ್ಸ್‌ ರಚನೆಯಾಗಿತ್ತು!
913
VIEWS
FacebookTwitterWhatsuplinkedinEmail

ಡಾ.ಕಸ್ತೂರಿ ರಂಗನ್‌, ಪ್ರೊ.ಸಿ.ಕಾಮೇಶ್ವರ ರಾವ್‌, ನಾಗೇಶ ಹಗಡೆ ಸೇರಿ ಹದಿನಾರಕ್ಕೂ ಹೆಚ್ಚು ವಿಜ್ಞಾನಿಗಳಿಗೆ ಪ್ರಶಸ್ತಿ ಸಮರ್ಪಣೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರದಲ್ಲಿ ಪ್ರಕಟಿಸುವ ಮುನ್ನವೇ ಆ ನೀತಿಯ ಜಾರಿಗೆ ಎಲ್ಲ ರಾಜ್ಯಗಳಿಗಿಂತ ಮೊದಲೇ ಕರ್ನಾಟಕವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಪಡೆಯನ್ನೂ ರಚನೆ ಮಾಡಿಕೊಂಡಿದ್ದರ ಬಗ್ಗೆ ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ.ಕಸ್ತೂರಿ ರಂಗನ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ನೀಡಲಾದ ʼಜೀವಮಾನ ಸಾಧನೆʼ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು; “ನಾವು ದಿಲ್ಲಿಯಲ್ಲಿ ವರದಿಯನ್ನು ಸಿದ್ಧಪಡಿಸಿ ಮಾನವ ಸಂಪನ್ಮೂಲ ಸಚಿವಾಯಲಯಕ್ಕೆ ಸಲ್ಲಿಸಿದ್ದೆವು. ನಂತರ ಎಲ್ಲ ರಾಜ್ಯಗಳಿಗೂ ನೀತಿಯ ಕರಡು ಪ್ರತಿಗಳನ್ನು ಕಳಿಸಿಕೊಡಲಾಯಿತು. ಕರ್ನಾಟಕವು ಕರಡು ಪ್ರತಿ ಸಿಕ್ಕಿದ ಕೂಡಲೇ ಅದನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿತು. ಸಲಹೆ-ಸಹಕಾರ ನೀಡಲು ಕಾರ್ಯಪಡೆಯ್ನೂ ರಚಿಸಿಕೊಂಡಿತು. ಇದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ” ಎಂದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ತರಬೇತುದಾರರ ತರಬೇತಿ ‌ಕೇಂದ್ರವನ್ನು ಉದ್ಘಾಟಿಸಲಾಯಿತು.

ಖ್ಯಾತ ವಿಜ್ಞಾನಿ, ಶಿಕ್ಷಣ ತಜ್ಞ ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಸೇರಿದಂತೆ ವಿಜ್ಞಾನ ಮತ್ತು ತಂತ್ರಜ್ಞಾನ ‌ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿದ ಗಣ್ಯರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

1/2 pic.twitter.com/qcOHxVJCXO

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) March 2, 2021

ತದೇಕ ಚಿತ್ತದಿಂದ ಆಲಿಸಿದ ಸಿಎಂ, ಡಿಸಿಎಂ

ಇದೇ ಸಂದರ್ಭದದಲ್ಲಿ ಒಂದು ಘಟನೆಯನ್ನು ಮೆಲುಕು ಹಾಕಿದ ಅವರು; “ಶಿಕ್ಷಣ ನೀತಿ ದೆಹಲಿಯಲ್ಲಿ ಪ್ರಕಟವಾದ ಮೇಲೆ ನಾನು ಬೆಂಗಳೂರಿಗೆ ವಾಪಸ್ಸಾದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನಮ್ಮ ಮನೆಗೆ ಬಂದರು. ʼಶಿಕ್ಷಣ ನೀತಿಯ ಬಗ್ಗೆ ಹೇಳಿ, ಸರಕಾರ ಏನೆಲ್ಲ ಮಾಡಬಹುದುʼ ಎಂದು ಕೇಳಿದರು. ನಾನು ಅರ್ಧ ಗಂಟೆ ಕಾಲ ಇಡೀ ಶಿಕ್ಷಣ ನೀತಿಯ ಸಾರಾಂಶವನ್ನು ವಿವರಿಸಿದೆ. ಅಷ್ಟೂ ಹೊತ್ತು ತದೇಕಚಿತ್ತದಿಂದ ಆಲಿಸಿದ ಇಬ್ಬರೂ ನಾಯಕರು ಎಲ್ಲೂ ನನ್ನ ಮಾತಿನ ಮಧ್ಯೆ ಮಾತನಾಡಲೇ ಇಲ್ಲ. ನಾನು ಹೇಳಿದ್ದನ್ನು ಕೇಳಿದ ಮೇಲೆ ಯಡಿಯೂರಪ್ಪ ಅವರು, ʼಹೊಸ ಶಿಕ್ಷಣ ನೀತಿ ಬಹಳ ಚೆನ್ನಾಗಿದೆ. ನಾವು ತಪ್ಪದೇ ಜಾರಿ ಮಾಡುತ್ತೇವೆʼ ಎಂದರು. ಇನ್ನು ಅಶ್ವತ್ಥನಾರಾಯಣ ಅವರು, ಶಿಕ್ಷಣ ನೀತಿಯ ಜಾರಿಯ ಬಗ್ಗೆ ಈಗಾಗಲೇ ಕೈಗೊಂಡ ಎಲ್ಲ ಮಾಹಿತಿಯನ್ನು ಹಂಚಿಕೊಂಡರು. ನನಗೆ ಪರಮಾಶ್ಚರ್ಯವಾಯಿತು. ಅವರು ಬಹಳ ವೇಗವಾಗಿ ಹೆಜ್ಜೆಗಳನ್ನಿಡುತ್ತಿದ್ದರು” ಎಂದರು ಕಸ್ತೂರಿ ರಂಗನ್.

ಇಡೀ ಶಿಕ್ಷಣ ನೀತಿಯನ್ನು ಹೇಗೆ ಜಾರಿ ಮಾಡಬೇಕು? ಪ್ರಾಥಮಿಕ ಹಂತ, ಪ್ರೌಢ ಹಂತ, ಕಾಲೇಜು ಹಂತ ಹಾಗೂ ವಿಶ್ವವಿದ್ಯಾಲಯದ ಹಂತಗಳಲ್ಲಿ ಯಾವ ರೀತಿಯಲ್ಲಿ ಜಾರಿ ಮಾಡಬೇಕು ಎಂಬ ಎಲ್ಲ ಸಿದ್ಧತೆಯ ಮಾಹಿತಿಯನ್ನೂ ಅಶ್ವತ್ಥನಾರಾಯಣ ನೀಡಿದರು. ಆಮೇಲೆ ಎಷ್ಟು ವೇಗವಾಗಿ ಪ್ರಕ್ರಿಯೆಗಳು ನಡೆದವು ಎಂದರೆ, ಕಾರ್ಯಪಡೆ ವರದಿ ನೀಡಿದ್ದೂ ಆಯಿತು. ಆ ವರದಿಯನ್ನು ಸಂಪುಟ ಒಪ್ಪಿದ್ದೂ ಆಯಿತು. ಅದಾದ ಮೇಲೆ ಆಡಳಿತಾತ್ಮಕ, ಕಾನೂನಾತ್ಮಕ ಸುಧಾರಣೆಗಳು ಆದವು. ಒಂದು ಸರಕಾರ ಇಷ್ಟು ಕ್ಷಿಪ್ರಗತಿಯಲ್ಲಿ ಕಾರ್ಯೋನ್ಮುಖವಾಗುವುದು ವಿರಳ. ಇದೇ  ಕರ್ನಾಟಕ ಎಂದು ಕಸ್ತೂರಿ ರಂಗನ್‌ ಅವರು ಮುಕ್ತಕಂಠದಿಂದ ಶ್ಲಾಘಿಸಿದರು.

ಶಿಕ್ಷಣ ನೀತಿಯಲ್ಲಿ ಮೂಲ ವಿಜ್ಞಾನಕ್ಕೆ ಒತ್ತು

ಕಾರ್ಯಕ್ರಮದಲ್ಲಿ ಎಲ್ಲ ವಿಜ್ಞಾನಿಗಳಿಗೆ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ; “ಮೂಲ ವಿಜ್ಞಾನ ಬೋಧನೆಯ ಶೈಲಿ ಬದಲಾಗಬೇಕಿದೆ. ಹಾಗೆಯೇ, ಮಕ್ಕಳಿಗೆ ಮೂಲ ವಿಜ್ಞಾನವನ್ನು ಕಲಿಯಲು ಹೆಚ್ಚೆಚ್ಚು ಪ್ರೋತ್ಸಾಹ ನೀಡಬೇಕಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಗುಣಮಟ್ಟದ ಬೋಧನೆ, ಕಲಿಕೆಯ ಜತೆಗೆ ಸಂಶೋಧನೆಗೂ ಹೆಚ್ಚು ಮಹತ್ವ ನೀಡಲಾಗಿದೆ. ಆವಿಷ್ಕಾರ ಕ್ಷೇತ್ರದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಈ ಸ್ಥಾನವನ್ನು ಉಳಿಸಿಕೊಳ್ಳಲು ಶಿಕ್ಷಣ ನೀತಿಯನ್ನು ವೇಗಗತಿಯಲ್ಲಿ ಜಾರಿ ಮಾಡಲಾಗುತ್ತಿದೆ ಎಂದರು ಡಿಸಿಎಂ.

ಇನ್ನು ಹತ್ತು ವರ್ಷಗಳಲ್ಲಿ 150 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ. ವೈಯಕ್ತಿಕವಾಗಿ ಹೇಳುವುದಾದರೆ, ಹತ್ತು ವರ್ಷಗಳಲ್ಲಿ ಎಲ್ಲ ಗುಣಮಟ್ಟದ ಕಾಲೇಜುಗಳು ವಿವಿಗಳಾಗಬೇಕು ಎನ್ನುವುದು ನನ್ನ ಉದ್ದೇಶ. ಮುಂದಿನ ದಿನಗಳಲ್ಲಿ ವಿವಿಗಳಿಗೆ, ಕಾಲೇಜುಗಳಿಗೆ ಮಾನ್ಯತೆ ನೀಡುವ ಅಧಿಕಾರ ರಾಜ್ಯಗಳಿಗೆ ಧಕ್ಕಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಿಕ್ಷಣದ ಸುಧಾರಣೆಗಳ ಪರ್ವವೇ ಆರಂಭವಾಗಲಿದೆ ಎಂದರು ಉಪ ಮುಖ್ಯಮಂತ್ರಿ.

ಇದೇ ವೇಳೆ ಉಪ ಮುಖ್ಯಮಂತ್ರಿಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ತರಬೇತಿ ಸಂಸ್ಥೆಯನ್ನು ಉದ್ಘಾಟಿಸಿದರು. ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಲ್ಲಿ ಅಕಾಡೆಮಿಯ ಅಧ್ಯಕ್ಷ ಪ್ರೊ.ಅಯ್ಯಪ್ಪನ್‌, ಅಕಾಡೆಮಿ ಸಿಇಒ ಡಾ.ರಮೇಶ್‌ ಮುಂತಾದವರು ಪಾಲ್ಗೊಂಡಿದ್ದರು.

Inaugurated the @kstacademy's Trainers' training center today.

Renowned scientist 'Padma Vibhushan' Dr K Kasturirangan & other eminent scientists were honoured with Lifetime Achievement Awards for their invaluable contribution to science & technology.

1/2 pic.twitter.com/zjy7nPCExT

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) March 2, 2021


ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳು

ಪ್ರೊ.ಸಿ.ಎನ್.ಆರ್.ರಾವ್ ಜೀವಮಾನ ಸಾಧನೆ ಪ್ರಶಸ್ತಿ (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌, ಕೃಷಿ, ವೈದ್ಯಕೀಯ)

  • *ಪದ್ಮವಿಭೂಷಣ ಡಾ.ಕೆ.ಕಸ್ತೂರಿ ರಂಗನ್
  • ಪದ್ಮಶ್ರೀ ಡಾ.ಗೋಡ್‌ಬಳೆ ರೋಹಿಣಿ ಮಧುಸೂಧನ್ (ಹಾಜರಿರಲಿಲ್ಲ)
  • ಪದ್ಮಭೂಷಣ ಡಾ.ಎಂ.ಮಹಾದೇವಪ್ಪ
  • ಪ್ರೊ.ಸಿ.ಕಾಮೇಶ್ವರ ರಾವ್‌

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಜೀವಮಾನ ಸಾಧನೆ ಪ್ರಶಸ್ತಿ (ವಿಜ್ಞಾನ- ಕನ್ನಡದಲ್ಲಿ ಬರವಣಿಗೆ)

  • ನಾಗೇಶ್‌ ಹೆಗಡೆ
  • ಡಾ.ಸಿ.ಆರ್.ಚಂದ್ರಶೇಖರ್‌

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಗೌರವ ಫೆಲೋಶಿಫ್

  • ಡಾ.ಕೆ.ವಿ. ಪ್ರಭು: ಕೃಷಿ ವಿಜ್ಞಾನ (ಹಾಜರಿರಲಿಲ್ಲ)
  • ಡಾ,ಎನ್.ಕೆ.ನಂದಕುಮಾರ್‌: ಕೃಷಿ ವಿಜ್ಞಾನ (ಹಾಜರಿರಲಿಲ್ಲ)
  • ಡಾ.ಟಿ.ಶಿವಾನಂದಪ್ಪ: ಪಶು ವಿಜ್ಞಾನ
  • ಡಾ.ರಾಮಕೃಷ್ಣ: ಪಶು ವಿಜ್ಞಾನ
  • ಪ್ರೊ.ಬಿ.ವೆಂಕಟೇಶ್:‌ ಬಯೋ ಕೆಮಿಸ್ಟ್ರಿ, ಬಯೋ ಫಿಸಿಕ್ಸ್‌, ಬಯೋ ಟೆಕ್ನಾಲಜಿ
  • ಪ್ರೊ.ಎಸ್.ಆರ್.ನಿರಂಜನ: ಬಯೋ ಕೆಮಿಸ್ಟ್ರಿ, ಬಯೋ ಫಿಸಿಕ್ಸ್‌, ಬಯೋ ಟೆಕ್ನಾಲಜಿ
  • ಪ್ರೊ. ಕೆ.ಎಸ್.ರಂಗಪ್ಪ: ರಾಸಾಯನ ವಿಜ್ಞಾನ
  • ಡಾ.ಎನ್.ಆರ್.ಶೆಟ್ಟಿ: ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ
  • ಪ್ರೊ.ಎನ್.ಎಂ.ಬುಜುರ್ಕೆ: ಗಣಿತ ವಿಜ್ಞಾನ
  • ಡಾ.ಸಿ.ಎನ್.ಮಂಜುನಾಥ್:‌ ವೈದ್ಯಕೀಯ ಮತ್ತು ಫೋರೆನ್ಸಿಕ್‌
  • ಪ್ರೊ.ಎಂ.ಐ.ಸವದತ್ತಿ: ಭೌತ ವಿಜ್ಞಾನ
  • ಪ್ರೊ.ಕೆ.ಸಿದ್ದಪ್ಪ: ಭೌತ ವಿಜ್ಞಾನ
  • ಡಾ.ಎಚ್.ಹೊನ್ನೇಗೌಡ: ವಿಜ್ಞಾನ ಮತ್ತು ಸಮಾಜ
  • ಪ್ರೊ.ಆರ್.ಎಸ್.ದೇಶಪಾಂಡೆ: ಸಮಾಜ ವಿಜ್ಞಾನ
  • ಡಾ.ಮೃತ್ಯುಂಜಯ: ಸಮಾಜ ವಿಜ್ಞಾನ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಫ್-2020-21

  • ಡಾ.ಸಿ.ಎನ್.ರವಿಂಶಕರ್:‌ ಕೃಷಿ ವಿಜ್ಞಾನ
  • ಡಾ.ರಾಘವೇಂದ್ರ ಭಟ್ಟ: ಕೃಷಿ ವಿಜ್ಞಾನ
  • ಡಾ.ಗೋವಿಂದ ಆರ್.ಕಡಂಬಿ: ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ

Tags: dr cn ashwath narayandr kasturi rangankarnataka science and technology academynational education policynep
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಪಂಚರಾಜ್ಯಗಳಲ್ಲಿ ಫೈಟ್‌ ಮಾಡಲು ರಣೋತ್ಸಾಹದಲ್ಲಿದ್ದ ಬಿಜೆಪಿ ಬಿಗ್‌ ಶಾಕ್!‌ ರಾಸಲೀಲೆ ಸಿಡಿ ವಿಚಾರಕ್ಕೆ ಬೆಚ್ಚಿಬಿದ್ದ ಕಮಲ ಪಾಳೆಯ; ಆ ಸಚಿವರ ರಾಜೀನಾಮೆ ಪಡೆಯುತ್ತಾರಾ ಸಿಎಂ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ