• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ, ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

cknewsnow desk by cknewsnow desk
April 7, 2021
in CHIKKABALLAPUR, STATE
Reading Time: 1 min read
0
ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ,  ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ  ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ
912
VIEWS
FacebookTwitterWhatsuplinkedinEmail
  • ನೀರು ಲಭ್ಯತೆಯ ಬಗ್ಗೆಯೇ ಖಾತರಿ ಇಲ್ಲದ ಎತ್ತಿಹೊಳೆ ಯೋಜನೆಯನ್ನು ʼರಾಷ್ಟ್ರೀಯ ಯೋಜನೆʼ ಎಂದು ಘೋಷಿಸಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರಂತೆ.

ಚಿಕ್ಕಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ರೂಪಿಸಿರುವ ಎತ್ತಿನಹೊಳೆ ಯೋಜನೆಯನ್ನು ʼರಾಷ್ಟ್ರೀಯ ಯೋಜನೆʼಯನ್ನಾಗಿ ಪರಿವರ್ತಿಸಿ ಹೆಚ್ಚಿನ ಅನುದಾನ ಕೊಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯು ಕುಡಿಯುವ ನೀರಿನ ಯೋಜನೆಯಾಗಿದೆ. ಇದರಿಂದ ಬಯಲುಸೀಮೆಯ ಸುಮಾರು ಏಳೆಂಟು ಜಿಲ್ಲೆಗಳಿಗೆ ನೀರಿನ ದಾಹ ನೀಗಲಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ರೂಪಿಸಬೇಕು. ಇನ್ನೂ ಅಗತ್ಯವಿರುವ ಅನುದಾನವನ್ನು ಕೇಂದ್ರ ಸರಕಾರ ನೀಡಬೇಕು ಎಂದು ಈಗಾಗಲೇ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ಫಲಪ್ರದವಾಗಲು ಇನ್ನಷ್ಟು ಶ್ರಮ ಹಾಕಲಾಗುವುದು ಎಂದರು.

ರಸ್ತೆ ಅಭಿವೃದ್ಧಿಗೆ ಅನುದಾನ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ 9 ತಾಲೂಕುಗಳಲ್ಲಿ 2020-21ನೇ ಸಾಲಿಗೆ ಪ್ರಧಾನಮಂತ್ರಿಗಳ ಗ್ರಾಮ ಸಡಕ್ (ಪಿಎಂಜಿಎಸ್‍ವೈ) ಯೋಜನೆಯಡಿ ಒಟ್ಟಾರೆ 249.79 ಕಿ.ಮೀ.ನಷ್ಟು ರಸ್ತೆಗಳ ಅಭಿವೃದ್ಧಿಗೆ 173.13 ಕೋಟಿ ರುಪಾಯಿ ಮಂಜೂರು ಆಗಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನಲ್ಲಿ 46.11 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಗೆ 45.63 ಕೋಟಿ ರುಪಾಯಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ತಾಲೂಕುಗಳಲ್ಲಿ ಒಟ್ಟು 97.94 ಕಿ.ಮೀ. ಉದ್ದದ ರಸ್ತೆಗೆ 61.30 ಕೋಟಿ ರುಪಾಯಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕುಗಳಲ್ಲಿ ಒಟ್ಟು 105.74 ಕಿ.ಮೀ. ಉದ್ದದ ರಸ್ತೆಗೆ 66.20 ಕೋಟಿ ರುಪಾಯಿ ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.

ಸಂಸದರ ಪ್ರದೇಶಾಭಿವೃದ್ಧಿ ನಿಧಿ

ಈ ಯೋಜನೆಯಡಿ 2019-20 ಮತ್ತು 2020-21ನೇ ಸಾಲಿಗೆ ಕ್ಷೇತ್ರದ 9 ತಾಲೂಕುಗಳಲ್ಲಿ ಒಟ್ಟು 79 ಕಾಮಗಾರಿಗಳನ್ನು ಕೈಗೊಂಡು, 3.82 ಕೋಟಿ ರು. ಖರ್ಚು ಮಾಡಲಾಗಿದೆ. ಪ್ರಧಾನಮಂತ್ರಿ ಆದರ್ಶಗ್ರಾಮ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ 40 ಲಕ್ಷ ರುಪಾಯಿಗಳಂತೆ ಒಟ್ಟು 41 ಗ್ರಾಮಗಳಿಗೆ ಅನುದಾನ ಮಂಜೂರಾಗಿದ್ದು, 2018-19, 2019-20ನೇ ಸಾಲಿನ ಮೊದಲ ಹಂತದಲ್ಲಿ 19 ಗ್ರಾಮಗಳಿಗೆ ಒಟ್ಟು 7.60 ಕೋಟಿ ರುಪಾಯಿಗಳು ಮಂಜೂರಾಗಿದೆ. 2019-20ನೇ ಸಾಲಿನ 2ನೇ ಹಂತ ಮತ್ತು 2020-21 ಸಾಲುಗಳಲ್ಲಿ ಒಟ್ಟು 22 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ತಲಾ 20 ಲಕ್ಷ ರು. ದಂತೆ 4.40 ಕೋಟಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ಅನುದಾನ ಮಂಜೂರಾಗಿದ್ದು, ಈ ಪೈಕಿ ಮೊದಲ ಹಂತದಲ್ಲಿ 14 ಗ್ರಾಮಗಳಿಗೆ 5.60 ಕೋಟಿ, 2ನೇ ಹಂತದಲ್ಲಿ 28 ಗ್ರಾಮಗಳಿಗೆ ತಲಾ 20 ಲಕ್ಷದಂತೆ ಒಟ್ಟು 5.60 ಕೋಟಿ ರು. ಮಂಜೂರಾಗುವ ಹಂತದಲ್ಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಸಿಲ್ಕ್ ಬೆಳೆಗಾರರಿಗೆ ಸಿಲ್ಕ್ ಸಮಗ್ರ ಯೋಜನೆಯಡಿಯಲ್ಲಿ ನೀಡುವ ಸಲಕರಣೆಗಳಾದ ಸ್ಪ್ರೇಯರ್, ಮಲ್ಬರಿ ಪ್ರೂನರ್, ಚಂದ್ರಿಕೆ, ಸೋಲಾರ್ ದೀಪಗಳ ಅಳವಡಿಕೆಗೆ ಶೇ.75 ರಷ್ಟು ಸಹಾಯಧನವನ್ನು ಸಾಮಾನ್ಯ ರೈತರಿಗೆ ಮತ್ತು ಶೇ.90ರಷ್ಟು ಎಸ್ಸಿ/ಎಸ್ಟಿ ರೈತರಿಗೆ ನೀಡುವ ಯೋಜನೆಗೆ 46.79 ಕೋಟಿ ವಿತರಿಸಲು ಯೋಜನೆ ಅನುಷ್ಠಾನಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ಸಂಸದರು ವಿವರಿಸಿದರು.

Tags: bjpbn bache gowdachikkaballapurindiakarnatakaYettinahole project
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಇನ್ನು ವರ್ಕ್‌ಪ್ಲೇಸ್‌ನಲ್ಲೂ ವ್ಯಾಕ್ಸಿನ್; ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಲ್ಲಿ ಕೈಮೀರುತ್ತಿದೆ ಕೋವಿಡ್‌, ಜಿಲ್ಲಾಡಳಿತಗಳ ಜತೆ ತುರ್ತು ಸಭೆ ನಡೆಸಿದ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಲೋಕಾರ್ಪಣೆ; ಪಕ್ಷವನ್ನು ಮರಳಿ ಆಧಿಕಾರಕ್ಕೆ ತರಲು ಪಣತೊಟ್ಟ ಮುಖಂಡರು

ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಲೋಕಾರ್ಪಣೆ; ಪಕ್ಷವನ್ನು ಮರಳಿ ಆಧಿಕಾರಕ್ಕೆ ತರಲು ಪಣತೊಟ್ಟ ಮುಖಂಡರು

5 years ago
ಕರ್ನಾಟಕದ ಮತ್ತೊಬ್ಬ ಸುಪ್ರಸಿದ್ಧ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತನೆ ಮಾಡಿರುವ ಕೃಷ್ಣಶಿಲೆಯ ಬಾಲರಾಮ ಮೂರ್ತಿ ಇಲ್ಲಿದೆ ನೋಡಿ

ಕರ್ನಾಟಕದ ಮತ್ತೊಬ್ಬ ಸುಪ್ರಸಿದ್ಧ ಶಿಲ್ಪಿ ಗಣೇಶ್ ಭಟ್ ಅವರು ಕೆತ್ತನೆ ಮಾಡಿರುವ ಕೃಷ್ಣಶಿಲೆಯ ಬಾಲರಾಮ ಮೂರ್ತಿ ಇಲ್ಲಿದೆ ನೋಡಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ