• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಐಐಟಿ ಕನಸಿದ್ದರಿಗೂ ಅನುಕೂಲ: CET, NEET‌ & JEE ವಿದ್ಯಾರ್ಥಿಗಳಿಗೂ GetCETgo ಆನ್‌ಲೈನ್‌ ಕೋಚಿಂಗ್; ವೆಬ್‌, ಯುಟ್ಯೂಬ್, ಆಪ್‌ ಮೂಲಕವೂ ಸರಳವಾಗಿ ಕಲಿಯಬಹುದು

P K Channakrishna by P K Channakrishna
March 22, 2021
in NEWS IN USE, STATE
Reading Time: 1 min read
0
ಐಐಟಿ ಕನಸಿದ್ದರಿಗೂ ಅನುಕೂಲ: CET, NEET‌ & JEE ವಿದ್ಯಾರ್ಥಿಗಳಿಗೂ GetCETgo ಆನ್‌ಲೈನ್‌ ಕೋಚಿಂಗ್; ವೆಬ್‌, ಯುಟ್ಯೂಬ್, ಆಪ್‌ ಮೂಲಕವೂ ಸರಳವಾಗಿ ಕಲಿಯಬಹುದು
914
VIEWS
FacebookTwitterWhatsuplinkedinEmail

ಕೋವಿಡ್‌ ಎರಡನೇ ಅಲೆ ಇದ್ದರೂ ಕಾಲೇಜುಗಳನ್ನು ಬಂದ್‌ ಮಾಡುವುದಿಲ್ಲ; ಶೈಕ್ಷಣಿಕ ವರ್ಷ ನಿರಾತಂಕ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್‌-ಸೆಟ್‌ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; “ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ತರಬೇತಿ ಕೊಡಲಾಗುವುದು. ಈ ಸೌಲಭ್ಯವನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಉಪ ಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಜತೆಗೆ; ಸಮಗ್ರ ಕಲಿಕಾ ವ್ಯವಸ್ಥೆ‌ (ಎಲ್‌ಎಂಎಸ್) ಕೂಡ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರ ಕೈಗೊಂಡ ಕ್ರಮಗಳು ಮೆಚ್ವುವಂತಹದ್ದು ಎಂದು ಮುಖ್ಯಮಂತ್ರಿಗಳು ಹೇಳಿದರು.

ವರ್ಷಪೂರ್ತಿ ಗೆಟ್‌ ಸೆಟ್‌ ಗೋ

ಈ ಸಂದರ್ಭದಲ್ಲಿ ʼಗೆಟ್‌ ಸೆಟ್‌ ಗೋʼ ಬಗ್ಗೆ ಸಮಗ್ರ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು; “ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಬರುವ ಶೈಕ್ಷಣಿಕ ವರ್ಷದಿಂದ ಇಡೀ ವರ್ಷಪೂರ್ತಿ ʼಗೆಟ್‌ ಸೆಟ್‌ ಗೋʼ ಮೂಲಕ ಕೋಚಿಂಗ್‌ ವ್ಯವಸ್ಥೆ ಇರುತ್ತದೆ” ಎಂದರು.

ಐಐಟಿಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಪ್ರಮಾಣವನ್ನು ಹೆಚ್ಚಿಸುವ ಗುರಿಯೊಂದಿಗೆ ಈ ಹೆಜ್ಜೆ ಇಡಲಾಗುತ್ತಿದೆ. ಜೆಇಇ, ನೀಟ್‌ ಪರೀಕ್ಷೆಗಳಲ್ಲಿ ಕನ್ನಡ ವಿದ್ಯಾರ್ಥಿಗಳು ಹೆಚ್ಚು ರಾಂಕ್‌ಗಳನ್ನು ಪಡೆಯುವ ನಿಟ್ಟಿನಲ್ಲಿ ಇದು ಸಹಕಾರಿ ಆಗಲಿದೆ. ಜತೆಗೆ; ಯಾವ ವಿದ್ಯಾರ್ಥಿಯೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕದಂತೆ ವರ್ಷವಿಡೀ ಗೆಟ್‌ ಸೆಟ್‌ ಗೋ ಮೂಲಕ ಅಧ್ಯಯನ ಮಾಡಬಹುದು ಎಂದು ಡಿಸಿಎಂ ಹೇಳಿದರು.

ಕಲಿಕೆ ಸುಲಭ ಮತ್ತು ಸರಳ

ಕಲಿಕೆ, ಪರಿಷ್ಕರಣೆ ಹಾಗೂ ಪರೀಕ್ಷೆ ಪರಿಕಲ್ಪನೆಯಲ್ಲಿ ʼಗೆಟ್‌ ಸೆಟ್‌ ಗೋʼ ಕೋಚಿಂಗ್‌ ವ್ಯವಸ್ಥೆ ರೂಪಿಸಲಾಗಿದ್ದು, ಇದರಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷಾರ್ಥಿಗಳಿಗೆ ಅತ್ಯಗತ್ಯವಾದ ಅಧ್ಯಯನ ಸಾಮಗ್ರಿಯ ಜತೆಗೆ ವಿಡಿಯೋಗಳು, ಪಠ್ಯ ಸಾರಾಂಶ, ಸಂವಾದಾತ್ಮಕ ಪರೀಕ್ಷೆಗಳು ಇರುತ್ತವೆ. ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂಥ ಉಪಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಆಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಆಕ್ಸೆಸ್‌ ಮಾಡುವುದು ಹೇಗೆ?

ʼಗೆಟ್‌ ಸೆಟ್‌ ಗೋʼ ಆನ್‌ಲೈನ್‌ ಫ್ಲಾಟ್‌ಫಾರಂಗೆ ಸುಲಭವಾಗಿ ಪ್ರವೇಶ ಪಡೆಯಬಹುದು. ಕರ್ನಾಟಕವೂ ಸೇರಿದಂತೆ ಸಿಇಟಿ ಬರೆಯಲಿಚ್ಚಿಸುವ ದೇಶದ ಯಾವ ವಿದ್ಯಾರ್ಥಿ ಬೇಕಾದರೂ ತನ್ನ ವಿವರಗಳನ್ನು ನಮೂದಿಸಿ ಆಕ್ಸಿಸ್‌ ಮಾಡಬಹುದು. ವೆಬ್‌ಸೈಟ್‌, ಯುಟ್ಯೂಬ್‌ ಅಥವಾ ಗೆಟ್‌ ಸೆಟ್‌ ಗೋ ಆಪ್‌ ಮೂಲಕ ಕೋಚಿಂಗ್‌ ಪಡೆಯಬಹುದು. ಈ ಆಪ್‌ ಅಂಡ್ರಾಯಿಡ್‌, ಐಓಎಸ್‌ನಲ್ಲೂ ಲಭ್ಯ. ಇದಕ್ಕೆ ಗೂಗಲ್‌ ಆಪ್ ಸ್ಟೋರ್‌ನಲ್ಲಿ 4.3 ರೇಟಿಂಗ್‌ ಇದೆ‌. ವಿದ್ಯಾರ್ಥಿಗಳು getcetgo.in ವೆಬ್ ಪೋರ್ಟ್, ಗೂಗಲ್ ಪ್ಲೇಸ್ಟೋರ್ ಆಯಂಡ್ರಾಯ್ಡ್ ಆಪ್ GetCETGO ಮೂಲಕ ಮಾಹಿತಿ ಪಡೆಯಬಹುದು ಹಾಗೂ ತಮ್ಮ ವಿವರಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದರು.

ಕಳೆದ ವರ್ಷ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದ ದೀಕ್ಷಾ ಸಂಸ್ಥೆಯವರೇ ಈ ವರ್ಷವೂ ತರಬೇತಿ ನೀಡುತ್ತಿದ್ದು, ವಿದ್ಯಾರ್ಥಿ ಮತ್ತು ಪೋಷಕರು ಇನ್ನೂ ಕೋವಿಡ್‌ ಸಂಕಷ್ದದಿಂದ ಹೊರಬಾರದ ಹಿನ್ನೆಲೆಯಲ್ಲಿ ಸರಕಾರ ʼಗೆಟ್‌-ಸೆಟ್‌ ಗೋʼ ಕಾರ್ಯಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆಗೂ ತಯಾರಿ ನಡೆಸುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕವೇ ಅತ್ಯುತ್ತಮ ಕೋಚಿಂಗ್‌ ನೀಡಲಾಗುವುದು ಎಂದು ಅವರು ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ GetCETgo ಆನ್‍ಲೈನ್ ಪೋರ್ಟಲ್ ಸೇವೆಯನ್ನು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ @BSYBJP ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ @drashwathcn, ಪ್ರಾಥಮಿಕ ಶಿಕ್ಷಣ ಸಚಿವ @nimmasuresh, ಆರೋಗ್ಯ ಸಚಿವ @mla_sudhakar, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/NAZxGow3V1

— CM of Karnataka (@CMofKarnataka) March 22, 2021


ಕೋವಿಡ್‌ಎರಡನೇ ಅಲೆ; ಕಾಲೇಜುಗಳು ಸ್ಥಗಿತ ಇಲ್ಲ

ಯಾವುದೇ ಕಾರಣಕ್ಕೂ ಆರಂಭವಾಗಿರುವ ಕಾಲೇಜುಗಳನ್ನು ಸ್ಥಗಿತ ಮಾಡುವುದಿಲ್ಲ. ಈಗಾಗಲೇ ಒಂದು ವರ್ಷ ವ್ಯರ್ಥವಾಗಿರುವುದು ಸಾಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಬಿಎಂಎಸ್‌ ಕಾಲೇಜ್‌ ಸೇರಿ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬಂದಿದೆ ಎಂದು ಸುದ್ದಿಗಾರರು ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ: “ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ಕ್ಲಾಸ್‌ ಕಡ್ಡಾಯವಲ್ಲ, ಆಫ್‌ಲೈನ್‌ ಅಥವಾ ಆನ್‌ಲೈನ್‌ನಲ್ಲೂ ಹಾಜರಾಗಬಹುದು. ಆದರೆ, ಹಾಜರಾತಿ ಕಡ್ಡಾಯ. ಆಯಾ ಶಿಕ್ಷಣ ಸಂಸ್ಥೆಗಳು ಇನ್ನೂ ಉತ್ತಮವಾಗಿ ಕೋವಿಡ್‌ ಪರಿಸ್ಥಿತಿಯನ್ನು ನಿಭಾಯಿಸಬೇಕು. ಪರಿಣಾಮಕಾರಿಯಾಗಿ ಪರೀಕ್ಷೆ ಮಾಡಬೇಕು. ಸ್ಯಾನಿಟೈಸೇಷನ್‌, ಮಾಸ್ಕ್‌, ದೈಹಿಕ ಅಂತರ ಕಾಪಾಡಿಕೊಳ್ಳುವತ್ತ ಹೆಚ್ಚು ನಿಗಾ ಇಡಬೇಕು” ಎಂದು ಸಲಹೆ ಮಾಡಿದರು.

ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ವ್ಯತ್ಯಯ ಆಗಬಾರದು. ಪರಿಸ್ಥಿತಿಯನ್ನು ಎದುರಿಸಲು ಎಲ್ಲ ತಯಾರಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಮಾಡಿಕೊಳ್ಳಬೇಕು. ಈಗಾಗಲೇ ವ್ಯಾಕ್ಸಿನ್‌ ಬಂದಿದೆ. ಎರಡನೇ ಅಲೆ ಎದ್ದಿದೆ ಎನ್ನುವ ಕಾರಣಕ್ಕೆ ಆಫ್‌ಲೈನ್‌ ತರಗತಿಗಳನ್ನು ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ ಕುಮಾರ್‌, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರನಾಯಕ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥ ವೆಂಕಟರಾಜು ಮುಂತಾದವರು ಉಪಸ್ಥಿತಿರಿದ್ದರು.

Tags: bs yediyurappacetdr cn ashwath narayanGetCETgoiitjeekarnataka educationneet
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌

ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌

Leave a Reply Cancel reply

Your email address will not be published. Required fields are marked *

Recommended

ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

ಬನ್ನೇರುಘಟ್ಟ ರಾಷ್ಟ್ರೀಯ ಜೈವಿನ ಉದ್ಯಾನವನದಲ್ಲಿ ಸಿಂಹದ ಮರಿ ದತ್ತು ಪಡೆದು ಅದಕ್ಕೆ ತಂದೆ ಹೆಸರಿಟ್ಟ ನಟ ವಸಿಷ್ಠ ಸಿಂಹ

5 years ago
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಬಿಜೆಪಿ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಬಾಂಬ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ