• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

cknewsnow desk by cknewsnow desk
April 5, 2021
in POLITICS
Reading Time: 1 min read
0
ಸರಕಾರದ ಆಡಳಿತದಲ್ಲಿ ವಿಜಯೇಂದ್ರ ಮತ್ತು ಸಿಎಂ ಕುಟುಂಬದವರ ಹಸ್ತಕ್ಷೇಪ ಇಲ್ಲ ಎಂದು ಮತ್ತೊಮ್ಮೆ ಪುನುರುಚ್ಛರಿಸಿದ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್
914
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವ ಈಶ್ವರಪ್ಪ ನಡುವೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ವಿಜಯೇಂದ್ರ ಮತ್ತು ಸಿಎಂ ಮನೆ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವ ಸಚಿವ ಸೋಮಶೇಖರ್‌, ಮತ್ತೂ ಅದನ್ನೇ ಮುಂದುವರಿಸಿದ್ದಾರೆ.


ಮೈಸೂರು: ಸರಕಾರದ ಆಡಳಿತದಲ್ಲಿ ಬಿ.ವೈ.ವಿಜಯೇಂದ್ರ ಸೇರಿದಂತೆ ಮುಖ್ಯಮಂತ್ರಿಗಳ ಕುಟುಂಬದವರ ಹಸ್ತಕ್ಷೇಪವಿಲ್ಲ. ಇದು ಸತ್ಯಕ್ಕೆ ದೂರವಾದ ಆರೋಪ ಎಂದು ಸಹಕಾರ ಸಚಿವ ಎಸ್‌.ಟಿ‌.ಸೋಮಶೇಖರ್ ಪುನರುಚ್ಛರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಿರಿಯ ಸಚಿವ ಈಶ್ವರಪ್ಪ ನಡುವೆ ವಿವಾದ ಉಂಟಾಗಿರುವ ಹಿನ್ನೆಲೆಲ್ಲಿ ಕಳೆದೆರಡು ದಿನಗಳಿಂದ ವಿಜಯೇಂದ್ರ ಮತ್ತು ಸಿಎಂ ಮನೆ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವ ಸಚಿವ ಸೋಮಶೇಖರ್‌, ಮತ್ತೂ ಅದನ್ನೇ ಮುಂದುವರಿಸಿದ್ದಾರೆ.

ಸೋಮವಾರ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಮಾಜಿ ಉಪ ಪ್ರಧಾನಿ ದಿವಂಗತ ಡಾ.ಬಾಬು ಜಗಜೀವನರಾಂ ಅವರ ಜನ್ಮದಿನೋತ್ಸವದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಕೆಲವರು ಮುಖ್ಯಮಂತ್ರಿ ಅವರ ಪುತ್ರ ವಿಜಯೇಂದ್ರ ಅವರ ಹೆಸರೇಳಿ ರಾಜಕೀಯ ಬೇಳೆ ಬೆಯಿಸಿಕೊಳ್ಳುತ್ತಿದ್ದಾರೆ. ಸರಕಾರದಲ್ಲಿ ಮಂತ್ರಿಗಳಿದ್ದೀವಿ, ಜಿಲ್ಲಾಡಳಿತ ಇದೆ, ಶಾಸಕರಿದ್ದಾರೆ, ಆಡಳಿತ ನಡೆಸುವವರಿದ್ದಾರೆ‌. ಆದರೆ ಪದೇಪದೆ ಮುಖ್ಯಮಂತ್ರಿ ಅವರ ಕುಟುಂಬದವರನ್ನು ಎಳೆದು ತರುವುದು ಸರಿಯಲ್ಲ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳು ಮಾಡುವ ಒಳ್ಳೆಯ ಕೆಲಸಗಳನ್ನು ವಿರೋಧ ಪಕ್ಷದವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಕೆಲವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಆರೋಪ ಮಾಡುತ್ತಿದ್ದಾರೆ‌. ನಮ್ಮ ಸಹಕಾರ ಇಲಾಖೆಗೂ ಯಾರೂ ಹಸ್ತಕ್ಷೇಪ ಮಾಡಿಲ್ಲ. ಮೈಸೂರು ಉಸ್ತುವಾರಿ ಆಡಳಿತವನ್ನು ಸ್ವತಂತ್ರವಾಗಿ ನಡೆಸಲು ಮುಕ್ತ ಅವಕಾಶವಿದೆ ಎಂದು ಅವರು ಸ್ಪಷ್ಟನೆ ನೀಡಿದರು.

ವಿಜಯೇಂದ್ರ ಪಕ್ಷಕ್ಕೆ ಮಾತ್ರ ಸೀಮಿತ

ವಿಜಯೇಂದ್ರ ಅವರು ಪಕ್ಷದಲ್ಲಿ ಉಪಾಧ್ಯಕ್ಷರಾಗಿದ್ದಾರೆ. ಅವರ ಸಲಹೆ ಪಕ್ಷಕ್ಕೆ ಮಾತ್ರ ಸೀಮಿತ. ಸರ್ಕಾರ ನಡೆಸಲು ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ‌. ನಾಲ್ಕು ಭಾರಿ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರಿಗೆ ಎಲ್ಲಾ ರೀತಿಯ ನಿರ್ಧಾರ ಕೈಗೊಳ್ಳುವ ಪರಮಾಧಿಕಾರವಿದೆ ಎಂದು ಸಚಿವ ಸೋಮಶೇಖರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸರಕಾರದ ಆಡಳಿತದಲ್ಲಿ ಹಸ್ತಕ್ಷೇಪ ಎಂಬುದು ವಿರೋಧ ಪಕ್ಷದವರಿಂದ ಮಾತ್ರ ಇದೆ. ರಾಜ್ಯದಲ್ಲಿ ಯಾವಾವ ಮುಖ್ಯಮಂತ್ರಿಗಳ ಕಾಲದಲ್ಲಿ ಯಾರಾರು ಅಧಿಕಾರ ನಡೆಸಿದ್ದಾರೆ ಎಂಬುದು ಕರ್ನಾಟಕದ ಜನತೆಗೂ ಗೊತ್ತಿದೆ. ಸೂಕ್ತ ಸಮಯ ಬಂದಾಗ ನಾವೂ ಕೂಡ ಅದನ್ನೆಲ್ಲ ತಿಳಿಸಲಾಗುವುದು ಎಂದು ಅವರು ಹೇಳಿದರು.

ವಿಧಾನಸಭೆ ಕಲಾಪ ನಡೆಯುವ ಸಂದರ್ಭದಲ್ಲಿ ಯಾವತ್ತಾದರೂ ಒಂದು ದಿವಸ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಿಲ್ಲ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಲಿಲ್ಲ. ಸೀಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡಿದರು. ವಿಧಾನಸಭೆಯಲ್ಲಿ ನಡೆಯುವ ಚರ್ಚೆಯನ್ನು ರಾಜ್ಯದ ಜನರೆಲ್ಲಾ ವೀಕ್ಷಿಸುತ್ತಿರುತ್ತಾರೆ. ಜನರ ಕಷ್ಟ ಸುಖದ ಬಗ್ಗೆ ಮಾತನಾಡದೆ ಪ್ರತಿಭಟನೆ ನಡೆಸಿದರು ಎಂದರು ಸಚಿವರು‌.

ಅನುದಾರ ತಾರತಮ್ಮ ಆರೋಪ ಸುಳ್ಳು

ಕಾಂಗ್ರೆಸ್ ಶಾಸಕರ ಕ್ಷೇತ್ರಗಳು ಅನುದಾನ ಕೊರತೆ ಮಾಡಲಾಗುತ್ತಿದೆ ಎಂಬ ವಿಷಯ ಕುರಿತು ಮಾತನಾಡಿದ ಸಚಿವರು, ಈ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿಗಳಿಗೆ ರಾಜ್ಯದ 224 ಕ್ಷೇತ್ರಗಳು ಕೂಡ ಒಂದೇ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಂದು ತಾರತಮ್ಯ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದರು.

ಇತ್ತೀಚಿಗೆ ಮೈಸೂರಿನಲ್ಲಿ ಕೊರೊನಾ ಹೆಚ್ಚು ಹರಡುತ್ತಿರುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ. ಕಳೆದ ಬಾರಿಯೂ ಅಧಿಕಾರಿ ಸಭೆ ನಡೆಸಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಸೂಚಿಸಲಾಗಿತ್ತು. ಈಗಲೂ ಕೂಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಹಾಗೂ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ತಮಿಳುನಾಡಿನ ಚುನಾವಣೆಯಲ್ಲಿ ನನಗೆ ಒಂದು ಕ್ಷೇತ್ರಕ್ಕೆ ಉಸ್ತುವಾರಿ ನೀಡಲಾಗಿತ್ತು. ಅಲ್ಲಿ ಸ್ಪರ್ಧಿಸುತ್ತಿರುವ ಭೋಜರಾಜನ್ ಅವರು ಬಿಜೆಪಿ ಪಕ್ಷದ ಆಕಾಂಕ್ಷೆಯಾಗಿರಲಿಲ್ಲ. ಅಲ್ಲಿನ ಸ್ಥಳೀಯರು, ಎಲ್ಲಾ ಸಮುದಾಯದವರು ಹಾಗೂ ಸಂಘಸಂಸ್ಥೆಗಳು ಸೇರಿ ಅವರನ್ನು ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಒತ್ತಾಯಿಸಿದರು. ಅಲ್ಲಿನ ಮತದಾರರ ಸಂಪೂರ್ಣ ಬೆಂಬಲವಿದ್ದು, ನೂರಕ್ಕೆ ನೂರು ಭೋಜರಾಜನ್ ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಊಟಿಯಲ್ಲಿ ಬಹುತೇಕ ಮಂದಿ ಕರ್ನಾಟಕದಿಂದ ವಲಸೆ ಹೋದವರಿದ್ದಾರೆ. ಹಾಸನ, ಮಂಡ್ಯ, ಕೊಲಾರ, ನಾಗಮಂಗಲದವರಿದ್ದು, ಕನ್ನಡದವರೇ ಆಗಿದ್ದಾರೆ. ಅಲ್ಲಿರುವ ಕನ್ನಡಿಗರು ಸಂತೋಷವಾಗಿ ವ್ಯವಸ್ಥಿತ ಬದುಕನ್ನು ನಡೆಸುತ್ತಿದ್ದಾರೆ. ಯಾರೂ ಕೂಡ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ನಿದರ್ಶನೆವೇ ಇಲ್ಲ ಎಂದು ಮಾಹಿತಿ ನೀಡಿದರು.

ಸಿಡಿ ಪ್ರಕರಣದ ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡದಲ್ಲಿ ಸಮರ್ಥ ಅಧಿಕಾರಿಗಳಿದ್ದಾರೆ. ಮುಖ್ಯಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲೀ ಯಾರೂ ಕೂಡ ಹಸ್ತಕ್ಷೇಪ ಮಾಡುತ್ತಿಲ್ಲ. ಅಧಿಕಾರಿಗಳು ಯಾರ ಹಸ್ತಕ್ಷೇಪಕ್ಕೆ ಒಳಗಾಗದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ದುಡ್ಡು ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲುತ್ತಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
Tags: bjpCongresskarnatakaPoliticssiddaramaiahstsomashekarvijayendrayeddyurappa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

ನಿಡುಮಾಮಿಡಿ ಪೀಠಕ್ಕೆ ಮಂಜೂರಾದ ₹30.57 ಲಕ್ಷವನ್ನುಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಏನು ಮಾಡಿತು? ಮಮ್ತಾಜ್‌ ಅಲಿಖಾನ್‌ ಕೊಟ್ಟ ಹಣ ಎಲ್ಲಿ? ಗಂಭೀರ ಆರೋಪ ಮಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

Recommended

ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

6 years ago
ಚಿಕ್ಕಬಳ್ಳಾಪುರದಲ್ಲಿ ಚಿದಾನಂದಗೌಡ ಪರ ಡಾ.ಸುಧಾಕರ್‌ ಮತಬೇಟೆ

ಕೋವಿಡ್‌ ಕಂಟ್ರೋಲ್;‌ ಡಾಕ್ಟರ್ ಕೆಲಸಕ್ಕೆ ಡಾಕ್ಟರ್ ಮೆಚ್ಚುಗೆ, ಚಳಿಗಾಲ-ಹಬ್ಬಗಳ ವೇಳೆ ನಿರ್ಬಂಧ ಸಡಿಲಿಕೆ ಇಲ್ಲ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ