• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಇನ್ನು ವರ್ಕ್‌ಪ್ಲೇಸ್‌ನಲ್ಲೂ ವ್ಯಾಕ್ಸಿನ್; ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಲ್ಲಿ ಕೈಮೀರುತ್ತಿದೆ ಕೋವಿಡ್‌, ಜಿಲ್ಲಾಡಳಿತಗಳ ಜತೆ ತುರ್ತು ಸಭೆ ನಡೆಸಿದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
April 8, 2021
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ
929
VIEWS
FacebookTwitterWhatsuplinkedinEmail

ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಲ್ಲ; ಎಚ್ಚರ ತಪ್ಪಿದರೆ ಕಷ್ಟ ತಪ್ಪಿದ್ದಲ್ಲ

ಬೆಂಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ಬುಧವಾರ ವೀಡಿಯೋ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಉದ್ಯೋಗಸ್ಥರಿಗೆ, ಅರ್ಹರಿಗೆ ಅದೇ ಸ್ಥಳಗಳಲ್ಲಿ ಹೋಗಿ ಲಸಿಕೆ ನೀಡುವ ಅವಕಾಶ ಕೊಟ್ಟಿದೆ. ಈ ಕುರಿತು ದೊಡ್ಡ ಉದ್ಯಮಗಳು, ಐಟಿ ಉದ್ಯಮಗಳು ಮನವಿ ಮಾಡಿದ್ದವು. ಅದಕ್ಕೆ ಕೇಂದ್ರದಿಂದ ಮಂಜೂರಾತಿ ಸಿಕ್ಕಿದೆ. ಏಪ್ರಿಲ್ 11ರಿಂದ ಅವರಿರುವ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆಯಾಗಲಿದೆ. ಇದರಿಂದಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಲಿದೆ. ಈವರೆಗೆ 50 ಲಕ್ಷ ಡೋಸ್ ತಲುಪಲಾಗಿದೆ. ಆದಷ್ಟು ಶೀಘ್ರ ಇನ್ನಷ್ಟು 50 ಲಕ್ಷವಾಗಿ, ಒಂದು ಕೋಟಿ ತಲುಪಲಿದೆ ಎಂದು ಅವರು ಹೇಳಿದರು.

ಕೊರೊನಾ ನಿಯಂತ್ರಣ ಕುರಿತಂತೆ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದ.ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು & ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು. ನೆನ್ನೆ ಕೇಂದ್ರ ಆರೋಗ್ಯ ಸಚಿವರು ವಿಡಿಯೋ ಸಂವಾದದಲ್ಲಿ ನೀಡಿದ ಸಲಹೆ, ಸೂಚನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

1/2 pic.twitter.com/rMxPD4C4YU

— Dr Sudhakar K (Modi ka Parivar) (@DrSudhakar_) April 7, 2021

ಕಳೆದೆರಡು ವಾರ ಗಮನಿಸಿದಾಗ ಕೆಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಾ ಹೋಗಿದೆ. ಕೆಲವು ಕಡೆ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ. ಸಾರಿ ಹಾಗೂ ಐಎಲ್ʼಐ ಪ್ರಕರಣ ಪತ್ತೆ ಕಡಿಮೆ ಹಾಗೂ ಲಸಿಕೆ ಮೊದಲಾದ ವಿಷಯ ಕುರಿತು ಚರ್ಚಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ನೀಡಿದ ಮಾರ್ಗದರ್ಶನವನ್ನು ಈ ಜಿಲ್ಲೆಗಳಿಗೆ ತಿಳಿಸಲಾಗಿದೆ. ಎಲ್ಲರೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರು ಸ್ವಯಂ ನಿಯಮ ಹಾಕಿಕೊಳ್ಳಬೇಕು ಎಂದರು ಅವರು.

ಏಪ್ರಿಲ್ 11ರಿಂದ ಕಛೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ ಕೊರೊನಾ ಲಸಿಕೆ ವಿತರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
45 ವರ್ಷಕ್ಕಿಂತ ಮೇಲ್ಪಟ್ಟ ಕನಿಷ್ಠ 100 ಜನ ನೌಕರರುಳ್ಳ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ
ಲಸಿಕೆ ನೀಡಲು ಅವಕಾಶವಿದ್ದು ಇದರಿಂದ ಲಸಿಕೆ ವಿತರಣೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗಲಿದೆ.

— Dr Sudhakar K (Modi ka Parivar) (@DrSudhakar_) April 7, 2021

ಜನರು ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಸಹಕಾರ ನೀಡಬೇಕು. ಎರಡನೇ ಅಲೆ ನಿರೀಕ್ಷೆಗೆ ಮೀರಿ ಹರಡುತ್ತಿದೆ. ಸೋಂಕು ಹೆಚ್ಚಾದರೆ ಹಾಸಿಗೆ ಲಭ್ಯತೆ ಕಷ್ಟವಾಗುತ್ತದೆ. ಕಳೆದೊಂದು ವರ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಅಂತಹ ಸಮಸ್ಯೆ ಇಲ್ಲ. ಆದರೆ ಇದೇ ರೀತಿ 6%, 9% ಪಾಸಿಟಿವಿಟಿ ದರ ಬಂದರೆ ಅಥವಾ 20%, 25% ಬಂದರೆ ಎಷ್ಟು ಜನ ಐಸಿಯುಗೆ ಹೋಗಬೇಕಾಗುತ್ತದೆ ಎಂದು ಯೋಚಿಸಬೇಕಾಗುತ್ತದೆ. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡದರು.

ರಾಜಧಾನಿಯಲ್ಲಿ ವಿಷಮ ಸ್ಥಿತಿ

ಬೆಂಗಳೂರಿನಲ್ಲಿ 5 ಸಾವಿರ ಹತ್ತಿರಕ್ಕೆ ಪ್ರಕರಣ ಸಂಖ್ಯೆ ಬಂದಿದೆ. ಪಾಸಿಟಿವಿಟಿ ದರ ಶೇ.5.56 ಇದೆ. ಇಡೀ ರಾಜ್ಯದಲ್ಲಿ 35 ಒಟ್ಟು ಸಾವಾಗಿದ್ದರೆ, 25 ಬೆಂಗಳೂರಿನಲ್ಲೇ ಆಗಿದೆ. ನಾಳೆ ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಮಂತ್ರಿಗಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಲಿರುವ ಸಭೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಕೂಡ ಪಾಲ್ಗೊಂಡು ಚರ್ಚಿಸಲಿದ್ದಾರೆ ಎಂದರು.

Tags: covid19dr k sudhakarKarnataka covid-19vaccine
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೂಯೆಜ್ ಕೇವಲ ಕಾಲುವೆಯಲ್ಲ, ವರ್ತಮಾನ ಜಗತ್ತಿನ ಅತಿದೊಡ್ಡ ಅನಿವಾರ್ಯ! ಪರಮ ರೋಚಕತೆಯ ಈ ಜಲಮಾರ್ಗದ ಇತಿಹಾಸವೇ ಒಂದು ಮಹಾಕಥನ

ಸೂಯೆಜ್ ಕೇವಲ ಕಾಲುವೆಯಲ್ಲ, ವರ್ತಮಾನ ಜಗತ್ತಿನ ಅತಿದೊಡ್ಡ ಅನಿವಾರ್ಯ! ಪರಮ ರೋಚಕತೆಯ ಈ ಜಲಮಾರ್ಗದ ಇತಿಹಾಸವೇ ಒಂದು ಮಹಾಕಥನ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ