• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಸಂಕಷ್ಟ ಕಾಲದಲ್ಲಿ ಕ್ರೀಡಾಪಟುಗಳ ನೆರವಿಗೆ ಬಂದ ಸರಕಾರ; ಆಟಗಾರರ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ, ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ವಿವಿ ನಡುವೆ ಒಪ್ಪಂದ

cknewsnow desk by cknewsnow desk
April 15, 2021
in COVID-19, STATE
Reading Time: 1 min read
0
ಕೋವಿಡ್‌ ಸಂಕಷ್ಟ ಕಾಲದಲ್ಲಿ ಕ್ರೀಡಾಪಟುಗಳ ನೆರವಿಗೆ ಬಂದ ಸರಕಾರ; ಆಟಗಾರರ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ, ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ವಿವಿ ನಡುವೆ ಒಪ್ಪಂದ
925
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಇಂತಹವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರಕಾರ ರೂಪಿಸಿದೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ 34 ಕ್ರೀಡಾ ವಸತಿ ನಿಲಯಗಳಲ್ಲಿ ವೈದ್ಯಕೀಯ ಸೇವೆ ಒದಗಿಸಲು
ಆರ್ ಜಿಯುಎಚ್ಎಸ್ ನಡುವೆ ಮಾಡಿಕೊಳ್ಳಲು ಉದ್ದೇಶಿಸಿರುವ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.

ಕ್ರೀಡಾಪಟುಗಳ ಯಶಸ್ಸಿಗೆ ಅವರ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು ಈ ಒಪ್ಪಂದದಿಂದ ಅವರಿಗೆ ವಿಶೇಷ ಸೌಲಭ್ಯ ದೊರಕಲಿದೆ. pic.twitter.com/w5UKPqF1WU

— Dr Sudhakar K (Modi ka Parivar) (@DrSudhakar_) April 15, 2021

ನಂತರ ಮಾತನಾಡಿದ ಸಚಿವರು, ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ. ಮಕ್ಕಳಿಗೆ ದೈಹಿಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ರಾಜ್ಯದ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರಿಂದ ಆರಂಭವಾಗಿ, ಯಾವ ವ್ಯಕ್ತಿಯ ದೇಹಕ್ಕೆ ಯಾವ ರೀತಿ ಚಟುವಟಿಕೆ ಬೇಕು ಎಂಬ ಬಗ್ಗೆ ವಿಶ್ಲೇಷಣೆ ಮಾಡಿ, ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.

130 ಕೋಟಿ ಜನರಿರುವ ದೇಶದಲ್ಲಿ ಒಲಿಂಪಿಕ್ಸ್ ಮೊದಲಾದ ಕ್ರೀಡಾಸ್ಪರ್ಧೆಗಳಲ್ಲಿ ಎಷ್ಟು ಪದಕ ಪಡೆಯುತ್ತಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮಲ್ಲಿ ಎಲ್ಲ ರೀತಿಯ ಪ್ರತಿಭಾವಂತರಿದ್ದಾರೆ. ಆದರೆ ಇಂತಹವರಿಗೆ ಸರಿಯಾದ ತರಬೇತಿ, ಮಾರ್ಗದರ್ಶನ ನೀಡಬೇಕಿದೆ. ಕ್ರೀಡಾ ಇಲಾಖೆಯವರು ಮಕ್ಕಳಲ್ಲಿ ಹೊಸತನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೆರವು ಪಡೆಯಲಾಗುತ್ತಿದೆ. 34 ಕ್ರೀಡಾ ವಸತಿ ಶಾಲೆಗಳ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಇಂತಹ ಒಳ್ಳೆಯ ಉದ್ದೇಶದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ನಮ್ಮ ರಾಜ್ಯದ ಮಕ್ಕಳು ವೈಯಕ್ತಿಕವಾಗಿ ಹಾಗೂ ದೇಶಕ್ಕಾಗಿ ಹೆಸರು ತಂದು ಕೀರ್ತಿ ಸಂಪಾದಿಸಲು ಇದು ನೆರವಾಗಲಿದೆ ಎಂದು ಅವರು ಹೇಳಿದರು.

ಒಪ್ಪಂದದ ವಿವರ

ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಲವಾರು ಸಂಶೋಧನೆ, ಚಿಕಿತ್ಸೆಗಳಿಗೆ ಜನಪ್ರಿಯ. ಈ ಸಂಸ್ಥೆಯ ತಜ್ಞರನ್ನು ಬಳಸಿಕೊಂಡು ಕ್ರೀಡಾಪಟುಗಳಿಗೆ ಆರೋಗ್ಯ ಮಾರ್ಗದರ್ಶನ ನೀಡಲಾಗುತ್ತದೆ.

ಪ್ರತಿ ದಿನ ವೈದ್ಯಕೀಯ ತಪಾಸಣೆ, ಗಾಯಗಳ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ವಿಧಾನ, ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಲು ಅನುಸರಿಸಬೇಕಾದ ಕ್ರಮ, ಪೌಷ್ಠಿಕ ಆಹಾರ ಸೇವನೆ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ.

ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.

Lead photo courtesy: Wikipedia

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಆರೋಗ್ಯ ಸಚಿವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಕೋರೊನ ಎರಡನೇ ಅಲೆ ಅಬ್ಬರ; ದಿನಕ್ಕೆ ಸರಾಸರಿ 100 ಜನರಿಗೆ ಪಾಸಿಟೀವ್, ಮೂರು ತಾಲ್ಲೂಕುಗಳಲ್ಲಿ ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಚಿವರ ತವರಿನಲ್ಲಿರುವ ನೂರೆಂಟು ವರ್ಷಗಳ ನಿಸ್ವಾರ್ಥ ಸೇವೆಯ ಇತಿಹಾಸವುಳ್ಳ #CSI ಆಸ್ಪತ್ರೆ ಮೇಲೆ ಖಾಸಗಿ ನರ್ಸಿಂಗ್‌ ಹೋಂ ವಕ್ರದೃಷ್ಟಿ; ಸರ್ವೀಸ್‌ ಬದಲು ಭರ್ತಿ ಸುಲಿಗೆ!!

ಆರೋಗ್ಯ ಸಚಿವರ ತವರಿನಲ್ಲಿರುವ ನೂರೆಂಟು ವರ್ಷಗಳ ನಿಸ್ವಾರ್ಥ ಸೇವೆಯ ಇತಿಹಾಸವುಳ್ಳ #CSI ಆಸ್ಪತ್ರೆ ಮೇಲೆ ಖಾಸಗಿ ನರ್ಸಿಂಗ್‌ ಹೋಂ ವಕ್ರದೃಷ್ಟಿ; ಸರ್ವೀಸ್‌ ಬದಲು ಭರ್ತಿ ಸುಲಿಗೆ!!

5 years ago
ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!

ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ