ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿವಿಧ ತಾಲೂಕುಗಳ, ವಿವಿಧ ಶ್ರೇಣಿಯ ಏಳು ನ್ಯಾಯಾಧೀಶರನ್ನು ರಾಜ್ಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದ್ದು, ಶುಕ್ರವಾರ ಎಲ್ಲ ನ್ಯಾಯಾಧೀಶರನ್ನೂ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು.
- ಗೌರಿಬಿದನೂರಿನ ಸಿವಿಲ್ ನ್ಯಾಯಾಧೀಶರಾದ ನ್ಯಾ.ಆರ್.ಪವಿತ್ರಾ ಅವರನ್ನು ಮಂಗಳೂರಿನ ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.
- ಚಿಕ್ಕಬಳ್ಳಾಪುರದ ಸಿವಿಲ್ ನ್ಯಾಯಾಧೀಶರೂ ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ರವರಾಗಿದ್ದ ನ್ಯಾ.ಎಂ.ಪಿ.ಅನಿಲ್ ಪ್ರಕಾಶ್ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗ ಮಾಡಲಾಗಿದೆ.
- ಚಿಂತಾಮಣಿ ತಾಲೂಕಿನ ಹಿರಿಯ ನಾಯಾಧೀಶರಾಗಿದ್ದ ನ್ಯಾ.ಕೆ.ಎಂ.ರಾಜೇಂದ್ರನ್ ಅವರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
- ಚಿಕ್ಕಬಳ್ಳಾಪುರದಲ್ಲಿ ಹಿರಿಯ ನ್ಯಾಯಾಧೀಶರಾಗಿಯೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿದ್ದ ನ್ಯಾ.ಎಚ್.ದೇವರಾಜು ಅವರನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
- ಚಿಕ್ಕಬಳ್ಳಾಪುರದ ೨ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ರವರಾಗಿದ್ದ ನ್ಯಾ.ಲೊಕೇಶ್ ಅವರನ್ನು ಹಾಸನದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
- ಶಿಡ್ಲಘಟ್ಟದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ರವರಾಗಿದ್ದ ಡಿ.ಆರ್.ಮಂಜುನಾಥ್ ಅವರನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗ ಮಾಡಲಾಗಿದೆ.
- ಚಿಕ್ಕಬಳ್ಳಾಪುರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್ಸಿ) ರವರಾಗಿದ್ದ ನ್ಯಾ.ಎಚ್.ಶ್ರೀನಿವಾಸ್ ಅವರನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
ಶುಕ್ರವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬೈರಪ್ಪ ಶಿವಲಿಂಗ ನಾಯಿಕ ಅವರು ವರ್ಗಾವಣೆಗೊಂಡ ಎಲ್ಲ ನ್ಯಾಯಾಧೀಶರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ನ್ಯಾ. ಬೈರಪ್ಪ ಶಿವಲಿಂಗ ನಾಯಿಕ ಅವರು, ಎಲ್ಲರ ಸೇವೆಯನ್ನು ಮನಸಾರೆ ಶ್ಲಾಘಿಸಿದರಲ್ಲದೆ, ಅವರ ಒಡನಾಟವನ್ನು ಸ್ಮರಿಸಿ ಶುಭ ಹಾರೈಸಿದರು.