• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌

cknewsnow desk by cknewsnow desk
April 7, 2021
in CHIKKABALLAPUR, EDITORS'S PICKS
Reading Time: 1 min read
0
ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ  ಸಚಿವ ಡಾ.ಕೆ.ಸುಧಾಕರ್‌
917
VIEWS
FacebookTwitterWhatsuplinkedinEmail

ಬೆಂಗಳೂರು: ವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದರಲ್ಲದೆ, ನಾವು ಹೋದ ಮೇಲೆಯೂ ಇನ್ನೊಬ್ಬರ ಬದುಕಲ್ಲಿ ಬೆಳಕು ಮೂಡಿಸೋಣ ಎಂದು ಕರೆ ನೀಡಿದರು.

ವಿಶ್ವ ಆರೋಗ್ಯ ದಿನದ ಪ್ರಯುಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ಸಮಯದಲ್ಲಿ ಸಚಿವರು ಮಿಂಟೋ ಆಸ್ಪತ್ರೆಗೆ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡರು. ಮಿಂಟೋ ನಿರ್ದೇಶಕಿ ಡಾ.ಸುಜಾತ ರಾಥೋಡ್ ಅವರು, ಸಚಿವರಿಗೆ ಹೆಸರು ನೋಂದಾಯಿಸಿಕೊಂಡ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.

ಈ ಕುರಿತು ಅಭಿಪ್ರಾಯ ಹಂಚಿಕೊಂಡಿರುವ ಸಚಿವ ಡಾ.ಕೆ.ಸುಧಾಕರ್, “ವಿಶ್ವ ಆರೋಗ್ಯ ದಿನವಾದ ಇಂದು ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿರುವುದು ಸಾರ್ಥಕ ಭಾವ ಮೂಡಿಸಿದೆ. ಕಣ್ಣುಗಳು ನಮ್ಮ ಜೀವಿತಾವಧಿಯ ನಂತರ ಮತ್ತೊಬ್ಬ ಜೀವಿಯ ಬದುಕಲ್ಲಿ ಬೆಳಲು ಮೂಡಿಸಲು ನೆರವಾಗಬಹುದು” ಎಂದು ಹೇಳಿದ್ದಾರೆ.

ಪ್ರತಿಯೊಬ್ಬರು ನೇತ್ರದಾನ ಮಾಡುವ ಸಂಕಲ್ಪ ತೊಡಬೇಕೆಂದು ನಾನು ಮನವಿ ಮಾಡುತ್ತೇನೆ. ಪ್ರತಿ ಜೀವಿಗೂ ದೃಷ್ಟಿ ಅತ್ಯಮೂಲ್ಯವಾಗಿದೆ. ನಾವು ಮಾಡುವ ನೇತ್ರದಾನವು ಇನ್ನೊಬ್ಬರಿಗೆ ವರವಾಗಿ ಪರಿಣಮಿಸುತ್ತದೆ. ಆದ್ದರಿಂದ ನಾವೆಲ್ಲರೂ ತಪ್ಪದೇ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ಇನ್ನೊಬ್ಬರ ಬಾಳಿನಲ್ಲಿ ಬೆಳಕು ಮೂಡಿಸುವ ಕೆಲಸ ಮಾಡೋಣ. ಈ ಮೂಲಕ ನಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳೋಣ ಎಂದು ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

On the occasion of #WorldHealthDay, happy to share that today I pledged to donate my eyes. I appeal to everyone to come forward and pledge to donate their eyes.

Let us be the reason for someone to see the sunshine. Let us make other's future bright by donating our sight. pic.twitter.com/m947q6LMkH

— Dr Sudhakar K (Modi ka Parivar) (@DrSudhakar_) April 7, 2021

ನೇತ್ರದಾನ ಮಹಾದಾನ

ಭಾರತದಲ್ಲಿ ಒಂದು ವರ್ಷದಲ್ಲಿ ಸುಮಾರು 40 ಸಾವಿರ ಕಣ್ಣಿನ ದಾನ ನಡೆಯುತ್ತಿದೆ. ಈ ಪೈಕಿ ಸುಮಾರು 30-35 ಸಾವಿರ ಕಣ್ಣುಗಳು ಮಾತ್ರ ಸಮಯಕ್ಕೆ ಸರಿಯಾಗಿ ಲಭ್ಯವಾಗುತ್ತಿದೆ. ಸುಮಾರು 5 ಸಾವಿರದಷ್ಟು ಕಣ್ಣುಗಳನ್ನು ನಾನಾ ಕಾರಣಗಳಿಂದಾಗಿ ಕಸಿ ಮಾಡಲು ಸಾಧ್ಯವಾಗುವುದಿಲ್ಲ. ವ್ಯಕ್ತಿ ಮೃತಪಟ್ಟ 6 ಗಂಟೆಯೊಳಗೆ ನೇತ್ರದಾನವಾಗಬೇಕು. ಹೀಗಾಗಿ ವ್ಯಕ್ತಿ ಮರಣ ಹೊಂದಿದ ಕೂಡಲೇ ಸಂಬಂಧಿಕರು ನೇತ್ರ ಆಸ್ಪತ್ರೆಗೆ ಅಥವಾ ನೇತ್ರ ಪಡೆಯುವ ಆಸ್ಪತ್ರೆಗೆ ಈ ಕುರಿತು ಮಾಹಿತಿ ನೀಡಬೇಕು. ಇಂತಹ ವಿಚಾರಗಳ ಬಗ್ಗೆ ಜನರು ಅರಿಯಬೇಕು. ನೇತ್ರದಾನ ಮಹಾದಾನ ಎಂಬ ಬಗ್ಗೆ ಜಾಗೃತರಾಗಬೇಕು ಎಂದು ಸಚಿವರು ಕೋರಿದ್ದಾರೆ.

ನೇತ್ರದಾನಕ್ಕೆ ಮುಂಚಿತವಾಗಿಯೇ ಹೆಸರು ನೋಂದಾಯಿಸಿಕೊಳ್ಳಬೇಕು. ನೇತ್ರ ಪಡೆಯುವಾಗ ಸಂಗ್ರಹ ಕೇಂದ್ರ ಅಥವಾ ಆಸ್ಪತ್ರೆ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ. ಈ ಅವಕಾಶವನ್ನು ಬಳಸಿಕೊಂಡು ಜನರು ತಮ್ಮ ಅಮೂಲ್ಯ ಕಣ್ಣುಗಳನ್ನು ದಾನ ಮಾಡಲು ನೋಂದಾಯಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ವಿಶ್ವ ಆರೋಗ್ಯ ದಿನದ ಪ್ರಯುಕ್ತ
RGUHS ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಯ ನವೀಕೃತ ಕೇಂದ್ರ ಕಛೇರಿ, ಸ್ಕ್ಯಾನಿಂಗ್ ಸೆಂಟರ್, ರಕ್ತದಾನ, ನೇತ್ರದಾನ ಶಿಬಿರಗಳನ್ನು ಉದ್ಘಾಟಿಸಲಾಯಿತು. ನಂತರ ವಿವಿಯ ಬೆಳ್ಳಿ ಹಬ್ಬ ಅಂಗವಾಗಿ ಹೊರತಂದಿರುವ ಅಂಚೆ ಚೀಟಿ ಬಿಡುಗಡೆ ಮಾಡಿ ವಿಶ್ರಾಂತ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. pic.twitter.com/K8iue83ZL4

— Dr Sudhakar K (Modi ka Parivar) (@DrSudhakar_) April 7, 2021
Tags: health ministerindiak sudhakarkarnatakaregisters as eye donorsesrWorld Health Day
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ,  ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ  ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

ಎತ್ತಿನಹೊಳೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಡಿಮಾಂಡ್‌ ಮಾಡಿದ್ದೇನೆ, ಇನ್ನೂ ಹೆಚ್ಚಿನ ಅನುದಾನ ಕೊಡುವಂತೆ ಕೇಂದ್ರ ಸರಕಾರಕ್ಕೆ ಕೇಳಿದ್ದೇನೆ ಎಂದ ಸಂಸದ ಬಿ.ಎನ್.ಬಚ್ಚೇಗೌಡ

Leave a Reply Cancel reply

Your email address will not be published. Required fields are marked *

Recommended

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಆಮ್ಲಜನಕದ ಕೊರತೆಯಿಂದ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ಭೀತಿ; ವಸ್ತುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಯಡಿಯೂರಪ್ಪ

4 years ago
ವಿಕಲಚೇತನರ ಕಷ್ಟಕ್ಕೆ ಮಿಡಿದ KSRTC

ವಿಕಲಚೇತನರ ಕಷ್ಟಕ್ಕೆ ಮಿಡಿದ KSRTC

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ