• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!

cknewsnow desk by cknewsnow desk
April 1, 2021
in CHIKKABALLAPUR, STATE
Reading Time: 1 min read
0
ವಿಮೆ ಕಂಪನಿಗಳನ್ನು ವಿನಾಕಾರಣ ಉದ್ಧಾರ ಮಾಡುತ್ತಿದ್ದೇವೆ ಎಂದು ಕಿಡಿಕಿಡಿಯಾದ ಸಚಿವರು; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಟ್ಟಿದ ಪ್ರೀಮಿಯಂ ₹40 ಲಕ್ಷ, ಸಿಕ್ಕಿದ ವಿಮೆ ₹19 ಲಕ್ಷ!
916
VIEWS
FacebookTwitterWhatsuplinkedinEmail

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಪಿಡಿ ಖಾತೆಯಲ್ಲೆ ಕೊಳೆಯುತ್ತಿದೆ! ಬಳಸದಿದ್ದರೆ ವಾಪಸ್‌ ಪಡೆಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನಿಂಗ್‌ ಕೊಟ್ಟ ಸಚಿವ ಎ.ನಾರಾಯಣಗೌಡ

ಚಿಕ್ಕಬಳ್ಳಾಪುರ: ಬೆಳೆ ವಿಮೆ ಬಗ್ಗೆ ಮಾಹಿತಿ ಕೊರತೆಯಿಂದ ಇನ್ನೂ ಸಾಕಷ್ಟು ರೈತರು ಬೆಳೆ ವಿಮೆ ಮಾಡಿಸಿಲ್ಲ. ಹಾಗಾಗಿ ಕೃಷಿ ಇಲಾಖೆ ಒಳಗೊಂಡಂತೆ ಸಂಬಂಧಪಟ್ಟ ಇತರೆ ಇಲಾಖೆ ಅಧಿಕಾರಿಗಳು ಬೆಳೆವಿಮೆ ಯೋಜನೆ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಎಲ್ಲರೂ ಬೆಳೆ ವಿಮೆ ಮಾಡಿಸುವಂತೆ ಪ್ರೇರೇಪಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಎ.ನಾರಾಯಣಗೌಡ ಹೇಳಿದರು.

ಅವರು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಅವರು.

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆ ಇದೆ. ಆದರೆ ವಿಮಾ ಕಂಪನಿಗಳನ್ನು ನಾವು ಸಾಕುತ್ತಿದ್ದೇವೆ. ಸರಿಯಾದ ಅನುಷ್ಠಾನ ಇಲ್ಲದಿರುವುದೇ ಇದಕ್ಕೆ ಕಾರಣ. ವಿಮೆ ಹಣ ಕಟ್ಟಿರುವುದರಲ್ಲಿ ಶೇ.50ರಷ್ಟು ಹಣ ಸಹ ರೈತರಿಗೆ ಸಿಗುತ್ತಿಲ್ಲ. ಬೆಳೆ ಕಟಾವು ಮಾಡಿ ತೂಕಕ್ಕೆ ಹಾಕುವಲ್ಲಿ ಮೋಸ ನಡೆಯುತ್ತದೆ. ಸರ್ವೆ ನಂಬರ್ʼನ ಸ್ಥಳದಲ್ಲೇ ಹೋಗಿ ಪರಿಶೀಲನೆ ಆಗಬೇಕು. ಅಧಿಕಾರಿಗಳ ಒಂದು ಸಣ್ಣ ತಪ್ಪಿನಿಂದ ರೈತರಿಗೆ ದೊಡ್ಡ ನಷ್ಟವಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ದುಸ್ಥಿತಿ

ಚಿಕ್ಕಬಳ್ಳಾಪುರದಲ್ಲಿ 2018-19ರಲ್ಲಿ ₹36.84 ಕೋಟಿ ರುಪಾಯಿ ವಿಮೆ ರೈತರಿಗೆ ಲಭ್ಯವಾಗಿದೆ. ಆದರೆ 2019-20ರಲ್ಲಿ ₹19 ಲಕ್ಷ ರೂ. ಮಾತ್ತ ವಿಮೆ ಹಣ ರೈತರಿಗೆ ಸಿಕ್ಕಿದೆ. ₹40 ಲಕ್ಷ ರೂ. ಪ್ರೀಮಿಯಂ ಕಟ್ಟಲಾಗಿತ್ತು. ಆದರೆ ಅರ್ಧದಷ್ಟು ಹಣವೂ ರೈತರಿಗೆ ಸಿಕ್ಕಿಲ್ಲ. ದೇಶದಲ್ಲಿ ಸರಾಸರಿ ₹21 ಸಾವಿರ ಕೋಟಿ ರೂ. ವಿಮಾ ಕಂಪೆನಿಗೆ ಹಣ ಕಟ್ಟುತ್ತಿದ್ದಾರೆ. ₹9-11 ಸಾವಿರ ಕೋಟಿ ಮಾತ್ರ ರೈತರಿಗೆ ವಿಮಾ ಪರಿಹಾರ ಸಿಗುತ್ತಿದೆ. ಆದ್ದರಿಂದ ರೈತರಿಗೆ ಅನುಕೂಲ ಆಗುವಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅಧಿಕಾರಿಗಳು ರೈತರ ಜತೆ ಸಭೆ ನಡೆಸಿ, ರೈತರಿಂದ ಮಾಹಿತಿ ಪಡೆದುಕೊಳ್ಳಬೇಕು ಎಂದು ಅವರು ಖಡಕ್ಕಾಗಿ ಸೂಚಿಸಿದರು.

ರೈತರಿಗೆ ಬೆಳೆ ವಿಮೆ ಪರಿಹಾರ ದೊರೆಯುವಲ್ಲಿ ಅನ್ಯಾಯವಾಗುತ್ತಿದೆ. ಬೆಳೆ ನಷ್ಟ ಆಗಿದ್ದರೂ ಸರಿಯಾದ ಪರಿಶೀಲನೆ ನಡೆಸದೆ ವರದಿ ನೀಡುವ ಕಾರಣ ರೈತರಿಗೆ ವಿಮಾ ಹಣ ಸಿಗುತ್ತಿಲ್ಲ. ತಕ್ಷಣ ಅಧಿಕಾರಿಗಳು ರೈತರ ಜತೆ ಸಭೆ ನಡೆಸಿ ಇನ್ನಷ್ಟು ಮಾಹಿತಿ ಪಡೆದುಕೊಳ್ಳಬೇಕು. ಬಳಿಕ ಅಧಿಕಾರಿಗಳ ಜತೆ ಬೆಳೆ ವಿಮೆ ವಿಚಾರವಾಗಿಯೇ ಸಭೆ ನಡೆಸುವುದಾಗಿ ಸಚಿವರು ತಿಳಿಸಿದರು.

ಕೊಳೆಯುತ್ತಿದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಜಿಲ್ಲೆಯಲ್ಲಿ ₹21 ಕೋಟಿ ರೂ. ಹಣ ಇನ್ನೂ ಪಿಡಿ ಖಾತೆಯಲ್ಲೆ ಉಳಿದಿದೆ. ಶೇ.26ರಷ್ಟು ಮಾತ್ರ ಕೆಲಸ ಆಗಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಹಣ ಬಳಕೆ ಮಾಡದೆ ಬಿಟ್ಟರೆ ಆ ಹಣವನ್ನು ಹಣ ವಾಪಸ್ ಪಡೆಯುತ್ತೇವೆ. ಶಾಸಕರು ಕ್ರೀಯಾಯೋಜನೆ ನೀಡಿ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು. ಎಇಇ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಾವಾರು ಪರಿಶೀಲನೆಗೆ ಹೋಗಿ ಸ್ಥಳ ಪರಿಶೀಲನೆ ನಡೆಸಬೇಕು. ಕಚೇರಿಯಲ್ಲಿ ಕುಳಿತು ಕೆಲಸ ಮಾಡೋದಲ್ಲ. ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಬೇಕು ಎಂದು ನಾರಾಯಣಗೌಡ ಹೇಳಿದರು.

ಜಿಲ್ಲೆಯಲ್ಲಿ ಕ್ರೀಡಾ ಹಾಸ್ಟೆಲ್ ಸದ್ಯ ತಾತ್ಕಾಲಿಕ ಕಟ್ಟಡದಲ್ಲಿ ಇದೆ. ಜಿಲ್ಲಾ ಕ್ರೀಡಾಂಗಣದ ಆವರಣದಲ್ಲೇ ₹2.5 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಕ್ರೀಡಾ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಸಿಂಥೆಟಿಕ್ ಟ್ರಾಕ್ ನಿರ್ಮಾಣಕ್ಕೆ ಖೇಲೊ ಇಂಡಿಯಾದಡಿ ಮಂಜೂರಾತಿ ಕೋರಿ ಕೇಂದ್ರ ಸರಕಾರಕ್ಕೆ ₹9 ಕೋಟಿ ರುಪಾಯಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದೂ ಸಹ ಇದೇ ವೇಳೆ ಸಚಿವರು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಯೋಜನೆ, ಕಾರ್ಯಕ್ರಮ ಸಂಯೋಜನೆ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದ ನಿರ್ದೇಶಕ ಚಂದ್ರಶೇಖರಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿ.ಧನುರೇಣುಕಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸಭೆಯ ಬಳಿಕ ಸಚಿವರಾದ ಎ.ನಾರಾಯಣಗೌಡ ಅವರು ನಗರದ ಸರ್‍ಎಂವಿ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಂಗಣದ ಸ್ವಚ್ಛತೆ, ಒಳಾಂಗಣ ಕ್ರೀಡಾಂಗಣ ಹಾಗೂ ಈಜುಕೊಳವನ್ನು ಪರಿಶೀಲನೆ ನಡೆಸಿದರು.

Tags: chikkaballapurcrop insurancekarnatakaminister narayana gowda
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಗುರುವಾರ ಬೆಳಗ್ಗೆಯಿಂದ 45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ವ್ಯಾಕ್ಸಿನ್;‌ ಐದು ಸಾವಿರ ಕೇಂದ್ರಗಳಲ್ಲಿ ವ್ಯವಸ್ಥೆ, ಎರಡನೇ ಅಲೆ ನಡುವೆಯೂ ಲಸಿಕೆ ಯಜ್ಞ

Leave a Reply Cancel reply

Your email address will not be published. Required fields are marked *

Recommended

ಅಬ್ಬರದ ಮಳೆ ನಡುವೆ ಡಿಕೆಶಿ ಭಾಷಣ; ಕನಕಪುರ ಬಂಡೆಗೆ ಕೊಡೆ ಹಿಡಿದು ರಕ್ಷಣೆ ಕೊಟ್ಟ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಅಬ್ಬರದ ಮಳೆ ನಡುವೆ ಡಿಕೆಶಿ ಭಾಷಣ; ಕನಕಪುರ ಬಂಡೆಗೆ ಕೊಡೆ ಹಿಡಿದು ರಕ್ಷಣೆ ಕೊಟ್ಟ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

5 years ago
ಮಳೆಯಿಂದ ಮೈದುಂಬಿಕೊಂಡ ಜಡಮಡುಗು ಜಲಪಾತ

ಮಳೆಯಿಂದ ಮೈದುಂಬಿಕೊಂಡ ಜಡಮಡುಗು ಜಲಪಾತ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ