• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಆಮ್ಲಜನಕದ ಕೊರತೆಯಿಂದ ಕರ್ನಾಟಕದಲ್ಲಿ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ಭೀತಿ; ವಸ್ತುಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಯಡಿಯೂರಪ್ಪ

cknewsnow desk by cknewsnow desk
April 23, 2021
in COVID-19, NATION, STATE
Reading Time: 1 min read
0
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
922
VIEWS
FacebookTwitterWhatsuplinkedinEmail

ಕೋವಿಡ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್; ಆಮ್ಲಜನಕ, ರೆಮ್ಡಿಸಿವರ್ ಹೆಚ್ಚುವರಿ ಪೂರೈಕೆ ಭರವಸೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು/ನವದೆಹಲಿ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರಕಾರ ಸಿದ್ಧವಿದ್ದು, ರಾಜ್ಯ ಸರಕಾರಗಳೂ ಪರಸ್ಪರ ಸಹಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದರು.

ಅವರು ಶುಕ್ರವಾರ ಕರ್ನಾಟಕವೂ ಸೇರಿ ಕೋವಿಡ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ʼನಲ್ಲಿ ಈ ವಿಷಯ ತಿಳಿಸಿದರು.

ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆಯ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು ಹಾಗೂ ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನಿ ತಿಳಿಸಿದರು.

ಆಮ್ಲಜನಕದ ದುರ್ಬಳಕೆ ಆಗದಂತೆ ಎಲ್ಲ ರಾಜ್ಯಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿ ಸಲಹೆ ನೀಡಿದರು. ಜತೆಗೆ ಆಮ್ಲಜನಕದ ಟ್ಯಾಂಕರುಗಳ ಸುಗಮ ಸಂಚಾರಕ್ಕೆ ರಾಜ್ಯ ಸರಕಾರಗಳು ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚಿಸಿದರು.

ಆಮ್ಲಜನಕ ಮತ್ತು ರೆಮ್ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕಕೊಳ್ಳುವಿಕೆಯನ್ನು ನಿಯಂತ್ರಿಸುವಂತೆ ಅವರು ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನಿ ಅವರು ಮುಖ್ಯಮಂತ್ರಿಗಳಿಗೆ ಸಲಹೆ ಮಾಡಿದರು.

ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ, ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಿಂದ ಭಾಗವಹಿಸಿದ ಮುಖ್ಯಮಂತ್ರಿ @BSYBJP ರವರು ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. (1/2) pic.twitter.com/33lqn5mzAq

— CM of Karnataka (@CMofKarnataka) April 23, 2021

ಆಮ್ಲಜನಕ ಪೂರೈಕೆಗೆ ಸಿಎಂ ಮನವಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ʼನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಯಡಿಯೂರಪ್ಪ ಅವರು ಪ್ರಧಾನಮಂತ್ರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇದಿನೆ ಹೆಚ್ಚುತ್ತಿದ್ದು, ಗುರುವಾರ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು ಎಂಬ ಅಂಶವನ್ನು ಯಡಿಯೂರಪ್ಪ ಅವರು ಪಿಎಂ ಗಮನಕ್ಕೆ ತಂದರು.

ಭಾರತ ಸರಕಾರದ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಸಿಎಂ ಪ್ರಧಾನಿಯವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ.16ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ ಎಂದು ಸಿಎಂ ಮಾಹಿತಿ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಜತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಕಳೆದ ಆರು ತಿಂಗಳಲ್ಲಿ ರಾಜ್ಯದ ಸರಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್ʼಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆ ಆಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್ʼಗಳಷ್ಟು ರೆಮ್ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿ ಪ್ರಧಾನಿಗೆ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯದಲ್ಲಿ 82 ಲಕ್ಷ ಜನರಿಗೆ ಲಸಿಕೆ

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈ ವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಮನವಿ ಮಾಡಿದರು.

Tags: bs yediyurappacovid19meeting with chief ministersnarendra modiremdesivir
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮಾಜಿ ಸೈನಿಕರೊಬ್ಬರಿಂದ 2 ಲಕ್ಷಕ್ಕೆ ಡಿಮಾಂಡ್‌! ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಸ್ವ ನಿರೀಕ್ಷಕ (RI); ದಾಳಿ ವೇಳೆಯೇ 1 ಲಕ್ಷ ರೂ. ವಶ

ಮಾಜಿ ಸೈನಿಕರೊಬ್ಬರಿಂದ 2 ಲಕ್ಷಕ್ಕೆ ಡಿಮಾಂಡ್‌! ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಸ್ವ ನಿರೀಕ್ಷಕ (RI); ದಾಳಿ ವೇಳೆಯೇ 1 ಲಕ್ಷ ರೂ. ವಶ

Leave a Reply Cancel reply

Your email address will not be published. Required fields are marked *

Recommended

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

5 years ago
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ