• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಜ್ಯೋತಿಬಾ ಫುಲೆ ಜಯಂತಿ: ಮಹಿಳೆಯರಿಗೆ ಕೋವಿಡ್‌ ಲಸಿಕೆ ಹಾಕಲು ಪಿಂಕ್‌ ಬೂತ್‌ಗೆ ಚಾಲನೆ ಕೊಟ್ಟ ಜಿಲ್ಲಾಧಿಕಾರಿ

cknewsnow desk by cknewsnow desk
April 11, 2021
in CHIKKABALLAPUR, COVID-19, NEWS IN USE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಜ್ಯೋತಿಬಾ ಫುಲೆ ಜಯಂತಿ: ಮಹಿಳೆಯರಿಗೆ ಕೋವಿಡ್‌ ಲಸಿಕೆ ಹಾಕಲು ಪಿಂಕ್‌ ಬೂತ್‌ಗೆ ಚಾಲನೆ ಕೊಟ್ಟ ಜಿಲ್ಲಾಧಿಕಾರಿ
927
VIEWS
FacebookTwitterWhatsuplinkedinEmail

ಈವರೆಗೆ ಚಿಕ್ಕಬಳ್ಳಾಪುರ ಲ್ಲೆಯಲ್ಲಿ 1.2 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ 1.80 ಲಕ್ಷ 45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 14ರೊಳಗೆ ಹಾಕಲಾಗುವುದು.


ಚಿಕ್ಕಬಳ್ಳಾಪುರ: ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿ ಅಂಗವಾಗಿ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿಯೂ ಮಹಿಳೆಯರಿಗಾಗಿಯೇ ವಿಶೇಷವಾಗಿ ತೆರೆದಿರುವ ಕೊರೊನಾ ಲಸಿಕೆ ಪಿಂಕ್ ಬೂತ್ʼಗಳನ್ನು ಜಿಲ್ಲಾಧಿಕಾರಿ ಆರ್.ಲತಾ ಅವರು ಉದ್ಘಾಟಿಸಿದರು.

ಮೊದಲಿಗೆ ನಗರದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ನೂತನವಾಗಿ ತೆರೆದಿರುವ ಕೊರೊನಾ ಪಿಂಕ್ ಬೂತ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕೊರೊನಾ ಲಸಿಕಾ ಪಿಂಕ್ ಬೂತ್ʼಗಳನ್ನು ತೆರೆಯಲಾಗಿದೆ. ಈ ಮೂಲಕ ಮಹಾತ್ಮರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪ್ರತೀ ದಿನ 7ರಿಂದ 8 ಸಾವಿರಕ್ಕೂ ಹೆಚ್ಚು 45 ವರ್ಷ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 1.2 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದ 1.80 ಲಕ್ಷ 45 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 14 ರವರೆಗೆ ನಡೆಯುವ ಕೋವಿಡ್ ಲಸಿಕಾ ಉತ್ಸವದಲ್ಲಿ ಒಟ್ಟು 91 ಲಸಿಕಾ ಕೇಂದ್ರಗಳ ಮೂಲಕ ಲಸಿಕೆ ಹಾಕಲಾಗುವುದು ಎಂದರು ಜಿಲ್ಲಾಧಿಕಾರಿ.

ಅಲ್ಲದೆ ಏಪ್ರಿಲ್ 12ರಿಂದ ಹೆಚ್ಚು ಜನ ಸೇರಿ ಒಂದೆಡೆ ಕೆಲಸ ಮಾಡುವ ಸರಕಾರಿ ಕಚೇರಿಗಳಲ್ಲಿಯೇ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಆ ಕಚೇರಿಯಲ್ಲಿನ ಅಧಿಕಾರಿ, ಸಿಬ್ಬಂದಿ ಹಾಗೂ ಆಯಾ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಲಸಿಕೆ ಹಾಕಲಾಗುವುದು. ಇದರ ಪ್ರಯುಕ್ತ ಸೋಮವಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ನ್ಯಾಯಾಲಯದ ಅಧಿಕಾರಿ ಸಿಬ್ಬಂದಿಗಳಿಗೆ, ವಕೀಲರಿಗೆ, ನ್ಯಾಯಾಲಯಕ್ಕೆ ಕೆಲಸ ನಿಮ್ಮಿತ್ತ ಬರುವ ಸಾರ್ವಜನಿಕರಿಗೆ ಲಸಿಕೆ ಹಾಕಲಾಗುವುದು. ಆದ್ದರಿಂದ ನ್ಯಾಯಾಲಯದಲ್ಲಿ ಕೆಲಸ ಮಾಡುವ ಅಧಿಕಾರಿ, ಸಿಬ್ಬಂದಿ, ವಕೀಲರು ತಮ್ಮ ಕುಟುಂಬ ಸಮೇತ 45 ವರ್ಷ ಮೇಲ್ಪಟ್ಟವರು ಬಂದು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕೋರಿದರು.

ಏಪ್ರಿಲ್ 14ರಂದು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಚಿಕ್ಕಬಳ್ಳಾಪುರ ನಗರದ 31ನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.

ಎಲ್ಲರೂ ಸ್ವಇಚ್ಛೆಯಿಂದ ಮುಂದೆ ಬಂದು ಲಸಿಕೆ ಹಾಕಿಸಿಕೊಳ್ಳಬೇಕು. ಆ ಮೂಲಕ ಕೋವಿಡ್‌ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಹೆಗಲು ಕೊಡಬೇಕು. ಒಂದೆಡೆ, ಕೋವಿಡ್‌ ಮಾರ್ಗಸೂಚಿ ಪಾಲಿಸುವುದು ಮತ್ತೂ ಇನ್ನೊಂದೆಡೆ ಲಸಿಕೆ ಹಾಕಿಸಿಕೊಳ್ಳುವುದು ಎಲ್ಲರ ಕರ್ತವ್ಯ ಆಗಿದೆ.

-ಆರ್.ಲತಾ, ಜಿಲ್ಲಾಧಿಕಾರಿ

ನಗರದ ಹೆಚ್.ಎಸ್.ಗಾರ್ಡನ್ ನಿವಾಸಿ ಕೃಷ್ಣಮ್ಮ ಅವರಿಗೆ ಲಸಿಕೆ ಹಾಕಲು ಸ್ವತಃ ಜಿಲ್ಲಾಧಿಕಾರಿಗಳೇ ಸಹಕರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ಚನ್ನಕೇಶವರೆಡ್ಡಿ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ರಮೇಶ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ. ಹರೀಶ್, ತಾಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ನಗರಸಭೆ ಆಯುಕ್ತ ಲೋಹಿತ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.

Tags: chikkaballapurcovid pink boothcovid19jyotirao-phule-jayanthikarnatakar latha ias
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

Next Post
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಸಲಹೆ ನೀಡುವುದಿಲ್ಲ: ಕೋವಿಡ್‌ ಎರಡನೇ ಅಲೆ ಯಾವಾಗ ನಿಯಂತ್ರಣಕ್ಕೆ ಬರಬಹುದು? ಇದಕ್ಕೆ ಆರೋಗ್ಯ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

Recommended

ಬೆಂಕಿಯಲ್ಲಿ ಸುಟ್ಟುಹೋದ ನೋಟಿನ ಕಂತೆಗಳು; ಬಾಗೇಪಲ್ಲಿ ವ್ಯಾಪಾರಿ ಮಳಿಗೆಯಲ್ಲಿ ವಿದ್ಯುತ್ ದುರಂತ

ಬೆಂಕಿಯಲ್ಲಿ ಸುಟ್ಟುಹೋದ ನೋಟಿನ ಕಂತೆಗಳು; ಬಾಗೇಪಲ್ಲಿ ವ್ಯಾಪಾರಿ ಮಳಿಗೆಯಲ್ಲಿ ವಿದ್ಯುತ್ ದುರಂತ

5 years ago
ಕಾಲಾತೀತ ದಿವ್ಯಸ್ಮರಣೆ

ಕಾಲಾತೀತ ದಿವ್ಯಸ್ಮರಣೆ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ