• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಒಂದು ದೇಶ-ಒಂದು ಚುನಾವಣೆ: ಅಸೆಂಬ್ಲಿಯಲ್ಲಿ ಅಂಗಿ ಬಿಚ್ಚಿದ ಕಾಂಗ್ರೆಸ್‌ ಪಕ್ಷದ ಶಾಸಕ; ಫುಲ್‌ ಗರಂ ಆದ ಸ್ಪೀಕರ್‌, ಬಜೆಟ್‌ ಅಧಿವೇಶನದ ಮೊದಲ ದಿನವೇ ತೀವ್ರ ಗದ್ದಲ-ಕಾಂಗ್ರೆಸ್‌ ಧರಣಿ

cknewsnow desk by cknewsnow desk
March 4, 2021
in POLITICS, STATE
Reading Time: 1 min read
0
ಒಂದು ದೇಶ-ಒಂದು ಚುನಾವಣೆ: ಅಸೆಂಬ್ಲಿಯಲ್ಲಿ ಅಂಗಿ ಬಿಚ್ಚಿದ ಕಾಂಗ್ರೆಸ್‌ ಪಕ್ಷದ ಶಾಸಕ; ಫುಲ್‌ ಗರಂ ಆದ ಸ್ಪೀಕರ್‌, ಬಜೆಟ್‌ ಅಧಿವೇಶನದ ಮೊದಲ ದಿನವೇ ತೀವ್ರ ಗದ್ದಲ-ಕಾಂಗ್ರೆಸ್‌ ಧರಣಿ
941
VIEWS
FacebookTwitterWhatsuplinkedinEmail

ಇದು ಸರಿಯಲ್ಲ, ಇದು ಆರೆಸ್ಸೆಸ್‌ ಅಜೆಂಡಾ ಎಂದ ಸಿದ್ದರಾಮಯ್ಯ; ಇಲ್ಲ, ಈ ನೀತಿಯಿಂದ ದೇಶ ಉದ್ಧಾರವಾಗುತ್ತದೆ ಎಂದ ಯಡಿಯೂರಪ್ಪ

ಬೆಂಗಳೂರು: ಬಜೆಟ್‌ ಅಧಿವೇಶನಕ್ಕಾಗಿ ಕರೆಯಲಾಗಿರುವ ರಾಜ್ಯ ವಿಧಾನಸಭೆ ಕಲಾಪವು ಗುರುವಾರ ಅನೇಕ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಫುಲ್‌ ಗರಂ ಆದ ಪ್ರಸಂಗ ನಡೆಯಿತು.

ಕಲಾಪ ಆರಂಭವಾದ ಕೂಡಲೇ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ನಂತರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು; ʼಒಂದು ರಾಜ್ಯ, ಒಂದು ಚುನಾವಣೆʼ ವಿಷಯ ಬಗ್ಗೆ ಸ್ಪೀಕರ್‌ ಚರ್ಚೆಗೆ ಕೈಗೆತ್ತಿಕೊಳ್ಳಲು ವಿಷಯ ಮಂಡನೆ ಮಾಡಲು ಮುಂದಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದರು. ʼಒಂದು ದೇಶ -ಒಂದು ಚುನಾವಣೆ ಎಂಬ ಪರಿಕಲ್ಪನೆಯೇ ವಾಸ್ತವ ಸ್ಥಿತಿಗೆ ದೂರವಾದದ್ದುʼ ಎಂದರು. ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಕೂಡ ಸಿದ್ದರಾಮಯ್ಯ ಮಾತಿಗೆ ದನಿಗೂಡಿಸಿದರು.

ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್‌ ಅವರು; ಇದೇ ವಿಷಯದ ಬಗ್ಗೆ ಮೊದಲು ಚರ್ಚೆಗೆ ಮಾಡುವುದಾಗಿ ಒಪ್ಪಿಕೊಂಡು ನಂತರ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದರು.

ಕಾಗದ ಪತ್ರಗಳನ್ನು ಹರಿದು ಎಸೆದರು

“ಇದು ಸರಿಯಲ್ಲ. ಇದು ಆರೆಸ್ಸೆಸ್‌ ಅಜೆಂಡಾ” ಎಂದು ಸಿದ್ದರಾಮಯ್ಯ ಕೂಗಿ ಹೇಳಿದರು. ಇದೇ ವೇಳೆ ಈ ವಿರೋಧವನ್ನು ಲೆಕ್ಕಿಸದ ಸ್ಪೀಕರ್‌ ಅವರು ವಿಷಯ ಮಂಡನೆ ಮುಂದುವರಿಸಿದರು. ಇದರಿಂದ ಕೆರಳಿದ ಪ್ರತಿಪಕ್ಷ ಸದಸ್ಯರೆಲ್ಲರೂ ಸದನ ಬಾವಿಗಿಳಿದು ಪ್ರತಿಭಟನೆಗಿಳಿದರು. ಕಾಗದ ಪತ್ರಗಳನ್ನು ಹರಿದು ಎಸೆದರು.

ಆದಾಗ್ಯೂ ಮಾತು ಮುಂದುವರಿಸಿದ ಸ್ಪೀಕರ್‌, ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ನಡುವೆಯೂ ನಮ್ಮ ಕೆಲಸವನ್ನು ಪೂರ್ಣಗೊಳಿಸಿದರು. ಇದೇ ಸಂದರ್ಭದಲ್ಲಿ ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ಪಕ್ಷದ ಭದ್ರಾವತಿ ಶಾಸಕ ಸಂಗಮೇಶ್‌ ತಮ್ಮ ಅಂಗಿಬಿಚ್ಚಿ ವಿರೋಧ ವ್ಯಕ್ತಪಡಿಸಿದರು.

ಸಂಗಮೇಶ್‌ ಅವರ ವರ್ತನೆ ಕಂಡು ಕೆಂಡಾಮಂಡಲರಾದ ಸ್ಪೀಕರ್‌ ಕಾಗೇರಿ ಅವರು; ಸಂಗಮೇಶ ಅವರಿಗೆ ಕಟುವಾದ ಶಬ್ದಗಳೊಂದಿಗೆ ಎಚ್ಚರಿಕೆ ನೀಡಿದರಲ್ಲದೆ; “ನಿಮ್ಮ ವರ್ತನೆ ನಿಮ್ಮ ಭದ್ರಾವತಿ ಜನರಿಗೆ ಮಾಡಿದ ಅಪಮಾನ. ಇದೇನು ಸದನವಾ ಅಥವಾ ರಸ್ತೆಯಾ? ಮೊದಲು ಸರಿಯಾಗಿರುವುದನ್ನು ಕಲಿತುಕೊಳ್ಳಿ. ಇದು ಒಳ್ಳೆಯದಲ್ಲ ಇದು. ಸದನದಲ್ಲಿ ನಡೆದುಕೊಳ್ಳುವುದನ್ನು ಮೊದಲು ಕಲಿತುಕೊಳ್ಳಿ” ಎಂದು ಹೇಳಿದರು.

  • ಸಂಗಮೇಶ್‌

Courtesy: B K Sangamesh Bhadravathi facebook

ಸ್ಪೀಕರ್‌ ಅವರ ಎಚ್ಚರಿಕೆಗೂ ಕಿವಿಗೊಡದ ಸಂಗಮೇಶ್‌ ಅದೇ ಆವತಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಸ್ಪೀಕರ್‌ ಮತ್ತೊಮ್ಮೆ ಎಚ್ಚರಿಕೆ ನೀಡಿದರಲ್ಲದೆ, ಕೂಡಲೇ ಅಂಗಿ ಹಾಕಿಕೊಂಡು ಸ್ವಸ್ಥಾನಕ್ಕೆ ಹೋಗಿ ಕೂರದಿದ್ದರೆ ಸದನದಿಂದ ಹೊರಹಾಕಲಾಗುವುದು ಎಂದು ಎಚ್ಚರಿಕೆ ನೀಡಿದಾಗ ಕೊನೆಗೆ ಡಿ.ಕೆ.ಶಿವಕುಮಾರ್‌ ಬಂದು ಅವರಿಗೆ ಆಂಗಿ ಹಾಕಿಸಿದರು.

ಇದರ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೂ ತಮ್ಮ ಅಭಿಪ್ರಾಯ ಮಂಡಿಸಿದರಲ್ಲದೆ, ಒಂದು ದೇಶ ಮತ್ತು ಒಂದು ಚುನಾವಣೆ ವಿಷಯಕ್ಕೆ ಬೆಂಬಲ ವ್ಯಕ್ತಪಡಿಸಿದರಲ್ಲದೆ ದೇಶಕ್ಕೆ ಈ ನೀತಿಯು ಅತ್ಯಗತ್ಯವಾಗಿದೆ ಎಂದರು.

ತಮ್ಮ ಮಾತು ಮುಗಿಸುವ ಮುನ್ನ ಮುಖ್ಯಮಂತ್ರಿಗಳು ಕೂಡ ಪ್ರತಿಪಕ್ಷ ಸದಸ್ಯರ ವರ್ತನೆಯನ್ನು ಖಂಡಿಸಿದರು. ಕೊನೆಗೆ ಸಭಾಧ್ಯಕ್ಷರು ಕಲಾಪವನ್ನು ಹದಿನೈದು ನಿಮಿಷ ಮುಂದೂಡಿದರು.

Lead Photo Coutesy : DD Chandana

Tags: karnatakakarnataka assembly sessionone nation one electionvishweshwar hegde kageri
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಧಾನಸಭೆಯಲ್ಲಿ ಒಂದು ದೇಶ-ಒಂದು ಚುನಾವಣೆ ವಿರುದ್ಧ ಅಂಗಿ ಬಿಚ್ಚಿ ಪ್ರತಿಭಟಿಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ಒಂದು ವಾರ ಕಲಾಪದಿಂದ ಅಮಾನತು

ವಿಧಾನಸಭೆಯಲ್ಲಿ ಒಂದು ದೇಶ-ಒಂದು ಚುನಾವಣೆ ವಿರುದ್ಧ ಅಂಗಿ ಬಿಚ್ಚಿ ಪ್ರತಿಭಟಿಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ಒಂದು ವಾರ ಕಲಾಪದಿಂದ ಅಮಾನತು

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ