• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೋವಿಡ್‌ ನಡುವೆಯೂ ಸಿಲಿಕಾನ್‌ ಸಿಟಿಗೆ ಗುಡ್‌ ನ್ಯೂಸ್‌! ₹14,788 ಕೋಟಿ ವೆಚ್ಚದ ಬೆಂಗಳೂರು ನಗರ & ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಗ್ರೀನ್‌ ಸಿಗ್ನಲ್ ‌ಕೊಟ್ಟ ಕೇಂದ್ರ ಸರಕಾರ

cknewsnow desk by cknewsnow desk
April 20, 2021
in NATION, STATE
Reading Time: 2 mins read
0
ಕೋವಿಡ್‌ ನಡುವೆಯೂ ಸಿಲಿಕಾನ್‌ ಸಿಟಿಗೆ ಗುಡ್‌ ನ್ಯೂಸ್‌! ₹14,788 ಕೋಟಿ ವೆಚ್ಚದ  ಬೆಂಗಳೂರು ನಗರ & ಏರ್‌ಪೋರ್ಟ್ ಮೆಟ್ರೋ ಯೋಜನೆಗೆ ಗ್ರೀನ್‌ ಸಿಗ್ನಲ್ ‌ಕೊಟ್ಟ ಕೇಂದ್ರ ಸರಕಾರ
910
VIEWS
FacebookTwitterWhatsuplinkedinEmail

ಕೋವಿಡ್‌ನಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಕೇಂದ್ರ ಸರಕಾರ ಸಿಹಿ ಸುದ್ದಿ ಕೊಟ್ಟಿದೆ. ಬಹಳ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದೆ.

ನವದೆಹಲಿ: ಬೆಂಗಳೂರು ಪೂರ್ವ ಮತ್ತು ಉತ್ತರ ಭಾಗದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಕೇಂದ್ರ ಸರಕಾರ ಗುಡ್‌ ನ್ಯೂಸ್‌ ಕೊಟ್ಟಿದೆ.

ಬೆಂಗಳೂರು ನಗರದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನವದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರ ಮತ್ತು ಹೆಬ್ಬಾಳ ಜಂಕ್ಷನ್ ಮೂಲಕ ವಿಮಾನ ನಿಲ್ದಾಣ ತಲುಪುವ 58.19 ಕಿ.ಮೀ. ಉದ್ದನೆಯ ಈ ಮೆಟ್ರೋ ಯೋಜನೆಯ ವೆಚ್ಚ 14,788.1 ಕೋಟಿ ರೂಪಾಯಿ. ಸಂಪುಟ ಸಭೆಯ ನಂತರ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯರೂ ಆದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ, ಇದಕ್ಕಾಗಿ ಪ್ರಧಾನಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

Union Cabinet approved 58.19 km long Bangalore Metro Rail Project Phase 2A(Central Silk Board Junction to K.R. Puram) & Phase 2B(K.R. Puram to Airport via Hebbal Junction) with cost of Rs.14788 Cr. On behalf of ppl of Bengaluru, I thank Hon. PM @narendramodi ji & @HardeepSPuri ji

— Sadananda Gowda ( Modi Ka Parivar ) (@DVSadanandGowda) April 20, 2021

ಇದು ನಮ್ಮ ಮೆಟ್ರೋ ಯೋಜನೆಯ ವಿಸ್ತರಣೆ. 2ಏ ಹಂತದ ಯೋಜನೆ-ಸಿಲ್ಕ್‌ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರದವರೆಗಿನ 19.75 ಕಿ.ಮೀ ಮಾರ್ಗದಲ್ಲಿ 13 ನಿಲ್ದಾಣಗಳಿವೆ. 2ಬಿ ಹಂತದ ಯೋಜನೆಯಲ್ಲಿ ಕೆ.ಆರ್. ಪುರದಿಂದ ಹೆಬ್ಬಾಳ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವ 38.44 ಕಿ.ಮೀ ಮಾರ್ಗದಲ್ಲಿ 17 ನಿಲ್ದಾಣಗಳು ಇರುತ್ತವೆ ಎಂದು ಅವರು ವಿವರಿಸಿದರು.

ಏಷ್ಯಾದ ‘ಸಿಲಿಕಾನ್ ವ್ಯಾಲಿ’ ಬೆಂಗಳೂರಿನಲ್ಲಿ ಸಾವಿರಾರು ಐಟಿ ಕಂಪನಿಗಳು ಕಾರ್ಯ ನಿರ್ಹಹಿಸುತ್ತಿದ್ದು, ಹತ್ತಾರು ಲಕ್ಷ ಯುವಕ-ಯುವತಿಯರಿಗೆ ಉದ್ಯೋಗ ದೊರೆತಿದೆ. ರಿಯಲ್ ಎಸ್ಟೇಟ್ ಮತ್ತಿತರೆ ಪೂರಕ ಉದ್ಯಮಗಳು ಬೆಳೆಯುತ್ತಿದ್ದು, ನಗರದ ಜನಸಂಖ್ಯೆ ಈಗಾಗಾಲೇ ಕೋಟಿ ದಾಟಿದೆ. ಸಹಜವಾಗಿಯೇ ವಾಹನಗಳ ಸಂಖ್ಯೆಯೂ ಏರಿಕೆಯಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ನಮ್ಮ ಮೆಟ್ರೋ ಜಾಲದ ಈ ಮಾರ್ಗವು ನಗರದ ವಾಹನ ದಟ್ಟಣೆಯನ್ನು ಬಹುವಾಗಿ ಕಡಿಮೆಗೊಳಿಸಲಿದೆ. ಇದು ಬೆಂಗಳೂರಿನ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಸದಾನಂದಗೌಡ ತಿಳಿಸಿದರು.

The process of transforming the urban landscape continues.

In a landmark decision today, Union Cabinet gives its approval to Phases 2A (19.75 km & 13 stations) & 2B (38.44 km & 17 stations) of Bengaluru's Namma Metro at a cost of ₹14,788 cr. #BengaluruMetro pic.twitter.com/ZjL0Xetfd4

— Hardeep Singh Puri (मोदी का परिवार) (@HardeepSPuri) April 20, 2021

ಸಿಲ್ಕ್‌ ಬೋರ್ಡ್ ಜಂಕ್ಷನ್- ವಿಮಾನ ನಿಲ್ದಾಣ ಮಾರ್ಗದ ಬಹುತೇಕ ಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿಯೇ ಹಾದುಹೋಗುತ್ತದೆ. ಹಾಗಾಗಿ ಮೋದಿಯವರಿಗೆ ಮತ್ತು ಸಂಪುಟದ ಎಲ್ಲ ಸಹಪಾಠಿಗಳಿಗೆ ವಿಶೇಷವಾಗಿ ಯೋಜನೆಯ ತ್ವರಿತ ಅನುಮೋದನೆಗೆ ಕಾರಣೀಭೂತರಾದ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಸದಾನಂದ ಗೌಡರು ತಿಳಿಸಿದರು.

ಈ ವಿಷಯವನ್ನು ಕೇಂದ್ರದ ನಗರಾಭಿವೃದ್ಧಿ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಲೋಕಸಭೆ ಸದಸ್ಯ ಪಿ.ಸಿ.ಮೋಹನ್‌ ಕೂಡ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

A landmark decision to boost sustainable mobility infrastructure. PM Shri @narendramodi ji led Union Cabinet approved Phases 2A (19.75 km & 13 stations) & 2B (38.44 km & 17 stations) of Bengaluru's #NammaMetro at a cost of ₹14,788 cr. @HardeepSPuri @PiyushGoyal @PiyushGoyalOffc pic.twitter.com/bCR2f8Hdxl

— P C Mohan (Modi Ka Parivar) (@PCMohanMP) April 20, 2021

ಯೂರಿಯಾ ಸಬ್ಸಿಡಿಗೆ ಒಪ್ಪಿಗೆ

ರಸಗೊಬ್ಬರ ಇಲಾಖೆಗೆ ಸಂಬಂಧಿಸಿದ ಹೊಸದೊಂದು ಸಬ್ಸಿಡಿ ನೀತಿಗೆ ಒಪ್ಪಿಗೆ ದೊರೆತಿದೆ. ಕಲ್ಲಿದ್ದಲು ಅನಿಲೀಕರಣದ ಮೂಲಕ ತಾಲ್ಚೇರ್ ಫರ್ಟಿಲೈಸರ್ಸ್ ಲಿಮಿಟೆಡ್ (ಟಿಎಫ್ಎಲ್) ಕಾರ್ಖಾನೆಯು ಉತ್ಪಾದಿಸುವ ಯೂರಿಯಾಕ್ಕೆ ವಿಶೇಷ ಸಬ್ಸಿಡಿ ಒದಗಿಸುವ ನೀತಿಗೆ ಸಂಪುಟದ ಆರ್ಥಿಕ ವ್ಯವಹಾರ ಸಮಿತಿಯು ಅನುಮೋದಿಸಿದೆ.

ಇದರಿಂದ ಸ್ವದೇಶಿ ರಸಗೊಬ್ಬರ ಉದ್ಯಮದ ನವೀಕರಣ ಕಾಮಗಾರಿಗಳಿಗೆ ವಿಶೇಷವಾಗಿ ಪರಿಸರ ಸ್ನೇಹಿ ಹಸಿರು ತಂತ್ರಜ್ಞಾನ ಅಳವಡಿಕೆಗೆ ಉತ್ತೇಜನ ದೊರೆಯಲಿದೆ. ಹಾಗೆಯೇ ಕೈಗಾರಿಕೆಗಳಿಂದ ಉಂಟಾಗುವ ಪರಿಸರ ಮಾಲಿನ್ಯ ಕಡಿಮೆ ಮಾಡುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸದಾನಂದ ಗೌಡ ಹೇಳಿದರು.

ಕಲ್ಲಿದ್ದಲು ಅನಿಲೀಕರಣ ಆಧಾರಿತ ಟಿಎಫ್ಎಲ್ ಯೂರಿಯಾ ಸ್ಥಾವರವು ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸ್ಥಾಪಿತ ಸಾಮರ್ಥ್ಯ ಹೊಂದಿದ್ದು ಯೋಜನೆಯ ಅಂದಾಜು ವೆಚ್ಚ 13277.21 ಕೋಟಿ ರೂಪಾಯಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

Tags: bangalore metro rail project phase 2adv sadananda gowdaK.R. Puram to Airportnamma metrounion cabinet
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಲಾಕ್‌ಡೌನ್‌ ಇಲ್ಲ;  ರಾಜ್ಯದಲ್ಲಿ ವೀಕೆಂಡ್‌ನಲ್ಲಿ  ಟೈಟ್ ನೈಟ್ ಕರ್ಫ್ಯೂ ಮಾತ್ರ, ಶ್ರೀರಾಮನವಮಿ ಮುಗಿದ ಮೇಲೆ ಬುಧವಾರ  ರಾತ್ರಿಯಿಂದಲೇ ಹದಿನಾಲ್ಕು ದಿನ 144 ಸೆಕ್ಷನ್ ಜಾರಿ

ಲಾಕ್‌ಡೌನ್‌ ಇಲ್ಲ; ರಾಜ್ಯದಲ್ಲಿ ವೀಕೆಂಡ್‌ನಲ್ಲಿ ಟೈಟ್ ನೈಟ್ ಕರ್ಫ್ಯೂ ಮಾತ್ರ, ಶ್ರೀರಾಮನವಮಿ ಮುಗಿದ ಮೇಲೆ ಬುಧವಾರ ರಾತ್ರಿಯಿಂದಲೇ ಹದಿನಾಲ್ಕು ದಿನ 144 ಸೆಕ್ಷನ್ ಜಾರಿ

Leave a Reply Cancel reply

Your email address will not be published. Required fields are marked *

Recommended

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ

4 years ago
ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ