• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಇದೆಲ್ಲ ರಾಜಕೀಯ ಷಡ್ಯಂತ್ರ, ನಮ್ಮೆಲ್ಲರ ತೇಜೋವಧೆಗೆ ಮಾಧ್ಯಮಗಳ ಬಳಕೆ: ಡಾ.ಸುಧಾಕರ್‌ ಆರೋಪ; ಕೋರ್ಟ್‌ ಮೊರೆ ಹೋಗಿರುವ ವಲಸಿಗ ಸಚಿವರ ವಿರುದ್ಧ ಬಿಜೆಪಿಯಲ್ಲಿ ಅಸಮಾಧಾನ

cknewsnow desk by cknewsnow desk
March 6, 2021
in POLITICS, STATE
Reading Time: 1 min read
0
ಎಲ್ಲ ಸರಕಾರಿ ಅಧಿಕಾರಿಗಳು & ಸಿಬ್ಬಂದಿಗೂ ಕೋವಿಡ್‌ ಲಸಿಕೆ ಕಡ್ಡಾಯ; ಎರಡನೇ ಅಲೆ ತಡೆಯಲು ಇದು ಸಹಾಯಕ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
973
VIEWS
FacebookTwitterWhatsuplinkedinEmail

ರಮೇಶ್‌ ಜಾರಕಿಹೊಳಿ ಪ್ರಕರಣದ ನಂತರ ಬಿಜೆಪಿಗೆ ವಲಸೆ ಬಂದ ತಂಡದಲ್ಲಿ ಒಂದು ವಿಕೆಟ್‌ ಪತನವಾದ ಮೇಲೆ ಉಳಿದವರಿಗೆ ಏನೋ ನಡೆಯುತ್ತಿದೆ ಎಂದ ಭಯ ಶುರುವಾಗಿದೆ. ಹೀಗಾಗಿ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಅವರು. ಇನ್ನೊಂದೆಡೆ ಶಿಸ್ತಿನ ಪಕ್ಷ ಬಿಜೆಪಿ ಈ ಬಗ್ಗೆ ಉರಿದುಬೀಳುತ್ತಿದೆ‌

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ನಮ್ಮೆಲ್ಲರ ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೊದಲು ಮಾಧ್ಯಮಗಳಲ್ಲಿ ಎಲ್ಲವೂ ಬರುತ್ತದೆ. ಇದರಿಂದಾಗಿ ಅನೇಕ ವರ್ಷಗಳಿಂದ ಸಂಪಾದಿಸಿದ ಜನಪ್ರಿಯತೆ ಹೆಸರು, ಗೌರವ ಹಾಳಾಗಿ ಚಾರಿತ್ರ್ಯವಧೆಯಾಗುತ್ತದೆ. ಇದಕ್ಕೆ ಇತಿಶ್ರೀ ಹಾಡಲು ಈ ರೀತಿ ಮಾಡಿದ್ದೇವೆ. ಇದಕ್ಕೆ ತಡೆ ಹಾಕಲು ಬಲವಾದ ಕಾನೂನು ರೂಪಿಸಲು ಚಿಂತನೆ ನಡೆದಿದೆ” ಎಂದರು.

ಅನೈತಿಕ, ಮೌಲ್ಯರಹಿತ ಟ್ರೆಂಡ್

ರಾಜಕಾರಣ ಮಾತ್ರವಲ್ಲದೆ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ನಡೆಯುತ್ತದೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡಲು ತಪ್ಪು ಮಾಹಿತಿ ನೀಡಿ, ಅದಕ್ಕಾಗಿ ಸಾಮಾಜಿಕ ಜಾಲತಾಣ, ಮಾಧ್ಯಮ ಬಳಸಿಕೊಳ್ಳಲಾಗುತ್ತಿದೆ. ನೈಜತೆ ಇದ್ದಲ್ಲಿ ಅದನ್ನು ಯಾರೂ ನಿಷೇಧ ಮಾಡಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷಯಾಗಬೇಕು. ಆದರೆ ತೇಜೋವಧೆ ಮಾಡಬಾರದು. ಆರೋಪ ಮಾಡುವವರು ನೇರವಾಗಿ ನ್ಯಾಯಾಲಯಕ್ಕೆ ಹೋಗಬಹುದು. ಆದರೆ ಇಂತಹವರು ನ್ಯಾಯಾಲಯಕ್ಕೆ ಹೋಗದೆ ಬೇರೆ ಮಾರ್ಗ ಹಿಡಿದು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಹೊಸ ಅನೈತಿಕ, ಮೌಲ್ಯರಹಿತ ಟ್ರೆಂಡ್ ಆಗಿದೆ ಎಂದರು ಡಾ.ಸುಧಾಕರ್.

ರಷ್ಯಾ, ದುಬೈನಿಂದ ವೀಡಿಯೋ ಹಾಕುವುದು, ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದನ್ನು ನೋಡಿದರೆ ಇದು ಷಡ್ಯಂತ್ರ ಎನಿಸುವುದಿಲ್ಲವೇ? ಸಾರ್ವಜನಿಕ ಬದುಕಿನಲ್ಲಿ ಹಲವಾರು ವರ್ಷಗಳಿಂದ ಇದ್ದವರಿಗೆ ಸಾಮಾಜಿಕ ಬದ್ಧತೆ, ಕಳಕಳಿ ಇರುತ್ತದೆ. ಯಾವುದೇ ಆರೋಪ ಬಂದಾಗ ಅದನ್ನು ಪರಾಮರ್ಶಿಸಬೇಕು. ನೈಜತೆ ಇದ್ದಲ್ಲಿ 24 ಗಂಟೆಯೂ ಸುದ್ದಿ ಪ್ರಸಾರ ಮಾಡಬಹುದು ಎಂದರು.

ಚಾರಿತ್ರ್ಯಹರಣವಾಗಬಾರದು ಎಂಬ ಕಾರಣಕ್ಕೆ ಇಂಜೆಂಕ್ಷನ್ ಪಡೆಯುವ ಪ್ರಯತ್ನ ಪಡೆಯಲಾಗಿದೆ. ಈಗ ಹಿಟ್ ಆ್ಯಂಡ್ ರನ್ ಜನರಿಂದಾಗಿ ಭಯಪಡಬೇಕಾಗಿದೆ. ಸಂತ್ರಸ್ತರು, ಅನ್ಯಾಯಕ್ಕೊಳಗಾದವರು ಇನ್ನೂ ಮುಖ್ಯವಾಹಿನಿಗೆ ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.

https://twitter.com/mla_sudhakar/status/1367906512341929985‌

ವಲಸಿಗರ ವಿರುದ್ಧ ಬಿಜೆಪಿಯಲ್ಲಿ ಅತೃಪ್ತಿ

ಏತನ್ಮಧ್ಯೆ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ವಲಸಿಗರ ವಿರುದ್ಧ ಬಿಜೆಪಿ ಒಂದು ರೀತಿಯ ಅಸಹನೆ ಉಂಟಾಗಿದೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿದೇ ಏಕಾಎಕಿ ನ್ಯಾಯಾಲಯಕ್ಕೆ ಸಚಿವರು ಅರ್ಜಿ ಸಲ್ಲಿಸಿರುವ ಕ್ರಮ ಇತ್ತ ರಾಜ್ಯ, ಅತ್ತ ರಾಷ್ಟ್ರೀಯ ನಾಯಕರಿಗೆ ಬೇಸರ ಉಂಟು ಮಾಡಿದೆ.

ಈಗಾಗಲೇ ಕೇಂದ್ರ ಸಚಿವ ಡಿ.ವಿ.ಸದಾನಂಗೌಡು ಈಗಾಗಲೇ‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಸಚಿವರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆರು ಸಚಿವರು ನ್ಯಾಯಾಲಕ್ಕೆ ಹೋಗಿರುವುದು ಅವರ ವೈಯಕ್ತಿಕ ವಿಚಾರವಾದರೂ. ಈ ವಿಷಯದಲ್ಲಿ ಇನ್ನಷ್ಟು ಗೊಂದಲು ಸೃಷ್ಟಿಯಾಗುತ್ತಿದೆ. ಹಾಗೆ ಆಗಬಾರದು ಎಂದಿದ್ದಾರೆ ಡಿವಿಎಸ್.

Tags: bjpdr k sudhakarkarnatakaramesh jarkiholisex video case
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನ್ಯಾಯಾಲಯಕ್ಕೆ ಹೋಗಿರುವ ಎಲ್ಲ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಡಿಮಾಂಡ್‌ ಮಾಡಿದ ಜೆಡಿಎಸ್‌; ಅಧಿವೇಶನದಲ್ಲೂ ಒತ್ತಾಯಿಸಲು ನಿರ್ಧಾರ

ನ್ಯಾಯಾಲಯಕ್ಕೆ ಹೋಗಿರುವ ಎಲ್ಲ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಡಿಮಾಂಡ್‌ ಮಾಡಿದ ಜೆಡಿಎಸ್‌; ಅಧಿವೇಶನದಲ್ಲೂ ಒತ್ತಾಯಿಸಲು ನಿರ್ಧಾರ

Leave a Reply Cancel reply

Your email address will not be published. Required fields are marked *

Recommended

ಮಾಗಡಿ ತಾಲ್ಲೂಕಿನಲ್ಲಿ ಇದೆಯಾ ಹಕ್ಕ-ಬುಕ್ಕರ ಸಮಾಧಿ? ಅವರ ವಂಶಸ್ಥರು ಇನ್ನೂ ಇದ್ದಾರಾ?

ಮಾಗಡಿ ತಾಲ್ಲೂಕಿನಲ್ಲಿ ಇದೆಯಾ ಹಕ್ಕ-ಬುಕ್ಕರ ಸಮಾಧಿ? ಅವರ ವಂಶಸ್ಥರು ಇನ್ನೂ ಇದ್ದಾರಾ?

5 years ago
ಹೈದರಾಬಾದ್‌ನಲ್ಲಿ ರಾಕಿಭಾಯ್;‌ ಕೆಜಿಎಫ್‌ ಚಾಪ್ಟರ್-‌2 ಕೊನೆ ಹಂತದ ಶೂಟಿಂಗ್‌ ಶುರು

ಹೈದರಾಬಾದ್‌ನಲ್ಲಿ ರಾಕಿಭಾಯ್;‌ ಕೆಜಿಎಫ್‌ ಚಾಪ್ಟರ್-‌2 ಕೊನೆ ಹಂತದ ಶೂಟಿಂಗ್‌ ಶುರು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ