• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಎರಡನೇ ಅತ್ಯುನ್ನತ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗರಾದ ಸೊರಬದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆ

cknewsnow desk by cknewsnow desk
March 20, 2021
in NATION, STATE
Reading Time: 1 min read
0
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಎರಡನೇ ಅತ್ಯುನ್ನತ ಸರಕಾರ್ಯವಾಹ ಸ್ಥಾನಕ್ಕೆ ಕನ್ನಡಿಗರಾದ ಸೊರಬದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆ
917
VIEWS
FacebookTwitterWhatsuplinkedinEmail

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಎರಡನೇ ಅತ್ಯುನ್ನತ ಸ್ಥಾನವಾದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ʼಅಖಿಲ ಭಾರತೀಯ ಪ್ರತಿನಿಧಿ ಸಭಾʼ (ಎಬಿಪಿಎಸ್) ದಲ್ಲಿ ದತ್ತಾತ್ರೇಯ ಹೊಸಬಾಳೆ ಅವರು ಸರಕಾರ್ಯವಾಹ ಆಗಿ ಆಯ್ಕೆಯಾಗಿದ್ದು, ರಾಜ್ಯದ ಪಾಲಿಗೆ ಇದೊಂದು ಮಹತ್ತ್ವದ ಬೆಳವಣಿಗೆಯಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸರಸಂಘಚಾಲಕ್ ಪದವಿಯೂ ಅತ್ಯುನ್ನತ ಹೊಣೆಗಾರಿಕೆಯಾಗಿದೆ. ಇನ್ನು; ಸರಕಾರ್ಯವಾಹ ಹೊಣೆಯು ಸಂಘದಲ್ಲಿ ಎರಡನೇ ಅತ್ಯುನ್ನತ ಹಾಗೂ ಅತ್ಯಂತ ಮಹತ್ತ್ವದ ಹೊಣೆಗಾರಿಕೆಯುಳ್ಳ ಸ್ಥಾನವಾಗಿದೆ.

ಮೋಹನ್ ಜೀ ಭಾಗ್ವತ್ ಅವರು ಸರಸಂಘಚಾಲಕ್ʼರಾಗಿ ಸದ್ಯಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೆಯೇ, 2009ರಿಂದ ಈವರೆಗೂ ಸುರೇಶ್ ಭೈಯ್ಯಾಜಿ ಜೋಷಿ ಅವರು ಸರಕಾರ್ಯವಾಹ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ದತ್ತಾತ್ರೇಯ ಹೊಸಬಾಳೆ ಅವರು ಸುರೇಶ್ ಭೈಯ್ಯಾಜಿ ಜೋಷಿ ಅವರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ಹೋ.ವೇ ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಕೆಲಸ ಮಾಡಿದ್ದರು. ಅವರ ನಂತರ ದತ್ತಾತ್ರೇಯ ಹೊಸಬಾಳೆ ಅವರು ಆ ಅತ್ಯುನ್ನತ ಸ್ಥಾನಕ್ಕೆ ಬಂದಿರುವ ಕನ್ನಡಿಗರು.

Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4

— RSS (@RSSorg) March 20, 2021

ಅಂದ ಹಾಗೆ, ಆರ್‌ಎಸ್‌ಎಸ್‌ ಈ ಬಗ್ಗೆ ಅಧಿಕೃತವಾಗಿ ಟ್ವೀಟ್‌ ಮಾಡಿ ಪ್ರಕಟಣೆ ನೀಡಿದೆ.

ಹೊಸಬಾಳೆ ಅವರ ಬಗ್ಗೆ

1954 ಡಿಸೆಂಬರ್‌ 1ರಂದು ಜನಿಸಿದ ದತ್ತಾತ್ರೇಯ ಹೊಸಬಾಳೆ ಅವರು ಶಿವಮೊಗ್ಗ ಜಿಲ್ಲೆಯ ಸೊರಬದವರು. ತಂದೆ ಹೊಸಬಾಳೆ ಶೇಷಗಿರಿಯಪ್ಪ, ತಾಯಿ ಮೀನಾಕ್ಷಮ್ಮ. ಅವರಿಗೆ ನಾಲ್ವರು ಸಹೋದರಿಯರು, ಇಬ್ಬರು ಸಹೋದರರು. ಇಂಗ್ಲೀಷ್‌ನಲ್ಲಿ ಎಂ.ಎ. ಆನರ್ಸ್‌ ವ್ಯಾಸಂಗ ಮಾಡಲು 1974ರಲ್ಲಿ ಸೆಂಟ್ರಲ್‌ ಕಾಲೇಜ್‌ಗೆ ಸೇರಿದ್ದ ಅವರು, 1975ರಲ್ಲಿ ತಮ್ಮ ವ್ಯಾಸಂಗವನ್ನು ಅರ್ಧಕ್ಕೆ ಬಿಟ್ಟು ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ನವನಿರ್ಮಾಣ ಆಂದೋಲನದಲ್ಲಿ ಭಾಗಿಯಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅವರು 16 ತಿಂಗಳು ಜೈಲುವಾಸ ಅನುಭವಿಸಿದ್ದರು. ಪುನಾ 1977ರಲ್ಲಿ ಸೆಂಟ್ರಲ್‌ ಕಾಲೇಜ್‌ಗೆ ಬಂದು ಎಂ.ಎ. ಪೂರ್ಣಗೊಳಿಸಿದರು.

ಕಾಲೇಜ್‌ನಲ್ಲಿ ದಲಿತ ಕವಿ ಸಿದ್ದಲಿಂಗಯ್ಯ, ಕಿ.ರಂ.ನಾಗರಾಜ್ ಅವರುಗಳು ಹೊಸಬಾಳೆ ಅವರ ಕ್ಲಾಸ್‌ಮೇಟ್ ಆಗಿದ್ದರು.‌ ಪಿ.ಲಂಕೇಶ್‌ ಅವರು ಹೊಸಬಾಳೆ ಅವರ ಗುರುಗಳಾಗಿದ್ದರು. ಜೇಪಿ ಆಂದೋಲನಕ್ಕೆ ಧುಮುಕುವ ಮುನ್ನವೇ ಅವರು 1975ರಲ್ಲೇ ಆರ್‌ಎಸ್‌ಎಸ್‌ ಓಟಿಸಿ (ಆಫೀಸರ್ಸ್‌ ಟ್ರೈನಿಂಗ್‌ ಕೋರ್ಸ್‌ )ಯನ್ನು ಮಧ್ಯಪ್ರದೇಶದ ದುರ್ಗ್‌ನಲ್ಲಿ ಪೂರ್ಣಗೊಳಿಸಿದರು.

1975 ಜೂನ್‌ 25-26ರ ಮಧ್ಯರಾತ್ರಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದಾಗ ಬಿಜೆಪಿ ಹಿರಿಯ ನಾಯಕರಾದ ಅಟಲ್‌ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಎಸ್.ಎನ್.ಮಿಶ್ರಾ ಹಾಗೂ ಮಧುಡಂಡವತೆ ಅವರು ಬೆಂಗಳೂರಿನಲ್ಲಿ ಒಂದು ಸಂಸದೀಯ ಸಭೆಯಲ್ಲಿದ್ದರು. ಆ ಎಲ್ಲ ನಾಯಕರಿಗೆ ತುರ್ತು ಪರಿಸ್ಥಿತಿ ಮಾಹಿತಿಯನ್ನು ಮೊದಲು (26ರ ಬೆಳಗ್ಗೆ) ಮುಟ್ಟಿಸಿದವರೇ ದತ್ತಾತ್ರೇಯ ಹೊಸಬಾಳೆ ಅವರು.

ಹೋರಾಟನ್ನು ರೂಪಿಸುವ ಸಲುವಾಗಿ ಹೊಸಬಾಳೆ ಅವರು ಕೂಡಲೇ ಭೂಗತರಾದರು. ಈ ಸಂದರ್ಭದಲ್ಲಿ ಅವರ ರಾಜ್ಯವ್ಯಾಪಿ ಪ್ರವಾಸ ಮಾಡಿ ವಿದ್ಯಾರ್ಥಿಗಳನ್ನು ಸಂಘಟಿಸಿದರು. ಆದರೆ, ಅವರನ್ನು 1975ಡಿಸೆಂಬರ್ 18ರಂದು ಮೀಸಾ ಕಾಯ್ದೆಯಡಿ ಬಂಧಿಸಲಾಯಿತು. ‌ ಮೊದಲು 7 ತಿಂಗಳು ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಯಿತು. ನಂತರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. 1977ರ ಫೆಬ್ರವರಿಯಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆದ ಮೇಲೆ ಅವರನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.

1968ರಲ್ಲಿ ಆರ್‌ಎಸ್‌ಎಸ್‌ ಸೇರಿದ ಹೊಸಬಾಳೆ ಅವರು, 1972ರಲ್ಲಿ ಎಬಿವಿಪಿಗೆ ಬಂದರು. ಎಬಿವಿಪಿ ಪ್ರಧಾನ ಕಾರ್ಯದರ್ಶಿಯಾಗಿ 15 ವರ್ಷ ಸೇವೆ ಮಾಡಿದ್ದರು. 1978ರಿಂದ ಅವರು ಪೂರ್ಣ ಪ್ರಮಾಣದ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅಸೋಮ್‌ನ ಗುವಾಹಟಿಯಲ್ಲಿ ಯುವ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವಲ್ಲಿ ಇವರದ್ದು ಮಹತ್ತ್ವದ ಪಾತ್ರ.

ಇನ್ನೂ ಹೊಸಬಾಳೆ ಅವರು ಸಂಘದಿಂದ ಪ್ರಕಟವಾಗುವ ʼಆಸೀಮಾʼ ಮಾಸ ಪತ್ರಿಕೆಯ ಸಂಸ್ಥಾಪಕ ಸಂಪಾದಕರೂ ಆಗಿದ್ದರು. 2003ರಲ್ಲಿ ಸಹ ಬೌದ್ಧಿಕ್‌ ಪ್ರಮುಖ್‌ ಆಗಿ ನೇಮಕವಾದ ಅವರು 2009ರವರೆಗೂ ಆ ಹುದ್ದೆಯಲ್ಲಿದ್ದರು. 2009ರಲ್ಲಿ ಅವರನ್ನು ಸಂಘದ ಸಹ ಸರಕಾರ್ಯವಾಹ ಹುದ್ದೆಗೆ ನೇಮಿಸಲಾಯಿತು. ಬಳಿಕ ತಮ್ಮ ಕಾರ್ಯಕ್ಷೇತ್ರವನ್ನು ಬೆಂಗಳೂರಿನಿಂದ ಮುಂಬಯಿ, ಗುವಾಹಟಿ, ಪಟನಾಕ್ಕೆ ಬದಲಿಸಿದ್ದರು. ಈಗ ಅವರು ಲಖನೌದಲ್ಲೇ ಹೆಚ್ಚು ಇರುತ್ತಾರೆ.

ಸಂಘದ ಪ್ರಚಾರಕರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲವನ್ನು ಸವೆಸಿರುವ ಅವರು, ತಾವು ನಂಬಿದ ಸಿದ್ದಾಂತದ ವಿರುದ್ಧ ಧಿಕ್ಕಿನಲ್ಲಿರುವವರ ಜತೆಯೂ ಸೌಹಾರ್ದ ಸಂವಾದ ನಡೆಸಿದವರು. ಈ ಕಾರಣಕ್ಕಾಗಿಯೇ ಹೊಸಬಾಳೆ ಅವರಿಗೆ ಶೂದ್ರ ಶ್ರೀನಿವಾಸ, ಡಿ.ಆರ್.‌ನಾಗರಾಜ್‌, ರಾಮ್‌ ಮೋಹನ್‌, ಸಮಾಜವಾದಿ ಹೋರಾಟಗಾರ ವೆಂಕರಾಮ್‌, ರಂಗಕರ್ಮಿ ಪ್ರಸನ್ನ ಅವರಂಥ ಅನೇಕ ಸ್ನೇಹಿತರಿದ್ದಾರೆ.

ಪಂಚಭಾಷೆಗಳಲ್ಲಿ ಪ್ರವೀಣರು. ಕನ್ನಡದ ಜತೆಗೆ ಇಂಗ್ಲೀಷ್‌ ಹಿಂದಿ, ತಮಿಳು, ಸಂಸ್ಕೃತದಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ.

Tags: BengaluruDattatreya Hosabaleindiakarnatakarashtriya swayamsevak sanghrss
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಶ್ವ ಗುಬ್ಬಚ್ಚಿಗಳ ದಿನ ಆಯಿತು; ಇನ್ನು ಪರಿಸರಕ್ಕೆ ಬೆಟ್ಟದಷ್ಟು ಒಳ್ಳೆಯದು ಮಾಡುವ ಈ ಪುಟ್ಟ ಪಕ್ಷಿಗಳನ್ನು ಕಾಪಾಡಿಕೊಳ್ಳೋಣ, ಮುಂದಿನ ತಲೆಮಾರಿಗೂ ಉಳಿಸಿಕೊಳ್ಳೋಣ

ವಿಶ್ವ ಗುಬ್ಬಚ್ಚಿಗಳ ದಿನ ಆಯಿತು; ಇನ್ನು ಪರಿಸರಕ್ಕೆ ಬೆಟ್ಟದಷ್ಟು ಒಳ್ಳೆಯದು ಮಾಡುವ ಈ ಪುಟ್ಟ ಪಕ್ಷಿಗಳನ್ನು ಕಾಪಾಡಿಕೊಳ್ಳೋಣ, ಮುಂದಿನ ತಲೆಮಾರಿಗೂ ಉಳಿಸಿಕೊಳ್ಳೋಣ

Leave a Reply Cancel reply

Your email address will not be published. Required fields are marked *

Recommended

ಹಾಡಿದವು ಕಣ್ಣುಗಳು!!

ಹಾಡಿದವು ಕಣ್ಣುಗಳು!!

6 years ago
ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ