• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

P K Channakrishna by P K Channakrishna
January 24, 2022
in CHIKKABALLAPUR, KOLAR, POLITICS, STATE
Reading Time: 1 min read
1
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ
935
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಸೇರಿ ಸ್ವಂತ ಜಿಲ್ಲೆಗಳ ಉಸ್ತುವಾರಿ ಹೊಂದಿರುವ ಎಲ್ಲ ಸಚಿವರಿಗೂ ಅನ್ಯಜಿಲ್ಲೆಗಳ ಉಸಾಬರಿ; ಡಾ.ಕೆ.ಸುಧಾಕರ್‌ ಸೇರಿ ಕೆಲ ವಲಸಿಗರ ಜಿಲ್ಲೆಗಳು ಬದಲು

ಬೆಂಗಳೂರು: ಅಕ್ಕಪಕ್ಕದಲ್ಲಿ ಅಧಿಕಾರಿಗಳನ್ನು ನಿಲ್ಲಿಸಿಕೊಂಡು ಜಿಲ್ಲೆಗಳಲ್ಲಿ ಸ್ವಂತ ರಿಪಬ್ಲಿಕ್‌ಗಳನ್ನು ಕಟ್ಟಿಕೊಂಡು ಮೆರೆಯುವ ಸಚಿವರಿಗೆ ಬಿಸಿ ಮುಟ್ಟಿಸಲು ಕೊನೆಗೂ ಬಿಜೆಪಿ ಹೈಕಮಾಂಡ್‌ ಒಂದು ಸ್ಮಾರ್ಟ್‌ ಐಡಿಯಾ ಮಾಡಿದ್ದು, ಅದು ಚಿಕ್ಕಬಳ್ಳಾಪುರ ಜಿಲ್ಲೆಗೂ ಅನ್ವಯ ಆಗಲಿದೆ.

ರಾಜ್ಯ ಸಚಿವ ಸಂಪುಟದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಕಹಿ ಆಗುವಂಥ ಐಡಿಯಾ ಇದಾಗಿದ್ದು, ಸಂಪುಟದಲ್ಲಿರುವ ಎಲ್ಲ ಸಚಿವರಿಗೂ ತಮ್ಮ ತವರು ಜಿಲ್ಲೆಯ ಉಸ್ತುವಾರಿ ಕೈತಪ್ಪಲಿದೆ.

ಇದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರಿಗೂ ಅನ್ವಯ ಆಗಲಿದ್ದು, ಅವರೂ ತಮ್ಮ ತವರು ಜಿಲ್ಲೆಯನ್ನು ಬಿಟ್ಟು ಅನ್ಯ ಜಿಲ್ಲೆಯ ಉಸ್ತುವಾರಿಯನ್ನು ವಹಿಸಿ ಕೊಳ್ಳಬೇಕಾಗುತ್ತದೆ.

ಸಂಪುಟದಲ್ಲಿರುವ ಅನೇಕ ಸಚಿವರು ತವರು ಜಿಲ್ಲೆಯ ಉಸ್ತುವಾರಿಯನ್ನೇ ಹೊಂದಿದ್ದು, ಇಬ್ಬಿಬ್ಬರು ಸಚಿವರು ಇರುವ ಜಿಲ್ಲೆಗಳಲ್ಲಿ ಉಸ್ತುವಾರಿಗಾಗಿ ತಿಕ್ಕಾಟವೂ ನಡೆದಿತ್ತು. ಆದರೆ, ಅಳೆದೂ ತೂಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿದ್ದರು. ಅದರಲ್ಲೂ ಬೆಂಗಳೂರು ನಗರ ಹಾಗೂ ಬೆಳಗಾವಿ ಉಸ್ತುವಾರಿ ಬಗ್ಗೆಯಂತೂ ಹಿರಿಯ ಸಚಿವರ ನಡುವೆ ಭಾರೀ ಪೈಪೋಟಿ ನಡೆದಿತ್ತು.

ಹೊಸ ಪಟ್ಟಿ ಇಂದೇ ಹೊರಬೀಳಬೇಕಿತ್ತು

ಮುಖ್ಯಮಂತ್ರಿಗಳು ಬೆಳಗಾವಿಗೆ ಹೊರಟ ಕಾರಣ ನೂತನ ಉಸ್ತುವಾರಿ ಪಟ್ಟಿ ಹೊರಬೀಳುವುದು ತಡವಾಗಿದೆ. ಈಗಾಗಲೇ ಪಟ್ಟಿ ಸಿದ್ಧವಾಗಿದ್ದು, ಮಂಗಳವಾರ ಬೆಳಗ್ಗೆಯೇ ಸಿಎಂ ಅವರು ಅಂಕಿತ ಹಾಕಬೇಕಿತ್ತು. ಇನ್ನು, ಅವರು ಬೆಳಗಾವಿಯಿಂದ ವಾಪಸ್‌ ಬಂದ ಮೇಲೆ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ ಎಂದು ಉನ್ನತ ಮೂಲವೊಂದು ಸಿಕೆನ್ಯೂಸ್‌ ನೌ ಗೆ ತಿಳಿಸಿದೆ.

ಇದು ಹೈಕಮಾಂಡ್‌ ನಿರ್ಧಾರ

ತವರು ಜಿಲ್ಲೆಗಳ ಉಸ್ತುವಾರಿ ಬದಲಿಸುತ್ತಿರುವ ಉದ್ದೇಶಕ್ಕೆ ಕಾರಣ ಪೈಪೋಟಿ, ತಿಕ್ಕಾಟ ಅಲ್ಲ. ಇದು ಸಿಎಂ ಯಡಿಯೂರಪ್ಪ ಅವರ ಪ್ಲ್ಯಾನ್‌ ಕೂಡ ಅಲ್ಲ. ಕೆಲ ಸಚಿವರಿಗೆ ʼಕರೆಕ್ಟಾಗಿʼ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್‌ ತೆಗೆದುಕೊಂಡಿರುವ ಕಟು ನಿರ್ಧಾರ. ಕರ್ನಾಟಕಕ್ಕೆ ಮಾತ್ರವಲ್ಲದೆ ಇಡೀ ದೇಶದ ಉದ್ದಗಲಕ್ಕೂ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದೇ ಸೂತ್ರ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಉತ್ತರ ಕರ್ನಾಟಕ ಕಡೆಯ ಸಚಿವರನ್ನು ದಕ್ಷಿಣ ಕರ್ನಾಟಕ ಮತ್ತು ಹಳೇ ಮೈಸೂರು ಭಾಗಕ್ಕೆ, ಈ ಭಾಗದವರನ್ನು ಉತ್ತರ ಕರ್ನಾಟಕ ಹಾಗೂ ಹೈದರಾಬಾದ್‌ ಕರ್ನಾಟಕದತ್ತ ನಿಯೋಜಿಸಲಾಗುವುದು. ಬಯಲುಸೀಮೆ ಕಡೆಯವರನ್ನು ಮಂಗಳೂರು, ಮಲೆನಾಡಿನತ್ತ, ಅಲ್ಲಿನವರಿಗೆ ಬಯಲುಸೀಮೆ ಜಿಲ್ಲೆಗಳ ಉಸ್ಕತುವಾರಿ ನೀಡಲು ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ.

ಒಬ್ಬರೇ ಸಚಿವರಿದ್ದರೂ ಉಸ್ತುವಾರಿ ಕೈತಪ್ಪುತ್ತಾ?

ಹಾಗಾದರೆ, ಒಂದು ಜಿಲ್ಲೆಗೆ ಒಬ್ಬರೇ ಸಚಿವರಿದ್ದರೂ ಜಿಲ್ಲಾ ಉಸ್ತುವಾರಿ ಕೈತಪ್ಪುತ್ತಾ? ಎಂಬ ಪ್ರಶ್ನೆಗೆ ಆ ಮೂಲಗಳು ʼಹೌದುʼ ಎನ್ನುತ್ತಿವೆ. ತವರು ಜಿಲ್ಲೆಯಲ್ಲಿ ಅಧಿಕಾರಶಾಹಿಯನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿಕೊಂಡು ತಮ್ಮದೇ ಪ್ರಭಾವ ಬೆಳೆಸಿಕೊಂಡು ಸಾಮ್ರಾಜ್ಯ ಸೃಷ್ಟಿಸಿಕೊಂಡು ಇತರೆ ಶಾಸಕರ ಮೇಲೆ ಸವಾರಿ ಮಾಡುವ ಚಾಳಿಗೆ ಬೀಳುವ ಸಚಿವರಿಗೆ ಬ್ರೇಕ್‌ ಹಾಕಲು ಬಿಜೆಪಿ ವರಿಷ್ಠರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಇಷ್ಟೇ ಅಲ್ಲ, ಉಸ್ತುವಾರಿ ಸಚಿವರ ಆಟಾಟೋಪದ ಬಗ್ಗೆ ವರಿಷ್ಠರು ಭರ್ತಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ಎಲ್ಲರ ವರದಿಗಳೂ ವರಿಷ್ಠರ ಕೈಯ್ಯಲ್ಲಿದೆ. ಮುಖ್ಯವಾಗಿ ಶಿವಮೊಗ್ಗದ ಹುಣಸೋಡು ಹಾಗೂ ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಕ್ರಷರ್ ಸ್ಫೋಟಗಳ ಹಿನ್ನೆಲೆಯಲ್ಲಿ ಆ ಎರಡೂ ಜಿಲ್ಲೆಗಳ ಉಸ್ತುವಾರಿ ಸಚಿವರು ಬದಲಾಗುವುದು ಖಚಿತ. ಇದರ ಜತೆಗೆ, ವಿವಿಧ ಜಿಲ್ಲೆಗಳಲ್ಲಿ ಈ ಆಪರೇಷನ್‌ ನಡೆಯಲಿದೆ.

ಡಾ.ಸುಧಾಕರ್‌ ಟಾರ್ಗೆಟ್‌ಗೆ ಕಾರಣಗಳೇನು?

ಡಾ.ಸುಧಾಕರ್‌ ಅವರಿಗೆ ಜಿಲ್ಲೆಯ ಉಸ್ತುವಾರಿ ಕೈತಪ್ಪಲು ಹಲವು ಕಾರಣಗಳಿವೆ ಎನ್ನುತ್ತವೆ ಆ ಮೂಲಗಳು. ಅವು ಹೀಗಿವೆ;

  • ಅವರ ಹುಟ್ಟೂರಿಗೆ ಅತಿ ಸನಿಹದಲ್ಲೇ ಇರುವ ಹಿರೇನಾಗವೇಲಿ ಕ್ರಷರ್‌ನಲ್ಲಿ ಜಿಲೆಟನ್‌ ಕಡ್ಡಿಗಳು ಸ್ಫೋಟಿಸಿ ಆರು ಜನ ಕಾರ್ಮಿಕರು ಸಾವನ್ನಪ್ಪಿದ್ದು.
  • ಅಕ್ರಮ ಕ್ರಷರ್‌ಗಳೂ ಸೇರಿದಂತೆ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಗಳು. ಉನ್ನತ ಅಧಿಕಾರಿಗಳ ಮೇಲೆ ಬಿಗಿ ಹಿಡಿತ.
  • ಖಾತೆಗಳ ಮರು ಹಂಚಿಕೆ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಗಳೆರಡೂ ಬೇಕೆಂದು ಪಟ್ಟು ಹಿಡಿದು ಮುಖ್ಯಮಂತ್ರಿಗೆ ಮುಜುಗರ ಉಂಟು ಮಾಡಿದ್ದು.
  • ಸಚಿವರಾಗಿ ಕೆಲ ಮಹತ್ತ್ವದ ನಿರ್ಧಾರಗಳನ್ನು ಏಕಪಕ್ಷೀಯವಾಗಿ ಕೈಗೊಂಡಿದ್ದು.
  • ರಾಜ್ಯ ನಾಯಕರನ್ನು ಬೈಪಾಸ್‌ ಮಾಡಿ ವರಿಷ್ಠರ ಜತೆ ವ್ಯವಹರಿಸುವುದು.
  • ಪಕ್ಷದ ಗಮನಕ್ಕೂ ತರದೆ ಏಕಪಕ್ಷೀಯವಾಗಿ ಮಾಧ್ಯಮಗಳ ವಿರುದ್ಧ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು.

ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಸಿ.ಪಿ.ಯೋಗೀಶ್ವರ್‌ ಸಹಜವಾಗಿಯೇ ತಮ್ಮ ತವರು ಜಿಲ್ಲೆಯ ಉಸ್ತುವಾರಿಯ ಮೇಲೆ ಕಣ್ಣಿಟ್ಟಿದ್ದರು. ಜಿಲ್ಲೆಯಲ್ಲಿ ಪ್ರಬಲರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಕಟ್ಟಿಹಾಕಲು ನನಗೆ ರಾಮನಗರ ಉಸ್ತುವಾರಿಯೇ ಬೇಕು ಎಂದು ಮುಖ್ಯಮಂತ್ರಿಗಳನ್ನು ಕೇಳಿದ್ದರು. ಆದರೆ ಅವರಿಗೆ ಕೋಲಾರ ಸಿಗಲಿದೆ ಎನ್ನಲಾಗಿದೆ. ಎಚ್.ನಾಗೇಶ್ ಅವರನ್ನು ಕೈಬಿಟ್ಟ ನಂತರ ಕೋಲಾರಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯವೂ ಇರಲಿಲ್ಲ, ಸಚಿವರ ಉಸ್ತುವಾರಿಯೂ ಇರಲಿಲ್ಲ.

ಕೊನೆಕ್ಷಣದ ಲಾಬಿ!

ನೂತನ ಉಸ್ತುವಾರಿ ಹೊರಬೀಳುವ ಮುನ್ನವೇ ಸಚಿವರು ಸಿಎಂ ಲಾಬಿ ಪ್ರಬಲ ಜಿಲ್ಲೆಗಾಗಿ ಲಾಬಿ ನಡೆಸುತ್ತಿದ್ದಾರೆಂದು ಗೊತ್ತಾಗಿದೆ. ಹಿರಿಯ ಸಚಿವರು ಪ್ರಭಾವೀ ಜಿಲ್ಲೆಗಳಿಗಾಗಿ ಪ್ರಯತ್ನ ಮಾಡುತ್ತಿದ್ದರೆ, ಇನ್ನು ಕೆಲವರು ಅಕ್ಕಪಕ್ಕದ ಜಿಲ್ಲೆಗಳಿಗೆ ಟ್ರೈ ಮಾಡುತ್ತಿದ್ದಾರೆ ಎನ್ನಲಾಗಿದೆ.

Tags: bjpchikkaballapurdistrict in charge dispute in karnatakadistrict in charge ministersDr.K.Sudhakarkolar
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

Comments 1

  1. Pingback: ಚಿಕ್ಕಬಳ್ಳಾಪುರಕ್ಕೆ ಎಂಟಿಬಿ! ಬೆಂಗಳೂರು ಗ್ರಾಮಾಂತರಕ್ಕೆ ಡಾ.ಕೆ.ಸುಧಾಕರ್‌ ಉಸ್ತುವಾರಿ!! - cknewsnow

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ