• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!

cknewsnow desk by cknewsnow desk
March 9, 2021
in CHIKKABALLAPUR, KOLAR, STATE
Reading Time: 1 min read
0
ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ  ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!
922
VIEWS
FacebookTwitterWhatsuplinkedinEmail

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಆಕ್ರೋಶ

Karnataka Budget 2021-22

ಚಿಕ್ಕಬಳ್ಳಾಪುರ: ಸಮಾನ ಅಭಿವೃದ್ಧಿಯ ಮಂತ್ರವನ್ನು ಪಠಿಸುತ್ತಲೇ 2021-22ನೇ ಸಾಲಿನ ರಾಜ್ಯ ಮುಂಗಡಪತ್ರದಲ್ಲಿ ಬರಪೀಡಿತ ಬಯಲುಸೀಮೆಗೆ ಮತ್ತೆ ಅನ್ಯಾಯ ಎಸಗಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೈಜತೆ, ನಿಖರತೆ, ಪ್ರಾಮಾಣಿಕತೆ, ದೂರದೃಷ್ಟಿಯ ಕೊರತೆಯಿಂದ ಬಯಲುಸೀಮೆ ಪಾಲಿಗೆ ಮರೀಚಿಕೆಯಾದ ಶಾಶ್ವತ ನೀರಾವರಿ ಎಂದು ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ಬಜೆಟ್‌ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬಯಲುಸೀಮೆಯ ಒಟ್ಟು ಹದಿನಾಲ್ಕು ಜಿಲ್ಲೆಗಳಿಗೆ ಅನ್ಯಾಯ ಎಸಗಲಾಗಿದೆ ಎಂದಿರುವ ಅವರು ವಿವರವಾಗಿ ಹೇಳಿದ್ದಿಷ್ಟು;

  • ನೀರಾವರಿಗೆ ಒಳಪಟ್ಟ ಕೃಷ್ಣಾ , ಕಾವೇರಿ ಅಚ್ಚುಕಟ್ಟು ಪ್ರದೇಶಗಳು ಹಾಗೂ ನೀರಾವರಿ ವಂಚಿತ, ಮಳೆಯಾಶ್ರಿತ ಬಯಲುಸೀಮೆಯ ಪ್ರದೇಶಗಳ ತಾರತಮ್ಯವು ಈ ಬಜೆಟ್‌ನಲ್ಲೂ ಮುಂದುವರಿದಿದೆ.
  • ಬಯಲುಸೀಮೆಗೆ ಹರಿಸಬೇಕಾದ ಜಿ.ಎಸ್.ಪರಮಶಿವಯ್ಯ ಅವರ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳ ನೀರಿಗೆ ಕಿಂಡಿ ಅಣೆಕಟ್ಟುಗಳ ನಿರ್ಮಾಣದಿಂದ ಬಯಲುಸೀಮೆ ಅತಂತ್ರ ಪರಿಸ್ಥಿತಿಗೆ ಬೀಳಲಿದೆ.
  • ಬಯಲುಸೀಮೆಯ ದಾಹ ನೀಗಿಸಲಾಗದ ಅವೈಜ್ಞಾನಿಕ ಎತ್ತಿನ ಹೊಳೆಯ ಜಲವಿಜ್ಞಾನವನ್ನು CWC ಕೇಂದ್ರೀಯ ಜಲ ಆಯೋಗದಿಂದ ಮರು ಅಧ್ಯಯನಕ್ಕೊಳಪಡಿಸದೇ, ಯೋಜನೆ ಪೂರ್ಣಗೊಳಿಸಲು ಆದ್ಯತೆ ಕೊಟ್ಟಿರುವುದರಿಂದ, ಭ್ರಷ್ಟರ ಜೋಳಿಗೆ ತುಂಬುತ್ತದೆಯೇ ಹೊರತು ನಮ್ಮ ಕೆರೆಗಳಿಗೆ ನೀರು ಹರಿಯುವುದಿಲ್ಲ.
  • ಆರ್.ಆಂಜನೇಯ ರೆಡ್ಡಿ

ಕೃಷ್ಣಾ ನದಿ ನೀರನ್ನು ಬಯಲುಸೀಮೆಗೆ ಹರಿಸಲು ಆಲಮಟ್ಟಿ ಮತ್ತು ಪೆನ್ನಾರ್ ಜೋಡಣೆಗೆ NWDA (ನ್ಯಾಷನಲ್ ವಾಟರ್ ಡೆವಲಪಮೆಂಟ್ ಏಜನ್ಸಿ) ಈಗಾಗಲೇ ಅಧ್ಯಯನ ವರದಿ ಸಿದ್ದಪಡಿಸಿ, ಹಸಿರು ನಿಶಾನೆ ತೋರಿಸಿದ್ದರೂ ಸಹಾ, ಕೃಷ್ಣಾ ನೀರನ್ನು ಮತ್ತೆ ಉತ್ತರ ಕರ್ನಾಟಕಕ್ಕೆ ಮೀಸಲಿಟ್ಟು ಬಯಲುಸೀಮೆಗೆ ಸೊನ್ನೆ ಸುತ್ತಲಾಗಿದೆ.

-ಆರ್.‌ಆಂಜನೇಯ ರೆಡ್ಡಿ

  • ರಾಜ್ಯ ಸರಕಾರ ಬಹಳ ಉದಾರತೆಯಿಂದ ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲ ಕೆರೆಗಳಿಗೆ ಹರಿಸುತ್ತಿರುವ ಬೆಂಗಳೂರು ನಗರದ ತ್ಯಾಜ್ಯ ನೀರನ್ನು ಕೇಂದ್ರ ಸರಕಾರದ ಮಾನದಂಡಕ್ಕನುಗುಣವಾಗಿ ಮೂರನೇ ಹಂತಕ್ಕೆ ಶುದ್ದೀಕರಿಸುವಲ್ಲಿ ಸರಕಾರದಲ್ಲಿ ಚಿತ್ತಶುದ್ಧಿ ಮರೆಯಾಗಿದೆ.
  • ಅಂತರ್ಜಲ ಆಧಾರಿತ ಕೃಷಿ ಮಾಡುವ ಬಯಲು ಸೀಮೆ ರೈತರ ಲಕ್ಷಾಂತರ‌ ಕೊಳವೆ ಬಾವಿಗಳು ವಿಫಲವಾಗಿವೆ. ಇವುಗಳ ಮರುಪೂರಣ, ಪುನಶ್ಚೇತನಕ್ಕೆ ವಿಶೇಷ ಅನುದಾನ ಒದಗಿಸುವುದನ್ನು ಮರೆತಿದ್ದಾರೆ ಮುಖ್ಯಮಂತ್ರಿಗಳು.
  • ಸಾವಿರಾರು ಕೆರೆಗಳಿರುವ ಬಯಲುಸೀಮೆಯ ಕೆರೆಗಳ ಜಲಾನಯನ ಪ್ರದೇಶದ ಒತ್ತುವರಿ ತೆರುವು, ರಾಜ ಕಾಲುವುವೆಗಳ ಪುನರುಜ್ಜೀವನಗೊಳಿಸಿ, ಅಂತರ್ಜಲ ಅಭಿವೃದ್ದಿಪಡಿಸುವ ಯಾವುದೇ ನಿಖರವಾದ ವೈಜ್ಞಾನಿಕ ಯೋಜನೆಗಳ ಕಡೆ ಗಮನಹರಿಸದೆ, ಓಬಿರಾಯನ ಹಳೆಯ ಪದ್ಧತಿಗಳಿಗೆ ಜೋತು ಬಿದ್ದಿರುವುದರಿಂದ ಬಯಲುಸೀಮೆಗೆ ಯಾವುದೇ ಉಪಕಾರವಾಗುವುದಿಲ್ಲ.
  • ಬಯಲು ಸೀಮೆಯ ಜಿಲ್ಲೆಗಳಲ್ಲಿ ರಾಡಾರ್ ಆಧಾರಿತ ಹವಾಮಾನ ಮತ್ತು ಮಳೆ ಮುನ್ಸೂಚನಾ ಕೇಂದ್ರಗಳನ್ನು ಸ್ಥಾಪಿಸಿದರೆ, ಕೃಷಿಯಲ್ಲಿ ಅಂತರ್ಜಲದ ಉಳಿತಾಯ, ಜಲ ಸಂರಕ್ಷಣೆ, ಬರ ನಿರ್ವಹಣೆ ಮತ್ತು ಬೆಳೆಗಳ ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು.
  • ಈ ಬಜೆಟ್ ಬಯಲುಸೀಮೆಯ ಪಾಲಿಗೆ ಹೊಸ ಬಾಟಲಿಯಲ್ಲಿ ಹಳೇ ಮದ್ಯ ಎಂಬಂತಿದೆ.

Lead photo: BNMK Photographs

Tags: bayaluseemebs-yediyurappabudget 2021-22chikkaballapurkarnatakakolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

15 ದಿನಗಳಲ್ಲಿ ಡಾ.ಕೆ.ಸುಧಾಕರ್‌ ಭ್ರಷ್ಟಾಚಾರದ ದಾಖಲೆ ಬಿಡುಗಡೆ

5 years ago
ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಧೂಮಪಾನ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ; ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್‌ ಸೇದಿದರೆ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ