• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿಧುರಾಶ್ವತ್ಥ ದೊಡ್ಡ ಮೈಲುಗಲ್ಲು; ಹೋರಾಟಕ್ಕೆ ಹೊಸ ದಿಕ್ಕು ತೋರಿದ ಘಟನೆ ಎಂದು ಬಣ್ಣಿಸಿದ ಮುಖ್ಯಮಂತ್ರಿ

cknewsnow desk by cknewsnow desk
March 12, 2021
in CHIKKABALLAPUR, STATE
Reading Time: 2 mins read
0
ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಿಧುರಾಶ್ವತ್ಥ ದೊಡ್ಡ ಮೈಲುಗಲ್ಲು; ಹೋರಾಟಕ್ಕೆ ಹೊಸ ದಿಕ್ಕು ತೋರಿದ ಘಟನೆ ಎಂದು ಬಣ್ಣಿಸಿದ ಮುಖ್ಯಮಂತ್ರಿ
953
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕವು ಅನೇಕ ಮೈಲುಗಲ್ಲುಗಳನ್ನು ಹೊಂದಿದ್ದು, ಅದರಲ್ಲಿ ಕರ್ನಾಟಕದ ಜಲಿಯನ್‌ ವಾಲಾಬಾಗ್‌ ಎಂದೇ ಹೆಸರಾಗಿರುವ ವಿಧುರಾಶ್ವತ್ಥದ ಹತ್ಯಾಕಾಂಡ ಘಟನೆಯೂ ಒಂದು. ಹೋರಾಟಕ್ಕೆ ಹೊಸ ದಿಕ್ಕು ತೋರಿದ ಘಟನೆ ಇದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬ್ರಿಟೀಷರ ಗುಂಡಿಗೆ ಬಲಿಯಾದ ಆ ವೀರಯೋಧರ ತ್ಯಾಗ ಬಲಿದಾನಗಳನ್ನು ನಾವು ಸ್ಮರಿಸಬೇಕು. ಅವರ ಆದರ್ಶ ಮತ್ತು ಸ್ಫೂರ್ತಿಯ ದಾರಿಯಲ್ಲಿ ನಡೆಯಬೇಕು ಎಂದು ಸಿಎಂ ಕರೆ ನೀಡಿದರು.

ಅವರು ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದ ಡಾ.ಎನ್.ಸಿ.ನಾಗಯ್ಯರೆಡ್ಡಿ ಸ್ಮಾರಕ ಧ್ವಜ ಸತ್ಯಾಗ್ರಹ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಅಜಾದ್ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಮೂಲೆ ಮೂಲೆಗಳಲ್ಲಿ ಬ್ರೀಟಿಷರ ವಿರುದ್ಧ ಮೊಳಗಿದ ಚಳುವಳಿಯ ರಣಕಹಳೆಗೆ ಕರುನಾಡು ಸಹಾ ಹೊರೆತಾಗಿಲ್ಲ. ಮೈಸೂರು ಸಂಸ್ಥಾನದ ಕಿತ್ತೂರು, ಹಲಗಲಿ ಬಂಡಾಯ, ನರಗುಂದ ರೈತರ ಬಂಡಾಯ, ಸುರಪುರ ಬಾದಾಮಿ ಬಂಡಾಯ, ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ, ವಿದುರಾಶ್ವತ್ಥದಲ್ಲಿ ನಡೆದಿರುವ ಸ್ವಾತಂತ್ರ್ಯ ಚಳುವಳಿಗಳು ಸ್ವಾತಂತ್ರ್ಯೋತ್ಸವದ ಇತಿಹಾಸದ ಮೈಲುಗಲ್ಲುಗಳಾಗಿವೆ. ಇಂತಹ ಮಹೋನ್ನತ ಹೋರಾಟದಲ್ಲಿ ಭಾಗಿಯಾಗಿ ವೀರಮರಣವನ್ನಪ್ಪಿದ ಯೋಧರ ಆದರ್ಶಗಳು, ಚಿಂತನೆಗಳನ್ನು ಇಂದಿನ ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ನೆರವಾಗಬೇಕು ಎಂದು ಯಡಿಯೂರಪ್ಪ ಅವರು ಕಿವಿಮಾತು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ ಚಿಂತನೆಗಳು ಮತ್ತು ಅವರ ಆದರ್ಶಗಳು ಎಲ್ಲಾ ಕಾಲಕ್ಕೂ ಅಮರ. ಅಂಥಹ ಮಹಾನ್ ಹೋರಾಟಗಾರರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಅನೇಕ ವೀರ ಯೋಧರು, ಮಹನೀಯರ ಪ್ರಾಣ, ತ್ಯಾಗ ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂತಹ ಮಹೋನ್ನತ ಸಂಗ್ರಾಮದ ಮಹತ್ವದ ಬಗ್ಗೆ ಹಾಗೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ವೀರಮರಣವನ್ನಪ್ಪಿದ ಹೋರಾಟಗಾರರ ತತ್ವಾದರ್ಶಗಳು, ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸಬೇಕಾದ ಅವಿವಾರ್ಯತೆ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ದಂಡಿಯಾತ್ರೆ ಸ್ಮರಣೀಯ ಘಟ್ಟ

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ 1930ರಲ್ಲಿ ಕೈಗೊಂಡ ಉಪ್ಪಿನ ಸತ್ಯಾಗ್ರಹದ ಸ್ಮರಣಾರ್ಥ ಮಹಾತ್ಮ ಗಾಂಧಿಜೀ ಅವರು ಗುಜರಾತ್‍ನ ಸಬರಮತಿ ಆಶ್ರಮದಿಂದ ಕೈಗೊಂಡ 21 ದಿನಗಳ ದಂಡಿಯಾತ್ರೆಯು ಸ್ಮರಣೀಯ ಘಟ್ಟವಾಗಿದೆ. ದೇಶದ ಇತಿಹಾಸದಲ್ಲಿ ಅನೇಕ ಹೋರಾಟದ ಸ್ಮರಣೆಗಳನ್ನು ಸ್ಮರಿಸುವ ಸುಸಂದರ್ಭ ಇದಾಗಿದೆ. 1857ರ ಸಿಪಾಯಿ ದಂಗೆಯಿಂದ ಆರಂಭಗೊಂಡ ದೇಶದ ಸ್ವಾತಂತ್ರ್ಯ ಚಳುವಳಿ ಕಾಲಕಾಲಕ್ಕೆ ಹಲವು ಮಜಲುಗಳನ್ನು ಪಡೆಯಿತು. ಅದರಲ್ಲೂ 1918ರ ಬಳಿಕ ಮಹಾತ್ಮಾ ಗಾಂಧಿಜೀ ಅವರ ನಾಯಕತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಇಡೀ ಜಗತ್ತೇ ಅಚ್ಚರಪಡುವ ನಿಟ್ಟಿನಲ್ಲಿ ಬೇರಗಾಗಿ ನೋಡಿತು ಎಂದು ಸಿಎಂ ಬಣ್ಣಿಸಿದರು.

ಬಾಲಗಂಗಾಧರ ತಿಲಕ್, ಲಾಲಾ ಲಜಪತ್ ರಾಯ್, ಭಗತ್ ಸಿಂಗ್, ವೀರ ಸಾವರ್ಕರ್ ಹೀಗೆ ಅನೇಕರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ನಾಡ ಪ್ರೇಮಿಗಳಿಂದ ಮೊಳಗಿದ ವಂದೇ ಮಾತರಂ ಕೂಗಿಗೆ ಕಿವಿಗೊಟ್ಟು ಲಕ್ಷಾಂತರ ಜನ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಗೆ ಧುಮುಕಿ ತಮ್ಮ ಬದುಕು ಮೀಸಲಿಟ್ಟು ಹಲವರು ಅಮರ ಜೀವಿಗಳ ತ್ಯಾಗ ಬಲಿದಾನ ದೇಶದ ಇತಿಹಾಸದಲ್ಲಿ ಸುವರ್ಣ ಅಕ್ಷರಗಳನ್ನು ಬರೆದಿಡಬೇಕಾಗಿದೆ ಎಂದರು ಮುಖ್ಯಮಂತ್ರಿ.

ದಂಡಿ ಸತ್ಯಾಗ್ರಹದ ದಿನವಾದ ಇಂದು, ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕದ ಆದರಣೀಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರೊಂದಿಗೆ ಚಿಕ್ಕಬಳ್ಳಾಪುರದ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. #AzadiKaAmritMahotsav pic.twitter.com/Cevnb6GtsJ

— B.S.Yediyurappa (Modi Ka Parivar) (@BSYBJP) March 12, 2021

ಐತಿಹಾಸಿಕ ಕಾರ್ಯಕ್ರಮ: ಡಾ.ಸುಧಾಕರ್

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಮಾತನಾಡಿ; “75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ಒಂದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ದೇಶದ ಸ್ವಾತಂತ್ರ್ಯೋತ್ಸವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಂಡಿಯಲ್ಲಿ ರಾಷ್ಟ್ರ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಜಿಲ್ಲೆಯ ಪ್ರಮುಖ ಐತಿಹಾಸಿಕ-ಧಾರ್ಮಿಕ ತಾಣವಾದ ವಿದುರಾಶ್ವತ್ಥದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಆಗಿದ್ದು, ಅದರ ನೆನಪಿಗಾಗಿ ದೇಶದ 75 ಸ್ಥಳಗಳಲ್ಲಿ 75 ವಾರಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ವಿಧುರಾಶ್ವತ್ಥವು ಹೋರಾಟದ ನೆಲವಾಗಿದ್ದು, 1932ರಲ್ಲಿ ನಡೆದ ಬ್ರಿಟೀಷರು ನಡೆಸಿದ ಗುಂಡಿನ ದಾಳಿಗೆ ಸುಮಾರು 32 ಜನರು ಮೃತಪಟ್ಟಿರುವುದಾಗಿ ಇತಿಹಾಸ ಹೇಳುತ್ತದೆ. ಇಂತಹ ಐತಿಹಾಸಿಕ ಸ್ಥಳವನ್ನು ಹಲವು ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮತ್ತಷ್ಟು ಅಭಿವೃದ್ಧಿ ಆಗಬೇಕಿದೆ. ಈ ದಿಸೆಯಲ್ಲಿ ಈ ಸ್ಥಳವನ್ನು ಅಂತರಾಷ್ಟ್ರೀಯ ಸ್ಮಾರಕ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ವಿಶೇಷ ಗಮನ ಕೊಡಬೇಕು ಎಂದು ಮನವಿ ಮಾಡಿದರು.

ಕಳೆದ ಒಂದು ವಾರದ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‍ನಲ್ಲಿ ಹೊಸೂರಿನ ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರಕ್ಕೆ 10 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಅಲ್ಲದೆ, ವಿಶ್ವವಿಖ್ಯಾತ ನಂದಿಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಘೋಷಿಸಿದ್ದು, ಎತ್ತಿನಹೊಳೆ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಆಂಧ್ರದ ಕೃಷ್ಣಾನದಿಯಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ 5 ಟಿಎಂಸಿ ನೀರು ತರಲು ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ನೀರು ಹರಿಸಬೇಕು ಎಂದು ಅವರು ಮನವಿ ಮಾಡಿದರು.

ವಿದುರಾಶ್ವತ್ಥ ಸಮಗ್ರ ಅಭಿವೃದ್ಧಿ ಆಗಲಿ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಹಾಗೂ ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ; “ಮುಖ್ಯಮಂತ್ರಿ ಯಡಿಯೂರಪ್ಪರವರು ಬಜೆಟ್‍ನಲ್ಲಿ ಹೊಸೂರಿನ ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರಕ್ಕೆ 10 ಕೋಟಿ ಅನುದಾನ ನೀಡಿರುವುದು ಸ್ವಾಗತಾರ್ಹ. ಹಾಗೆಯೇ ವಿದುರಾಶ್ವತ್ಥ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸವಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಗೌರಿಬಿದನೂರು ತಾಲೂಕಿನ ಪಾತ್ರವೂ ಸಹ ಹೆಚ್ಚಾಗಿದ್ದು, ಈ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಇ.ಡಿ.ಸಿ. ಎಂಬ ಸಂಸ್ಥೆಯು ವಿದುರಾಶ್ವತ್ಥದ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯೊಂದನ್ನು ತಯಾರಿಸಿದ್ದು, ಇದಕ್ಕಾಗಿ ಅಂದಾಜು 16 ಕೋಟಿ ರೂ. ಹಣ ಬೇಕಾಗಿದೆ. ಈ ಹಣವನ್ನು ಮುಖ್ಯಮಂತ್ರಿಗಳು ನೀಡುವ ಮೂಲಕ ವಿದುರಾಶ್ವತ್ಥವನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಸಹಕಾರ ನೀಡಬೇಕು ಎಂದರು.

ಅಲ್ಲದೆ ಮಿನಿ ವಿಧಾನಸೌಧದ ಬಳಿ ಅಂಬೇಡ್ಕರ್ ಸೌಧ ನಿರ್ಮಾಣ ಮಾಡಿದ್ದು, ಅಲ್ಲಿ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಸಾರುವ ಪೋಟೋ ಗ್ಯಾಲರಿ, ಗ್ರಂಥಾಲಯ ಸ್ಥಾಪನೆ ಹಾಗೂ ಐಎಎಸ್, ಐಪಿಎಸ್‍ನಂತಹ ಸ್ಮರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ತರಬೇತಿ ನೀಡಲು ತರಬೇತಿ ಕೇಂದ್ರಕ್ಕೆ 5 ಕೋಟಿ ಅನುದಾನ ಬೇಕಿದ್ದು, ಇದನ್ನೂ ಸಹ ಮುಖ್ಯಮಂತ್ರಿಗಳು ಕೊಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಬ್ರಹ್ಮಯ್ಯ ಮತ್ತು ಎಂ.ನಂಜಪ್ಪ ಅವರನ್ನು ಗೌರವಿಸಲಾಯಿತು.

ಪ್ರಾದೇಶಿಕ ಜನಸಂಪರ್ಕ ಇಲಾಖೆ ವತಿಯಿಂದ ವಿದುರಾಶ್ವತ್ಥದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿದರು. ಇದೇ ಅವರು ವೀರಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಯೋಗದ ಮೂಲಕ ಚಾಲನೆ

75ನೇ ವರ್ಷದ ಸ್ವಾತಂತ್ರೋತ್ಸವದ ಅಜಾದ್ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮೊತ್ತ ಮೊದಲಿಗೆ ಬೆಳಗ್ಗೆ ಯೋಗಾಸನದ ಮೂಲಕ ಚಾಲನೆ ನೀಡಲಾಯಿತು.

ಇಲ್ಲಿನ ವೀರಸೌಧದ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರ ಸ್ಥೂಪದ ಪಕ್ಕದಲ್ಲಿ ಶ್ರೀ ಪಥಂಜಲಿ ಯೋಗ ಸಮಿತಿ ವತಿಯಿಂದ ಸುಮಾರು 75 ಮಂದಿ ಯೋಗಾಪಟುಗಳು ಯೋಗಾಸನ ನಡೆಸಿಕೊಟ್ಟರು. ಇದಕ್ಕೂ ಮೊದಲು ಸೈಕಲ್‌ ಜಾಥಾ ಕೂಡ ನಡೆಯಿತು.

ಈ ಸಂದರ್ಭದಲ್ಲಿ ಸಂಸದರಾದ ಬಿ.ಎನ್.ಬಚ್ಚೇಗೌಡ, ಮುನಿಸ್ವಾಮಿ, ಜಿ.ಪಂ. ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಸಂಸದರಾದ ಪಿ.ಸಿ.ಮೋಹನ್, ಶಿವಕುಮಾರ್ ಉದಾಸಿ, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಜಿಪಂ ಸಿಇಒ ಪಿ.ಶಿವಶಂಕರ್, ಎಸ್‍ಪಿ ಜಿ.ಕೆ.ಮಿಥುನ್‍ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ಶ್ರೀನಿವಾಸ್, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು; ಮಧು ಬಂಗಾರಪ್ಪ ರಕ್ತಗತವಾಗಿ ಕಾಂಗ್ರೆಸ್ಸಿಗರು ಎಂದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು; ಮಧು ಬಂಗಾರಪ್ಪ ರಕ್ತಗತವಾಗಿ ಕಾಂಗ್ರೆಸ್ಸಿಗರು ಎಂದ ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ