ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಅನುಕೂಲ ಪಡೆಯಲು, ವಿದ್ಯಾರ್ಥಿ ವೇತನ, ಪಹಣಿ, ಆಧಾರ್, ಪಡಿತರ ಚೀಟಿಗಳು ಸೇರಿದಂತೆ ಹಾಗೂ ಉದ್ಯೋಗಾವಕಾಶಗಳು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಪಡೆಯಬೇಕಾಗಿದೆ.
ಬಾಗೇಪಲ್ಲಿ: ಆಧಾರ್, ಪಡಿತರ ಚೀಟಿಗಳು ಸೇರಿದಂತೆ ವಿವಿಧ ಸರಕಾರಿ ಯೋಜನೆಗಳು ಆನ್‌ಲೈನ್ ಆಗಿರುವುದರಿಂದ ಜನರಿಗೆ ಅನುಕೂಲ ಕಲ್ಪಿಸಲು ತಮ್ಮ ಟ್ರಸ್ಟ್‌ನಿಂದ ಬಿಳ್ಳೂರು ಗ್ರಾಮದಲ್ಲಿ ಉಚಿತವಾಗಿ ಡಿಜಿಟಲ್ ಸೇವಾಕೇಂದ್ರ ಆರಂಭಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಅವರು ತಾಲೂಕಿನ ಬಿಳ್ಳೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಿಜಿಟಲ್ ಸೇವಾಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳ ಅನುಕೂಲ ಪಡೆಯಲು, ವಿದ್ಯಾರ್ಥಿ ವೇತನ, ಪಹಣಿ, ಆಧಾರ್, ಪಡಿತರ ಚೀಟಿಗಳು ಸೇರಿದಂತೆ ಹಾಗೂ ಉದ್ಯೋಗಾವಕಾಶಗಳು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಪಡೆಯಬೇಕಾಗಿದೆ. ತಾಲ್ಲೂಕು ಕಚೇರಿ, ಪಂಚಾಯಿತಿಗಳಲ್ಲಿ ವಿವಿಧ ಕೆಲಸಗಳಿಗೆ ಹಾಗೂ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕೆಲಸಗಳು ಬಿಟ್ಟು ಕಾಯಬೇಕಾಗಿದೆ. ಅರ್ಜಿಗಳು ಪಡೆಯಲು ಸಾಲುಗಟ್ಟಿ ನಿಲ್ಲಬೇಕಾಗಿದೆ. ಇದರಿಂದ ಅನೇಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಬಡವರು, ವಿದ್ಯಾರ್ಥಿಗಳು, ಕೂಲಿ- ಕಾರ್ಮಿಕರು, ಮಹಿಳೆಯರು ಎಲ್ಲಾ ವರ್ಗದವರು ಈ ಡಿಜಿಟಲ್ ಸೇವಾ ಕೇಂದ್ರಲ್ಲಿ ಉಚಿತವಾಗಿ ಸೌಲಭ್ಯಗಳನ್ನು ಪಡೆಯಬಹುದು ಎಂದು ಅವರು ಹೇಳಿದರ.
ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎಚ್.ಎಸ್.ನರೇಂದ್ರ, ಬಿ.ವಿ.ವೆಂಕಟರವಣ, ಪಿ.ಎಸ್.ಸುಬ್ಬಾರೆಡ್ಡಿ, ಚಂದ್ರಶೇಖರ ರೆಡ್ಡಿ, ಲಕ್ಷ್ಮೀಪತಿ ರೆಡ್ಡಿ, ವಿಶ್ವನಾಥ ರೆಡ್ಡಿ, ಗಂಗುಲಪ್ಪ ಇನ್ನೂ ಮುಂತಾದವರು ಇದ್ದರು.