• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ 2ನೇ ಅಲೆ ಹೈ ಅಲರ್ಟ್‌! ಕಟ್ಟೆಚ್ಚರ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಮುಖ್ಯಮಂತ್ರಿ; ಲಾಕ್‌ಡೌನ್‌, ಕರ್ಫ್ಯೂ ಸೇರಿ ಎಲ್ಲ ಕ್ರಮಗಳ ಬಗ್ಗೆ ಸಮಾಲೋಚನೆ

cknewsnow desk by cknewsnow desk
March 15, 2021
in COVID-19, STATE
Reading Time: 1 min read
0
ಕೋವಿಡ್‌ 2ನೇ ಅಲೆ ಹೈ ಅಲರ್ಟ್‌! ಕಟ್ಟೆಚ್ಚರ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಮುಖ್ಯಮಂತ್ರಿ; ಲಾಕ್‌ಡೌನ್‌, ಕರ್ಫ್ಯೂ ಸೇರಿ ಎಲ್ಲ ಕ್ರಮಗಳ ಬಗ್ಗೆ ಸಮಾಲೋಚನೆ
936
VIEWS
FacebookTwitterWhatsuplinkedinEmail

ಕೋವಿಡ್‌ ಎರಡನೇ ಅಲೆ ಬಗ್ಗೆ ಕಂಗಾಲಾಗಿರುವ ಸರಕಾರ, ಎಲ್ಲ ಸಾಧ್ಯತೆಗಳನ್ನು ಇಟ್ಟುಕೊಂಡಿದೆ. ಜನರು ಸಹಕಾರ ಕೊಟ್ಟು ಮುನ್ನಚ್ಚರಿಕೆ ವಹಿಸದಿದ್ದರೆ ಲಾಕ್‌ಡೌನ್‌, ಕರ್ಫ್ಯೂ ಜಾರಿ ಬಗ್ಗೆಯೂ ಮುಕ್ತ ಮನಸ್ಸು ಹೊಂದಿರುವುದು ಗೊತ್ತಾಗಿದೆ!!


ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಅಟ್ಟಹಾಸ ಮತ್ತೆ ಶುರುವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತುರ್ತುಸಭೆ ನಡೆಸಿದರು.

ಕೆಲ ಹಿರಿಯ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜತೆ ಮಹತ್ವದ ಮಾತುಕತೆ ನಡೆಸಿದ ಅವರು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.

ನೆರೆ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್‌ ಸೋಂಕು ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌, ಕರ್ಫ್ಯೂ ಮತ್ತಿತರೆ ಕ್ರಮಗಳನ್ನು ಕೈಗೊಳ್ಳಬೇಕೆ ಬೇಡವೇ ಎಂಬ ಬಗ್ಗೆ ಸಿಎಂ ಅವರು ತಜ್ಞರ ಜತೆ ಸಮಾಲೋಚಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯದಲ್ಲಿರುವ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ವಿವರವಾಗಿ ಸಭೆಗೆ ತಿಳಿಸಿದರು.

ಕಳೆದ 14 ದಿನಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆಯಾಗಿದೆ. ಆದರೂ ಎಚ್ಚೆತ್ತುಕೊಳ್ಳಲೇಬೇಕಾಗಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಇದು ಕೋವಿಡ್ 19ರ ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಉಪೇಕ್ಷೆ ಮಾಡುವುದು ಬೇಡ ಎಂದು ಅವರು ಎಚ್ಚರಿಸಿದರು.

ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕಾಗಿದೆ ಎಂದು ಅಧಿಕಾರಿಗಳು ಸಲಹೆ ನೀಡಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಿಎಂ; ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಕೂಡಲೇ ಮಾಡುವಂತೆ ಆರೋಗ್ಯ ಸಚಿವರಿಗೆ ಸೂಚಿಸಿದರು.

ಕೋವಿಡ್-19ಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @BSYBJP ರವರು ಇಂದು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ @drashwathcn, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ @mla_sudhakar, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. pic.twitter.com/RUp8AOjkiT

— CM of Karnataka (@CMofKarnataka) March 15, 2021

ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ.58ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದಲ್ಲದೆ, ಮತದಾರರ ಪಟ್ಟಿಯನ್ನು ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ, ಲಸಿಕೆ ಹಾಕುವುದು ಕಡ್ಡಾಯ ಎಂದರು.

ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕಾಗಿ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಸಲಹೆಗಳನ್ನು ಪಾಲಿಸಬೇಕು ಎಂದು ಸಿಎಂ ಹೇಳಿದರು.

ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಸಲಹೆಗಳು ಹೀಗಿವೆ

  • ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಉಲ್ಲಂಘನೆಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವುದು.
  • ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ನಿಯಂತ್ರಿಸುವುದು.
  • ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ವಿಶೇಷವಾಗಿ ರೋಗ ಲಕ್ಷಣ ಇರುವವರು, ಅಂಗಡಿ ಮಾಲೀಕರು, ಬಸ್ ನಿರ್ವಾಹಕರು ಮತ್ತಿತರರಿಗೆ ಪರೀಕ್ಷೆ ನಡೆಸುವುದು.
  • ಸಂಪರ್ಕಿತರ ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸುವುದು.
  • ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವುದು.
  • ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಿ, ಹಿಂದಿನಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವುದು.
  • ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯವನ್ನು ಚುರುಕುಗೊಳಿಸುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು. ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್ ಕ್ಲಬ್ ಗಳಂತಹ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು.
  • ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನನ್ನು ಕರೆದೊಯ್ಯದಿರುವುದು.
  • ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ಸುದರ್ಶನ್, ಡಾ. ರವಿ, ಪ್ರೊ. ಗಿರಿಧರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಮೊದಲಾದವರು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಮಂಡಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಮಣರೆಡ್ಡಿ ಮತ್ತಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: bs yediyurappaCovid second wavecovid19karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಂಗರೇಖನಹಳ್ಳಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ಕುರಿತು ಜಾಗೃತಿಯ ಪಾಠ

ಅಂಗರೇಖನಹಳ್ಳಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ಕುರಿತು ಜಾಗೃತಿಯ ಪಾಠ

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ