karnataka budget 2021-22
ಬೆಂಗಳೂರು: ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ಅವರ ಸ್ಮರಣಾರ್ಥ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದರು.
ವಿಧಾನಸಭೆಯಲ್ಲಿ ಸೋಮವಾರ ಮಂಡಿಸಿದ ೨೦೨೧ನೇ ಸಾಲಿನ ಬಜೆಟ್‌ನಲ್ಲಿ ಈ ಘೋಷಣೆ ಮಾಡಿದ ಮುಖ್ಯಮಂತ್ರಿಗಳು; “ರಾಜ್ಯವಷ್ಟೇ ಅಲ್ಲದೆ, ದೇಶದ ಉದ್ದಗಲಕ್ಕೂ ವೈಜ್ಞಾನಿಕ ಮನೋಭಾವ ರೂಪಿಸುವಲ್ಲಿ ತಮ್ಮ ಜೀವಿತಾವಧಿಯನ್ನು ಮೀಸಲಿಟ್ಟಿದ್ದ ಶಿಕ್ಷಣತಜ್ಞ ಎಚ್ಚೆನ್ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲು ಈ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ” ಎಂದರು.
ಈಗಾಗಲೇ ವಿಜ್ಞಾನ ಕೇಂದ್ರ ಸ್ಥಾಪನೆಗೆ ತಾಂತ್ರಿಕ ಸಮಿತಿ ವರದಿ ಸಲ್ಲಿಸಿದ್ದು, ಆ ವರದಿ ಅನ್ವಯ ೨೦೦ ಎಕರೆ ಪ್ರದೇಶದಲ್ಲಿ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು.
ಎಚ್ಚೆನ್ ಅವರ ಹಳೆಯ ವಿದ್ಯಾರ್ಥಿಗಳ ನೆರವಿನೊಂದಿಗೆ ಈ ವಿಜ್ಞಾನ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿಯೇ ₹ 10 ಕೋಟಿ ಅನುದಾನ ಒದಗಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಬಜೆಟ್‌ನಲ್ಲಿ ಮಾಡಲಾದ ಈ ಘೋಷಣೆಗೆ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಮುಖ್ಯವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ ನ್ಯಾಷನಲ್ ಕಾಲೇಜ್‌ಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ,