• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್

cknewsnow desk by cknewsnow desk
April 1, 2021
in STATE
Reading Time: 1 min read
0
ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್
919
VIEWS
FacebookTwitterWhatsuplinkedinEmail
  • ನಂದಿ ಬೆಟ್ಟ, ಮಧುಗಿರಿಯ ಏಕಶಿಲಾ ಬೆಟ್ಟ, ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಅಂಜನಾದ್ರಿ ಸೇರಿದಂತೆ ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಯಿತು.

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಹೆಲಿ ಟೂರಿಸಂ, ಸೀ ಪ್ಲೇನ್ ಮತ್ತು ರಾಜ್ಯದ ಜಲಾಶಯಗಳು ಹಾಗೂ ನದಿಗಳಲ್ಲಿ ಜಲ ಕ್ರೀಡೆಗಳನ್ನು ಆರಂಭಿಸುವ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವ ಸಂಬಂಧ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ಹಿರಿಯ ಅಧಿಕಾರಿಗಳ ಮಹತ್ತ್ವದ ಸಭೆ ನಡೆಸಿದರು.

ಕೊರೋನಾ ದಿಂದ ತತ್ತರಿಸಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಪುನಶ್ಚೇತನ ನೀಡಲು ಹಾಗೂ ಪ್ರವಾಸಿಗರಿಗೆ ಹೊಸ ಬಗೆಯ ಅನುಕೂಲಗಳನ್ನು ಕಲ್ಪಿಸಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಸಿಂಧು ಬಿ. ರೂಪೇಶ್, ಕೆ.ಎಸ್.ಟಿ.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ, ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹೆಲಿಪೋರ್ಟ್-ಹೆಲಿಪ್ಯಾಡ್ʼಗಳ ನಿರ್ಮಾಣ

ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಹಾಗೂ ಬಳ್ಳಾರಿಯ ಹಂಪಿಯಲ್ಲಿ ಹೆಲಿಪೋರ್ಟ್ʼಗಳನ್ನು ನಿರ್ಮಾಣ ಸಂಬಂಧ ಚರ್ಚಿಸಲಾಯಿತು. ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ 50 ಹೆಲಿಪ್ಯಾಡ್ʼಗಳನ್ನು ಎರಡನೇ ಹಂತದಲ್ಲಿ ಮತ್ತೇ 50 ಹೆಲಿ ಪ್ಯಾಡ್ʼಗಳನ್ನು ಸೇರಿದಂತೆ ಒಟ್ಟು 100 ಹೆಲಿ ಪ್ಯಾಡ್ʼಗಳನ್ನು ನಿರ್ಮಾಣ ಮಾಡಲು ಸಹ ಕ್ರಿಯಾ ಯೋಜನೆಗಳನ್ನು ರೂಪಿಸಲಾಯಿತು. ಪ್ರವಾಸಿಗರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಹೆಲಿಕಾಪ್ಟರ್ ಪ್ರಯಾಣ ಸೌಲಭ್ಯ ಒದಗಿಸಲು ಹೆಚ್.ಎ.ಎಲ್. ಸೇರಿದಂತೆ ಖಾಸಗಿ ಹೆಲಿಕಾಪ್ಟರ್ ಸಂಸ್ಥೆಗಳ ಜತೆ ಚರ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಕರ್ನಾಟಕಕ್ಕೆ ಆಕರ್ಷಿಸಲು ನೆರೆಯ ಗೋವಾ ಹಾಗೂ ಕೇರಳ ರಾಜ್ಯಗಳ ಜೊತೆ ಪ್ರವಾಸೋದ್ಯಮ ಸಂಪರ್ಕದ ಬಗ್ಗೆ ಒಡಂಬಡಿಕೆ ಮಾಡಿಕೊಳ್ಳಲು ಸಹ ನಿರ್ಧರಿಸಲಾಯಿತಲ್ಲದೆ, ಇಡೀ ದಕ್ಷಿಣ ಭಾರತದ ಪ್ರವಾಸಿ ಸ್ಥಳಗಳನ್ನು ನೋಡಲು ಅನುಕೂಲವಾಗುವಂತೆ ಒಂದು ಪ್ರವಾಸೋದ್ಯಮ ಸರ್ಕ್ಯೂಟ್ ರಚನೆ ಮಾಡುವ ಬಗ್ಗೆ ನೆರೆಯ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಜತೆ ಚರ್ಚಿಸಲು ನಿರ್ಧರಿಸಲಾಯಿತು.

ಉಡಾನ್ ಯೋಜನೆಯಲ್ಲಿ -ಸೀ ಪ್ಲೇನ್

ಕೇಂದ್ರ ಸರ್ಕಾರದ ಮಹತ್ವದ ಉಡಾನ್ ಯೋಜನೆಯಲ್ಲಿ ಸೀ ಪ್ಲೇನ್ ಪ್ರವಾಸೋದ್ಯಮ ಆರಂಭಿಸಲು ರಾಜ್ಯದ ಕರಾವಳಿ ತೀರದಲ್ಲಿರುವ ಅವಕಾಶಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು. ಗುಜರಾತ್ ರಾಜ್ಯದಲ್ಲಿ ಪ್ರವಾಸಿಗರಿಗೆ ಸೀ ಪ್ಲೇನ್ ಸೇವೆ ಒದಗಿಸಲಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸೀ ಪ್ಲೇನ್ ಸೌಲಭ್ಯ ಕಲ್ಪಿಸಲು ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ತುಂಗಭದ್ರ ಜಲಾಶಯ, ಆಲಮಟ್ಟಿ ಜಲಾಶಯ ಹಾಗೂ ಶಿವಮೊಗ್ಗದ ಜೋಗ್ ಫಾಲ್ಸ್ ಕೇಂದ್ರವಾಗಿಟ್ಟುಕೊಂಡು ಸೀ ಪ್ಲೇನ್ ಪ್ರವಾಸೋದ್ಯಮ ಯೋಜನೆ ರೂಪಿಸಲು ನಿರ್ಧರಿಸಲಾಯಿತು.

ಪ್ರಮುಖ ಜಲಾಶಯ, ನದಿಗಳಲ್ಲಿ ಜಲಕ್ರೀಡೆ

ರಾಜ್ಯದ ಎಲ್ಲಾ ಜಲಾಶಯಗಳು, ಪ್ರಮುಖ ನದಿಗಳು ಹಾಗೂ ಕರಾವಳಿ ತೀರದಲ್ಲಿ ಜಲ ಕ್ರೀಡೆಗಳನ್ನು ಆರಂಭಿಸಲು ಕ್ರಿಯಾ ಯೋಜನೆ ರೂಪಿಸಲಾಯಿತು. ದೋಣಿ ವಿಹಾರ, ಸರ್ಫಿಂಗ್ ಸೇರಿದಂತೆ ರೋಮಾಂಚಕಾರಿ ಜಲಕ್ರೀಡೆಗಳನ್ನ ಆರಂಭಿಸಲು ನಿರ್ಧರಿಸಲಾಯಿತು.

ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ

ನಂದಿ ಬೆಟ್ಟ, ಮಧುಗಿರಿಯ ಏಕಶಿಲಾ ಬೆಟ್ಟ, ಹುಬ್ಬಳ್ಳಿಯ ನೃಪತುಂಗ ಬೆಟ್ಟ, ಅಂಜನಾದ್ರಿ ಸೇರಿದಂತೆ ರಾಜ್ಯದ 6 ಐತಿಹಾಸಿಕ ಬೆಟ್ಟಗಳಿಗೆ ರೋಪ್ ವೇ ನಿರ್ಮಾಣ ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಅತೀ ಶೀಘ್ರದಲ್ಲಿ ಪ್ರವಾಸೋದ್ಯಮ ಸಚಿವರಾದ ಸಿ.ಪಿ. ಯೋಗೇಶ್ವರ ಅಧಿಕಾರಿಗಳ ಜೊತೆ ಉತ್ತರಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಗಳಿಗೆ ಭೇಟಿ ನೀಡಿ ಅಲ್ಲಿ ನಿರ್ಮಾಣ ಮಾಡಿರುವ ರೋಪ್ ವೇ ಯೋಜನೆಯನ್ನು ಖುದ್ದಾಗಿ ವೀಕ್ಷಿಸಲು ನಿರ್ಧರಿಸಲಾಯಿತು.

ಒಟ್ಟಾರೆ ರಾಜ್ಯದಲ್ಲಿರುವ ಎಲ್ಲಾ ಬಗೆಯ ಪ್ರವಾಸಿ ತಾಣಗಳನ್ನು ಗುರುತಿಸಿ ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗುಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸುವ ಬಗ್ಗೆ ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು. ನಿಗಧಿತ ಸಮಯದಲ್ಲಿ ಪ್ರವಾಸೋದ್ಯಮ ಯೋಜನೆಗಳು ಪೂರ್ಣಗೊಳ್ಳಬೇಕು. ಈ ನಿಟ್ಟಿನಲ್ಲಿ ಯಾವುದೇ ರೀತಿ ರಾಜಿಯಾಗುವ ಪ್ರಶ್ನೆಯೇ ಇಲ್ಲವೆಂದು ಸಚಿವ ಯೋಗೇಶ್ವರ ಅಧಿಕಾರಿಗಳಿಗೆ ಹೇಳಿದರು.

Lead photo: Wikipedia

Tags: cp yogeshwarheliportkarnataka coastKarnataka tourismropewayseaplane
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

ಕೋವಿಡ್‌ ಸೋಂಕು ಹಿನ್ನೆಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ಕುಂದುಕೊರತೆ ನಿವಾರಣೆಗೆ ಪ್ರತ್ಯೇಕ ಉನ್ನತ ವಿಭಾಗ ರಚನೆ ಮಾಡಿದ ಟ್ರಾವಂಕೂರು ದೇವಸ್ವಂ ಮಂಡಳಿ

Leave a Reply Cancel reply

Your email address will not be published. Required fields are marked *

Recommended

ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಹೆಸರಿಗೆ ಐವತ್ತು; ಕನ್ನಡಕ್ಕೆ ಹೆಚ್ಚುತ್ತಿದೆ ಆಪತ್ತು

2 years ago
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ವಿಧಾನಪರಿಷತ್‌ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ; ಜೆಡಿಎಸ್‌ನಿಂದ ಬಂದ ಪುಟ್ಟಣಗೆ ಹೊಡೆಯುತ್ತಾ ಜಾಕ್‌ಪಾಟ್?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ