• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು

cknewsnow desk by cknewsnow desk
March 11, 2021
in STATE
Reading Time: 1 min read
0
ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಇನ್ನೂ ಮೇಲ್ಮಟ್ಟಕ್ಕೆ ಹೋಗಿ ಬ್ಯುಸಿ ಆಗಿಬಿಡ್ತಾರೆ! ಅವರಿಗೆ ಟೈಮ್‌ ಸಿಗೋದು ಕಷ್ಟವಾಗುತ್ತೆ ಎಂದ ಡಿ.ವಿ.ಸದಾನಂದಗೌಡರು
914
VIEWS
FacebookTwitterWhatsuplinkedinEmail

ಸಿಎಂ ಗಾದಿಯತ್ತ ಡಿಸಿಎಂ; ಭವಿಷ್ಯ ನುಡಿದುಬಿಟ್ಟರಾ ಕೇಂದ್ರ ಸಚಿವರು!!

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗೆ ಸಮಯ ಹತ್ತಿರ ಆಗಿದೆಯಾ? ಯಾವಾಗಲೂ ಅಳೆದು-ತೂಗಿ ಮಾತನಾಡುವ ಡಿ.ವಿ.ಸದಾನಂದ ಗೌಡರು ಶಿವರಾತ್ರಿ ಹಬ್ಬದ ದಿನದಂದು ಹೇಳಿದ ಮಾತು ನಿಜವಾಗುತ್ತಾ? ಮುಂದಿನ ವರ್ಷದ ಹೊತ್ತಿಗೆ ಡಾ.ಅಶ್ವತ್ಥನಾರಾಯಣ ಮತ್ತೂ ಬ್ಯುಸಿಯಾಗಿ ಬಿಡ್ತಾರಾ??


ಬೆಂಗಳೂರು: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ಹಾಗೂ ಸದ್ದಿಲ್ಲದೆ ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್‌.ಅಶ್ವತ್ಥನಾರಾಯಣರ ಪದನಾಮದ ಮುಂದಿರುವ ʼಉಪʼ ಹೋಗಿ ಆದಷ್ಟು ಬೇಗ ʼಮುಖ್ಯಮಂತ್ರಿʼ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಎಲ್ಲ ಕೃಪೆ-ಚೈತನ್ಯವನ್ನು ಆ ಪರಮಶಿವ ನೀಡಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಶುಭ ಹಾರೈಸಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ರಾತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಷನ್‌ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಶ್ವತ್ಥನಾರಾಯಣ ಕೇವಲ ಮಾತನಾಡುತ್ತಲೇ ಕೆಲಸ ಮಾಡುವ ವ್ಯಕ್ತಿಯಲ್ಲ. ಅಬ್ಬರ ಇಲ್ಲ, ಆಡಂಬರ ಇಲ್ಲದ ವ್ಯಕ್ತಿ. ಅವರು ಮಾಡುತ್ತಿರುವ ಉತ್ತಮ ಕೆಲಸಗಳೇ ಅವರ ಬಗ್ಗೆ ಮಾತನಾಡುತ್ತಿವೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಬಿಡುವಿಲ್ಲದ ಕೆಲಸಗಳಲ್ಲಿ ತೊಡಗಿಬಿಡುತ್ತಾರೆಂದು ಸದಾನಂದಗೌಡರು ಮಾರ್ಮಿಕವಾಗಿ ನುಡಿದರು.

ಬಿ.ಕೆ.ಶಿವರಾಮ್‌ ಅವರು ಸಂಪಿಗೆ ರಸ್ತೆಯಲ್ಲಿ ಬರುವ ವರ್ಷ ಸಂಪಿಗೆ ಪರಿಮಳ ಆಘ್ರಾಣಿಸಿ ಹೋಗಬೇಕು ಅಂತ ಕರೆದಿದ್ದಾರೆ. ನಾನು ಬರುತ್ತೇನೆ. ಅಶ್ವತ್ಥನಾರಾಯಣ ಅವರನ್ನು ಬಿಟ್ಟು ಹೋಗೋಣ. ಮೇಲ್ಮಟ್ಟಕ್ಕೆ ಹೋದರೆ ಅವರು ಬರುವುದಕ್ಕೆ ಸಮಯ ಸಿಗಲಿಕ್ಕೆ ಇಲ್ಲ. ನಾನು ಬರ್ತೇನೆ.

-ಡಿ.ವಿ.ಸದಾನಂದ ಗೌಡ,

ಮಾತು ಕನಿಷ್ಠ, ಕೆಲಸ ಗರಿಷ್ಠ

ನಮ್ಮ ನಡುವಿನ ರಾಜಕಾರಣಿಗಳಲ್ಲಿ ಮಾತನಾಡುವವರೇ ಜಾಸ್ತಿ. ಇದಕ್ಕೆ ಅಶ್ವತ್ಥನಾರಾಯಣ ಅಪವಾದ. ಅವರದ್ದು ಮಾತು ಕನಿಷ್ಠ, ಕೆಲಸ ಗರಿಷ್ಠ ಎನ್ನುವ ನೀತಿ. ಈ ಪರಿಶ್ರಮವೇ ಅವರನ್ನು ಮುಂದೊಂದು ದಿನ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದು ಗೌಡರು ಹೇಳಿದರು.

ಮಲ್ಲೇಶ್ವರ ಕ್ಷೇತ್ರದಲ್ಲಿ ಅದೆಷ್ಟೋ ಮಹಾನುಭಾವರು ಇದ್ದಾರೆ. ಕವಿಗಳು, ವಿಜ್ಞಾನಿಗಳು, ಪಂಡಿತರು, ಪದ್ಮ ಪ್ರಶಸ್ತಿ ಪುರಸ್ಕೃತರು- ಭಾರತರತ್ನಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಿಂದ ಒಬ್ಬ ಮುಖ್ಯಮಂತ್ರಿಯೂ ಹೊರಹೊಮ್ಮಲಿ ಎಂದು ಸದಾನಂದ ಗೌಡರು ಹೇಳಿದರು.

ಮಲ್ಲೇಶ್ವರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ನೃತ್ಯ, ಹಾಸ್ಯ, ಸಂಗೀತ ಮೇಳೈಸಿದ ಸಾಂಸ್ಕೃತಿಕ ಜಾಗರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಅತಿಥಿಗಳನ್ನು ಸ್ವಾಗತಿಸಿದರು.

ಸಂಗೀತ ಮತ್ತು ನೃತ್ಯದ ಮೂಲಕ ಶಿವಸ್ಮರಣೆ ಮಾಡಿಕೊಂಡು ಭಕ್ತರಿಗೆ ಮುದವುಂಟು ಮಾಡುವುದರ ಜತೆಗೆ, ಜಾಗತಿಕವಾಗಿ ಹೆಸರು ಮಾಡಿರುವ ಅನೇಕ ಖ್ಯಾತ ಕಲಾವಿದರು ಉತ್ಸವದಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು. ವೈವಿಧ್ಯಮಯ ಕಾರ್ಯಕ್ರಮಗಳು ಇಡೀ ರಾತ್ರಿ ಪ್ರೇಕ್ಷಕರ ಮನಸೂರೆಗೊಂಡವು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವೆಂಕಟೇಶ್‌, ನಿವೃತ್ತ ಪೋಲೀಸ್ ಅಧಿಕಾರಿ ಬಿ.ಕೆ.ಶಿವರಾಮ್‌ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ರಾಜಧಾನಿಗೆ 7,795 ಕೋಟಿ ರೂ. ಮೀಸಲು; ಕಾಂಗ್ರೆಸ್‌ಗೆ ಸಡ್ಡು ಹೊಡೆಯಲು ಬ್ರ್ಯಾಂಡ್‌ ಬೆಂಗಳೂರು & ಬ್ರ್ಯಾಂಡ್‌ ಬಿಜೆಪಿ!! ಕಮಲ ಪಾಳೆಯದಲ್ಲಿ ಇದಕ್ಕೆ ನೇತೃತ್ವ ಯಾರದು?
Tags: dr cn ashwathnarayandv sadananda gowdamaha shivaratrimalleshwaram
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

Leave a Reply Cancel reply

Your email address will not be published. Required fields are marked *

Recommended

ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

6 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕೋಲಾರ ನರಸಾಪುರದ ವಿಸ್ಟ್ರಾನ್‌ ಘಟಕದಲ್ಲಿ ಪ್ರತಿಭಟನೆ; ಕಾರ್ಖಾನೆ ಧ್ವಂಸ ಮಾಡಿದವರ ವಿರುದ್ಧ ಕ್ರಮಕ್ಕೆ ಕೋಲಾರ ಎಸ್‌ಪಿಗೆ ಸೂಚಿಸಿದ ಡಿಸಿಎಂ ಡಾ.ಅಶ್ವತ್ಥನಾರಾಯಣ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ