• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಯ ಏಳು ನ್ಯಾಯಾಧೀಶರ ವರ್ಗಾವಣೆ; ಹೃದಯಸ್ಪರ್ಶಿ ಬೀಳ್ಕೊಡಿಗೆ ಕೊಟ್ಟರು ಜಿಲ್ಲಾ ಪ್ರಧಾನ ನ್ಯಾಯಾಧೀಶರು

cknewsnow desk by cknewsnow desk
April 23, 2021
in CHIKKABALLAPUR
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲೆಯ ಏಳು ನ್ಯಾಯಾಧೀಶರ  ವರ್ಗಾವಣೆ; ಹೃದಯಸ್ಪರ್ಶಿ ಬೀಳ್ಕೊಡಿಗೆ ಕೊಟ್ಟರು ಜಿಲ್ಲಾ ಪ್ರಧಾನ ನ್ಯಾಯಾಧೀಶರು
942
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿವಿಧ ತಾಲೂಕುಗಳ, ವಿವಿಧ ಶ್ರೇಣಿಯ ಏಳು ನ್ಯಾಯಾಧೀಶರನ್ನು ರಾಜ್ಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದ್ದು, ಶುಕ್ರವಾರ ಎಲ್ಲ ನ್ಯಾಯಾಧೀಶರನ್ನೂ ಹೃದಯಸ್ಪರ್ಶಿಯಾಗಿ ಬೀಳ್ಕೊಡಲಾಯಿತು.

  • ಗೌರಿಬಿದನೂರಿನ ಸಿವಿಲ್‌ ನ್ಯಾಯಾಧೀಶರಾದ ನ್ಯಾ.ಆರ್.ಪವಿತ್ರಾ ಅವರನ್ನು ಮಂಗಳೂರಿನ ೨ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.
  • ಚಿಕ್ಕಬಳ್ಳಾಪುರದ ಸಿವಿಲ್‌ ನ್ಯಾಯಾಧೀಶರೂ ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವರಾಗಿದ್ದ ನ್ಯಾ.ಎಂ.ಪಿ.ಅನಿಲ್‌ ಪ್ರಕಾಶ್‌ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗ ಮಾಡಲಾಗಿದೆ.
  • ಚಿಂತಾಮಣಿ ತಾಲೂಕಿನ ಹಿರಿಯ ನಾಯಾಧೀಶರಾಗಿದ್ದ ನ್ಯಾ.ಕೆ.ಎಂ.ರಾಜೇಂದ್ರನ್‌ ಅವರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
  • ಚಿಕ್ಕಬಳ್ಳಾಪುರದಲ್ಲಿ ಹಿರಿಯ ನ್ಯಾಯಾಧೀಶರಾಗಿಯೂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿದ್ದ ನ್ಯಾ.ಎಚ್.ದೇವರಾಜು ಅವರನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
  • ಚಿಕ್ಕಬಳ್ಳಾಪುರದ ೨ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವರಾಗಿದ್ದ ನ್ಯಾ.ಲೊಕೇಶ್‌ ಅವರನ್ನು ಹಾಸನದ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.
  • ಶಿಡ್ಲಘಟ್ಟದ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವರಾಗಿದ್ದ ಡಿ.ಆರ್.ಮಂಜುನಾಥ್‌ ಅವರನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗ ಮಾಡಲಾಗಿದೆ.
  • ಚಿಕ್ಕಬಳ್ಳಾಪುರದ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ರವರಾಗಿದ್ದ ನ್ಯಾ.ಎಚ್.ಶ್ರೀನಿವಾಸ್‌ ಅವರನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ʼರನ್ನಾಗಿ ವರ್ಗಾಯಿಸಲಾಗಿದೆ.

ಶುಕ್ರವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬೈರಪ್ಪ ಶಿವಲಿಂಗ ನಾಯಿಕ ಅವರು ವರ್ಗಾವಣೆಗೊಂಡ ಎಲ್ಲ ನ್ಯಾಯಾಧೀಶರನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ನ್ಯಾ. ಬೈರಪ್ಪ ಶಿವಲಿಂಗ ನಾಯಿಕ ಅವರು, ಎಲ್ಲರ ಸೇವೆಯನ್ನು ಮನಸಾರೆ ಶ್ಲಾಘಿಸಿದರಲ್ಲದೆ, ಅವರ ಒಡನಾಟವನ್ನು ಸ್ಮರಿಸಿ ಶುಭ ಹಾರೈಸಿದರು.

Tags: chikkaballapurajudges transferjudiciarykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

Next Post
ಬಡತನ ನಿರ್ಮೂಲನೆಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ; ಅರ್ಹರು ಸೌಲಭ್ಯ ಪಡೆದುಕೊಳ್ಳಬೇಕು: ನ್ಯಾ.ಬೈರಪ್ಪ ಶಿವಲಿಂಗ ನಾಯಿಕ

ಬಡತನ ನಿರ್ಮೂಲನೆಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ; ಅರ್ಹರು ಸೌಲಭ್ಯ ಪಡೆದುಕೊಳ್ಳಬೇಕು: ನ್ಯಾ.ಬೈರಪ್ಪ ಶಿವಲಿಂಗ ನಾಯಿಕ

Leave a Reply Cancel reply

Your email address will not be published. Required fields are marked *

Recommended

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

5 years ago
ಒಂದು ಮತದಲ್ಲಿ ಪುದುಚೆರಿಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್;‌ ಮುಖ್ಯಮಂತ್ರಿ ಸ್ಥಾನಕ್ಕೆ  ರಾಜೀನಾಮೆ ಮೀಡಿದ ನಾರಾಯಣಸ್ವಾಮಿ, ಕಮಲ ಪಾಳೆಯದತ್ತ ಕೈ ಬಿಟ್ಟ ಶಾಸಕರು

ಒಂದು ಮತದಲ್ಲಿ ಪುದುಚೆರಿಯಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್;‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಮೀಡಿದ ನಾರಾಯಣಸ್ವಾಮಿ, ಕಮಲ ಪಾಳೆಯದತ್ತ ಕೈ ಬಿಟ್ಟ ಶಾಸಕರು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ