• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ತಮಿಳುನಾಡು ಚುನಾವಣೆ ಹೊತ್ತಿನಲ್ಲಿಯೇ ಸೂಪರ್‌ಸ್ಟಾರ್ ರಜನೀಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ; ಅಭಿಮಾನಿಗಳ ಸಂಭ್ರಮಕ್ಕೆ ಎಣೆಯಿಲ್ಲ, ಸಂದರ್ಭದ ಬಗ್ಗೆ ಚರ್ಚೆ

cknewsnow desk by cknewsnow desk
April 1, 2021
in ET CINEMA, NEWS & VIEWS, STATE
Reading Time: 2 mins read
0
ತಮಿಳುನಾಡು ಚುನಾವಣೆ ಹೊತ್ತಿನಲ್ಲಿಯೇ ಸೂಪರ್‌ಸ್ಟಾರ್ ರಜನೀಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ; ಅಭಿಮಾನಿಗಳ ಸಂಭ್ರಮಕ್ಕೆ ಎಣೆಯಿಲ್ಲ, ಸಂದರ್ಭದ ಬಗ್ಗೆ ಚರ್ಚೆ
914
VIEWS
FacebookTwitterWhatsuplinkedinEmail
  • ಚುನಾವಣೆ ನಡುವೆಯೇ ಕೇಂದ್ರ ಸರಕಾರ ತಮಿಳುನಾಡು ಜನರಿಗೆ ಬಂಪರ್‌ ಗಿಫ್ಟ್‌ ಕೊಟ್ಟಿದೆ! ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪುರಸ್ಕಾರವನ್ನು ಘೋಷಣೆ ಮಾಡಲಾಗಿದೆ!!

ಬೆಂಗಳೂರು/ಚೆನ್ನೈ/ನವದೆಹಲಿ: ಎರಡು ಹಂತಗಳ ತಮಿಳುನಾಡು ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್‌ 6ರಂದು ನಡೆಯಲಿದೆ. ಎರಡನೇ ಹಂತದ ವೋಟಿಂಗ್‌ ಮೇ 2ರಂದು ಮುಗಿಯಲಿದೆ. ಚುನಾವಣೆ ನಡುವೆಯೇ ಕೇಂದ್ರ ಸರಕಾರ ತಮಿಳುನಾಡು ಜನರಿಗೆ ಬಂಪರ್‌ ಗಿಫ್ಟ್‌ ಕೊಟ್ಟಿದೆ!

ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್‌ ಫಾಲ್ಕೆ ಪುರಸ್ಕಾರವನ್ನು ಘೋಷಣೆ ಮಾಡಲಾಗಿದೆ!!

2019ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪುರಸ್ಕಾರವನ್ನು ಖ್ಯಾತ ನಟ, ಸೂಪರ್‌ಸ್ಟಾರ್ ರಜನೀಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಆಯ್ಕೆ ಸಮಿತಿಗೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ.

Happy to announce #Dadasaheb Phalke award for 2019 to one of the greatest actors in history of Indian cinema Rajnikant ji

His contribution as actor, producer and screenwriter has been iconic

I thank Jury @ashabhosle @SubhashGhai1 @Mohanlal@Shankar_Live #BiswajeetChatterjee pic.twitter.com/b17qv6D6BP

— Prakash Javadekar (Modi Ka Parivar) (@PrakashJavdekar) April 1, 2021

ಅಲ್ಲದೆ; ಮೇ 3ರಂದು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ರಜನಿ ಅವರಿಗೆ ಪ್ರದಾನ ಮಾಡಲಾಗುವುದೆಂದು ಜಾವ್ದೇಕರ್ ತಿಳಿಸಿದ್ದಾರೆ. ಜತೆಗೆ, ಅವರು ಸೂಪರ್‌ಸ್ಟಾರ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ರಜನೀಕಾಂತ್‌ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ತಲೆಮಾರುಗಳಿಂದ ಜನರನ್ನು ತಮ್ಮ ಅಭಿನಯದಿಂದ ಮನರಂಜಿಸುತ್ತಿರುವ ತಲೈವ ಅವರಿಗೆ ದಾದಾಸಾಹೇಬ್ ಪ್ರಶಸ್ತಿ ಸಿಕ್ಕಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

Popular across generations, a body of work few can boast of, diverse roles and an endearing personality…that’s Shri @rajinikanth Ji for you.

It is a matter of immense joy that Thalaiva has been conferred with the Dadasaheb Phalke Award. Congratulations to him.

— Narendra Modi (@narendramodi) April 1, 2021

ಅಭಿಮಾನಿಗಳಿಗೆ ಖುಷಿ, ಆದರೆ ಪ್ರಶಸ್ತಿ ಕೊಟ್ಟ ಸಮಯದ ಬಗ್ಗೆ ಚರ್ಚೆ

ರಜನೀಕಾಂತ್‌ ಅವರಿಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ ಸಂದ ಬಗ್ಗೆ ಎಲ್ಲೆಲ್ಲೂ ಸ್ವಾಗತ, ಸಂಭ್ರಮ ವ್ಯಕ್ತವಾಗುತ್ತಿದೆ. ತಲೈವ ಅಭಿಮಾನಿಗಳ ಸಂಭ್ರಮಕ್ಕಂತೂ ಪಾರವೇ ಇಲ್ಲ. ಆದರೆ, ಅನೇಕರು ಈ ಪ್ರಶಸ್ತಿಯನ್ನು ಘೋಷಣೆ ಮಾಡಿದ ಸಂದರ್ಭದ ಬಗ್ಗೆ ತಕರಾರು ತೆಗೆದಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಸದ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಡಿಎಂಕೆ, ಎಐಡಿಎಂಕೆ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌, ಎಐಡಿಎಂಕೆ ಜತೆ ಕೈಜೋಡಿಸಿರುವ ಬಿಜೆಪಿ ಹೇಗಾದರೂ ಮಾಡಿ ರಾಜ್ಯದಲ್ಲಿ ಅಸ್ತಿತ್ವ ಹೊಂದಲು ಹೆಣಗಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರೆಲ್ಲ ರಾಜ್ಯಕ್ಕೆ ಬಂದು ಭರ್ತಿ ಪ್ರಚಾರ ಮಾಡುತ್ತಿದ್ದಾರೆ. ರಣಬಿಸಿಲ ನಡುವೆ ಬೆವರು ಹರಿಸುತ್ತಿದ್ದಾರೆ.

ಏಪ್ರಿಲ್‌ 6 ಮತ್ತು ಮೇ 2ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆ ಹೊತ್ತಿನಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಬಾರದಿತ್ತು. ಚುನಾವಣೆ ಮುಗಿದ ಮೇಲೆ ಅನೌನ್ಸ್‌ ಮಾಡಬೇಕಿತ್ತು. ತಲೈವ ಅವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಜಾಲತಾಣಗಳಲ್ಲಿ ತೀವ್ರ ಚರ್ಚೆ ಆಗುತ್ತಿದೆ.

Yes. Matter of time is just before TN elections. https://t.co/9WIcs57Fnf

— Ravi Oleti ( రవి ఓలేటి ) (@ravioleti) April 1, 2021

ಇನ್ನು ಕೆಲವರು, ತಲೈವ ಅವರು ಖಂಡಿತಾ ಪ್ರಶಸ್ತಿಗೆ ಅರ್ಹರು. ಆದರೆ, ಚುನಾವಣೆ ಹೊತ್ತಿನಲ್ಲಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿ ಅವರನ್ನು ಅಪಮಾನಿಸಲಾಗಿದೆ ಎಂದು ಟ್ವಿಟ್ಟಿಸಿದ್ದಾರೆ.

I think BJP can pull it off in the upcoming TN election with this tweet! https://t.co/e9Ijh6Mv6a

— Senthil (@awesthil) April 1, 2021

Proud hounour for our Thalaivar👏👏only 3rd person from Tamil Industry to get this award,definitely there is a political agenda from BJP who want to appease Tamil voters on the eve of elections,Nevertheless Rajini sir deserves it. Do Illaiyaraja,Kamal,ARR need to wait till 2026 https://t.co/MoCOx9tPSS

— Vamsi Chandran (@VamsiChandran) April 1, 2021

ಇನ್ನೊಂದೆಡೆ, ಪ್ರಕಾಶ್‌ ಜಾವ್ದೇಕರ್‌ ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆಯೇ ರಾಜ್ಯ, ರಾಷ್ಟ್ರ ಮಟ್ಟದ ಬಿಜೆಪಿ ಮುಖಂಡರಂತೂ ಮುಗಿಬಿದ್ದು ಟ್ವೀಟ್‌ ಮಾಡುತ್ತಿದ್ದಾರೆ. ಈಗಾಗಲೇ ಟ್ವೀಟ್‌ ಮಾಡಿದವರ ಪೈಕಿ ತಮಿಳುನಾಡು ಬಿಜೆಪಿ ಉಸ್ತುವಾರಿ ಸಿ.ಟಿ.ರವಿ, ಮುಖ್ಯಮಂತ್ರಿ ಯಡಿಯೂರಪ್ಪ ಮುಂತಾದವರು ಇದ್ದಾರೆ.

Heartiest Congratulations to Thalaiva @rajinikanth on being awarded the prestigious Dada Saheb Phalke award for 2021.

One of the greatest Actor of His generation, contribution of Thiru Rajinikanth to Indian cinema is exemplary.

I share this happiness with His crores of Fans. pic.twitter.com/jCaXvnl21u

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) April 1, 2021

'Hearty congratulations to Superstar Rajinikanth on being conferred the Indian cinema's highest recognition, the Dadasaheb Phalke Award. A versatile actor & a great human being Shri @rajinikanth 's contribution to Indian cinema is immense. My best wishes to him' : CM @BSYBJP. pic.twitter.com/bHqbH7qWhs

— CM of Karnataka (@CMofKarnataka) April 1, 2021

ವಿಪರ್ಯಾಸ ಎಂದರೆ, ರಜನೀ ಅವರಿಗೆ ಪದ್ಮವಿಭೂಷಣ ಪುರಸ್ಕಾರ ನೀಡುವಾಗಲೂ ಹೀಗೆಯೇ ಆಗಿತ್ತು. 2016 ಮೇ 16ಕ್ಕೆ ರಾಜ್ಯದ 232 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಿಗದಿ ಆಗಿತ್ತು. ಆದರೆ, ಕೆಲ ತಿಂಗಳ ಮೊದಲು ಅವರಿಗೆ ಆ ಪುರಸ್ಕಾರ ಘೋಷಣೆ ಆಗಿತ್ತು. ಚುನಾವಣೆಗೆ ಒಂದು ತಿಂಗಳ ಮೊದಲು, ಅಂದರೆ; 2016 ಏಪ್ರಿಲ್‌ 12ರಂದು ರಜನಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿತ್ತು.

Tags: bjpdadasaheb phalke award 2019superstar rajinikanthtamilnadu election 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್

ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ