• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸೂಕ್ಷ್ಮ ಜೈವಿಕ ತಾಣ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಬೆಂಕಿ; ಅಪಾರ ಜೀವ ಸಂಕುಲ, ವೃಕ್ಷ ಸಂಪತ್ತು ಅಗ್ನಿಗೆ ಆಹುತಿ

P K Channakrishna by P K Channakrishna
March 16, 2021
in CHIKKABALLAPUR, KOLAR, STATE
Reading Time: 2 mins read
0
ಸೂಕ್ಷ್ಮ ಜೈವಿಕ ತಾಣ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಬೆಂಕಿ; ಅಪಾರ ಜೀವ ಸಂಕುಲ, ವೃಕ್ಷ ಸಂಪತ್ತು ಅಗ್ನಿಗೆ ಆಹುತಿ
951
VIEWS
FacebookTwitterWhatsuplinkedinEmail

ಕೆಲ ತಿಂಗಳ ಹಿಂದೆಯಷ್ಟೇ ಸೂಕ್ಷ್ಮಜೈವಿಕ ತಾಣವಾಗಿ ಘೋಷಿಸಲ್ಪಟ್ಟಿದ್ದ ಹಾಗೂ ಪವಿತ್ರ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದಾದ ಎಲ್ಲೋಡು ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.


  • ಶ್ರೀ ಆದಿನಾರಾಯಣ ಸ್ವಾಮಿ ಬೆಟ್ಟದ ಹಸಿರು ನೋಟ.

ಗುಡಿಬಂಡೆ: ಕೆಲ ತಿಂಗಳ ಹಿಂದೆಯಷ್ಟೇ ಪಾರಂಪರಿಕ ಸೂಕ್ಷ್ಮ ಜೈವಿಕ ಪ್ರದೇಶವೆಂದು ಘೋಷಿಸಲ್ಪಟ್ಟಿದ್ದ ತಾಲ್ಲೂಕಿನ ಇತಿಹಾಸ ಮತ್ತು ಪುರಾಣ ಪ್ರಸಿದ್ಧ ಎಲ್ಲೋಡು ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸೋಮವಾರ ರಾತ್ರಿ 9.30 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೇಸಿಗೆಯ ತಾಪಮಾನದಿಂದ ಬೆಂಕಿಯ ಕೆನ್ನಾಲಿಗೆ ಕ್ಷಿಪ್ರವಾಗಿ ಇಡೀ ಬೆಟ್ಟವನ್ನು ಆವರಿಸಿಕೊಂಡಿದೆ. ಅಪಾರ ಪ್ರಮಾಣದ ಜೀವ ಸಂಕುಲ, ಅಪರೂಪದ ಮರಗಿಡಗಳು ಅಗ್ನಿಗೆ ಸಿಕ್ಕಿ ಭಸ್ಮವಾಗಿವೆ. ದುಷ್ಕರ್ಮಿಗಳು ಯಾರೋ ಬೆಂಕಿ ಹಚ್ಚಿದ್ದಾರೆ. ಅವರಿಗಾಗಿ ಬೇಟೆ ಶುರುವಾಗಿದೆ.

ಧಾರ್ಮಿಕ ಶ್ರದ್ಧಾ ಕೇಂದ್ರ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರವೂ ಆಗಿರುವ ಎಲ್ಲೋಡು ಆದಿನಾರಾಯಣ ಸ್ವಾಮಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ತಾಲ್ಲೂಕಿನಾದ್ಯಂತ ತೀವ್ರ ಸಂಚಲನ ಉಂಟು ಮಾಡಿದ್ದು, ಎಲ್ಲೋಡು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಜನರು ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ನೆರವಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ವಾಚರ್ಸ್‌, ಅರಣ್ಯ ಸಿಬ್ಬಂದಿ ಸೇರಿ 30ಕ್ಕೂ ಹೆಚ್ಚು ಜನ ಬೆಂಕಿಯನ್ನು ನಂದಿಸುತ್ತಿದ್ದಾರೆ. ಅಗ್ನಿಶಾಮಕ ದಳವೂ ಜತೆಯಾಗಿದೆ.

ಇನ್ನು ಬೇಸಿಗೆಯ ಆರಂಭದಲ್ಲೇ ಈ ಅಪರೂಪ ಬೆಟ್ಟವು ಬೆಂಕಿ ಕೆನ್ನಾಲಿಗೆಗೆ ಸಿಕ್ಕಿದ್ದು, ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ, ಸ್ಥಳಿಯ ಕಂದಾಯ ಅಧಿಕಾರಿಗಳು ತೀವ್ರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಶರವೇಗದಲ್ಲಿ ಹಬ್ಬುತ್ತಿರುವ ಬೆಂಕಿಯನ್ನು ಹತೋಟಿಗೆ ತರುವುದು ರಾತ್ರಿ 12 ಗಂಟೆಯಾದರೂ ಸಾಧ್ಯವಾಗಿರಲಿಲ್ಲ.

ರಾತ್ರಿ 11.30 ಗಂಟೆಗೆ ಸಿಕೆನ್ಯೂಸ್‌ ನೌ ಗೆ ಸಿಕ್ಕಿದ ಮಾಹಿತಿ ಪ್ರಕಾರ ಬೆಟ್ಟದ ಶೇ.60ರಷ್ಟು ಅರಣ್ಯ ಸುಟ್ಟು ಭಸ್ಮವಾಗಿತ್ತು ಎನ್ನಲಾಗಿದೆ. ಆದರೆ, ಬೆಂಕಿ ನಂದಿಸುವ ಕೆಲಸದಲ್ಲಿ ತಲ್ಲೀನರಾಗಿರುವ ಸಂಬಂಧಿತ ಯಾವ ಅಧಿಕಾರಿಯೂ ಮಾಹಿತಿಗೆ ಲಭ್ಯವಾಗಿಲ್ಲ.

ಅಪರೂಪದ ತಾಣ; ಜೀವ ವೈವಿಧ್ಯದ ಸ್ವರ್ಗ

ಕೆಲ ತಿಂಗಳ ಹಿಂದೆ ರಾಜ್ಯ ಜೀವ ವೈವಿಧ್ಯ ಮಂಡಳಿ ಎಲ್ಲೋಡು ಆದಿನಾರಾಯಣ ಸ್ವಾಮಿ ಬೆಟ್ಟದ ಪ್ರದೇಶವನ್ನು ʼಸೂಕ್ಷ್ಮ ಜೈವಿಕ ಪ್ರದೇಶʼ ಘೋಷಣೆ ಮಾಡಿತ್ತು. ಅಷ್ಟೇ ಅಲ್ಲದೆ, ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿನ ಜೀವ ವೈವಿಧ್ಯವನ್ನು ಕಂಡು ಮಾರು ಹೋಗಿದ್ದರು.

  • ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶಿಸೇಸರ ಬೆಟ್ಟಕ್ಕೆ ಭೇಟಿ ನೀಡಿದ್ದ ಕ್ಷಣ.

ಆದಿನಾರಾಯಣ ಸ್ವಾಮಿ ಬೆಟ್ಟದ ಪ್ರದೇಶವು ಅಪರೂಪದ ವೃಕ್ಷಗಳು, ಜೀವಿಗಳು, ಪಕ್ಷಿಗಳ ನೆಲೆಯಾಗಿದ್ದು, ಪ್ರಾಕೃತಿಕವಾಗಿ ಸಮೃದ್ಧವಾಗಿತ್ತು. ಆದರೆ, ʼಸೂಕ್ಷ್ಮ ಜೈವಿಕ ಪ್ರದೇಶʼದ ಮನ್ನಣೆ ಸಿಕ್ಕಿದ ನಂತರ ಬೆಂಕಿ ದುರಂತ ಸಂಭವಿಸಿರುವುದು ಪರಿಸರ ಪ್ರಿಯರಿಗೆ ದೊಡ್ಡ ಆಘಾತ ಉಂಟಾಗಿದೆ.

ಬೆಂಕಿ ದುರಂತ ಇದೇ ಮೊದಲು

ಎಲ್ಲೋಡು ಆದಿನಾರಾಯಣ ಸ್ವಾಮಿ ಬೆಟ್ಟದ ಇತಿಹಾಸದಲ್ಲಿಯೇ ಕಾಡಿಗೆ ಬೆಂಕಿ ಬಿದ್ದಿರುವುದು ಇದೇ ಮೊದಲು. ಇಡೀ ಬೆಟ್ಟ ಪ್ರದೇಶವನ್ನು ಜನರು ಪವಿತ್ರವಾಗಿ ನೋಡುತ್ತಾರಲ್ಲದೆ, ಇಡೀ ಪ್ರದೇಶದಲ್ಲಿ ಮರಗಳನ್ನಾಗಲಿ- ಗಿಡಗಳನ್ನಾಗಲಿ ಕಡಿಯುವುದಿಲ್ಲ. ಒಂದು ವೇಳೆ ಕಡಿದರೆ ಅದರಿಂದ ಮನೆಗೆ ಕೇಡಾಗುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಸುತ್ತಮುತ್ತಲ ಬೆಟ್ಟಗಳ ಪ್ರದೇಶದಲ್ಲಿ ಹಸಿರು ನಾಶವಾಗಿದ್ದರೂ ಈ ಬೆಟ್ಟದಲ್ಲಿ ಮಾತ್ರ ಮುಕ್ಕಾಗದೇ ಹಾಗೆಯೇ ಉಳಿದಿತ್ತು.

  • ಶ್ರೀ ಆದಿನಾರಾಯಣ ಬೆಟ್ಟವನ್ನು ಆವರಿಸಿಕೊಂಡಿರುವ ಬೆಂಕಿ.

ಈ ಎಲ್ಲ ಹಿನ್ನೆಲೆ ನೋಡಿದರೆ ಯಾರಾದರೂ ಕುಡುಕರು ಬೀಡಿ ಅಥವಾ ಸಿಗರೇಟ್‌ ಸೇದಿ ಬಿಸಾಡಿರಬಹುದು ಎಂದು ಶಂಕಿಸಲಾಗುತ್ತಿದೆ. ರಾತ್ರಿ ಹೊತ್ತಿನಲ್ಲಿ ಕುಡುಕರು ಅಲ್ಲಲ್ಲಿ ಕೂತು ಕುಡಿಯುವುದು, ಧೂಮಪಾನ ಮಾಡುವುದು ಸಾಮಾನ್ಯವೆಂಬಂತೆ ಆಗಿದೆ. ಈ ಬಗ್ಗೆ ದುಷ್ಕರ್ಮಿಗಳಿಗೆ ಯಾರ ಭಯ ಇಲ್ಲ ಎನ್ನುವುದು ಎಲ್ಲೋಡು ಗ್ರಾಮಸ್ಥರ ಆಕ್ರೋಶವಾಗಿದೆ.

ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದು

ಎಲ್ಲೋಡು, ಐತಿಹಾಸ ಪ್ರಸಿದ್ಧ ಗುಡಿಬಂಡೆ ತಾಲ್ಲೂಕಿಗೆ ಸೇರಿದ ಪ್ರಮುಖ ಪುಣ್ಯಧಾಮ. ಪರಮ ಪವಿತ್ರ ಪಂಚನಾರಾಯಣ ಕ್ಷೇತ್ರಗಳಲ್ಲಿ ಒಂದು. ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಉಗಮ ಸ್ಥಾನವೇ ಈ ಕೂರ್ಮಗಿರಿ.

ಎಲ್ಲೋಡು ಬೆಟ್ಟ ಸಂಪೂರ್ಣವಾಗಿ ಆಮೆ ಆಕಾರದಲ್ಲಿ ಇರುವುದರಿಂದ ಇದಕ್ಕೆ ʼಕೂರ್ಮಗಿರಿʼ ಎಂದು ಹೆಸರು ಬಂದಿದೆ. ಪಂಚನಾರಾಯಣ ಕ್ಷೇತ್ರಗಳ ಉಗಮ ಸ್ಥಾನ ಎಂದೂ ಪುರಾಣ ಪ್ರಸಿದ್ದವಾಗಿದೆ. ಉತ್ತರ ಭಾರತದ ಬದರಿ ಕ್ಷೇತ್ರದ ಶ್ರೀ ಬದರಿನಾರಾಯಣ, ಗದುಗಿನ ಶ್ರೀ ವೀರನಾರಾಯಣ, ಕೈವಾರ ಕ್ಷೇತ್ರದ ಶ್ರೀ ಅಮರನಾರಾಯಣ, ಮೇಲುಕೋಟೆ ಶ್ರೀ ಚೆಲುವನಾರಾಯಣ ಹಾಗೂ ಎಲ್ಲೋಡಿನ ಶ್ರೀ ಆದಿನಾರಾಯಣ, ಶ್ರೀ ಮಹಾವಿಷ್ಣು ಅವತಾರದ ಪಂಚನಾರಾಯಣ ಕ್ಷೇತ್ರಗಳೆಂದು ಪುರಾಣ ಪ್ರಸಿದ್ಧಿ ಪಡೆದುಕೊಂಡಿವೆ. ಇಲ್ಲಿ ಪ್ರತಿ ಭಾನುವಾರ ವಿಶೇಷ ಪೂಜೆಯೂ ನಡೆಯುತ್ತದೆ.

ಆದಿನಾರಾಯಣಸ್ವಾಮಿ ಬೆಟ್ಟದಲ್ಲಿ ಪ್ರಪಂಚದಲ್ಲಿನ ವಿವಿಧ ರೀತಿಯ ಮರಗಳು, ವಿವಿಧ ರೀತಿ ಪಕ್ಷಿ ಪ್ರಭೇದ, ಪ್ರಾಣಿ ಸಂಕುಲಗಳಿವೆ. ಹಚ್ಚ ಹಸಿರಿನ ಆಮೆಯಾಕಾರದ ಕೂರ್ಮಗಿರಿಯು ಧಾರ್ಮಿಕ ಕ್ಷೇತ್ರವೂ ಆಗಿದ್ದು, ಜೀವಸಂಕುಲಗಳ ವಾಸಸ್ಥಾನವಾಗಿದೆ.

ಇಂಥ ಪರಮ ಪವಿತ್ರ ಕ್ಷೇತ್ರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಜನರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

Tags: chikkaballapurfire at forestgudibandeSri Lakshmi Adinarayana Swamy Templeyellodu
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕೋವಿಡ್‌ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ; ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದ ಡಾ.ಕೆ.ಸುಧಾಕರ್!!

Leave a Reply Cancel reply

Your email address will not be published. Required fields are marked *

Recommended

ಕನ್ನಡದ ಮೇಲೆ ಕಾಳಜಿ, ಜಿಲ್ಲೆಯ ಮೇಲೆ ಮಮತೆ, ನೆಲ-ಜಲ, ಭಾಷೆ ಬಗ್ಗೆ ಕಳಕಳಿ; ಸಪ್ತನದಿಗಳ ಪುನರುಜ್ಜೀವನದ ಕನಸು ಭಿತ್ತಿದ ಚಿಕ್ಕಬಳ್ಳಾಪುರ ಜಿಲ್ಲೆಯ ೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು

ಕನ್ನಡದ ಮೇಲೆ ಕಾಳಜಿ, ಜಿಲ್ಲೆಯ ಮೇಲೆ ಮಮತೆ, ನೆಲ-ಜಲ, ಭಾಷೆ ಬಗ್ಗೆ ಕಳಕಳಿ; ಸಪ್ತನದಿಗಳ ಪುನರುಜ್ಜೀವನದ ಕನಸು ಭಿತ್ತಿದ ಚಿಕ್ಕಬಳ್ಳಾಪುರ ಜಿಲ್ಲೆಯ ೮ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರು

5 years ago
ಐಟಿ ದಾಳಿ: ಪ್ರತಿಕ್ರಿಯೆ ಇಲ್ಲ ಎಂದ ಹೆಚ್ಡಿಕೆ

ಐಟಿ ದಾಳಿ: ಪ್ರತಿಕ್ರಿಯೆ ಇಲ್ಲ ಎಂದ ಹೆಚ್ಡಿಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ