• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಯನ್ನು ನಡುಗಿಸಿದ ಆಲಿಕಲ್ಲು ಮಳೆ; ಶಿಡ್ಲಘಟ್ಟದಲ್ಲಿ ಸೈಜು ಕಲ್ಲುಗಳಂತೆ ಆಕಾಶದಿಂದ ನೆಲಕ್ಕೆ ದಬದಬನೇ ಬಿದ್ದ ಆಲಿಕಲ್ಲು! ಬೆಚ್ಚಿಬಿದ್ದ ಜನ, ನೆಲಕ್ಕುರಳಿದ ದ್ರಾಕ್ಷಿ ಚಪ್ಪರಗಳು

cknewsnow desk by cknewsnow desk
April 22, 2021
in CHIKKABALLAPUR, STATE
Reading Time: 3 mins read
0
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ನಡುಗಿಸಿದ ಆಲಿಕಲ್ಲು ಮಳೆ; ಶಿಡ್ಲಘಟ್ಟದಲ್ಲಿ ಸೈಜು ಕಲ್ಲುಗಳಂತೆ ಆಕಾಶದಿಂದ ನೆಲಕ್ಕೆ ದಬದಬನೇ ಬಿದ್ದ ಆಲಿಕಲ್ಲು! ಬೆಚ್ಚಿಬಿದ್ದ ಜನ, ನೆಲಕ್ಕುರಳಿದ ದ್ರಾಕ್ಷಿ ಚಪ್ಪರಗಳು
939
VIEWS
FacebookTwitterWhatsuplinkedinEmail

ಶಿಡ್ಲಘಟ್ಟ ತಾಳೂಕಿನ ಬಶೆಟ್ಟಹಳ್ಳಿ, ದೊಡ್ಡಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ರಕ್ಕಸರೂಪಿ ಬಿರುಗಾಳಿ ಮಿಶ್ರಿತ ಆಲಿಕಲ್ಲು ಮಳೆಗೆ ಪಾಲಿಹೌಸ್‍ಗಳು ಹಾರಿ ಹೋದವು. ಅದರೊಳಗಡೆಯಿದ್ದ ಕ್ಯಾಪ್ಸಿಕಂ ಸೇರಿದಂತೆ ನಾನಾ ಬಗೆಯ ತರಕಾರಿ-ಹೂವು ಕೊಚ್ಚಿಕೊಂಡು ಹೋದವು. ದ್ರಾಕ್ಷಿ ಚಪ್ಪರಗಳು ನೆಲಕ್ಕುರುಳಿದವು.

ಚಿಕ್ಕಬಳ್ಳಾಪುರ: ಕೋವಿಡ್‌ಗೆ ಒದ್ದಾಡುತ್ತಿದ್ದ ಜನರಿಗೆ ಗುರುವಾರ ಸುರಿದ ಭಾರೀ ಗಾಳಿ ಮಿಶ್ರಿತ ಆಲಿಕಲ್ಲು ಮಳೆ ರೈತನಿಗೆ ಕಣ್ಣೀರು ಹಾಕುವಂತೆ ಮಾಡಿದೆ.

ಮಧ್ಯಾಹ್ನದ ನಂತರ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಬಾಗೇಪಲ್ಲಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿದ ಆಲಿಕಲ್ಲು ಮಳೆ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಸೈಜುಗಲ್ಲುಗಳಂತೆ ಆಕಾಶದಿಂದ ಬೀಳುತ್ತಿದ್ದ ಆಲಿಕಲ್ಲುಗಳನ್ನು ಕಂಡು ಆವಾಕ್ಕಾದರು.

ಶಿಡ್ಲಘಟ್ಟದಲ್ಲಿ ಬಿರುಗಾಳಿ ಸಮೇತ ಆಲಿಕಲ್ಲು ಮಳೆಯಾಗಿದ್ದು, ದ್ರಾಕ್ಷಿ ಚಪ್ಪರಗಳೆಲ್ಲ ನೆಲಕ್ಕುರಳಿವೆ. ಪಾಲಿಹೌಸ್‍ಗಳು ಮಕಾಡೆ ಮಲಗಿವೆ. ಕೋಟ್ಯಂತರ ರೂಪಾಯಿ ನಷ್ಟವಾಗಿದ್ದು ರೈತರು ಕಂಗಾಲಾಗಿದ್ದಾರೆ.

ಆಕಾಶವೇ ಬಿರುಕು ಬಿಟ್ಟಂತೆ ಸುರಿದ ಧಾರಾಕಾರ ಮಳೆಗೆ ಬಿರುಗಾಲೀ ಕೂಡ ಸೇರಿಕೊಂಡು ಸಂಜೆ ಹೊತ್ತಿಗೆ ಎಲ್ಲೆಡೆ ಮಳೆಯು ಪ್ರಳಯ ಸೃಷ್ಟಿ ಮಾಡಿತ್ತು. ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಮೇತ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿದು ಕೆರೆಕಟ್ಟೆಗಳಿಗೆ ನೀರು ಹರಿದು ಬಂದಿದೆ.

ಆದರೆ, ಮಳೆಯ ರಭಸಕ್ಕೆ ಬಹುತೇಕ ಜಿಲ್ಲೆಯ ಎಲ್ಲಡೆ ಕೃಷಿ ಬೆಲೆಗಳು ಸರ್ವನಾಶವಾಗಿವೆ. ಬಾಗೇಪಲ್ಲಿ ತಾಲ್ಲೂಕಿನ ಗೂಳೂರು, ಪಾತಪಾಳ್ಯ ಸೇರಿದಂತೆ ತಾಲೂಕಿನಾದ್ಯಂತ ಗುಡುಗು ಸಿಡಿಲಿನೊಂದಿಗೆ ಆರ್ಭಟಿಸಿದ ವರುಣ ಬಿಸಿಲಿನಿಂದ ಕಂಗೆಟ್ಟಿದ್ದ ಭೂಮಿಗೆ ತಂಪರೆದ. ಏಕಾಏಕಿ ಮಳೆರಾಯನ ಅಬ್ಬರಕ್ಕೆ ಜನತೆ ಕಂಗಾಲಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗಿತ್ತು. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡುತ್ತಿರುವ ರೈತರಿಗೆ ಈ ಮಳೆ ಅನುಕೂಲವಾಗಿದೆ. ಅದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಬೀರಿದ್ದಾರೆ. ಆದರೆ, ನೀರಾವರಿ ಬೆಳೆಗಳನ್ನಿಟ್ಟದ್ದ ರೈತರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಶಿಡ್ಲಘಟ್ಟದಲ್ಲಿ ಬಿರುಗಾಳಿ ಸಮೇತ ಆಲಿಕಲ್ಲು ಮಳೆ

ಚಿಕ್ಕಬಳ್ಳಾಪುರದಲ್ಲೂ ಮಳೆ ಬಿದ್ದಿತಾದರೂ ಪಕ್ಕದ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಳೆ ಭೀಭತ್ಸ ಸೃಷ್ಟಿ ಮಾಡಿದೆ. ಕೆಲವೆಡೆ ಅಬ್ಬರದ, ಜೋರು ಮಳೆಯಾಯಿತಾದರೂ, ಬಶೆಟ್ಟಹಳ್ಳಿ ಹೋಬಳಿ, ದೊಡ್ಡಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಮಾತ್ರ ಸುರಿದ ರಕ್ಕಸರೂಪಿ ಬಿರುಗಾಳಿ ಮಿಶ್ರಿತ ಆಲಿಕಲ್ಲು ಮಳೆಗೆ ಪಾಲಿಹೌಸ್‍ಗಳು ಹಾರಿ ಹೋದವು. ಪೌಲಿಹೌಸ್‍ಗಳ ಹೊದಿಕೆ ಹರಿದು ಹಂಚಿ ಅದರೊಳಗಡೆಯಿದ್ದ ಕ್ಯಾಪ್ಸಿಕಂ ಸೇರಿದಂತೆ ನಾನಾ ಬಗೆಯ ತರಕಾರಿ ಹೂವುಗಳು ಕೊಚ್ಚಿಕೊಂಡು ಹೋದವು. ದ್ರಾಕ್ಷಿ ಚಪ್ಪರಗಳು ನೆಲಕ್ಕುರುಳಿದವು. ಈ ಬೆಳೆಗಳ ನಷ್ಟದಿಂದ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ಸುಮಾರು ಅರ್ಧಗಂಟೆ ಸುರಿದ ಈ ಬಿರುಗಾಳಿ ಆಲಿಕಲ್ಲು ಮಳೆಗೆ ಬಶೆಟ್ಟಹಳ್ಳಿ ಸುತ್ತಮುತ್ತ ಸುಮಾರು 30ಕ್ಕೂ ಹೆಚ್ಚು ಪಾಲಿಹೌಸ್‍ಗಳು, ನಾಲ್ಕು ದ್ರಾಕ್ಷಿ ತೋಟಗಳು, ನೂರಾರು ರೈತರ ತೋಟದಲ್ಲಿನ ನಾನಾ ತರಕಾರಿ ಹೂವು, ಹಿಪ್ಪುನೇರಳೆ ದನಕರುಗಳ ಮೇವು ಕೊಚ್ಚಿಹೋಗಿದೆ.

ಸುಮಾರು 5ರಿಂದ 6 ಕೆಜಿ ತೂಕದ ಸೈಜುಗಲ್ಲುಗಳ ರೀತಿಯ ಆಲಿಕಲ್ಲುಗಳು ಜೀವಹಾನಿ ಆಗಿರುವ ಬಗ್ಗೆ ವರದಿಗಳಿಲ್ಲ. ಆದರೆ, ಜನರಂತೂ ಆ ಆಲಿಕಲ್ಲುಗಳನ್ನು ಕಂಡು ಹೌಹಾರಿದರು. ಮಳೆ ನಿಂತ ಮೇಲೆ ತೋಟಗಳತ್ತ ಓಡಿಬಂದ ರೈತರು ಬೆಳೆ ನೆಲದ ಪಾಲಾಗಿದ್ದನ್ನು ಕಂಡು ದಿಗ್ಭ್ರಮೆಗೊಂಡರು.

ಬಹುತೇಕ ದಾಕ್ಷಿ ಚಪ್ಪರಗಳಲ್ಲಿ ಫಸಲು ಕೈಗೆ ಬರುವುದರಲ್ಲಿತ್ತು. ಪಾಲಿಹೌಸ್‌ಗಳಿಗೆ ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿದ್ದ ರೈತರು ತಲೆ ಮೇಲೆ ಕೈಯೊತ್ತು ಕೂತರು. ಕೆಲ ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದು, ಬಹುತೇಕರು ಮಾಡಿಸಿಲ್ಲ.

ಬೆಳೆ ನಷ್ಟವನ್ನು ಕಂಡು ಕಣ್ಣೀರು ಹಾಕಿದ ರೈತರು ದಿಕ್ಕುತೋಚದಾಗಿದ್ದರು. ಜಿಲ್ಲಾಧಿಕಾರಿ ಸೇರಿದಂತೆ ಕೃಷಿ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಅಧಿಕಾರಿಗಳು ಶುಕ್ರವಾರವೇ ಸ್ಥಳಕ್ಕೆ ಭೇಟಿ ನೀಡಿ ನಷ್ಟದ ಅಂದಾಜು ಮಾಡಬೇಕು, ಶೀಘ್ರವೇ ಸರಕಾರದಿಂದ ನಷ್ಟ ಪರಿಹಾರ ಕೊಡಿಸಬೇಕು ಎಂದು ರೈತರು ಒತ್ತಾಯ ಮಾಡಿದರು.

Tags: chikkaballapuraHail stonekarnatakarainshidlaghattaಆಲಿಕಲ್ಲು ಮಳೆ
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಆಮ್ಲಜನಕದ ಕೊರತೆಯಿಂದ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ಭೀತಿ; ವಸ್ತುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ